Breaking News

ರಾಜ್ಯ

ಬೆಳಗಾವಿ: ಜಿಲ್ಲೆಯಲ್ಲಿ ಸದ್ಯಕ್ಕೆ ಪ್ರವಾಹದ ಭೀತಿ ಇಲ್ಲ.: ಗೋವಿಂದ ಕಾರಜೋಳ

ಬೆಳಗಾವಿ: ಜಿಲ್ಲೆಯಲ್ಲಿ ಸದ್ಯಕ್ಕೆ ಪ್ರವಾಹದ ಭೀತಿ ಇಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಪ್ರವಾಹ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯಕ್ಕೆ ಒಳಹರಿವು ಪ್ರಮಾಣ ತುಂಬಾ ಕಡಿಮೆ ಇದೆ. ಎರಡು ದಿನಗಳ ಹಿಂದೆ 30 ಟಿಎಂಸಿ ಅಡಿಯಷ್ಟು ನೀರು ಅಲ್ಲಿ ಸಂಗ್ರಹವಾಗಿದೆ. ಅದರ ಸಂಗ್ರಹಣಾ ಸಾಮರ್ಥ್ಯ ಒಟ್ಟು 105 ಟಿಎಂಸಿ ಅಡಿ. ಅದು ಸಂಪೂರ್ಣ ತುಂಬುವವರೆಗೆ ನೀರನ್ನು ಹೊರ ಬಿಡುವುದಿಲ್ಲ. …

Read More »

ನ್ಯಾ.ಸಂದೇಶ್ ವಿರುದ್ಧ ಸುಪ್ರೀಂ ಮೊರೆ ಹೋದ ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್

ಬೆಂಗಳೂರು,ಜು.11. ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಲಂಚ ಪ್ರಕರಣದಲ್ಲಿ ನ್ಯಾ.ಎಚ್.ಪಿ. ಸಂದೇಶ್ ಭ್ರಷ್ಟಾಚಾರ ನಿಗ್ರಹ ದಳದ ವಿರುದ್ಧ ಹಾಗೂ ತಮ್ಮ ವಿರುದ್ಧ ಭಾರಿ ಟೀಕೆ ಮಾಡಿರುವುದನ್ನು ಪ್ರಶ್ನಿಸಿ ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.   ಇದರೊಂದಿಗೆ ನ್ಯಾ.ಸಂದೇಶ್ ಮತ್ತು ಸೀಮಂತ್ ಕುಮಾರ್ ಸಿಂಗ್ ಅವರ ನಡುವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅವರು ನ್ಯಾ. ಸಂದೇಶ್ ವಿರುದ್ಧ ಸಲ್ಲಿಸಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ ಇನ್ನೂ …

Read More »

ರಾಜ್ಯದಲ್ಲಿ ಅವಧಿಗೆ ಮುನ್ನವೇ ವಿಧಾನಸಭೆ ಚುನಾವಣೆ ಘೋಷಣೆ..?!

ಬೆಂಗಳೂರು,ಜು.11- ಕರ್ನಾಟಕದಲ್ಲಿ ಅವಧಿಗೂ ಮುನ್ನ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಬರಲಿದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. 2023ರ ಮೇ ತಿಂಗಳಲ್ಲಿ ನಡೆಯಬೇಕಿರುವ ರಾಜ್ಯ ವಿಧಾನಸಭೆ ಚುನಾವಣೆಯೂ ಈ ವರ್ಷದ ಡಿಸೆಂಬರ್‍ನಲ್ಲಿಯೇ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.   ಗುಜರಾತ್ ಚುನಾವಣೆಯೂ ಡಿಸೆಂಬರ್‍ಲ್ಲೇ ನಡೆಯಲಿದ್ದು, ಅದರ ಜೊತೆಯಲ್ಲೇ ರಾಜ್ಯ ವಿಧಾನಸಭೆ ಚುನಾವಣೆಯನ್ನು ಮುಗಿಸುವ ತವಕದಲ್ಲಿ ಬಿಜೆಪಿ ಇದ್ದು, ಅದಕ್ಕೆ ಬೇಕಿರುವ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ. ಬಿಜೆಪಿ ಇಡುತ್ತಿರುವ ಹೆಜ್ಜೆಗಳನ್ನು …

Read More »

ಅಮೃತ್ ಪೌಲ್ ಬಂಧನ ಪ್ರಕರಣ: ಪ್ರಭಾವಿ ವ್ಯಕ್ತಿಗಳಿಗೆ ಶುರುವಾಯ್ತು ಸಂಕಷ್ಟ

ಬೆಂಗಳೂರು: ಪಿಎಸ್‌ಐ ಅಕ್ರಮ ಪ್ರಕರಣದಲ್ಲಿ ಅಮೃತ್ ಪೌಲ್ ಅವರ ಬಂಧನದ ಬೆನ್ನಲ್ಲೇ ಕೆಲ ಪ್ರಭಾವಿಗಳಿಗೆ ಸಂಕಷ್ಟ ಎದುರಾಗಿದೆ. ಪೌಲ್ ಅವರ ಬೆಂಗಳೂರಿನ ಸಹಕಾರ ನಗರದಲ್ಲಿರುವ ಮನೆ, ಚಿಕ್ಕಬಳ್ಳಾಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್ ಹಾಗೂ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಮಾಡಿದ ವೇಳೆ ಡೈರಿ ಹಾಗೂ ಇತರೆ ದಾಖಲೆಗಳು ಸಿಕ್ಕಿದ್ದು, ಇವುಗಳೇ ಪ್ರಭಾವಿ ವ್ಯಕ್ತಿಗಳಿಗೆ ಸಂಕಷ್ಟ ತಂದೊಡ್ಡಲಿವೆ ಎಂದು ಹೇಳಲಾಗಿದೆ.     ಈ ಪ್ರಭಾವಿಗಳು ತಮಗೆ ಬೇಕಾದವರ ನೇಮಕಾತಿಗೆ ಎಡಿಜಿಪಿಯವರಿಗೆ …

Read More »

ಪಿಎಸ್ಐ ನೇಮಕ ದೊಡ್ಡ ಹಗರಣ ಇದೆ, ಇದನ್ನು ಮುಚ್ಚಿ ಹಾಕಲು ಯತ್ನ ಮಾಡಲಾಗುತ್ತಿದೆ: ಶಾಸಕ ಯತ್ನಾಳ

ಪಿಎಸ್ಐ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಪಿಎಸ್ಐ ಅಕ್ರಮದಲ್ಲಿ ಪಾಲು (ಪೌಲ್) ಎಲ್ಲರದ್ದು ಇದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಅವರು ಹಗರಣದಲ್ಲಿ ಯಾರು ಯಾರು ಇದ್ದಾರೆ ಎಂದು ಎಲ್ಲರೂ ಬಿಚ್ಚಿ ಹೇಳಬೇಕು ಎಂದು ಆಗ್ರಹಿಸಿದರು ‌ ಮಾಜಿ ಸಿಎಂ ಮಗ ಸಹಿತ ಪಿಎಸ್ಐ ಹಗರದಲ್ಲಿ ಇದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಇದು ಒಂದು ದೊಡ್ಡ …

Read More »

12 ಕ್ವಿಂಟಾಲ್ ರೇಶನ್ ಅಕ್ಕಿ ಜಪ್ತಿ ವಶಕ್ಕೆ ಪಡೆದುಕೊಳ್ಳುವಲ್ಲಿ ಹುಕ್ಕೇರಿ ತಾಲೂಕಿನ ಸಂಕೇಶ್ವರ ಠಾಣೆ ಪೊಲೀಸರು ಯಶಸ್ವಿ

ಟ್ರಕ್‍ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ರೇಶನ್ ಅಕ್ಕಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಹುಕ್ಕೇರಿ ತಾಲೂಕಿನ ಸಂಕೇಶ್ವರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿಯ ಗಾಂಧಿನಗರದಿಂದ ಕೊಲ್ಲಾಪುರಕ್ಕೆ ರೇಶನ್ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಸಂಕೇಶ್ವರ ಠಾಣೆ ಪಿಎಸ್‍ಐ ಮತ್ತು ಸಿಬ್ಬಂದಿಗಳು 12 ಕ್ವಿಂಟಾಲ್ ಅಕ್ಕಿಯನ್ನು ಟ್ರಕ್ ಸಮೇತ ಜಪ್ತಿ ಮಾಡಿದ್ದಾರೆ. ಏಂ 24 1751 ಅಶೋಕ್ ಲೈಲೆಂಡ್ ಟ್ರಕ್ ಇದಾಗಿದೆ. ಬೆಳಗಾವಿ ತಾಲೂಕಿನ ಬಸವಣ್ಣ ಕುಡಚಿ …

Read More »

ಬೆಳಗಾವಿಯಲ್ಲಿಯೂ ಕೂಡ ವಿಶ್ವ ಜನಸಂಖ್ಯಾ ದಿನ ಆಚರಿಸಲಾಯಿತು.

ಜುಲೈ 11ರಂದು ವಿಶ್ವ ಜನಸಂಖ್ಯಾ ದಿನವನ್ನು ಇಡೀ ವಿಶ್ವದಾಧ್ಯಂತ ಆಚರಿಸಲಾಗುತ್ತಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕೂಡ ವಿಶ್ವ ಜನಸಂಖ್ಯಾ ದಿನ ಆಚರಿಸಲಾಯಿತು. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿಯ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯ ಹಾಗೂ ತಾಲೂಕಾ ಆರೋಗ್ಯಾಧಿಕಾರಿ ಕಚೇರಿ ಸಹಯೋಗದಲ್ಲಿ ಬಿಮ್ಸ ಉಪನ್ಯಾಸ ಕೊಠಡಿಯಲ್ಲಿ ವಿಶ್ವ ಜನಸಂಖ್ಯಾ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕುಟುಂಬ ಯೋಜನೆ ಉಪಾಯಗಳನ್ನು ನಮ್ಮದಾಗಿಸಿ ಉನ್ನತಿಯ ಹೊಸ ಅಧ್ಯಾಯ …

Read More »

ನಿರಂತರ ಮಳೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ

ಬೆಂಗಳೂರು: ನೆರೆಯ ಮಹಾರಾಷ್ಟ್ರ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುತ್ತಿರುವದರಿಂದ ಕೃಷ್ಣಾ ನದಿಯ ಒಳಹರಿವು ಹೆಚ್ಚಿದೆ. ಆಲಮಟ್ಟಿ ಜಲಾಶಯದ ಒಳಹರಿವು ಇಂದು 75,149 ಕ್ಯೂಸೆಕ್ಸ್ ಇದೆ. ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗುವ ಸಂಭವವಿದೆ ಎಂದು ವರದಿಗಳು ತಿಳಿಸಿವೆ.   ಇನ್ನು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಭಾಗದಲ್ಲಿ ವ್ಯಾಪಕ ಮಳೆ ಹಿನ್ನೆಲೆ ತುಂಗಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದೆ. ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು …

Read More »

ಗನ್​ಮ್ಯಾನ್​ಗೆ ಪಿಎಸ್​ಐ ಪಟ್ಟ? ಶಾಸಕನ ಪುತ್ರ, ಸಹೋದರನ ಸುತ್ತ ಅಕ್ರಮದ ಘಾಟು- ಬಾಯಿಬಿಟ್ಟ ಕಿಂಗ್​ಪಿನ್​

ಅಫಜಲಪುರ (ಕಲಬುರಗಿ): ಪಿಎಸ್​ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ಆಳಕ್ಕೆ ಹೋದಷ್ಟೂ ಹಲವು ಗಣ್ಯರ ಹೆಸರು ಹೊರಕ್ಕೆ ಬರುತ್ತಿದೆ. ಕೆಲ ದಿನಗಳ ಹಿಂದಷ್ಟೇ ಎಡಿಜಿಪಿ ಅಮೃತ್ ಪೌಲ್ ಅವರು ಈ ಕೇಸ್​ನಲ್ಲಿ ಸಿಲುಕಿಕೊಂಡಿದ್ದರು. ಇದೀಗ ಕಾಂಗ್ರೆಸ್​ ಶಾಸಕರೊಬ್ಬರ ಮಗ ಹಾಗೂ ಅವರ ಸಹೋದರ ಕೂಡ ಇದರಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.   ಅಫಜಲಪುರದ ಕಾಂಗ್ರೆಸ್​ ಶಾಸಕ ಎಂ.ವೈ.ಪಾಟೀಲ್ ಪುತ್ರ ಅರುಣ್ ಪಾಟೀಲ್ ಹಾಗೂ ಶಾಸಕರ ಸಹೋದರ ಎಸ್.ವೈ.ಪಾಟೀಲ್​ಗೆ ಸಂಕಷ್ಟ ಎದುರಾಗಿದೆ. ಶಾಸಕ ಎಂ.ವೈ.ಪಾಟೀಲ್ …

Read More »

ಆಸ್ತಿ ಖರೀದಿ, ಮಾರಾಟಗಾರರು, ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಆಸ್ತಿ ನೋಂದಣಿ, ಪೌತಿ ಖಾತೆ ಆಕ್ಷೇಪಣೆ ಅವಧಿ ಕಡಿತ

ಕಂದಾಯ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಸರ್ಕಾರ ಮುಂದಾಗಿದೆ. ಆಸ್ತಿ ನೋಂದಣಿ ಮತ್ತು ಪೌತಿ ಖಾತೆಯ ಆಕ್ಷೇಪಣೆ ಅವಧಿಯನ್ನು ಕಡಿತಗೊಳಿಸಲು ಸರ್ಕಾರ ಮುಂದಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಒಬ್ಬರ ಹೆಸರಿನಿಂದ ಮತ್ತೊಬ್ಬರ ಹೆಸರಿಗೆ ಆಸ್ತಿ ನೋಂದಣಿ ಆದ ನಂತರ ಖಾತೆ ಬದಲಾವಣೆಯಾಗಲು 35 ದಿನ ಕಾಯಬೇಕು. ಪೌತಿ ಖಾತೆಯಡಿ ಆಸ್ತಿ ವರ್ಗಾವಣೆಯಾದಾಗಲೂ 45 ದಿನ ಕಾಯಬೇಕು. ಇದರ ಅವಧಿಯನ್ನು ಕಡಿತಗೊಳಿಸಲು ಸರ್ಕಾರ ಮುಂದಾಗಿದೆ. ಆಸ್ತಿ ನೋಂದಣಿಗೆ ಹಾಲಿ ಆಕ್ಷೇಪಣೆ ಅವಧಿ 35 …

Read More »