ದಾವಣಗೆರೆ: ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ಮೇ.ಬಿ.ಆರ್. ಹರ್ಷ ತೀವ್ರ ಹೃದಯಾಘಾತದಿಂದ ಮಂಗಳವಾರ ನಿಧನರಾದರು. ದಾವಣಗೆರೆ ತಾಲೂಕಿನ ಕಂದಗಲ್ ಗ್ರಾಮದ ಡಾ. ಬಿ.ಆರ್. ಹರ್ಷ ಸೇನೆಯಲ್ಲೂ ಕಾರ್ಯ ನಿರ್ವಹಿಸಿದವರು. ದಾವಣಗೆರೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಎರಡು ತಿಂಗಳನಿಂದ ಕಾರ್ಯ ನಿರ್ವಹಿಸುತ್ತಿದ್ದರು. ದಾವಣಗೆರೆ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯಾಗಿಯೂ ಕೆಲಸ ಮಾಡಿದ್ದರು. ಮೃತರ ಪತ್ನಿ ಡಾ. ಮಧುಮಾಲ ಸಹ ಸೇನೆಯಲ್ಲಿ ಕೆಲಸ ನಿರ್ವಹಿಸಿದ್ದರು. ಇಬ್ಬರು ಹೆಣ್ಣುಮಕ್ಕಳು ಅಪಾರ ಬಂಧು ಬಳಗ …
Read More »ಹೆಸರಿನಲ್ಲಿ ʼರಾಮʼ.! ಉಂಡ ಮನೆಗೆ ಪಂಗನಾಮ.! : ಸಿದ್ದು ವಿರುದ್ಧ ಶ್ರೀರಾಮುಲು ಕಿಡಿ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾರಿಗೆ ಸಚಿವ ಬಿ. ಶ್ರೀರಾಮುಲು ವಾಗ್ಧಳಿ ನಡೆಸಿದ್ದಾರೆ. ಸಿದ್ದು ವಿರುದ್ಧ ಸರಣಿ ಟ್ವೀಟ್ ಮಾಡಿದ ಸಾರಿಗೆ ಸಚಿವರು ಹೆಸರಿನಲ್ಲಿ ರಾಮ ಇರಿಸಿಕೊಂಡು ಉಂಡ ಮನೆಗೆ ಪಂಗನಾಮ ಹಾಕುವವರು ನೀವು ಎಂದು ಗುಡುಗಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಶ್ರೀರಾಮುಲು… ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು. ದಾಸಶ್ರೇಷ್ಠ ಶ್ರೀ ಪುರಂದರದಾಸರು ಮಾಜಿ ಸಿ.ಎಂ. ಸಿದ್ದರಾಮಯ್ಯನಂತವರನ್ನು ನೋಡಿಯೇ ಈ …
Read More »ಮುರುಘಾ ಶ್ರೀಗೆ ಮತ್ತೊಂದು ‘ಬಿಗ್ ಶಾಕ್’: ‘ಅಟ್ರಾಸಿಟಿ’ ಪ್ರಕರಣ ದಾಖಲು
ಚಿತ್ರದುರ್ಗ: ಮುರುಘಾ ಶ್ರೀಗೆ ಮತ್ತೊಂದು ತೊಂದರೆ ಎದುರಾಗಿದೆ. ಹೌದು, ಲೈಂಗಿಕ ಕಿರುಕುಳದ ಬಗ್ಗೆ ಆರೋಪ ಮಾಡಿರುವ ಒಬ್ಬರಲ್ಲಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಹಿನ್ನಲೆಯಲ್ಲಿ ಶ್ರೀಗಳ ವಿರುದ್ದ , ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಆಗಸ್ಟ್ 28ರ (ಭಾನುವಾರ)ದಂದು ಪ್ರಕರಣದ ವಿಚಾರಣೆ ವೇಳೆಯಲ್ಲಿ ಬಾಲಕಿಯ ಹೇಳಿಕೆ ಮೇರೆಗೆಶ್ರೀಗಳ ವಿರುದ್ದ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. …
Read More »ರಾಜ್ಯದಲ್ಲಿ ಸೆ.2ರ ವರೆಗೂ ಭಾರೀ ಮಳೆ ಸಾಧ್ಯತೆ
ಗೌರಿ-ಗಣೇಶ ಹಬ್ಬದ ಸಂಭ್ರಮವನ್ನು ಎದುರು ನೋಡು ತ್ತಿರುವಾಗಲೇ ರಾಜ್ಯದ ಹಲವೆಡೆ ಮಳೆ ಭೋರ್ಗರೆದು ಅನಾಹುತ ಸೃಷ್ಟಿಸಿದೆ. ರಾಮನಗರ, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಬಂಗಾಲ ಕೊಲ್ಲಿಯಲ್ಲಿ ಎದ್ದಿರುವ ಮೇಲ್ಮೈ ಸುಳಿಗಾಳಿ ಪರಿಣಾಮ, ರಾಜ್ಯದಲ್ಲಿ ಮುಂದಿನ 3ರಿಂದ 4 ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ರಾಮನಗರ ಜಿಲ್ಲೆಯ ಮೂಲಕ ಹಾದು ಹೋಗುವ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ …
Read More »ಗಣೇಶೋತ್ಸವ ವೇಳೆ ಕಾನೂನು ಮೀರಿ ವರ್ತಿಸಿದರೆ ಕಠಿಣ ಕ್ರಮ- ಅಲೋಕ್ ಕುಮಾರ್
ಬೆಳಗಾವಿಯಲ್ಲಿ ಗಣೇಶೋತ್ಸವ ಆಚರಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಈಗಾಗಲೇ ಸಾಕಷ್ಟು ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಇನ್ನು ಗಣೇಶೋತ್ಸವದ ವೇಳೆ ಕಾನೂನು ಮೀರಿ ವರ್ತಿಸುವವರ ಮೇಲೆ ಕಾನೂನು ರೀತಿಯಲ್ಲಿ ಮಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ನಗರದಲ್ಲಿ ಗಣೇಶೋತ್ಸವ ಆಚರಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಮಾಡಿಕೊಳ್ಳಲಾದ ಪೂರ್ವಸಿದ್ಧತೆಗಳನ್ನು ವೀಕ್ಷಿಸಲು ಇಂದು ಮಂಗಳವಾರ ಬೆಳಗಾವಿ ನಗರಕ್ಕೆ ಆಗಮಿಸಿದ ಎಡಿಜಿಪಿ ಅಲೋಕ್ ಕುಮಾರ್ ರವರು ಬೆಳಗಾವಿಯಲ್ಲಿ ಎಸ್‍ಪಿ ಕಚೇರಿಗೆ ಆಗಮಿಸಿ …
Read More »ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಶ್ರೀಗಳಿಂದ ಅರ್ಜಿ ಸಲ್ಲಿಕೆ
ಚಿತ್ರದುರ್ಗ: ಡಾ| ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ದೂರಿನ ವಿಚಾರಣೆ ಚುರುಕುಗೊಂಡಿದ್ದು, ಮತ್ತೊಂದೆಡೆ ನಿರೀಕ್ಷಣಾ ಜಾಮೀನು ಕೋರಿ ಶ್ರೀಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮುರುಘಾ ಮಠ ಹಾಗೂ ಶ್ರೀಗಳ ಪರ ವಕೀಲರು ಚಿತ್ರದುರ್ಗದ 2ನೇ ಸೆಷನ್ಸ್ ಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿ ಸ್ವೀಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆ. 1ಕ್ಕೆ ಮುಂದೂಡಿದೆ. ಈ ನಡುವೆ ಶ್ರೀಗಳ ವಿರುದ್ಧ ದೂರು ನೀಡಿದ್ದ ಬಾಲಕಿಯರನ್ನು ಮಠಕ್ಕೆ …
Read More »ಮುಂಬೈನ ಈ ಶ್ರೀಮಂತ ಗಣೇಶನಿಗೆ 316 ಕೋಟಿ ರೂ. ವಿಮೆ!
ಗಣೇಶೋತ್ಸವಕ್ಕೆ ಇಡೀ ದೇಶದಲ್ಲೇ ಮುಂಬೈ ಹೆಚ್ಚು ಖ್ಯಾತಿ ಪಡೆದಿದೆ. ಇಲ್ಲಿನ ಗಣೇಶ ಶ್ರೀಮಂತ ಕೂಡ. ಅಂತಹ ಶ್ರೀಮಂತ ಗಣೇಶನಿಗೆ ಈ ಬಾರಿ 316.40 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಮುಂಬೈನ ಗಣೇಶ ಮಂಡಲ್ ನ ಗಣೇಶನಿಗೆ ಈ ಬಾರಿ ಗಣೇಶ ಚತುರ್ಥಿ ವೇಳೆ 316.40 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಇದರಲ್ಲಿ 31.97 ಕೋಟಿ ರೂ. ಚಿನ್ನ, ಬೆಳ್ಳಿ ಹಾಗೂ ಇನ್ನಿತರ ವಸ್ತುಗಳು ಸೇರಿದ್ದರೆ, 263 ಕೋಟಿ ರೂ. ವೈಯಕ್ತಿಕ …
Read More »ಬಿಡಿಎ ನಿವೇಶನ ಹಂಚಿಕೆಯಲ್ಲಿ ಅಕ್ರಮ: ಬಿಜೆಪಿ ಭ್ರಷ್ಟೋತ್ಸವ ಎಂದ ಕಾಂಗ್ರೆಸ್
ಬೆಂಗಳೂರು: ಬಿಡಿಎ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ. ಈ ವಿಚಾರವಾಗಿ ‘ಪ್ರಜಾವಾಣಿ’ ವರದಿಯನ್ನು ಟ್ವೀಟ್ ಮಾಡಿರುವ ಕೆಪಿಸಿಸಿ, ಬಿಜೆಪಿ ಭ್ರಷ್ಟೋತ್ಸವಕ್ಕೆ ಸುಪ್ರೀಂ ಕೋರ್ಟ್ ಕೂಡ ‘ಛೀಮಾರಿ’ ಹಾಕಿ ಗೌರವಿಸಿದೆ ಎಂದು ವ್ಯಂಗ್ಯವಾಡಿದೆ. ಈ ವಿಚಾರವಾಗಿ ‘ಪ್ರಜಾವಾಣಿ’ ವರದಿಯನ್ನು ಟ್ವೀಟ್ ಮಾಡಿರುವ ಕೆಪಿಸಿಸಿ, ಬಿಜೆಪಿ ಭ್ರಷ್ಟೋತ್ಸವಕ್ಕೆ ಸುಪ್ರೀಂ ಕೋರ್ಟ್ ಕೂಡ ‘ಛೀಮಾರಿ’ ಹಾಕಿ ಗೌರವಿಸಿದೆ ಎಂದು ವ್ಯಂಗ್ಯವಾಡಿದೆ. ನಿವೇಶನ ಹಂಚಿಕೆಯಲ್ಲೂ …
Read More »ಅಮಿತ್ ಶಾ ಮನೆ ಬಳಿ ಪ್ರತಿಭಟನೆ ಮಾಡಲು ಹೋಗಿದ್ದೆ. ಎನ್ನುತ್ತಲೇ ಕರ್ನಾಟಕ ಪೊಲೀಸರ ವಿರುದ್ಧ ಕಿಡಿಕಾರಿದ ನವ್ಯಶ್ರೀ!
ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆ ಮುಂದೆ ಮೌನ ಪ್ರತಿಭಟನೆ ನಡೆಸಲು ಮುಂದಾದ ಚನ್ನಪಟ್ಟಣ ಮೂಲದ ಕಾಂಗ್ರೆಸ್ ಮುಖಂಡೆ ನವ್ಯಶ್ರೀ ರಾವ್ಗೆ ಅವಕಾಶ ಸಿಕ್ಕಿಲ್ಲ. ಈ ಕುರಿತು ಸುದ್ದಿಗಾರರೊಂದಿಗೆ ನವ್ಯಶ್ರೀ ಅಸಮಾಧಾನ ಹೊರಹಾಕಿದ್ದಾರೆ. ‘ಶುಕ್ರವಾರ ಸಂಜೆ ದೆಹಲಿಗೆ ಬಂದ್ವಿ. ಶನಿವಾರ ಅಮಿತ್ ಶಾ ಅವರ ಮನೆ ಮುಂದೆ ಪ್ರತಿಭಟನೆ ನಡೆಸಬೇಕು ಎಂದು ಹೋದ್ವಿ. ಅಮಿತ್ ಶಾ ಅವರು ಮನೆಯಲ್ಲಿದ್ದರೂ ನಮಗೆ ಅವಕಾಶ ಸಿಗಲಿಲ್ಲ. ಆ.15 ರಂದು …
Read More »ರಾಜಕೀಯದಲ್ಲಿ ಇರದಿದ್ರೆ.ಬಿಜೆಪಿಯವರ ನಾಲಿಗೆ ಸೀಳುತ್ತಿದ್ದೆ: ಮಮತಾ ಬ್ಯಾನರ್ಜಿ
ಕೋಲ್ಕತಾ: ಪ್ರತಿಯೊಬ್ಬರನ್ನು ಕಳ್ಳರು ಎಂಬಂತೆ ಬಿಂಬಿಸುತ್ತಿರುವ ಭಾರತೀಯ ಜನತಾ ಪಕ್ಷದ ವಿರುದ್ಧ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಆಗಸ್ಟ್ 29) ವಾಗ್ದಾಳಿ ನಡೆಸಿದ್ದು, ಒಂದು ವೇಳೆ ರಾಜಕೀಯದಲ್ಲಿ ಇಲ್ಲದಿರುತ್ತಿದ್ದರೆ, ಬಿಜೆಪಿಯವರ ನಾಲಿಗೆ ಸೀಳಿ ಬಿಡುತ್ತಿದ್ದೆ ಎಂದು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಕೇಸರಿ ಪಕ್ಷವನ್ನು ವಿರೋಧಿಸುತ್ತಿರುವ ರಾಜಕೀಯ ಪಕ್ಷಗಳನ್ನು ಮತ್ತು ಚುನಾಯಿತ ರಾಜ್ಯ ಸರ್ಕಾರವನ್ನು ಕಿತ್ತೊಗೆಯಲು ಕೇಂದ್ರ ತನಿಖಾ …
Read More »
Laxmi News 24×7