ಬೆಂಗಳೂರು: ಬಿಜೆಪಿಯವರ ಭ್ರಷ್ಟಾಚಾರ, ತಪ್ಪುಗಳನ್ನು ಮುಚ್ಚಿಕೊಳ್ಳಲು ಜಾತಿ ಮೊರೆ ಹೋಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್‌ನ ಪೇಸಿಎಂ ಅಭಿಯಾನ ಲಿಂಗಾಯತ ಮುಖ್ಯಮಂತ್ರಿಗೆ ಅಪಮಾನ ಮಾಡುವ ಷಡ್ಯಂತ್ರ ಎಂಬ ಆರೋಪಕ್ಕೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಗುತ್ತಿಗೆದಾರರ ಸಂಘದವರು ಶೇ. 40 ಪರ್ಸೆಂಟೆಜ್ ಬಗ್ಗೆ ಬಿಜೆಪಿ ಸರಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಕಳೆದ 1 ವರ್ಷದಿಂದ ಈ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಈ ವಿಚಾರವನ್ನು ಅಸೆಂಬ್ಲಿಯಲ್ಲಿ ಎತ್ತಿದರೆ ಜಾತಿ ವಿಚಾರ ಹೇಗೆ …
Read More »ಸಿಎಂ ತಂಟೆಗೆ ಬರಬೇಡಿ: ಕಾಂಗ್ರೆಸ್ ವಿರುದ್ಧ ಲಿಂಗಾಯತ ಸಮುದಾಯ ಆಕ್ರೋಶ
ಕಲಬುರ್ಗಿ: ‘ಪೇ ಸಿಎಂ’ ಅಭಿಯಾನಕ್ಕೆ ಲಿಂಗಾಯತ ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ನವರೇ ಸಮುದಾಯದ ತಂಟೆಗೆ ಬರಬೇಡಿ, ಬಂದಲ್ಲಿ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆಯ ಪೋಸ್ಟರ್ ಗಳನ್ನು ಕಲಬುರ್ಗಿ ನಗರದ ವಿವಿಧಡೆ ಹಚ್ಚಲಾಗಿದೆ. ವೀರಶೈವ ಲಿಂಗಾಯತ ಸ್ವಾಭಿಮಾನಿ ಬಳಗ, ಅಖಿಲ ಭಾರತ ವೀರಶೈವ ಮಹಾಸಭಾ ಪದಾಧಿಕಾರಿಗಳು, ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಅವಮಾನ ಮಾಡಿದಂತಾಗಿದೆ. ವೀರಶೈವ ಲಿಂಗಾಯತರ ಭಾವನೆಗಳಿಗೆ ಅವಮಾನ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ಸಿಗರೇ …
Read More »ವೈಭವದ ನಾಡಹಬ್ಬಕ್ಕೆ ಇಂದು ರಾಷ್ಟ್ರಪತಿ ಚಾಲನೆ: ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟಿಸಲಿರುವ ದ್ರೌಪದಿ ಮುರ್ಮು
ಮೈಸೂರು: ಸಾಂಸ್ಕೃತಿಕ ಸಿರಿ ಮತ್ತು ಧಾರ್ವಿುಕ ಐಸಿರಿಯ ಸಮ್ಮಿಲನವಾದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವೊಂದು ಸುಂದರ ದೃಶ್ಯಕಾವ್ಯ. ವರ್ಷಕ್ಕೊಮ್ಮೆ ಬರುವ ಈ ರಮಣೀಯ ಘಳಿಗೆಗೆ ಸಾಂಸ್ಕೃತಿಕ ನಗರಿ ಮದುವಣಗಿತ್ತಿಯಂತೆ ಸಿಂಗಾರಗೊಂಡು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಕೋವಿಡ್ ಸಂಕ್ರಮಣದಿಂದ ಕಳೆದ 2 ವರ್ಷ ಸರಳವಾಗಿ ನಡೆದಿದ್ದ ಉತ್ಸವದಲ್ಲಿ ಈ ಬಾರಿ ಸಡಗರ ಮೇಳೈಸಲಿದೆ. ಸೆ. 26ರಂದು ನಾಡಹಬ್ಬದ ಅಂಕದ ಪರದೆ ಗರಿ ಬಿಚ್ಚಲಿದೆ. ಮೊದಲ ಬಾರಿಗೆ ರಾಷ್ಟ್ರಪತಿಯಿಂದ ಚಾಲನೆ: ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ …
Read More »ಜಮ್ಮು ಕಾಶ್ಮೀರದಲ್ಲಿ ಕರ್ನಾಟಕದ ‘ಯೋಧ’ ಹುತಾತ್ಮ
ಜಮ್ಮು ಕಾಶ್ಮೀರದ ಗುರೇಜ್ ನಲ್ಲಿ ರಾಜ್ಯದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಬೇಡಕುಂದಾ ಗ್ರಾಮದ ಯೋಧ ರಾಮ್ ದಾಸ್ ಚಂದಾಪುರ ಹುತಾತ್ಮರಾಗಿದ್ದು, ಕರ್ತವ್ಯದ ವೇಳೆ ಆಮ್ಲಜನಕ ಕೊರತೆಯಿಂದ ಯೋಧ ಹುತಾತ್ಮರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 15 ವರ್ಷದಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದು ಬಂದಿದೆ.
Read More »ರಾಜ್ಯ ಸರ್ಕಾರ’ದಿಂದ ಬಿಗ್ ಆರ್ಡರ್: ‘ಸರ್ಕಾರಿ ಕಚೇರಿ ಲಂಚ ಮುಕ್ತ’ಕ್ಕೆ ಖಡಕ್ ಕ್ರಮ
ಬೆಂಗಳೂರು: ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಶೀರ್ಷಿಕೆಯ ನಾಮಫಲಕವನ್ನು ಅಳವಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ಪೇ ಸಿಎಂ ಪೋಸ್ಟರ್ ಕಾಂಗ್ರೆಸ್ ಅಭಿಯಾನಕ್ಕೆ ರಾಜ್ಯ ಸರ್ಕಾರದಿಂದ ಟಕ್ಕರ್ ಕೊಡಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಳವಡಿಸಲು ಅದೇಶ ಮತ್ತು ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಸರಣಿ ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ …
Read More »ವಿಜಯಪುರ: ಮಕ್ಕಳ ಕಳ್ಳರ ವದಂತಿ; ಮಹಿಳೆಯರು ಸೇರಿ ನಾಲ್ವರಿಗೆ ಸಾರ್ವಜನಿಕರಿಂದ ಥಳಿತ
ವಿಜಯಪುರ: ರಾಜ್ಯದಲ್ಲಿ ಮಕ್ಕಳ ಕಳ್ಳರ ಹಾವಳಿಯ ವದಂತಿ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಹಿಡಿದ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದಲ್ಲಿ ನಡೆದಿದೆ. ನಗರದ ಗ್ಯಾಂಗ್ ಬಾವಡಿ ಪರಿಸರದಲ್ಲಿ ಅಪರಿಚಿತ ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಉತ್ತರ ಭಾರತದ ಶೈಲಿಯಲ್ಲಿ ಮಾತನಾಡಿದ್ದು, ಅನುಮಾನದ ಬಂದ ಸ್ಥಳೀಯರು, ಮಕ್ಕಳ ಕಳ್ಳರೆಂದು ಶಂಕಿಸಿ, ಸಾರ್ವಜನಿಕರ ಸಹಕಾರದಿಂದ ನಾಲ್ವರನ್ನೂ ಹಿಡಿದು ಥಳಿಸಿದ್ದಾರೆ. ನಗರಕ್ಕೆ ಉತ್ತರ ಭಾರತದಿಂದ …
Read More »ಕಮಲದ ಸುತ್ತಲಿರುವ ಕೆಸರನ್ನು “ಕೈ” ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ: ಕೇಜ್ರಿವಾಲ್
ಅಹಮದಾಬಾದ್ : ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಗುಜರಾತ್‌ನಲ್ಲಿ 80% ಖಾಸಗಿ ಉದ್ಯೋಗಗಳು ಗುಜರಾತ್‌ನ ಜನರಿಗೆ ಮೀಸಲಾಗಿರುತ್ತವೆ ಎಂದು ಆಪ್ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ. ಟೌನ್‌ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಜರಾತ್‌ನ ಯುವ ಸಮುದಾಯದೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಜ್ರಿವಾಲ್, ‘ಕಮಲ’ದ ಸುತ್ತ ಸಾಕಷ್ಟು ‘ಕೆಸರು’ ಬಿದ್ದಿದೆ. ಆ ಕೆಸರನ್ನು “ಕೈ” ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ, ಅದನ್ನು “ಪೊರಕೆ ” ಯಿಂದ ಸ್ವಚ್ಛಗೊಳಿಸಬೇಕಾಗುತ್ತದೆ …
Read More »ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ*
*ಗೋಕಾಕ :* ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾನುವಾರದಂದು ಅರಭಾವಿ ಬಿಜೆಪಿ ಮಂಡಲ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಪಂ. ದೀನದಯಾಳ ಉಪಾಧ್ಯೆ ಅವರ 106ನೇ ಜನ್ಮದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ …
Read More »ಹಳೆಯ ಮಾದರಿಯಲ್ಲಿ ಎಸ್‌ಎಸ್ ಎಲ್ ಸಿ ಪರೀಕ್ಷೆ ವಿಧಾನ, ಇನ್ನು ಮುಂದೆ ಬಹು ಆಯ್ಕೆ ಪ್ರಶ್ನೆಗಳು
ಬೆಂಗಳೂರು: ಕರ್ನಾಟಕ ಸರ್ಕಾರವು ಹೊರಡಿಸಿದ ಹೊಸ ಮಾರ್ಗಸೂಚಿಗಳ ಪ್ರಕಾರ, ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಹಿಂದಿನ ಮಾದರಿಗೆ ಮರಳಲಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಸರಿಯಾಗಿ ಪಾಠಗಳು ನಡೆಯದಿದ್ದುದರಿಂದ ಕಳೆದ ಎರಡು ವರ್ಷ ಬಹು ಆಯ್ಕೆಯ ಪ್ರಶ್ನೆಗಳನ್ನು ನೀಡಲಾಗಿತ್ತು. (MCQ) ಆದರೆ ಈ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳು ಹಿಂದಿನ ಮಾದರಿಗೆ ಮರಳಬೇಕಾಗಿದೆ. ಪ್ರಬಂಧ-ಮಾದರಿಯ ಪ್ರಶ್ನೆಗಳಿಗೆ ವಿವರವಾದ ಉತ್ತರಗಳನ್ನು ಇನ್ನು ಮುಂದೆ ನೀಡಬೇಕು. ಪಠ್ಯಕ್ರಮವನ್ನು ಕಡಿತಗೊಳಿಸುವ ನಿರ್ಧಾರವೂ ಹಿಂಪಡೆಯಲಿದ್ದು, ವಿದ್ಯಾರ್ಥಿಗಳು ಸಂಪೂರ್ಣ …
Read More »ರಾಜ್ಯದಲ್ಲಿ 5 ವಿಮಾನ ನಿಲ್ದಾಣ ನಿರ್ಮಾಣ
ಹುಬ್ಬಳ್ಳಿ: ‘ರಾಜ್ಯದಲ್ಲಿ ಐದು ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು. 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು. ನಗರದಲ್ಲಿ ಶನಿವಾರ ನಡೆದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ 94ನೇ ಸಂಸ್ಥಾಪನಾ ದಿನ ಹಾಗೂ ‘ವಾಣಿಜ್ಯ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ‘ದಿನದಿಂದ ದಿನಕ್ಕೆ ರಾಜ್ಯ ಅಭಿವೃದ್ಧಿಯತ್ತ ಸಾಗುತ್ತಿದೆ. ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಲು ಸಾಕಷ್ಟು ಉದ್ಯಮಿಗಳು ಒಲವು ತೋರಿಸುತ್ತಿದ್ದಾರೆ. ರಾಜ್ಯದ ಎಲ್ಲ …
Read More »
Laxmi News 24×7