Breaking News

ರಾಜ್ಯ

ಉದ್ಯಮಿ ಸಿಜೆ ರಾಯ್ ಮೊಬೈಲ್‌ನಲ್ಲಿದ್ಯಾ ಡೆತ್ ಸೀಕ್ರೆಟ್ – ರಿಕವರಿಗಾಗಿ ಸಿಐಡಿ ಸೈಬರ್ ಸೆಲ್‌ಗೆ ರವಾನೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್  ಆತ್ಮಹತ್ಯೆಗೂ ಮುನ್ನ ಯಾರ ಜೊತೆಯಾದ್ರೂ ಮಾತನಾಡಿದ್ರಾ? ಅಥವಾ ಯಾರಿಗಾದರೂ ಮೆಸೇಜ್ ಕಳುಹಿಸಿದ್ರಾ? ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮೊಬೈಲ್‌ನ್ನು ಸಿಐಟಿ ಸೈಬರ್ ಸೆಲ್‌ಗೆ ರಿಕವರಿಗಾಗಿ ಕಳುಹಿಸಿದ್ದಾರೆ. ಕಾನ್ಫಿಡೆಂಟ್ ಗ್ರೂಪ್ ಮ್ಯಾನೇಜಿಂಗ್ ಡೈರೆಕ್ಟರ್ ದೂರಿನಲ್ಲಿ ತಿಳಿಸಿರುವಂತೆ ಆತ್ಮಹತ್ಯೆಗೂ ಮುನ್ನ ತಾಯಿ ಜೊತೆ ಮಾತನಾಡಬೇಕೆಂದು ರಾಯ್ ತಿಳಿಸಿದ್ದರು. ಜೊತೆಗೆ ಗನ್‌ಮ್ಯಾನ್ ಬಳಿ ಯಾರಿಗೂ ಒಳಗೆ ಬಿಡದಂತೆ ಹೇಳಿದ್ದರು. ಅದರಂತೆ ಆತ್ಮಹತ್ಯೆಗೂ ಮುನ್ನ ನಿಜಕ್ಕೂ ತಾಯಿ ಜೊತೆಗೆ ಮಾತನಾಡಿದ್ರಾ? …

Read More »

ಸಿಎಂ, ಡಿಸಿಎಂ ಫೋಟೋ ತಿರುಚಿ ಅವಹೇಳನಕಾರಿ ಪೋಸ್ಟ್: ಬಿಜೆಪಿ ಕರ್ನಾಟಕದ ಎಕ್ಸ್ ಖಾತೆ ವಿರುದ್ಧ ದೂರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರ ಕುರಿತು ಸುಳ್ಳು ಹಾಗೂ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ಆರೋಪದಡಿ ಕರ್ನಾಟಕ ಬಿಜೆಪಿಯ ಎಕ್ಸ್ ಖಾತೆ ವಿರುದ್ಧ ದೂರು ದಾಖಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ (ಕೆಪಿಸಿಸಿ)ಯ ವಕೀಲರ ಘಟಕ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದು ಎನ್‌ಸಿಆರ್ (ಗಂಭೀರವಲ್ಲದ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಿಜೆಪಿ ಕರ್ನಾಟಕ ಎಕ್ಸ್ ಖಾತೆಯಲ್ಲಿ ಜನವರಿ 29ರಂದು “ಕರ್ನಾಟಕವನ್ನು ಹಗಲಿರುಳು ಲೂಟಿ ಹೊಡೆಯುತ್ತಿರುವ ಸ್ಕ್ಯಾಮ್ …

Read More »

ಸರ್ಕಾರಿ ಬಸ್​ಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ತೆರವಿಗೆ ಸೂಚನೆ

ಬೆಂಗಳೂರು: ಸರ್ಕಾರಿ ಬಸ್​ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಮುದ್ರಿಸುವ ಮೂಲಕ ಸಾರಿಗೆ ಸಂಸ್ಥೆಗಳು ಆದಾಯದ ವ್ಯಾಮೋಹಕ್ಕೆ ಒಳಗಾಗಿವೆ ಎಂಬ ಮಾತುಗಳು ಕೇಳಿಬಂದಿದ್ದವು. ಪ್ರತಿಯೊಂದು ಸರ್ಕಾರಿ ಬಸ್​​ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತುಗಳು ರಾರಾಜಿಸುತ್ತಿದ್ದವು. ಈ ಬಗ್ಗೆ ಕನ್ನಡ ಸಂಘಟನೆಗಳು ಸೇರಿದಂತೆ ಜನರು ಕೂಡ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಇದೀಗ ಸರ್ಕಾರಿ ಬಸ್​ಗಳ ಮೇಲಿನ ಜಾಹೀರಾತು ತೆಗೆಯಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ  ನಾಲ್ಕು ನಿಗಮಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. …

Read More »

ಐಟಿ ದಾಳಿ ವೇಳೆಯೇ ಶೂಟ್​ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್​ ಆತ್ಮಹತ್ಯೆ

ಬೆಂಗಳೂರು: ರಿಯಲ್​ ಎಸ್ಟೇಟ್​ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್  ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಹೊಸೂರು ರಸ್ತೆಯ ಲ್ಯಾಂಗ್​ಫೋರ್ಡ್ ಟೌನ್​ನಲ್ಲಿರುವ ಕಚೇರಿಯಲ್ಲಿ ನಡೆದಿದೆ. ಸ್ಥಳಕ್ಕೆ ಅಶೋಕ್​​ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆನೇಕಲ್​​ನ ನಾರಾಯಣ ಆಸ್ಪತ್ರೆಗೆ ಸಿಜೆ ರಾಯ್ ಶವ ರವಾನಿಸಲಾಗಿದೆ. ಆತ್ಮಹತ್ಯೆಗೆ ಕಾರಣವೇನು?  ಸಿ.ಜೆ.ರಾಯ್​​ ಅವರು ಕಾನ್ಫಿಡೆಂಟ್ ಗ್ರೂಪ್​ ಎಂಬ ರಿಯಲ್​ ಎಸ್ಟೇಟ್​ ಕಂಪನಿಯನ್ನು ಹುಟ್ಟುಹಾಕಿದ್ದರು. ಪದೇ ಪದೆ ಐಟಿ ಇಲಾಖೆ …

Read More »

ಕರ್ನಾಟಕದ ಎಲ್ಲ ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶ ನಿಷೇಧಿಸಲಿ – ಧಾರ್ಮಿಕ ದತ್ತಿ ಇಲಾಖೆಗೆ ಮಂದಿರ ಮಹಾಸಂಘ ಆಗ್ರಹ

ಬೆಂಗಳೂರು: ಇತ್ತೀಚಿಗಷ್ಟೇ ಉಜ್ಜಯಿನಿ ಮಹಾಕಾಳೇಶ್ವರ ದೇವಾಲಯದಲ್ಲಿ ಹಿಂದೂಯೇತರರ ಪ್ರವೇಶ ನಿಷೇಧ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದೆ. ಉಜ್ಜಯಿನಿ ಸಂತರು ಮತ್ತು ಹಿಂದೂ ಸಂಘಟನೆಗಳು ಮಂಡಿಸಿರುವ ನಿಲುವನ್ನು ಬೆಂಬಲಿಸುತ್ತಾ ಮಂದಿರ ಮಹಾಸಂಘವು ಕರ್ನಾಟಕದ ಎಲ್ಲ ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶ ನಿಷೇಧಿಸಲಿ ಎಂದು ಧಾರ್ಮಿಕ ದತ್ತಿ ಇಲಾಖೆಗೆ ಆಗ್ರಹಿಸಿದೆ. ಕರ್ನಾಟಕ ಮಂದಿರ ಮಹಾಸಂಘದ ರಾಜ್ಯ ಸಂಯೋಜಕರಾದ ಶ್ರೀ.ಮೋಹನ್ ಗೌಡ ಅವರು, ಹಿಂದೂ ತೀರ್ಥಕ್ಷೇತ್ರಗಳು ಕೇವಲ ಪ್ರವಾಸಿ ಕೇಂದ್ರಗಳಲ್ಲ, ಬದಲಾಗಿ ಹಿಂದೂಗಳ ಪವಿತ್ರ ಮತ್ತು ಜಾಗೃತ …

Read More »

ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಕೊಡಿ, ಇಲ್ಲದಿದ್ರೆ ಶಾಲೆಗಳ ಮಾನ್ಯತೆ ರದ್ದು – ಸುಪ್ರೀಂ ವಾರ್ನಿಂಗ್

ನವದೆಹಲಿ: ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಬದುಕುವ ಮೂಲಭೂತ ಹಕ್ಕಿನ ಭಾಗವಾಗಿದೆ ಅಂತ ಸುಪ್ರೀಂ ಕೋರ್ಟ್  ಹೇಳಿದೆ. ಅಲ್ಲದೇ, ಖಾಸಗಿ ಮತ್ತು ಸರ್ಕಾರಿ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಜೈವಿಕ ವಿಘಟನೀಯ ಸ್ಯಾನಿಟರಿ ಪ್ಯಾಡ್‌ಗಳನ್ನು  ಒದಗಿಸಬೇಕು ಅಂತ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಆರ್.ಮಹದೇವನ್‌ ಅವರಿದ್ದ ದ್ವಿಸದಸ್ಯ ಪೀಠ, ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ  ಪ್ರತ್ಯೇಕ ಶೌಚಾಲಯಗಳು …

Read More »

ಕೇಂದ್ರ ಬಜೆಟ್‌ ಹೊತ್ತಲ್ಲೇ ಸಿಎಂ ʻಜಸ್ಟೀಸ್ ಫಾರ್ ಕರ್ನಾಟಕʼ ಅಭಿಯಾನ ಶುರು

ಬೆಂಗಳೂರು: ಫೆಬ್ರವರಿ 1 ರ ಭಾನುವಾರ ಕೇಂದ್ರ ಸರ್ಕಾರ ಬಜೆಟ್  ಮಂಡಿಸಲಿದೆ. ಈ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ `ಜಸ್ಟೀಸ್ ಫಾರ್ ಕರ್ನಾಟಕ’ ಅಂತ ಅಭಿಯಾನ ಶುರು ಮಾಡಿದ್ದಾರೆ. ಕರ್ನಾಟಕಕ್ಕೆ ನ್ಯಾಯ ಬೇಕು ಅಂತ ಕೇಂದ್ರದ ಮೇಲೆ ಒತ್ತಡ ಹೇರೋದು ಇದರ ಉದ್ದೇಶವಾಗಿದೆ. ತೆರಿಗೆ ಅನ್ಯಾಯ, ಅಭಿವೃದ್ಧಿಗೆ ಹಣಕಾಸು ಹಂಚಿಕೆ, ಬೆಂಗಳೂರು ಅಭಿವೃದ್ಧಿಗೆ ಅನುದಾನ ಸೇರಿ ಹಲವು ವಿಷಯ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಈ ಅಭಿಯಾನ ಆರಂಭಿಸಿದ್ದಾರೆ. ಒತ್ತಾಯಗಳೇನು? * ಬೆಂಗಳೂರಿನ …

Read More »

ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ

ಬೆಂಗಳೂರು: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಲಂಚ ಪಡೆಯುವಾಗಲೇ ಪೊಲೀಸ್ ಇನ್ಸ್ಪೆಕ್ಟರ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಗುರುವಾರ (ಜ.29) ಬೆಂಗಳೂರಿನ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಕೇಸ್‌ನಲ್ಲಿ ಸಿಕ್ಕಿಸುವುದಾಗಿ ಬೆದರಿಸಿ ಇನ್ಸ್‌ಪೆಕ್ಟರ್‌ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.  ಒಟ್ಟು 5 ಲಕ್ಷ ರೂ. …

Read More »

2 ದಿನಗಳ ಗದ್ದಲಕ್ಕೆ ತೆರೆ ಎಳೆದ ಸಭಾಪತಿ: ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಬಗ್ಗೆ ಚರ್ಚೆ ಆರಂಭ

ಬೆಂಗಳೂರು: ಟೀಕಿಸುವ ಭರದಲ್ಲಿ ಅಸಂವಿಧಾನಿಕ ಹೇಳಿಕೆ ನೀಡಿದ್ದ ಸಂಬಂಧ ಕಾಂಗ್ರೆಸ್​ನ ವಿಧಾನಪರಿಷತ್​ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂಬ ಪ್ರತಿಪಕ್ಷದ ಒತ್ತಾಯಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರು ರೂಲಿಂಗ್ ನೀಡುವ ಮೂಲಕ ಎರಡು ದಿನಗಳಿಂದ ನಡೆಯುತ್ತಿದ್ದ ಗದ್ದಲಕ್ಕೆ ತೆರೆ ಎಳೆದಿದ್ದಾರೆ. ಇಂದು ಸದನ ಆರಂಭವಾಗುತ್ತಿದ್ದಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ನಮ್ಮನ್ನು ನಿಂದಿಸಿರುವ ಹರಿಪ್ರಸಾದ್ ಅವರು ಕ್ಷಮೆಯಾಚಿಸಬೇಕೆಂಬುದು ನಮ್ಮ‌ ಒತ್ತಾಯವಾಗಿದೆ. ಹೀಗಾಗಿ, …

Read More »

ಚಿಕ್ಕೋಡಿ:ಕೆಎಲ್ಇ ಇಂಜಿನಿಯರಿಂಗ್ ವಿದ್ಯಾರ್ಥಿನಿಗಳು ನೇಟಬಾಲ್ – ಯುನಿವರ್ಸಿಟಿ ಬ್ಲೂ ಆಯ್ಕೆ

ಚಿಕ್ಕೋಡಿಯ ಕೆ. ಎಲ್. ಇ ಇಂಜಿನೀಯರಿಂಗ್ ಕಾಲೇಜಿನ ವಿಧ್ಯಾರ್ಥಿನಿಯರಾದ ನಿಶಾ ಮಾನಗಾಂವೆ, ಶೋಭಾ ಮುರಚಟ್ಟಿ, ಸಪ್ನಾ ಖೋತ ವಿಶ್ವೇಶ್ವರಯ್ಯಾ ತಾಂತ್ರಿಕ ವಿಶ್ವವಿದ್ಯಾಲಯದ ನೇಟಬಾಲ್ ಕ್ರೀಡೆಯಲ್ಲಿ 2025-26ನೇ ಸಾಲಿನ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿರುವುದು ಕಾಲೇಜಿಗೆ ಹೆಮ್ಮೆಯ ವಿಷಯವೆಂದು ಪ್ರಾಚಾರ್ಯರಾದ ಡಾ. ದರ್ಶನಕುಮಾರ ಬಿಳ್ಳೂರ ತಿಳಿಸಿದ್ದಾರೆ. ಆಂದ್ರಪ್ರದೇಶದ ಕೃಷ್ಣಾ ವಿಶ್ವವಿದ್ಯಾಲಯ, ಮಚಲಿಪಟ್ಟಣಂದಲ್ಲಿ ಫೆಬ್ರುವರಿ 14 ರಿಂದ 18 ರ ವರೆಗೆ ಜರುಗಲಿರುವ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ನೇಟಬಾಲ್ ಪಂದ್ಯಾವಳಿಯಲ್ಲಿ ಈ …

Read More »