Breaking News
Home / ರಾಜ್ಯ (page 1764)

ರಾಜ್ಯ

ವಿಜಯಪುರ: ಐತಿಹಾಸಿಕ ಗೋಳಗುಮ್ಮಟ ಪ್ರವೇಶಕ್ಕೆ ಮೇ 15ರವರೆಗೆ ನಿರ್ಬಂಧ

ವಿಜಯಪುರ, ಎ.16: ರಾಜ್ಯ ಹಾಗೂ ವಿಜಯಪುರ ಜಿಲ್ಲಾದ್ಯಂತ ಕೊರೋನ ಸೋಂಕು ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಐತಿಹಾಸಿಕ ಗೋಳಗುಮ್ಮಟ ವೀಕ್ಷಣೆಗೆ ಮೇ 15ರ ವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಗೋಳಗುಮ್ಮಟಕ್ಕೆ ಪ್ರವೇಶ ನಿರ್ಬಂಧಿಸಿ ಭಾರತೀಯ ಪುರಾತತ್ವ ಇಲಾಖೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಗೋಳಗುಮ್ಮಟ ಪ್ರವೇಶ ದ್ವಾರದ ಬಾಗಿಲಿಗೆ ಬೀಗ ಹಾಕಲಾಗಿದೆ.

Read More »

ಬಸ್‌ ಗೆ ಕಲ್ಲು ಎಸೆದ ಕಿಡಿಗೇಡಿಗಳು: ಸಾರಿಗೆ ನೌಕರರ ಮುಷ್ಕರಕ್ಕೆ ಚಾಲಕ ಬಲಿ

ಬಾಗಲಕೋಟೆ: 6ನೇ ವೇತನ ಆಯೋಗ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯದಲ್ಲಿ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ಹೋರಾಟ ತೀವ್ರಗೊಂಡಿದ್ದು, ಮುಷ್ಕರದ ವೇಳೆಯೂ ಸೇವಾನಿರತವಾಗಿದ್ದ ಸಾರಿಗೆ ಸಂಸ್ಥೆಯ ಚಾಲಕನೊಬ್ಬ ಬಲಿಯಾಗಿದ್ದಾನೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆ ವಿಭಾಗೀಯ ಜಮಖಂಡಿ ಘಟಕದ ಚಾಲಕ ನಭಿರಸೂಲ ಅವಟಿ (59) ಶುಕ್ರವಾರ ಮೃತಪಟ್ಟಿದ್ದಾರೆ. ಚಾಲಕ ನಭಿರಸೂಲ ಅವರು ಬೆಳಗ್ಗೆ ಸೇವೆಗೆ ಹಾಜರಾಗಿದ್ದರು. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಘತ್ತರಗಿಯಿಂದ ಜಮಖಂಡಿಗೆ ಮರಳುತ್ತಿದ್ದ ವೇಳೆ ಜಮಖಂಡಿ …

Read More »

8 ನಗರಗಳಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದೆ. ಹಾಗಾಗಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುತ್ತಿದೆ. ಏಪ್ರಿಲ್ 20ರಂದು ಟಫ್ ರೂಲ್ಸ್ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು. ಕೋವಿಡ್ ಸಲಹಾ ಸಮಿತಿ ತಜ್ಞರ ಜೊತೆ ತುರ್ತು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈಗ ಜಾರಿಯಲ್ಲಿರುವ 8 ನಗರಗಳ ನೈಟ್ ಕರ್ಫ್ಯೂ ಏಪ್ರಿಲ್ 20ರವರೆಗೂ ಮುಂದುವರೆಯಲಿದೆ. 20ರಂದು ಮತ್ತೊಮ್ಮೆ ಸಭೆ ನಡೆಸಿ ಮುಂದೆ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಅವರ ಸಹೋದರ, ಹರ್ಷಾ ಶುಗರ್ಸ್ ಎಂ.ಡಿ. ಚನ್ನರಾಜ ಹಟ್ಟಿಹೊಳಿ ಅವರಿಗೆ ಕೊರೆನಾ ಪಾಸಿಟಿವ್

  ಬೆಳಗಾವಿ :ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಅವರ ಸಹೋದರ, ಹರ್ಷಾ ಶುಗರ್ಸ್ ಎಂ.ಡಿ. ಚನ್ನರಾಜ ಹಟ್ಟಿಹೊಳಿ ಅವರಿಗೆ ಕೊರೆನಾ ಪಾಸಿಟಿವ್ ಬಂದಿದೆ. ಶುಕ್ರವಾರ ಬೆಳಗ್ಗೆ ಪರೀಕ್ಷೆ ಮಾಡಿಸಿಕೊಂಡಿದ್ದು, ಪಾಸಿಟಿವ್ ಬಂದಿರುವುದರಿಂದ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗಿದ್ದಾರೆ. ತಮ್ಮೊಡನೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮತ್ತು ಆದಷ್ಟು ಜಾಗರೂಕತೆಯಿಂದ ಇರುವಂತೆ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಚನ್ನರಾಜ ಹಟ್ಟಿಹೊಳಿ ವಿನಂತಿಸಿದ್ದಾರೆ.

Read More »

ಆಸ್ಪತ್ರೆಯಲ್ಲಿ ಬೆಡ್​ ಇಲ್ಲದೇ ಪರದಾಟ; ಬೇರೆಡೆಗೆ ಕರೆದೊಯ್ದು ಕಾಪಾಡುವಷ್ಟರಲ್ಲಿ ಹಾರಿ ಹೋದ ಪ್ರಾಣಪಕ್ಷಿ

ಬೆಂಗಳೂರು: ಕೊರೊನಾ ಎರಡನೇ ಅಲೆ ಆರ್ಭಟ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಸೋಂಕಿತರನ್ನು ದಾಖಲಿಸಲು ಬೆಡ್​ಗಳಿಲ್ಲದೇ ಜನರೆಲ್ಲ ಸಾವಿಗೀಡಾಗುತ್ತಿರುವ ಪರಿಸ್ಥಿತಿ ಎದುರಾಗಿದೆ. ಕೊರೊನಾ ಮಹಾಮಾರಿಯ ಹಾವಳಿ ಅಷ್ಟರ ಮಟ್ಟಿಗೆ ದೇಶಾದ್ಯಂತ ಆವರಿಸಿಕೊಂಡಿದೆ. ಬೆಂಗಳೂರಿನಲ್ಲಿ ಹಲವು ಸೋಂಕಿತರು ಸೂಕ್ತ ವ್ಯವಸ್ಥೆ ಇಲ್ಲದೇ ಪ್ರಾಣಾಪಾಯಕ್ಕೆ ಸಿಲುಕುತ್ತಿದ್ದು, ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ನಗರದಲ್ಲಿ ಕಳೆದ 3 ದಿನಗಳ ಹಿಂದೆ ಅನಾರೋಗ್ಯಕ್ಕೀಡಾದ ವ್ಯಕ್ತಿಯ ಕುಟುಂಬಸ್ಥರು ಅವರಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗಳಿಗೆ ಅಲೆದಾಡಿ ಬೆಡ್​ಗಾಗಿ ಹುಡುಕಾಟ ನಡೆಸುವಷ್ಟರಲ್ಲಿ ವ್ಯಕ್ತಿಯ …

Read More »

ಕೊರೊನಾ ವರದಿ “ನೆಗೆಟಿವ್” ಬಂದಿದ್ದಕ್ಕೆ ವೈದ್ಯರನ್ನು ಹಿಗ್ಗಾಮುಗ್ಗ ಥಳಿಸಿದ ವ್ಯಕ್ತಿ

ಮುಂಬೈ, ಏಪ್ರಿಲ್ 16: ತನ್ನ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ವೈದ್ಯರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದ ಗೋಂಡಿಯಾ ಜಿಲ್ಲೆಯಲ್ಲಿ ನಡೆದಿದೆ.   ಗೋಂಡಿಯಾದ ಆರೋಗ್ಯ ಕೇಂದ್ರದಲ್ಲಿ, ವ್ಯಕ್ತಿಯೊಬ್ಬ ಆತನ ಕುಟುಂಬದ ಮೂರು ಸದಸ್ಯರೊಂದಿಗೆ ಆರ್‌ಟಿಪಿಸಿಆರ್ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದ. ಪರೀಕ್ಷಾ ವರದಿಯಲ್ಲಿ ಕುಟುಂಬದ ಮೂವರದ್ದು ಪಾಸಿಟಿವ್ ಬಂದಿದ್ದು, ಈ ವ್ಯಕ್ತಿಯ ವರದಿ ಮಾತ್ರ ನೆಗೆಟಿವ್ ಬಂದಿದೆ. ಹೀಗಾಗಿ ಪರೀಕ್ಷೆಯ ವರದಿಯೇ …

Read More »

ಒಂದೇ ಬೆಡ್​ನಲ್ಲಿ ಇಬ್ಬರಿಗೆ ಚಿಕಿತ್ಸೆ, ಆಸ್ಪತ್ರೆ ಹೊರಗೆ ಹೆಣಗಳು; ಕೊರೊನಾದಿಂದ ಪರಿಸ್ಥಿತಿ ಭೀಕರ

ದೆಹಲಿ: ಹಾಸಿಗೆಗಳ ಕೊರತೆ, ಆಮ್ಲಜನಕದ ಕೊರತೆ.. ಒಂದೇ ಹಾಸಿಗೆಯಲ್ಲಿ ಆಕ್ಸಿಜನ್ ಮಾಸ್ಕ್ ಹಾಕಿಕೊಂಡು ಮಲಗಿರುವ ಇಬ್ಬರು ಕೊರೊನಾ ಸೋಂಕಿತರು. ಇದು ದೆಹಲಿಯ ಲೋಕ ನಾಯಕ ಜಯಪ್ರಕಾಶ್ ನಾರಾಯಣ ಆಸ್ಪತ್ರೆಯ ಕರುಣಾಜನಕ ಪರಿಸ್ಥಿತಿ. ಕೊವಿಡ್ ಸೋಂಕಿತರಿಗಾಗಿಯೇ ಸುಮಾರು 1500 ಹಾಸಿಗೆ ವ್ಯವಸ್ಥೆಯಿರುವ ದೆಹಲಿಯ ಸರ್ಕಾರಿ ಆಸ್ಪತ್ರೆ ಇದೀಗ ಕೊರೊನಾ ಸೋಂಕಿತರಿಂದ ತುಂಬಿ ತುಳುಕುತ್ತಿದೆ. ‘ನನಗೆ ಗೊತ್ತು, ನಮ್ಮ ಆಸ್ಪತ್ರೆಯಲ್ಲಿ ಮಿತಿಮೀರಿದ, ಹಿಡಿಯಲಾರದಷ್ಟು ಕೊರೊನಾ ಸೋಂಕಿತರು ತುಂಬಲಿದ್ದಾರೆ. ಈಗಲೇ ಹಾಸಿಗೆಯೂ ಸೇರಿ ನಮ್ಮಲ್ಲಿರುವ …

Read More »

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ವಿಜಯಪುರ ಪೊಲೀಸರಿಂದ ಮೂವರ ಬಂಧನ

ವಿಜಯಪುರ : ನಗರದ ಆಶ್ರಮ ರಸ್ತೆಯ ಪಾನ್‍ಶಾಪ್ ಮುಂದೆ ನಿಂತು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಟದಲ್ಲಿ ತೊಡಗಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ, ನಗದು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಗರದಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಆರಮ ರಸ್ತೆಯಲ್ಲಿನ ರಾಜು ಪಾನ್‍ಶಾಪ್ ಎದುರು ಕ್ರಿಕೆಟ್ ಬಟ್ಟಿಂಗ್ ನಡೆಯುವ ಕುರಿತು ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ದಾಳಿಯ ವೇಳೆ ಕಾಳಿಕಾ ನಗರ …

Read More »

ಸಾರಿಗೆ ನೌಕರರಿಗೆ ಸಿಹಿ ಹಂಚಿದ ವಿಜುಗೌಡ

ವಿಜಯಪುರ: ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಅವರು ಮುಷ್ಕರ ನಿರತ ಸಾರಿಗೆ ನೌಕರರನ್ನು ಭೇಟಿ, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದರು. ಉಪ ಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಕ್ರಮಕೈಗೊಳ್ಳಲಿದ್ದಾರೆ ಎಂದು ವಿಜುಗೌಡ ಪಾಟೀಲ ಭರವಸೆ ನೀಡಿದರು. ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ, ಯುಗಾದಿ ಹಬ್ಬದ …

Read More »

ಬಿಜೆಪಿ ನಾಯಕನ ಮನೆಯಲ್ಲಿ ಪತ್ತೆಯಾಯ್ತಾ ರಾಶಿ ರಾಶಿ ಹಣ? ಫೋಟೋ ಹಿಂದಿನ ಸತ್ಯಾಂಶವೇ ಬೇರೆ!

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಸದ್ಯ ಚುನಾವಣೆ ಭರಾಟೆ ಜೋರಾಗಿದೆ. ಇದರ ನಡುವೆ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ಮತ್ತು ಪೋಸ್ಟ್​ ವಾರ್​ಗಳು ಸಹ ನಡೆಯುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ರಾಶಿ ರಾಶಿ ಹಣದ ಕಂತೆಗಳಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹಣವನ್ನು ಬಂಗಾಳ ಬಿಜೆಪಿ ನಾಯಕರೊಬ್ಬರ ಮನೆಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಕೆಲವು ಪೊಲೀಸರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡುತ್ತಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ.   ಅನೇಕ ಫೇಸ್​ಬುಕ್​ …

Read More »