Breaking News

ರಾಜ್ಯ

ಮೂಡಲಗಿ: ಕಳ್ಳನ ಬಂಧನ, ಚಿನ್ನಾಭರಣ ವಶ

ಮೂಡಲಗಿ: ತಾಲೂಕಿನ ಕುಲಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆಗಳ ಕಳ್ಳತನ ಪ್ರಕರಣ ದಾಖಲಾಗಿದ್ದವು. ಪ್ರಕರಣ ಬೇಧಿಸಿರುವ ಕುಲಗೋಡ ಪೊಲೀಸರು ಕಳ್ಳನನ್ನು ಬಂಧಿಸಿ 4 ತೊಲಿ 9 ಗ್ರಾಂ ಬಂಗಾರ ವಶಪಡೆಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಠಾಣಾ ವ್ಯಾಪ್ತಿಯ ತೋಕರಟ್ಟಿ ಗ್ರಾಮದ ಚನ್ನವ್ವ ಬಿರಾನಿ ಮತ್ತು ತಿಗಡಿ ಗ್ರಾಮದ ಲಕ್ಷ್ಮೀ ಹೊಸೂರ ಎಂಬುವರ ಮನೆಗಳಲ್ಲಿ ಆರೋಪಿತ ತೋಕರಟ್ಟಿ ಗ್ರಾಮದ ಸಿದ್ಧಾರೂಡ ಚಂದ್ರಪ್ಪ ತೋಕ್ಯಾಗೋಳ (ನಾಯಿಕ) ಈತ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ …

Read More »

SC&ST ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಊಟ

ಸಂಗಮೇಶ್ವರ ನಗರದಲ್ಲಿ Sc St ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಊಟ ಉಪಹಾರ ಕೊಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಿರತರಾಗಿದ್ದು, ಅಲ್ಲಿ ಸುದ್ದಿ ತಿಳಿದ ತಕ್ಷಣ ಬೇಟಿ ನೀಡಿ, ವಿದ್ಯಾರ್ಥಿಗಳಿಗೆ ಸಮಾಧಾನ ಹೇಳಿ, ಅವರ ಬೇಡಿಕೆಗಳಿಗೆ ಸ್ಪಂದಿಸಿ.. ಇದೆ ವೇಳೆ ಬೇಜವಾಬ್ದಾರಿ ತೋರಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅಮಾನತು ಮಾಡಲು ಶಿಪಾರಸ್ಸು ಮಾಡಿ ನಿಯಮಾನುಸರ ಕ್ರಮಕ್ಕೆ ಸೂಚಿಸಲಾಗಿದೆ. ನಂತರ ಜಿಲ್ಲಾಧಿಕಾರಿಗಳೊಂದಿಗೆ ಸೇರಿ, ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಿ, ಅವರ ಮನವೊಲಿಸಿ, ಎಲ್ಲ …

Read More »

ಲಕ್ಷ್ಮಣ ಸವದಿ ಕಾರು ಅಪಘಾತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ತೆರೆಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು. ಘಟನೆಯಲ್ಲಿ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತವಾಗಿದ್ದು, ಕಾರಿನಲ್ಲಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಇತರ ನಾಲ್ವರು ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಹಾರೂಗೇರಿ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಕ್ಷ್ಮಣ ಸವದಿ ಅವರು ತೆರಳುತ್ತಿದ್ದ ಕಾರು ರಸ್ತೆ ಬದಿಗೆ …

Read More »

ಮೊಬೈಲ್‌ ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳರ ಬಂಧನ

ಅಂಕೋಲಾ : ತಾಲೂಕಿನ ಬಸ್ ನಿಲ್ದಾಣ ಮತ್ತು ಇತರ ಸ್ಥಳಗಳಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತರ ರಾಜ್ಯ ವ್ಯಕ್ತಿಗಳನ್ನು ಅಂಕೋಲಾ ಪೊಲೀಸರು ಬಂಧಿಸಿ ಕಳ್ಳತನ ಮಾಡಿದ 7 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ ಗುಜರಿ ಸಂಗ್ರಹಿಸುವ ಕೆಲಸ ಮಾಡುತ್ತಿದ್ದ ಕೇರಳ ಕಾಸರಗೋಡು ನಿವಾಸಿ ಟೋನಿ ಜಾನ್ ಜೇಮ್ಸ್ (34) ಮತ್ತು ಹುಬ್ಬಳ್ಳಿಯ ಗದಗ ರಸ್ತೆ ನಿವಾಸಿ ಮಹಮ್ಮದ್ ಅಲಿ ಮೆಹಬೂಬ್ ಸಾಬ ಕುಂದಗೋಳ(38) ಬಂಧಿತ ಆರೋಪಿಗಳು.   ಅಂಕೋಲಾ ಪಿ.ಎಸ್. ಐ …

Read More »

ಮಂಗಳವಾರ ಏಳು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಗಣೇಶ ಹಬ್ಬದ ಹಿಂದಿನ ದಿನವಾದ ಮಂಗಳವಾರ ಏಳು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಪಲ್ಲವಿ ಅಕ್ಕುರತಿ ಅವರು ಆರ್ಥಿಕ ನೀತಿ ಸಂಸ್ಥೆಯ ಜಂಟಿ ನಿರ್ದೇಶಕಿಯಾಗಿ ವರ್ಗಾವಣೆಗೊಂಡಿದ್ದಾರೆ. ಡಾ.ರಿತೇಶ್‌ ಕುಮಾರ್‌ ಸಿಂಗ್‌ ಅವರನ್ನು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ, ಎನ್‌.ಮಂಜುಶ್ರೀ ಅವರನ್ನು ಪೌರಾಡಳಿತ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ. …

Read More »

ನ್ಯಾಯಾಧೀಶರ ಮುಂದೆ ಬಾಲಕಿಯರ ಹೇಳಿಕೆ

ಚಿತ್ರದುರ್ಗ: ಮುರುಘಾ ಮಠದ ಪೀಠಾಧ್ಯಕ್ಷ ಡಾ| ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ದೂರಿನ ವಿಚಾರಣೆ ಮುಂದುವರಿದಿದ್ದು, ಸಂತ್ರಸ್ತ ಬಾಲಕಿಯರನ್ನು ಮಂಗಳವಾರ ನಗರದ ನ್ಯಾಯಾಧೀಶರ ಎದುರು ಹಾಜರುಪಡಿಸಿ ಹೇಳಿಕೆ ಪಡೆಯಲಾಯಿತು.   ಬಾಲಕಿಯರ ಸರಕಾರಿ ಬಾಲ ಮಂದಿರದಿಂದ ಮಧ್ಯಾಹ್ನ2 ಗಂಟೆ ಸುಮಾರಿಗೆ ಪೊಲೀಸ್‌ ಭದ್ರತೆಯಲ್ಲಿ ಬಾಲಕಿಯರಿಬ್ಬರನ್ನೂ ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ಕರೆತರಲಾ ಯಿತು. ಸಿಆರ್‌ಪಿಸಿ 164ರ ಅಡಿ ನ್ಯಾಯಾಧೀಶರ ಎದುರು ಬಾಲಕಿಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಯಿತು. ಜಮಾಯಿಸಿದ ಜನ, ಪ್ರತಿಭಟನೆ …

Read More »

ಮುರುಘಾ ಶರಣರನ್ನು ಶೀಘ್ರದಲ್ಲೇ ಬಂಧಿಸಬೇಕು: H.. ವಿಶ್ವನಾಥ್‌

ಚಿತ್ರದುರ್ಗ : ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ( Murugha Matt Swamiji ) ವಿರುದ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಮಾತನಾಡಿ ಮುರುಘಾ ಶ್ರೀಗಳನ್ನು ಶೀಘ್ರವಾಗಿ ಬಂಧಿಸಬೇಕು’ ಎಂದು ಆಗ್ರಹಿಸಿದ್ದಾರೆ   ತಾತ್ಕಾಲಿಕವಾಗಿ ಶ್ರೀಗಳ ಪೀಠ ತ್ಯಾಗ ಮಾಡಬೇಕು. 144 ಸೆಕ್ಷನ್‌ ಅಡಿಯಲ್ಲಿ ಹೇಳಿಕೆಯನ್ನು ಪಡೆಯಬೇಕು. ʻ ಮುರುಘಾ ಶ್ರೀಗಳನ್ನು ಶೀಘ್ರವಾಗಿ ಬಂಧಿಸಬೇಕು. ಇಂದೇ ನಾನು ಕೇಂದ್ರಕ್ಕೆ …

Read More »

ಅರವಿಂದ್‌ ಕೇಜ್ರಿವಾಲ್‌ಗೆ ಅಧಿಕಾರದ ಅಮಲು ಹತ್ತಿದೆ ಎಂದ ಅಣ್ಣ ಹಜಾರೆ

ನವದೆಹಲಿ, ಆಗಸ್ಟ್‌ 30: ಹಿರಿಯ ಗಾಂಧಿವಾದಿ ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದು ದೆಹಲಿಯ ಮದ್ಯ ನೀತಿಯನ್ನು ಟೀಕಿಸಿ ನಿಮಗೆ ಅಧಿಕಾರದ ಅಮಲು ಹತ್ತಿದೆ ಎಂದು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.   ಹಜಾರೆ ತಮ್ಮ ಪತ್ರದಲ್ಲಿ ಹಳ್ಳಿಗಳಲ್ಲಿನ ಮದ್ಯದ ವ್ಯಸನದ ಸಮಸ್ಯೆ ಮತ್ತು ಅದರ ಪರಿಹಾರಗಳ ಬಗ್ಗೆ ವ್ಯವಹರಿಸುವ ಕೇಜ್ರಿವಾಲ್ ಅವರದೇ ಸ್ವರಾಜ್‌ ಪುಸ್ತಕದ ಸಾಲುಗಳನ್ನು …

Read More »

ಸಾವಿನಲ್ಲೂ ಒಂದಾದ ದಂಪತಿ: ಮೂರು ಗಂಟೆ ಅಂತರದಲ್ಲಿ ಗಂಡ-ಹೆಂಡತಿ ಸಾವು

ರಬಕವಿ-ಬನಹಟ್ಟಿ : ಸಾವಿನಲ್ಲಿಯೂ ಒಂದಾಗುವ ಬಹಳಷ್ಟು ಘಟನೆ ನಡೆಯುತ್ತಲೇ ಇರುತ್ತವೆ. ವಿವಾಹವಾಗಿ ಬಾಳಿ, ಮಕ್ಕಳು, ಮೊಮ್ಮಕ್ಕಳನ್ನು ಕಂಡು ಸಿಹಿ, ಕಹಿ, ನೋವು, ಕಷ್ಟಗಳ ಸವಾಲುಗಳನ್ನು ಒಟ್ಟಿಗೆ ಎದುರಿಸಿ, ಒಟ್ಟಿಗೇ ಸ್ವರ್ಗಸ್ಥರಾಗುವುದೆಂದರೆ ಸುಮ್ಮನೆಯಾ? ಎಲ್ಲೋ ಒಂದಷ್ಟು ಜೋಡಿಗಳಷ್ಟೇ ಈ ಪುಣ್ಯ ಮಾಡಿರುತ್ತಾರೆ. ಸಾವಿನಲ್ಲೂ ಸಂಗಾತಿ ಜೊತೆಗೆ ಅನ್ನೋದು ಇದೇನಾ. ಹೌದು, ವಿವಾಹವಾಗಿ 55 ವರ್ಷಗಳ ಕಾಲ ಜತೆಯಾಗಿ ಬದುಕಿದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ …

Read More »

ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು

ಮಸ್ಕಿ: ಕಾರೊಂದು ನಾಲೆಗೆ ಉರುಳಿ ಬಿದ್ದು ಇಬ್ಬರು ಮೃತಪಟ್ಟು,ಒಬ್ಬ ಪಾರಾದ ಘಟನೆ ಸಮೀಪದ ತುಂಗಭದ್ರಾ ಎಡದಂಡೆಯಲ್ಲಿ ಮಂಗಳವಾರ ನಡೆದಿದೆ. ಕಾರಿನಲ್ಲಿದ್ದವರು ಅಮರೇಶ್ವರ ಹತ್ತಿರದ‌ ಗೋನವಾಟ್ಲ ಗ್ರಾಮದಿಂದ ಸಿಂಧನೂರು ಕಡೆ ತೆರಳುತ್ತಿದ್ದರು. ಘಟನೆಯಲ್ಲಿ ಚಾಲಕ ಪ್ರಾಣಾಪಯದಿಂದ‌ ಪಾರಾಗಿದ್ದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಮೃತರು ಆಂಧ್ರ ಮೂಲದವರಾಗಿದ್ದು, ವಿವರ‌ ತಿಳಿದು ಬಂದಿಲ್ಲ. ಆದರೆ, ಕಾರಿನ ದಾಖಲೆಯಲ್ಲಿ ಹೈದರಬಾದ್ ನ ನೆಕ್ಕಂಟಿ ಶ್ರೀನಿವಾಸ ಎಂದು ತೋರಿಸುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕಾರು ಹಾಗೂ …

Read More »