Breaking News

ರಾಜ್ಯ

ಒಂದೇ ಕುಟುಂಬದ ನಾಲ್ವರು ದುರಂತ ಅಂತ್ಯ; ತಾಯಿ, ಓರ್ವ ಮಗ ಪಾರು

ಬೀದರ್​: ಜಿಲ್ಲೆಯ ಭಾಲ್ಕಿ ತಾಲೂಕಿನ ಮರೂರ ಕಾಲುವೆ ಬಳಿ ಮಂಗಳವಾರ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಮರೂರ ಹತ್ತಿರ ಹಾದುಹೋಗುವ ಕಾರಂಜಾ ಜಲಾಶಯದ ಕಾಲುವೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಬದುಕುಳಿದಿದ್ದಾರೆ. ಬೀದರ್​​ ನಗರದ ಮೈಲೂರು ಬಡಾವಣೆಯ ಶಿವಮೂರ್ತಿ ಮಾರುತಿ (45), ಮತ್ತು ಅವರ 9 ವರ್ಷ, 7 ವರ್ಷ ಹಾಗೂ ಏಳು ತಿಂಗಳು ವಯಸ್ಸಿನ ಮಕ್ಕಳು ದುರಂತ ಅಂತ್ಯ ಕಂಡಿದ್ದಾರೆ. ಶಿವಮೂರ್ತಿ ಅವರ ಪತ್ನಿ ರಮಾಬಾಯಿ, ಮತ್ತು …

Read More »

ನೇಪಾಳಕ್ಕೆ ಪ್ರವಾಸ ಹೋದ 39 ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಂತೆ CSಗೆ ಸಿಎಂ ಸೂಚನೆ

ಬೆಂಗಳೂರು: ಹಿಂಸಾಚಾರಪೀಡಿತ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ(ಸಿಎಸ್) ಶಾಲಿನಿ ರಜನೀಶ್ ಅವರಿಗೆ ಮಂಗಳವಾರ ಸೂಚನೆ ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಕ್ಕೆ‌ ಸೂಚನೆ ನೀಡಿದ್ದಾರೆ. ನೇಪಾಳಕ್ಕೆ ಪ್ರವಾಸ ಹೋಗಿರುವ 39 ಮಂದಿ ಕನ್ನಡಿಗರು ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಮಾಹಿತಿ ಇದೆ. ಸಾಮಾಜಿಕ ಜಾಲತಾಣಗಳ ನಿಷೇಧ, ಭ್ರಷ್ಟಾಚಾರ ಮತ್ತು ಹಗರಣಗಳ ವಿರುದ್ಧ ನೇಪಾಳದಲ್ಲಿ ಯುವಜನರು …

Read More »

ಶಾಸಕ ಕೆ.ಸಿ. ವೀರೇಂದ್ರಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ

ಶಾಸಕ ಕೆ.ಸಿ. ವೀರೇಂದ್ರಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ ಬೆಂಗಳೂರು: ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ.) ಇದುವರೆಗೂ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಬೆಳ್ಳಿ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ ಅಧಿಕ ಸ್ವತ್ತುಗಳನ್ನು ಜಪ್ತಿ ಮಾಡಿದೆ. …

Read More »

ಬಿಡಿಸಿಸಿ ಬ್ಯಾಂಕಿನ‌ ಚುನಾವಣೆ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಬೆಳಗಾವಿ- ಬಿಡಿಸಿಸಿ ಬ್ಯಾಂಕಿನ‌ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಖಾನಾಪೂರ ತಾಲ್ಲೂಕು ಕ್ಷೇತ್ರದ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಅಲ್ಲಿನ ಶಾಸಕ ವಿಠ್ಠಲ ಹಲಗೇಕರ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠಯವರೊಂದಿಗೆ ಸುದೀರ್ಘ ಚರ್ಚೆಯನ್ನು ನಡೆಸಿದರು. ಅಕ್ಟೋಬರ್ …

Read More »

ನಟ ದರ್ಶನ್​ಗೆ ಪರಪ್ಪನ ಅಗ್ರಹಾರವೇ ಫಿಕ್ಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಂಡು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯ ನಿರಾಕರಿಸಿದೆ. ಹೆಚ್ಚುವರಿ ಹಾಸಿಗೆ – ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಜೈಲಿನ ಕೈಪಿಡಿಯಲ್ಲಿರುವ ನಿಯಮಗಳನ್ನು ಅನುಸರಿಸಬೇಕು ಎಂದು ತಿಳಿಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ವರ್ಗಾಯಿಸಬೇಕೆಂದು ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ದರ್ಶನ್ ಪರ ವಕೀಲ …

Read More »

ಯೋಗೇಶ್​ಗೌಡ ಕೊಲೆ ಪ್ರಕರಣ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು

ಬೆಂಗಳೂರು: ಬಿಜೆಪಿ ಕಾರ್ಯಕರ್ತ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ ಆದೇಶದಂತೆ ಜೈಲು ವಾಸದಲ್ಲಿರುವ ಕಾಂಗ್ರೆಸ್​ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರಾಗಿದೆ. ಮಗನ ಶಸ್ತ್ರಚಿಕಿತ್ಸೆ ಕಾರಣ ನೀಡಿ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ವಿನಯ್​ ಕುಲಕರ್ಣಿ ಸಲ್ಲಿಸಿದ್ದ ಮಧ್ಯಂತರ ಆರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್​ ಅವರು, …

Read More »

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವವಿಲ್ಲದೆ ಸಂಪೂರ್ಣ ಸರಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಆಗ್ರಹಿಸಿ ಹೋರಾಟ ಸಮಿತಿಯ ನಿಯೋಗವು ಬೃಹತ್ ಪ್ರತಿಭಟನೆ ನಡೆಸಿತು. ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ನಗರದ ಗಾಂಧಿ ವೃತ್ತ, ಬಸವೇಶ್ವರ ವೃತ್ತ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿತು. ಸಭೆ ಸೇರಿದ ನಿಯೋಗವು ಯಾವುದೇ …

Read More »

ಇದೇ ೧೧ ರಂದು ಬೆಳಗಾವಿಯಲ್ಲಿ ಬಸವ ಸಂಸ್ಕೃತಿ ಅಭಿಯಾನ

ಬೆಳಗಾವಿ: ವಿಶ್ವಗುರು ಬಸವಣ್ಣನವರನ್ನು ಕರ್ನಾಟಕ ಸರ್ಕಾರ “ಸಾಂಸ್ಕೃತಿಕ ನಾಯಕ”ನೆಂದು ಘೋಷಿಸಿದ ವರ್ಷ ಆಚರಣೆಯ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಇದೆ ಗುರುವಾರ ದಿನಾಂಕ 11 ರಂದು ಬೃಹತ್ ಪ್ರಮಾಣದಲ್ಲಿ ಬಸವ ಸಂಸ್ಕೃತಿ ಅಭಿಯಾನ ಆಯೋಜಿಸಲಾಗಿದೆ ಎಂದು ಜಾಗತಿಕ ಲಿಂಗಾಯಿತ ಮಹಾಸಭೆಯ ಜಿಲ್ಲಾ ಅಧ್ಯಕ್ಷ ಬಸವರಾಜ ರೊಟ್ಟಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು ಬಸವಣ್ಣನವರ ತತ್ವ ಸಿದ್ಧಾಂತ ಪ್ರಚಾರ ಮತ್ತು ಪ್ರಸಾರ ವಚನ ಸಾಹಿತ್ಯವನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ …

Read More »

ಮಲಗಿದ್ದಾಗ ಗಂಡನನ್ನು ಕೊಲ್ಲಲು ಪತ್ನಿ ಯತ್ನ: ಪತಿ ಸಾವಿನಿಂದ ಬಚಾವ್ ಆಗಿದ್ದೇ ರೋಚಕ

ವಿಜಯಪುರ, (ಸೆಪ್ಟೆಂಬರ್ 08): ಲವ್ವರ್​ (Boyfriend) ಜೊತೆ ಸೇರಿ ಗಂಡನನ್ನೇ (Husband) ಕೊಲೆ (Murder) ಮಾಡಲು ಯತ್ನಿಸಿದ ಪತ್ನಿ ಸಿಕ್ಕಿಬಿದ್ದಿದ್ದಾಳೆ. ಹೌದು…ಸುನಂದಾ ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ತನ್ನ ಪ್ರಿಯಕರನ ಜೊತೆ ಸೇರಿ ತಾಳಿ ಕಟ್ಟಿದ ಗಂಡ ಭೀರಪ್ಪ ಪೂಜಾರಿಯನ್ನು ಕೊಲೆಗೆ ಯತ್ನಿಸಿದ್ದಾಳೆ. ಈ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ ಪಟ್ಟಣದ ಅಕ್ಕಮಹಾದೇವಿ ನಗರದಲ್ಲಿ ನಡೆದಿದೆ. ರಾತ್ರಿ ಮಲಗಿದಾಗ ಪತಿಯ ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದು, ಅದೃಷ್ಟವಶಾತ್ ಭೀರಪ್ಪ ಪೂಜಾರಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಸೆಪ್ಟೆಂಬರ್ 1, 2025ರಂದು …

Read More »

ಪತ್ರಕರ್ತರಿಗೆ ತರಬೇತಿ: ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌-ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ

ಬೆಂಗಳೂರು, (ಸೆಪ್ಟೆಂಬರ್‌ 8): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್‌ (infosys springboard) ಸಿಎಸ್‌ಆರ್‌ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು (Karnataka Media Academy) ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ಪತ್ರಕರ್ತರ ಸಾಫ್ಟ್‌ಸ್ಕಿಲ್‌ ತರಬೇತಿಯ ಉದ್ದೇಶಕ್ಕಾಗಿ ಮಾಡಿಕೊಳ್ಳುತ್ತಿರುವ ಈ ಒಡಂಬಡಿಕೆಯು ಸಿ.ಎಸ್.ಆರ್. ಅಡಿ ಕರ್ನಾಟಕ ಮಾಧ್ಯಮ ಅಕಾಡೆಮಿ ಕೈಗೆತ್ತಿಕೊಂಡ ಮೊದಲ ಕಾರ್ಯಕ್ರಮವಾಗಿದ್ದು, ಇನ್ಫೋಸಿಸ್ CSR ಯೋಜನೆಯ “ಸ್ಪ್ರಿಂಗ್‌ಬೋರ್ಡ್” ಪ್ಲಾಟ್‌ಫಾರ್ಮ್ ಮೂಲಕ ಪತ್ರಕರ್ತರ ಡಿಜಿಟಲ್ …

Read More »