Home / ರಾಜ್ಯ (page 1771)

ರಾಜ್ಯ

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಹಾವಳಿ : 8 ಜನರನ್ನು ಬಂಧಿಸಿದ ವಿಜಯಪುರ ಪೊಲೀಸ್

ವಿಜಯಪುರ : ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ ಬೆಟ್ಟಿಂಗ್ ಕೃತ್ಯದಲ್ಲಿ ತೊಡಗಿದ್ದ 8 ಜನ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 92 ಸಾವಿರ ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶನಿವಾರ ಸಂಜೆ ಮುಂಬೈ ಇಂಡಿಯನ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ಮಧ್ಯೆ ನಡೆದ ಐಪಿಎಲ್ ಪಂದ್ಯದ ವೇಳೆ ಇಂಡಿ ಪಟ್ಟಣದಲ್ಲಿರುವ ರೋಹಿತ್ ಶಹಾ ಕಾಂಪ್ಲೆಕ್ ಮೇಲ್ಭಾಗದಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. …

Read More »

ಬೆಣ್ಣೆ ನಗರಿಗೆ ತಟ್ಟಿದ ಕೊರೊನಾ ಬಿಸಿ : ನಾಳೆ ನಡೆಯಬೇಕಿದ್ದ ದಾವಣಗೆರೆ ವಿವಿಯ ‘ಬಿ.ಎಡ್’ ಪರೀಕ್ಷೆ ಮುಂದೂಡಿಕೆ

ದಾವಣಗೆರೆ : ಬೆಣ್ಣೆ ನಗರಿ ದಾವಣಗೆರೆಗೂ ಕೊರೊನಾ ಬಿಸಿ ತಟ್ಟಿದ್ದು, ಕೊರೊನಾ ಭೀತಿ ಹಿನ್ನೆಲೆ ನಾಳೆ ನಡೆಯಬೇಕಿದ್ದ ದಾವಣಗೆರೆ ವಿವಿಯ ‘ಬಿ.ಎಡ್’ ಪರೀಕ್ಷೆ ಮುಂದೂಡಿಕೆಯಾಗಿದೆ. ಈ ಬಗ್ಗೆ ದಾವಣಗೆರೆ ವಿಶ್ವವಿದ್ಯಾಲಯ ಪರೀಕ್ಷಾಂಗ ವಿಭಾಗದ ಕುಲಸಚಿವೆ ಡಾ ಹೆಚ್ ಎಸ್ ಅನಿತಾ ಮಾಹಿತಿ ನೀಡಿದ್ದು, ಕೊರೊನಾ ಭೀತಿ ಹಾಗೂ ಸಾರಿಗೆ ಮುಷ್ಕರದ ಹಿನ್ನೆಲೆ ನಾಳೆ ನಡೆಯಬೇಕಿದ್ದ ದಾವಣಗೆರೆ ವಿವಿಯ ‘ಬಿ.ಎಡ್’ ಪರೀಕ್ಷೆ ಮುಂದೂಡಲಾಗಿದೆ. ಅಲ್ಲದೇ ಏಪ್ರಿಲ್ 20 ರಿಂದ ಆರಂಭವಾಗಲಿರುವ ಸ್ನಾತಕೋತ್ತರ …

Read More »

ಸಾರಿಗೆ ನೌಕರರ ಮುಷ್ಕರ : ನಿಗಮ-ನೌಕರರ ರಾತ್ರಿ ಕಾರ್ಯಾಚರಣೆ!

ಬೆಂಗಳೂರು : ಹನ್ನೊಂದು ದಿನಗಳಿಂದ ಸಾರಿಗೆ ನೌಕರರು ಕರ್ತವ್ಯದತ್ತ ಮುಖ ಮಾಡುತ್ತಿಲ್ಲ. ಆದರೆ ಸಾರಿಗೆ ನಿಗಮಗಳ ಅಧಿಕಾರಿಗಳು ಮತ್ತು ಕೆಲವು ನೌಕರರು ರಾತ್ರಿಯಿಡೀ ಕೆಲಸ ಮಾಡುತ್ತಿದ್ದಾರೆ! ಒಂದೆಡೆ ಬೆಂಗಳೂರಿನ ಕೇಂದ್ರ ಕಚೇರಿ ಮತ್ತು ವಿವಿಧ ಡಿಪೋಗಳಲ್ಲಿ ಅಧಿಕಾರಿಗಳು ಬೆಳಗಿನ ಜಾವ 4ರ ವರೆಗೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತ್ತೂಂದೆಡೆ ನೌಕರರು ರಾತ್ರಿಯಾಗುತ್ತಿದ್ದಂತೆಯೇ ಸಹೋದ್ಯೋಗಿಗಳ ಮನವೊಲಿಕೆಗೆ ಇಳಿಯುತ್ತಿದ್ದಾರೆ. ಅಧಿಕಾರಿಗಳು ನಿತ್ಯ ಸಂಜೆ ಹೊರಡಿಸುವ ಅಮಾನತು, ವಜಾ, ವರ್ಗಾವಣೆ ಪಟ್ಟಿಗಾಗಿ ರಾತ್ರಿಯಿಡೀ ಕೆಲಸ ಮಾಡುತ್ತಿದ್ದಾರೆ. …

Read More »

ಖರೀದಿದಾರರಿಗೆ ಬಿಗ್ ಶಾಕ್: ಚಿನ್ನದ ದರ 3000 ರೂಪಾಯಿ ಏರಿಕೆ -ಇನ್ನಷ್ಟು ಜಿಗಿಯುವ ಸಾಧ್ಯತೆ

ಮುಂಬೈ: ಚಿನ್ನದ ದರ ಒಂದು ತಿಂಗಳಲ್ಲಿ 3000 ರೂಪಾಯಿ ಏರಿಕೆಯಾಗಿದೆ. ಚಿನ್ನದ ದರ ಏರಿಕೆಯಾಗಿದ್ದರೂ ಖರೀದಿಗೆ ಇದು ಸಕಾಲ ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಚಿನ್ನದ ದರ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಅಮೆರಿಕದಲ್ಲಿ ಹಣದುಬ್ಬರ ಹೆಚ್ಚಿಸುವ ಸಾಧ್ಯತೆ ಇರುವುದರಿಂದ ಡಾಲರ್ ದುರ್ಬಲವಾಗಲಿದೆ. ಮಾರುಕಟ್ಟೆಯಲ್ಲಿನ ಅನಿಶ್ಚಿತತೆಯಿಂದಾಗಿ ಚಿನ್ನದ ದರ ಏರಿಕೆಯಾಗಬಹುದು ಎಂದು ಹೇಳಲಾಗಿದೆ. ಏಪ್ರಿಲ್ ತಿಂಗಳಿನಲ್ಲಿ ಚಿನ್ನದ ದರ 10 ಗ್ರಾಂಗೆ …

Read More »

ವಿಮೆ ಪರಿಹಾರ ಕುರಿತಂತೆ ಹೈಕೋರ್ಟ್ ಮಹತ್ವದ ತೀರ್ಪು: ಮಾನಸಿಕ ಅನಾರೋಗ್ಯಕ್ಕೂ ಪರಿಹಾರ

ನವದೆಹಲಿ: ಮಾನಸಿಕ ಅನಾರೋಗ್ಯಕ್ಕೆ ಕೂಡ ನ್ಯಾಯಬದ್ಧವಾಗಿ ವಿಮೆ ಪರಿಹಾರ ದೊರಕಿಸಿಕೊಡಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ವಿಮೆ ಕಂಪನಿಗಳು ವಿಮೆ ಪರಿಹಾರ ನೀಡುವ ಸಂದರ್ಭದಲ್ಲಿ ಸಂತ್ರಸ್ತರ ದೈಹಿಕ ಮತ್ತು ಮಾನಸಿಕ ಆರೋಗ್ಯದ ವಿಷಯದಲ್ಲಿ ತಾರತಮ್ಯ ಮಾಡುವಂತಿಲ್ಲ ಎಂದು ಹೇಳಲಾಗಿದೆ. ಮಾನಸಿಕ ಅನಾರೋಗ್ಯಕ್ಕೆ ನ್ಯಾಯಬದ್ಧವಾದ ವಿಮೆ ಪರಿಹಾರ ನೀಡಬೇಕು ಎಂದು ದೆಹಲಿ ಹೈಕೋರ್ಟ್ ತಿಳಿಸಿದೆ. ಪ್ರಕರಣವೊಂದರ ವಿಚಾರಣೆ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್ ನಿಂದ ವಿಮೆ ನಿಯಂತ್ರಕ ಸಂಸ್ಥೆ IRDAI ಗೆ ಈ …

Read More »

Bengaluru City ‘ನಿಮಗೆ ಕೃಜ್ಞರಾಗಿರಬೇಕು’ – ಕೆ.ಎಲ್ ರಾಹುಲ್‍ಗೆ ಹುಟ್ಟುಹಬ್ಬದ ಶುಭಕೋರಿದ ಅಥಿಯಾ ಶೆಟ್ಟಿ

ಬೆಂಗಳೂರು: ಭಾರತದ ಕ್ರಿಕೆಟ್ ಆಟಗಾರ, ಕನ್ನಡಿಗ ಕೆ.ಎಲ್ ರಾಹುಲ್ ಅವರಿಗೆ ಅವರ ಸ್ನೇಹಿತೆ ಸಿನಿಮಾ ನಟಿ ಅಥಿಯಾ ಶೆಟ್ಟಿ, ನಿಮಗೆ ಕೃತಜ್ಞರಾಗಿರಬೇಕು ಎಂದು ಬರೆದುಕೊಂಡು ಫೋಟೋ ಒಂದನ್ನು ಪೋಸ್ಟ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಕೋರಿದ್ದಾರೆ. ಕೆ.ಎಲ್ ರಾಹುಲ್ ಇಂದು 29ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಅಥಿಯಾ ಶೆಟ್ಟಿ, ರಾಹುಲ್ ಜೊತೆಗಿರುವ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಖ್ಯಾತ ಬಹುಭಾಷಾ ನಟ ಸುನೀಲ್ ಶೆಟ್ಟಿಯ ಮಗಳಾಗಿರುವ ಆಥಿಯಾ ಮತ್ತು ರಾಹುಲ್ …

Read More »

ರೇಣುಕಾಚಾರ್ಯ ಸಿಎಂ ಜೊತೆ ಸಂಪರ್ಕ, ಶಾಸಕ ರೇಣುಕಾಚಾರ್ಯಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಹೊನ್ನಾಳಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ರೇಣುಕಾಚಾರ್ಯ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದು, ನನಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಐಸೋಲೇಶನ್‍ಗೆ ಒಳಗಾಗಿದ್ದೇನೆ. ಇತ್ತೀಚೆಗೆ ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ರೇಣುಕಾಚಾರ್ಯ ಸಿಎಂ ಜೊತೆ ಸಂಪರ್ಕದಲ್ಲಿದ್ದರು. ಎರಡು ದಿನಗಳ ಹಿಂದೆ ಕೋವಿಡ್ …

Read More »

ಬೆಂಗಳೂರಿಗೆ ಪ್ರತ್ಯೇಕ ಟಫ್ ರೂಲ್ಸ್ – ಪ್ಲಾನ್ ಏನು? ರಿಲೀಫ್ ಪ್ಲಾನ್ ಏನು?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣ ತಪ್ಪಿರುವುದು ಗೊತ್ತಿದ್ದರೂ ಕೂಡ ಚುನಾವಣೆ ನೆಪದಲ್ಲಿ ಇಷ್ಟು ದಿನ ನಾನಾ ನೆಪ ಹೇಳ್ತಾ, ನಾಮ್ ಕಾ ವಾಸ್ತೆಗೆ ಎಂಬಂತೆ ಕೆಲವೊಂದಿಷ್ಟು ನಿಯಮಗಳನ್ನು ಪ್ರಕಟಿಸಿದ್ದ ಸರ್ಕಾರ ಈಗ ಇದಕ್ಕೆ ತಕ್ಕ ಬೆಲೆ ತೆರುತ್ತಿರುವಂತಿದೆ. ದಿನೇ ದಿನೇ ಕೊರೊನಾ ಸಾವು ನೋವುಗಳು ಹೆಚ್ಚುತ್ತಿವೆ. ಅದ್ರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಪರಿಸ್ಥಿತಿ ಘನಘೋರವಾಗಿದೆ. ಹೀಗಾಗಿ ರಾಜ್ಯಸರ್ಕಾರ ನಿದ್ದೆಯಿಂದ ಎಚ್ಚೆತ್ತಂತೆ ತರಾತುರಿಯಲ್ಲಿ ಸಭೆ ಮೇಲೆ ಸಭೆ ಮಾಡುತ್ತಿದೆ. ಬೆಂಗಳೂರಿಗೆ ಅನ್ವಯ ಆಗುವಂತೆ …

Read More »

24ಕ್ಕೂ ಹೆಚ್ಚು IAS ಅಧಿಕಾರಿಗಳಿಗೆ ಕೊರೊನಾ ಸೋಂಕು; ಆಡಳಿತದ ಮೇಲೆ ಎಫೆಕ್ಟ್

ನವದೆಹಲಿ: ಕೊರೊನಾ ವೈರಸ್​ ದೇಶದ ಸಿವಿಲ್ ಸರ್ವೀಸ್ ಅಧಿಕಾರಿಗಳ ಮೇಲೆ ಸವಾರಿ ಮಾಡ್ತಿದೆ. ಆತಂಕಕಾರಿ ವಿಚಾರ ಏನಂದ್ರೆ ಕೇಂದ್ರ ಆರೋಗ್ಯ ಸಚಿವಾಲಯ ಸೇರಿದಂತೆ ವಿವಿಧ ಸಚಿವಾಲಯಗಳ ಪ್ರಮುಖ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 2 ಡಜನ್​​ಗೂ ಹೆಚ್ಚು ಅಧಿಕಾರಿಗಳಿಗೆ ಕೊರೊನಾ ಸೋಂಕು ತಗುಲಿದೆ ಅಂತಾ ವರದಿಯಾಗಿದೆ. ಇದರಿಂದಾಗಿ ಕೊರೊನಾ ವಿರುದ್ಧದ ಹೋರಾಟಕ್ಕೆ ಹಾಗೂ ಸುಭದ್ರ ಆಡಳಿತಕ್ಕೆ ದೊಡ್ಡ ಮಟ್ಟದಲ್ಲಿಯೇ ಹೊಡೆತ ಬೀಳುತ್ತಿದೆ. ಕಳೆದ 15 ದಿನಗಳಲ್ಲಿ ಕೇಂದ್ರ ಸರ್ಕಾರದ ಪ್ರಮುಖ ಅಧಿಕಾರಿ …

Read More »

ಅಬ್ಬರಿಸಿದ ಮ್ಯಾಕ್ಸ್‌ವೆಲ್‌, ಎಬಿಡಿ : ಕೋಲ್ಕತ್ತಾಗೆ 205 ರನ್ ಗಳ ಗುರಿ ನೀಡಿದ ರಾಯಲ್ ಚಾಲೆಂಜರ್ಸ್

ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ 2021 ಟೂರ್ನಿಯ 10ನೇ ಪಂದ್ಯವು ಇಂದು ಚೆನ್ನೈನ ಎಮ್.ಎ. ಚಿದಂಬರಂ ಮೈದಾನದಲ್ಲಿ ನಡೆಯುತ್ತಿದೆ. ಎರಡು ಪಂದ್ಯಗಳನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್, ಕೋಲ್ಕತ್ತಾ ವಿರುದ್ಧ ಸೆಣೆಸಾಡುತ್ತಿದೆ. ಹತ್ತು ರನ್‌ ಗಳಿಸಸೋ ಮೊದಲೇ 2 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆರ್‌ಸಿಬಿ ತಂಡಕ್ಕೆ ಗ್ಲೆನ್‌ ಮ್ಯಾಕ್ಸ್‌ವೆಲ್‌ ಆಸರೆಯಾಗಿ ನಿಂತು 49 ಎಸೆತಗಳಲ್ಲಿ 9 ಫೋರ್‌ ಮತ್ತು 3 ಸಿಕ್ಸರ್‌ …

Read More »