Breaking News

ರಾಜ್ಯ

ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಅಕ್ರಮ: ಗೋಕಾಕ್ ಮೂಲದ ಆರೋಪಿ ಬಂಧನ

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ಭಾನುವಾರ ಗೋಕಾಕದ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ನಕಲಿಗಾಗಿ ಸ್ಮಾರ್ಟ್ ವಾಚ್ ಉಪಯೋಗಿಸಲೆತ್ನಿಸಿದ ಆರೋಪದಲ್ಲಿಅಭ್ಯರ್ಥಿಯೋರ್ವನನ್ನುಗೋಕಾಕ ಶಹರ ಠಾಣೆ ಪೊಲೀಸರು ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗೋಕಾಕ್ ತಾಲೂಕಿನ ಮೂಡಲಗಿ ಗ್ರಾಮದ ಸಿದ್ದಪ್ಪ ಮದಿಹಳ್ಳಿ(20) ಬಂಧಿತ ಆರೋಪಿ. ಕಳೆದ ಭಾನುವಾರ ಗೋಕಾಕ ನಗರದ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಬಂಧಿತ ಆರೋಪಿ ಸ್ಮಾರ್ಟ್ ವಾಚ್ ನಲ್ಲಿ ಪ್ರಶ್ನೆ ಪತ್ರಿಕೆಯ ಫೋಟೋ …

Read More »

ಈ 4 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆಯದಂತೆ ವಿದ್ಯಾರ್ಥಿಗಳಿಗೆ VTU ಸೂಚನೆ

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶದ ಜೊತೆಗೆ ಸಿಇಟಿ ಫಲಿತಾಂಶವೂ ಈಗಾಗಲೇ ಪ್ರಕಟಗೊಂಡಿದೆ. ಹೀಗಾಗಿ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಕೋರ್ಸ್ ಗಳಿಗೆ ಪ್ರವೇಶ ಪಡೆಯುತ್ತಿದ್ದಾರೆ. ಇದರ ಮಧ್ಯೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ.   ಅಗತ್ಯ ಮೂಲ ಸೌಕರ್ಯ ಕೊರತೆ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಇಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆಯನ್ನು ರದ್ದುಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ಪ್ರವೇಶ ಪಡೆಯದಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಈ ಕಾಲೇಜುಗಳಲ್ಲಿ ಸೀಟು ಹಂಚಿಕೆ …

Read More »

ಮೊಹರಂ ಹಬ್ಬದ ವೇಳೆ ಇಬ್ಬರು ಮುಸ್ಲಿಂ ಯುವಕರಿಗೆ ಚೂರಿ ಇರಿತ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಮತ್ತೊಮ್ಮೆ ಸಾಬೀತ

ಗದಗ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಮತ್ತೊಮ್ಮೆ ಸಾಬೀತಾಗಿದೆ. ಸದ್ಯ ಕರಾವಳಿ ಭಾಗದಲ್ಲಿ ನಡೆಯುತ್ತಿದ್ದ ಹಿಂಸಾತ್ಮಕ ಕೃತ್ಯಗಳು ಇದೀಗ ರಾಜ್ಯದ ಬೇರೆ ಜಿಲ್ಲೆಗಳಿಗೆ ನಿಧಾನವಾಗಿ ಹಬ್ಬುತ್ತಿವೆ.   ಅಂದ ಹಾಗೇ ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಇಬ್ಬರು ಯುವಕರಿಗೆ ಚೂರಿಯಿಂದ ಇರಿಯಲಾಗಿದ್ದು, ಚೂರಿ ಇರಿತಕ್ಕೊಳಗಾದವರನ್ನು ದಾದಾಪೀರ್ ಹೊಸಮನಿ(೨೩), ಮುಸ್ತಾಕ್ ಹೊಸಮನಿ(೨೪),ಎಂದು ಗುರುತಿಸಲಾಗಿದೆ. ಇನ್ನು ಇನ್ನು ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಮೊಹರಂ ಮೆರವಣಿಗೆ ನಡೆಯುತ್ತಿತ್ತು.ಈ ವೇಳೆ ಕಾಲು ತುಳಿದಿದ್ದಕ್ಕೆ …

Read More »

ವಿಶ್ವರೂಪಿಣಿ ಹುಲಿಗೆಮ್ಮ ದೇವಿಯ ಅವತಾರದಲ್ಲಿ ಪ್ರಿಯಾಂಕಾ ಉಪೇಂದ್ರ

(ಕೊಪ್ಪಳ): ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರ ಹುಲಿಗಿಯ ಹುಲಿಗೆಮ್ಮ ದೇವಿಯ ಚರಿತ್ರೆ ಮತ್ತು ಪವಾಡ ಬಿಂಬಿಸುವ ‘ವಿಶ್ವರೂಪಿಣಿ ಹುಲಿಗೆಮ್ಮ’ ಸಿನಿಮಾ ಚಿತ್ರೀಕರಣಕ್ಕೆ ಮಂಗಳವಾರ ದೇವಸ್ಥಾನದ ಆವರಣದಲ್ಲಿ ಚಾಲನೆ ಲಭಿಸಿತು.   ಹುಲಿಗೆಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಘಟಕದ ಅಧ್ಯಕ್ಷೆ ಕವಿತಾ ಈಶ್ವರ್ ಸಿಂಗ್ ಶುಭಕೋರಿ ಚಿತ್ರೀಕರಣಕ್ಕೆ ಚಾಲನೆ ಕೊಟ್ಟರು. ಚಲನಚಿತ್ರದ ನಿರ್ದೇಶಕ ಓಂಸಾಯಿಪ್ರಕಾಶ್ ಮಾತನಾಡಿ ‘ಹುಲಿಗೆಮ್ಮದೇವಿಗೆ ಹೊರರಾಜ್ಯದಲ್ಲೂ ಭಕ್ತರಿದ್ದಾರೆ. ಪ್ರಿಯಾಂಕಾ ಉಪೇಂದ್ರ ಮುಖ್ಯಭೂಮಿಕೆಯಲ್ಲಿದ್ದು …

Read More »

ಅನುಕಂಪದ ಉದ್ಯೋಗ’ ಹಕ್ಕಲ್ಲ – ‘ಸುಪ್ರೀಂ ಕೋರ್ಟ್’ ಮಹತ್ವದ ಅಭಿಪ್ರಾಯ

ನವದೆಹಲಿ: ಉದ್ಯೋಗಿ ಮರಣ ಹೊಂದಿದ ನಂತ್ರ ಅವರ ಕುಟುಂಬದ ಓರ್ವ ಸದಸ್ಯನಿಗೆ ಅನುಕಂಪದ ಆಧಾರದಲ್ಲಿ ( Compassionate employment ) ನೀಡುವ ಉದ್ಯೋಗ ಸ್ಥಾಪಿತವಾದ ಹಕ್ಕಲ್ಲ. ಈ ರೀತಿಯ ಉದ್ಯೋಗ ಪಡೆದವರಿಂದ ಕರ್ತವ್ಯ ಲೋಪಗಳಾದರೇ, ಅವರಿಗೆ ನೀಡಲಾದ ಹುದ್ದೆಯ ಅರ್ಹತೆಯನ್ನು ಹೊಂದುವಲ್ಲಿ ವಿಫಲವಾದರೇ, ಅಂತಹವರನ್ನು ಕೆಲಸದಿಂದ ತೆಗೆಯ ಬಹುದು ಎಂದು ಸುಪ್ರೀಂ ಕೋರ್ಟ್ ( Supreme Court ) ಮಹತ್ವದ ಅಭಿಪ್ರಾಯ ಪಟ್ಟಿದೆ.   ಈ ಸಂಬಂಧ ಪ್ರಕರಣವೊಂದರ ವಿಚಾರಣೆ …

Read More »

ಡೆತ್​ನೋಟ್​ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆ: ಹುಟ್ಟು ಹಬ್ಬದ ದಿನವೇ ದುರಂತ ಅಂತ್ಯ

ಚಾಮರಾಜನಗರ: ಕಾಲೇಜು ಉಪನ್ಯಾಸಕಿಯೊಬ್ಬರು ಹಾಸ್ಟೆಲ್​ನಲ್ಲಿ ನೇಣುಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ಬರೆದ ಡೆತ್‌ನೋಟ್ ಸಿಕ್ಕಿದೆ. ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ, ಚಾಮರಾಜನಗರದ ಜೆಎಸ್‌ಎಸ್‌ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು(ಆ.9) ಅವರ ಬರ್ತ್​ ಡೇ. ಈ ದಿನವೇ ಜೆಎಸ್‌ಎಸ್ ಕಾಲೇಜಿನ ಹಾಸ್ಟೆಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್​ನೋಟ್​ ಪತ್ತಯಾಗಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆಯಲಾಗಿದೆ. ಚಾಮರಾಜನಗರ ಪಟ್ಟಣ …

Read More »

ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ನಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ: ಉಮೇಶ್ ಕತ್ತಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ನಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ ಎಂದು ಹೇಳುವ ಮೂಲಕ ಮತ್ತೆ ಅರಣ್ಯ ಮತ್ತು ಆಹಾರ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಸಿಎಂ ಸ್ಥಾನವನ್ನು ಜಪಿಸಿದ್ದಾರೆ. ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉಮೇಶ ಕತ್ತಿ ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹವಾಗಿದೆ. ನಾನು ಕೂಡ 8 ಬಾರಿ ಶಾಸಕನಾಗಿ ಆಯ್ಕೆಯಾಗಿ, ಹಲವು …

Read More »

ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ ‘ಕತ್ತಿ ವರಸೆ’ ಶುರುವಾಗಿದೆ ಎಂದ ಕಾಂಗ್ರೆಸ್

ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಬೆನ್ನಲ್ಲೇ ಸಿಎಂ ಬದಲಾವಣೆ ವಿಚಾರವಾಗಿ ಮತ್ತೆ ವದಂತಿಗಳು ಹಬ್ಬಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕಾಲೆಳೆದಿದೆ. ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ! 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ! ಸಿಎಂ ಬೊಮ್ಮಾಯಿ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ …

Read More »

ಬೆಳಗಾವಿ: ಈ 22 ಶಾಲೆಗಳಿಗೆ ಬುಧವಾರವೂ ರಜೆ: B.E.O.ರವಿ ಭಜಂತ್ರಿ 

ಬೆಳಗಾವಿ – ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯದ 22 ಶಾಲೆಗಳಿಗೆ ಬುಧವಾರವೂ ರಜೆ ಘೋಷಿಸಲಾಗಿದೆ. ಜಾಧವ ನಗರದಲ್ಲಿ ಕಾಣಿಸಿಕೊಂಡ ಚಿರತೆ ಸೆರೆ ಸಿಕ್ಕದ ಕಾರಣ ಸುತ್ತಲಿನ 22 ಶಾಲೆಗಳಿಗೆ ರಜೆ ನೀಡಲಾಗಿದೆ. ಕಳೆದ ರಾತ್ರಿ ಗಾಲ್ಫ್ ಮೈದ0ಾನದಲ್ಲಿ ಕ್ಯಾಮರಾದಲ್ಲಿ ಸೆೆರೆಸಿಕ್ಕ ಚಿರತೆ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ರಜೆ ಮುಂದುವರಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂದು ಡಿಡಿಪಿಐ ಬಸವರಾಜ ನಾಲತವಾಡ ಮತ್ತು ನಗರ ಬಿಇಒ ರವಿ ಭಜಂತ್ರಿ  ತಿಳಿಸಿದ್ದಾರೆ. …

Read More »

ಹೆಸರಿಗೆ ಮಾತ್ರ ಹಾಲಿನ ವ್ಯಾಪಾರ, ಆದ್ರೆ ಮಾಡೋದು ಬೇರೆನೇ ಕೆಲಸ

ಇವರೆಲ್ಲಾ ಮಾಡುತ್ತಿದ್ದದ್ದು ಹಾಲಿನ ವ್ಯಾಪಾರ (Milk Business). ಆದ್ರೆ ಒಳಗೆ ನಡೀತಾ ಇದ್ದಿದ್ದು ಮಾತ್ರ ಬೇರೆನೇ ಕೆಲಸ. ಹೌದು, ಹುಬ್ಬಳ್ಳಿಯಲ್ಲಿ ನಕಲಿ ನೋಟು (Fake Note) ಚಲಾವಣೆ ಗ್ಯಾಂಗ್​ನ್ನು (Gang) ಪೊಲೀಸರು ಭೇದಿಸಿದ್ದಾರೆ. ಈ ಕೇಸ್​ನಲ್ಲಿ ತಗ್ಲಾಕೊಂಡ ವ್ಯಕ್ತಿಯ ಹಿನ್ನೆಲೆ ಕೇಳಿದ್ರೆ ಇನ್ನೂ ಶಾಕ್ ಆಗ್ತೀರಾ. ಯಾಕೆಂದರೆ ಆತ ಸ್ಥಳೀಯ ಬಿಜೆಪಿ ಮುಖಂಡ (BJP Leader). ಹೊರಗೆ ಈತ ಸೇರಿ ಉಳಿದ ಆರೋಪಿಗಳು (Accused) ನಡೆಸ್ತಿದ್ದದ್ದು ಹಾಲಿನ ವ್ಯಾಪಾರ. ಆದರೆ …

Read More »