ಬೆಳಗಾವಿ: ಕಳೆದ ಮೂರು ವರ್ಷಗಳಿಂದ ನಿರಂತರ ಪ್ರವಾಹ ಉಂಟಾಗುತ್ತಿದ್ದು, ಮತ್ತೆ ಈ ವರ್ಷವೂ ಭಾರೀ ಮಳೆ ಆಗುತ್ತಿದೆ. ಆದ್ದರಿಂದ ಪ್ರವಾಹ ಉಂಟಾಗುವ ಸಾಧ್ಯತೆಗಳಿದ್ದು, ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಜನರಿಗೆ ತೊಂದರೆ ಆಗದಂತೆ ಶೀಘ್ರ ಅಧಿಕಾರಿಗಳ ಸಭೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಆಗ್ರಹಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ, ಸಚಿವರು, ಜಿಲ್ಲಾಡಳಿತ ಎಲ್ಲಾ …
Read More »ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಫೈನಲ್. ಸಚಿವ ಸುನಿಲ್ ಕುಮಾರ್ ಗೆ ಒಲಿದ ಅದೃಷ್ಟ.
ಬೆಂಗಳೂರು: ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಫೈನಲ್ ಆಗಿದ್ದು, ಸಚಿವ ಸುನಿಲ್ ಕುಮಾರ್ ಅವರಿಗೆ ಅದೃಷ್ಟ ಒಲಿದು ಬಂದಿದೆ. ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಆಗಸ್ಟ್ ತಿಂಗಳಿನಲ್ಲಿ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಖಾಸಗಿ ರೆಸಾರ್ಟ್ ನಲ್ಲಿ ನಡೆದ ಬಿಜೆಪಿ ಚಿಂತನ ಮಂಥನ ಸಭೆಯಲ್ಲಿ ಸುನಿಲ್ ಕುಮಾರ್ ರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಬೆಕು ಎಂದು ತೀರ್ಮಾನಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ನಳಿನ್ ಕುಮಾರ್ ಕಟೀಲ್, …
Read More »ರಾತ್ರೋರಾತ್ರಿ ಸರ್ಕಾರ ಯು ಟರ್ನ್: ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿಷೇಧ ಆದೇಶ ವಾಪಸ್
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದ್ದು, ಈ ಆದೇಶವನ್ನು ತಡರಾತ್ರಿ ವಾಪಾಸ್ ಪಡೆದುಕೊಳ್ಳಲಾಗಿದೆ. ನೌಕರರ ಮನವಿಯ ಮೇರೆಗೆ ಸರ್ಕಾರ ಆದೇಶ ಹೊರಡಿಸಿದ್ದು, ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ತೆಗೆಯಬಾರದು ಎನ್ನುವ ಆದೇಶವನ್ನು ತಡರಾತ್ರಿ ವಾಪಾಸ್ ಪಡೆಯಲಾಗಿದೆ.
Read More »ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‍ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಕೆಎಂಎಫ್‍ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ ಚೆಕ್ ವಿತರಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃದ್ಧಿಗಾಗಿಯೇ ಕೆಎಂಎಫ್ ಬದ್ಧವಿದ್ದು ರೈತರಿಗೆ ಬೇಕಾಗಿರುವ ಎಲ್ಲ ಸೌಲತ್ತುಗಳನ್ನು ನೀಡುತ್ತಿದೆ ಎಂದು ಹೇಳಿದರು. ರೈತರಿಗೆ …
Read More »200 ರೂದಲ್ಲಿ ಹಿಡಕಲ್ ಡ್ಯಾಂ,ಗೋಕಾಕ ಪಾಲ್ ಗೊಡಚಿನಮಲ್ಕಿ ದರ್ಶನ
ಬೆಳಗಾವಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ ಹಿಡಕಲ್ ಡ್ಯಾಂ,ಮತ್ತು ನ ಗೊಡಚಿನಮಲ್ಕಿ ಜಲಪಾತಗಳ ದರ್ಶನ ಮಾಡಲು ಬೆಳಗಾವಿ ಸಾರಿಗೆ ಸಂಸ್ಥೆ ಅತ್ಯಂತ ಕಡಿಮೆ ದರದಲ್ಲಿ ಟೂರ್ ಪ್ಯಾಕೇಜ್ ಘೋಷಣೆ ಮಾಡಿದ್ದು, ವಿಶೇಷವಾದ ಬಸ್ ಸೌಲಭ್ಯ ಕಲ್ಪಿಸಿದೆ. ಕೇವಲ 200 ರೂ ದರದಲ್ಲಿ ಹಿಡಕಲ್ ಡ್ಯಾಂ, ಗೋಕಾಕ್ ಫಾಲ್ಸ್ ದರ್ಶನ ಮಾಡಿಸಲು, ಬೆಳಗಾವಿ ಬಸ್ ನಿಲ್ದಾಣದಿಂದ ಬೆಳಗ್ಗೆ 9:00 ಗಂಟೆಗೆ ಬಸ್ …
Read More »ಧಾರಾಕಾರ ಮಳೆ: ವಿವಿಧೆಡೆ ಸಂಚಾರ ವ್ಯತ್ಯಯ
ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಭೀಮಗಡ ಅರಣ್ಯ ಪ್ರದೇಶದಲ್ಲಿ ಸುರಿದ ಮಳೆಯಿಂದಾಗಿ ಮಂತುರ್ಗಾ ಸೇತುವೆ ಮೇಲೆ ನೀರು ಹರಿದಿದೆ. ಇದರಿಂದ ಕರ್ನಾಟಕ-ಗೋವಾ ರಾಜ್ಯ ಹೆದ್ದಾರಿ ಸಂಚಾರ ಗುರುವಾರ ಸಂಜೆ 5ರವರೆಗೂ ಬಂದ್ ಆಗಿತ್ತು. ಅರಣ್ಯದಲ್ಲಿ ಬುಧವಾರ ರಾತ್ರಿಯಿಡೀ ಮಳೆ ಸುರಿಯಿದೆ. ಸಿಂಧನೂರು- ಹೆಮ್ಮಡಗಾ ಅಂತರರಾಜ್ಯ ಹೆದ್ದಾರಿ ಭಾಗಶಃ ಮುಳುಗಿ ಸಂಚಾರ ಬಂದ್ ಆಗಿತ್ತು. ಸಂಜೆ ವೇಳೆಗೆ ಇಳಿಮುಖವಾದ ನಂತರ ವಾಹನ ಸಂಚಾರ ಮತ್ತೆ ಆರಂಭವಾಯಿತು. ತಾಲ್ಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಮುಂಜಾಗ್ರತೆಯಾಗಿತಾಲ್ಲೂಕಿನ …
Read More »ಶಾಲಾ ವಿದ್ಯಾರ್ಥಿಗಳಿಗೆಮೊಟ್ಟೆ ವಿತರಣೆಗೆ ಬ್ರೇಕ್!
ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಮೊಟ್ಟೆ ನೀಡದಿರಲು ಎನ್ ಇಪಿ ಸಮಿತಿ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ ಎನ್ನಲಾಗಿದೆ. ಶಿಕ್ಷಣ ಇಲಾಖೆಯ ಆರ್ಥಿಕ ಸಂಕಷ್ಟದಿಂದ ಶಾಲಾ ವಿದ್ಯಾರ್ಥಿಗಳಿಗೆ ಈ ಬಾರಿ ಶೂ- ಸಾಕ್ಸ್, ಬೈಸಿಕಲ್ ನೀಡಲಾಗುತ್ತಿಲ್ಲ. ಈ ನಡುವೆ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳಿಗೆ ಮೊಟ್ಟೆ ನೀಡದಿರಲು ಎನ್‌ಇಪಿ ಸಮಿತಿ ಶಿಕ್ಷಣ ಇಲಾಖೆಗೆ ಶಿಫಾರಸ್ಸು ಮಾಡಿದೆ ಎನ್ನಲಾಗಿದೆ. ಮೊಟ್ಟೆ ಹಾಗೂ …
Read More », ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ…
ಗಣಿ & ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ… ಭಾ.ಜ.ಪ ಮುಖಂಡರು, ವಿಜಯಪುರ ನಗರ ಶಾಸಕರಾದ ಸನ್ಮಾನ್ಯ ಶ್ರೀ ಬಸನಗೌಡ ಪಾಟೀಲ ಯತ್ನಾಳರವರು, ಇಂದು ಮಾನ್ಯ ಗಣಿ & ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಸನ್ಮಾನ್ಯ ಶ್ರೀ ಹಾಲಪ್ಪ ಆಚಾರ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ …
Read More »ಪಂಚಮಸಾಲಿ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಜಾಗೃತಾ ಸಭೆ
ಅಣ್ಣಿಗೇರಿ ತಾಲೂಕಿನ ಅಂಜುಮನ್ ಶಾದಿ ಮಹಲ್ ನಲ್ಲಿ ಪಂಚಮಸಾಲಿ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಜಾಗೃತಾ ಸಭೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆ. ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಗಳ ನೇತ್ರತ್ವದಲ್ಲಿ ನಡೆಯುತ್ತಿರುವ ಪಂಚಮಸಾಲಿ ಸಮಾಜದ 2ಎ ಮತ್ತು ಸರಕಾರದಲ್ಲಿ ಓ.ಬಿ.ಸಿ ಮೀಸಲಾತಿಯ ಹೋರಾಟಕ್ಕೆ ಜಯವಾಗಲಿ ಎನ್ನುವ ಘೋಷಣೆಯೊಂದಿಗೆ ಈ ಸಭೆಯನ್ನು ಆಯೋಜಿಸಲಾಗಿದ್ದು, ಸಮಾಜದ ಬೆಳವಣಿಗೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಪಂಚಮಸಾಲಿ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಯುವ …
Read More »ಎತ್ತಿನ ಕತ್ತಿನ ಭಾರಕ್ಕೆ ನೊಗವಾದ ‘ರೋಲಿಂಗ್ ಸಪೋರ್ಟ್
ಸಾಂಗ್ಲಿ: ಹಳ್ಳಿ ಕಡೆಗಳಲ್ಲಿಎತ್ತು ಯಾವಾಗಲೂ ಬಿಡುವಿಲ್ಲದ ಪ್ರಾಣಿ. ಕೃಷಿಯ ಜೊತೆಗೆ ಬಂಡಿಗಳನ್ನು ಎಳೆಯಲು ಎತ್ತನ್ನು ನಿರಂತರವಾಗಿ ಬಳಸಲಾಗುತ್ತದೆ. ಹೆಚ್ಚಿನ ಸಂದರ್ಭದಲ್ಲಿಎತ್ತಿನ ಗಾಡಿಗೆ ಅದರ ಸಾಮರ್ಥ್ಯ ಮೀರಿ ಹೊರೆ ಹಾಕಲಾಗುತ್ತದೆ. ಇದರ ನೇರ ಪರಿಣಾಮ ಎತ್ತಿನ ಕುತ್ತಿಗೆಯ ಮೇಲಾಗುತ್ತದೆ. ಇದರ ವಿರುದ್ಧ ಪ್ರಾಣಿ ಪ್ರಿಯರು ಆಗಾಗ್ಗೆ ಧ್ವನಿ ಎತ್ತಿದ್ದಾರೆ. ಆದರೆ, ಎತ್ತಿನ ಕತ್ತಿನ ಹೊರೆ ಮಾತ್ರ ಕಡಿಮೆಯಾಗಿಲ್ಲ. ಆದರೆ ಇದೀಗ ಎತ್ತಿನ ಭಾರ ಕಡಿಮೆ ಮಾಡುವ ಹೊಸ ಸಂಶೋಧನೆಯೊಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. …
Read More »
Laxmi News 24×7