Breaking News
Home / ರಾಜ್ಯ (page 1752)

ರಾಜ್ಯ

ಸಿಬ್ಬಂದಿ ಕೊರತೆ, ಸಿಟಿ ಸ್ಕ್ಯಾನ್, ಲ್ಯಾಬ್ ಸಮಸ್ಯೆಗಳನ್ನು ಬಗೆಹರಿಸಿ : ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ : ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದೆ. ಅಲ್ಲದೇ ಸಿಟಿ ಸ್ಕ್ಯಾನ್ ಮಷೀನ್ ಕೆಟ್ಟುನಿಂತಿದೆ. ಲ್ಯಾಬ್ ಗಳ ಸಮಸ್ಯೆ ಇದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಕೂಡಲೇ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಆಗ್ರಹಿಸಿದ್ದಾರೆ. ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಚಿವ ಡಾ. ಸುಧಾಕರ್ ರವರ ನೇತೃತ್ವದಲ್ಲಿ ನಡೆದ ಕೋವಿಡ್ …

Read More »

ಕಾಂಗ್ರೆಸ್ ಮಡಿಲಿಗೆ ರಾಮನಗರ

ರಾಮನಗರ,ಏ.30-ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕರ್ಮಭೂಮಿ ರಾಮನಗರದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ.ರಾಮನಗರ ನಗರಸಭೆಯ 31 ವಾರ್ಡ್‍ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಹಿಡಿದಿದೆ. ಜೆಡಿಎಸ್ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಪ್ರತಿಪಕ್ಷದ ಸ್ಥಾನದಲ್ಲಿ ಕೂರುವಂತಾಗಿದೆ. ಎಸ್‍ಡಿಪಿಐ ಒಂದು ವಾರ್ಡ್‍ನಲ್ಲಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಒಂದು ಕ್ಷೇತ್ರವನ್ನೂ ಗೆಲ್ಲಲು ಸಾಧ್ಯವಾಗಿಲ್ಲ. ಬೇಲೂರು ಪುರಸಭೆಯಲ್ಲಿ ಕಾಂಗ್ರೆಸ್ ಜಯಬೇರಿ: ಜೆಡಿಎಸ್ ಭದ್ರಕೋಟೆಯನ್ನು ಭೇದಿಸಿ ಬೇಲೂರು …

Read More »

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ತಂದೆ ತಾಯಿ ಕೊರೊನಾಗೆ ಬಲಿ

ಧಾರವಾಡ : ಪಬ್ಲಿಕ್ ಟಿವಿಯ ನಿರೂಪಕ ಅರುಣ್ ಬಡಿಗೇರ್​​ ಅವರ ತಂದೆ ಮತ್ತು ತಾಯಿ ಇಬ್ಬರೂ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮೂರು ದಿನಗಳ ಹಿಂದೆ ಕಳೆದ 27 ರಂದು ಅರುಣ್ ತಾಯಿ 53 ವರ್ಷದ ಕಸ್ತೂರಮ್ಮ ಬಡಿಗೇರ್ ನಿಧನವಾಗಿದ್ದರು ಅಂದಿನಿಂದ ಮತ್ತಷ್ಟು ಗಂಭೀರವಾಗಿದ್ದ ಅರುಣ್ ತಂದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಚಂದ್ರಶೇಖರ್ ಬಡಿಗೇರ್ ಕೆಇ ಬೋರ್ಡ್ ಶಾಲೆಯ ನಿವೃತ್ತ ಶಿಕ್ಷಕರಾಗಿದ್ದರು ಕೊರೊನಾ ದೃಢ ಪಟ್ಟಿದ್ದರಿಂದ ಅವರನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ …

Read More »

ಹಣ ಪಡೆದು ಕೊರೋನಾ ನೆಗೆಟಿವ್ ವರದಿ ನೀಡ್ತಾ ಇದ್ದ ಇಬ್ಬರು ಆರೋಪಿಗಳು ಅರೆಸ್ಟ್.!

ಬೆಂಗಳೂರು : ಯಾವುದೇ ಸ್ವ್ಯಾಬ್ ಪಡೆಯದೇ, ಜನರಿಂದ ಕೊರೋನಾ ನೆಗೆಟಿವ್ ವರದಿ ನೀಡುತ್ತಿದ್ದಂತ ಇಬ್ಬರು ಆರೋಪಿಗಳನ್ನು ನಗರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದಲ್ಲಿ ಯಾವುದೇ ಸ್ವ್ಯಾಬ್ ಟೆಸ್ಟ್ ಪಡೆಯದೇ, ಕೊರೋನಾ ನೆಗೆಟಿವ್ ವರದಿಯನ್ನು ಜನರಿಗೆ ನೀಡುತ್ತಿದ್ದರು. ಈ ಖಚಿತ ಮಾಹಿತಿಯಿಂದ ದಾಳಿ ನಡೆಸಿದಂತ ಸಿಸಿಬಿಯ ವಿಶೇಷ ದಳದ ಅಧಿಕಾರಿಗಳು, ರಾಜಸ್ಥಾನ ಮೂಲಕ ಮುಕೇಶ್ ಸಿಂಗ್ ಹಾಗೂ ಸ್ಥಳೀಯ ನಗರದ ನಿವಾಸಿ ನಾಗರಾಜ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಮೊಬೈಲ್ ಜಪ್ತಿ …

Read More »

ನಿಮ್ಗೆ ಶಾಕ್ ಆದ್ರೂ.. ಸತ್ಯ.! ಬೆಳಗಾವಿಯ ‘ಬಿಮ್ಸ್ ಆಸ್ಪತ್ರೆ’ಯಲ್ಲಿ ಮಹಾ ಎಡವಟ್ಟು : ‘ಕೊರೋನಾ ಸೋಂಕಿತ’ರ ಆರೈಕೆಗಾಗಿ ‘ಕುಟುಂಬಸ್ಥ’ರಿಗೆ ಅವಕಾಶ.!

ಬೆಳಗಾವಿ : ಕೊರೋನಾ ಸೋಂಕಿತರಾದಂತವರಿಗೆ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಪಿಪಿಇ ಕಿಟ್ ಹಾಕೊಂಡು, ವೈದ್ಯರು, ನರ್ಸ್ ಗಳು ಚಿಕಿತ್ಸೆ ನೀಡೋದು, ಆರೈಕೆ ಮಾಡೋದು ನೋಡಿದ್ದೀರಿ. ಆದ್ರೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮಾತ್ರ ಸೋಂಕಿತರ ಆರೈಕೆ ಮಾಡ್ತಾ ಇರೋದು ಕುಟುಂಬಸ್ಥರು. ಹೀಗೊಂದು ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ಹೌದು.. ರಾಜ್ಯದಲ್ಲಿ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರ ಈಗಾಗಲೇ ಕೊರೋನಾ ಕರ್ಪ್ಯೂ ಜಾರಿಗೊಳಿಸಿದೆ. ಸೋಂಕಿನ ನಿಯಂತ್ರಣಕ್ಕೆ ನಾನಾ ಸರ್ಕಸ್ …

Read More »

ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ಏಕಕಾಲಕ್ಕೆ 11 ಜನ ಶವಸಂಸ್ಕಾರ

ಬೆಳಗಾವಿ-ಮಹಾಮಾರಿ ಕೊರೊನಾ ಅಟ್ಟಹಾಸ ಬೆಳಗಾವಿಯಲ್ಲಿ ಮುಂದುರೆದಿದ್ದು ಕೋವೀಡ್ ಮರಣ ಮೃದಂಗ ಮುಂದುರೆದಿದೆ,ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ಏಕಕಾಲಕ್ಕೆ 11 ಜನ ಶವಸಂಸ್ಕಾರ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಈವರೆಗೂ 11 ಜನರು ಮೃತಪಟ್ಟಿದ್ದು, ಈ ಹನ್ನೊಂದು ಶವಗಳನ್ನುಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆ ಮಾಡಲಾಗಿದೆ.ಸದಾಶಿವನಗರ ಸ್ಮಶಾನದಲ್ಲಿ ಇಂದು ಒಂದೇ ದಿನ 11 ಜನರ ಅಂತ್ಯಕ್ರಿಯೆ ನಡೆದಿದೆ. ಸದಾಶಿವ ನಗರ ಸ್ಮಶಾನದ ಬಳಿ ನಿಯೋಜಿತ ಮಹಾನಗರ ಪಾಲಿಕೆ ಸಿಬ್ಬಂದಿಯಿಂದ ಬೆಚ್ಚಿ ಬೀಳಿಸುವ ಮಾಹಿತಿ …

Read More »

ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಮನ್ವಯತೆ ಅಗತ್ಯ ಬಾಲಚಂದ್ರ ಜಾರಕಿಹೊಳಿ, ಅಧ್ಯಕ್ಷರು, ಕೆಎಂಎಫ್

ಕೋವಿಡ್ ಎರಡನೇ ಅಲೆ ಗೋಕಾಕ : ಸರ್ಕಾರ ನೀಡಿದ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಆಚರಣೆ ತರುವುದರೊಂದಿಗೆ ಮಹಾಮಾರಿ ಕೊರೋನಾ ವೈರಸ್‍ನ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ಇಲಾಖೆಯವರು ಒಗ್ಗಟ್ಟಿನಿಂದ ಶ್ರಮಿಸುವಂತೆ ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ವಿವಿಧ ಇಲಾಖೆಗಳ ಮುಖ್ಯಸ್ಥರ ಕೋವಿಡ್ ನಿಯಂತ್ರಣ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಜೀವ ಮತ್ತು ಜೀವನಕ್ಕೆ ಮಹತ್ವ ನೀಡಿ ಸರ್ಕಾರ …

Read More »

ಮೇ 1ರಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪಾರ್ಕಿಂಗ್ ಶುಲ್ಕ ಏರಿಕೆ : ಅದಾನಿ ಕಂಪೆನಿ

ಮಂಗಳೂರು :ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯ ಗುತ್ತಿಗೆ ಪಡೆದಿರುವ ಖಾಸಗಿ ಕಂಪೆನಿ ವಿಮಾನ ನಿಲ್ದಾಣದಲ್ಲಿನ ವಾಹನ ನಿಲುಗಡೆ ಶುಲ್ಕವನ್ನು ಗರಿಷ್ಠ ಪ್ರಮಾಣದಲ್ಲಿ ಏರಿಸಿರುವುದು ವಾಹನ ಚಾಲಕರ ಹಾಗೂ ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣವನ್ನು ಗುತ್ತಿಗೆ ಪಡೆದಿರುವ ಅದಾನಿ ಕಂಪೆನಿ ಮೇ 1, ರಿಂದ ಹೊಸ ಪಾರ್ಕಿಂಗ್ ದರವನ್ನು ವಿಧಿಸುವುದಾಗಿ ಪ್ರಕಟಿಸಿದೆ. ವಿಮಾನ ನಿಲ್ದಾಣದಲ್ಲಿ ದಿಢೀರ್ ಪಾರ್ಕಿಂಗ್ ಶುಲ್ಕ ಏರಿಸಿರುವುದು ಕೊರೋನ ಸಂಕಷ್ಟದ ಕಾಲದಲ್ಲಿ ಜನರ ಗಾಯದ ಮೇಲೆ ಇನ್ನೊಂದು …

Read More »

ಕೋವಿಡ್ ಲಸಿಕೆ ಪಡೆದ ಶಾಸಕ ಯತ್ನಾಳ: ಲಸಿಕೆ ಪಡೆಯಲು ಜನರಿಗೆ ಮನವಿ

ವಿಜಯಪುರ: ದೇಶದ ಎಲ್ಲ ನಾಗರಿಕರು ಕೋವಿಡ್ ಲಸಿಕೆ ಪಡೆದು, ಕೋವಿಡ್ ಮುಕ್ತ ಭಾರತ ನಿರ್ಮಾಣಕ್ಕೆ ಸಹಕರಿಸಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಶುಕ್ರವಾರ ವಿಜಯಪುರ ನಗರದ ವಾರ್ಡ ನಂ-3 ರಲ್ಲಿ ಗ್ಯಾಂಗ್ ಬಾವಡಿ ಸರಕಾರಿ ಶಾಲೆ ನಂ-10 ರಲ್ಲಿ ಎರಡನೇ ಹಂತದ ಕೋವಿಡ್ ಲಸಿಕೆ ಪಡೆದು ಬಳಿಕ ಜನರಿಗೆ ಲಸಿಕೆ ಪಡೆಯುವ ಅಗತ್ಯ ಹಾಗೂ ಮಹತ್ವದ ಕುರಿತು ವಿವರಿಸಿದರು. ಭಾರತದಲ್ಲೇ ಅಭಿವೃದ್ಧಿ ಪಡಿಸಿದ, ಅತ್ಯಂತ …

Read More »

ಕೋವಿಡ್ ನಿಯಂತ್ರಣ ವೈಫಲ್ಯ: ವಿಜಯಪುರ ಡಿಎಚ್‌ಒ ಡಾ.ಯರಗಲ ಕಡ್ಡಾಯ ರಜೆ

ವಿಜಯಪುರ: ಕೋವಿಡ್ ಎರಡನೇ ಅಲೆಯ ವೇಗ ಹೆಚ್ಚಿದ್ದು, ಸೋಂಕು ನಿಯಂತ್ರಣ ವಿಷಯದಲ್ಲಿ ವಿಫಲವಾಗಿದ್ದಾರೆ ಎಂಬ ಆರೋಪದಲ್ಲಿ ವಿಜಯಪುರ ಡಿಎಚ್‌ಒ ಡಾ.ರಾಜಕುಮಾರ ಯರಗಲ ಅವರನ್ನು ಕಡ್ಡಾಯ ರಜೆ ಮೇಲೆ ತೆರಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಯ. ಶಿವಶಂಕರ ಅವರು, ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಡಾ.ರಾಜಕುಮಾರ ಅವರನ್ನು ಕಡ್ಡಾಯ ರಜೆ ಮೇಲೆ …

Read More »