ಮೈಸೂರು: ಸಿದ್ದರಾಮಯ್ಯ ಅವರ ಸುತ್ತಲೂ ಇರುವವರು ಭಯೊತ್ಪಾದಕರು ಆದರೂ ಅವರಿಗೆ ಕಾಣುತ್ತಿಲ್ಲ. ಹಾಗಾಗಿ ಅವರಿಗೆ ದೃಷ್ಟಿ ದೋಷವಿರಬಹುದು ಅದನ್ನು ಸರಿಪಡಿಸಿಕೊಳ್ಳಬೇಕೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರ್ಎಸ್ಎಸ್ ನೂರಾರು ವಿದ್ಯಾಸಂಸ್ಥೆಗಳನ್ನು ಕಟ್ಟಿದೆ, ಶುಲ್ಕವಿಲ್ಲದೇ ಕೆಲವು ಕಡೆ ಶಿಕ್ಷಣವನ್ನೂ ನೀಡುತ್ತಿದೆ. ಇವೆಲ್ಲಾ ಅವರಿಗೆ ಕಾಣುವುದಿಲ್ಲ. ನಿಮ್ಮದೇ ಶಾಸಕರ ಮನೆಗೆ ಬೆಂಕಿ ಬಿತ್ತು, ಅವರಿಗೆ ನಿಮ್ಮ ಬೆಂಬಲಿಗರೇ ಜಾಮೀನು ಕೊಡಿಸಿದ್ದಾರೆ. ಹೀಗಾದರೂ ಕಾಣುತ್ತಿಲ್ಲವೆಂದರೆ ನಿಮಗೆ …
Read More »ಸುಪ್ರೀಂ ಆದೇಶ ಪಾಲಿಸದಿದ್ರೆ ಗುಂಡು ಹಾರಿಸ್ತೀವಿ.:ಮುತಾಲಿಕ್ ಕಿಡಿ
ಹುಬ್ಬಳ್ಳಿ: ಲೌಡ್ಸ್ಪೀಕರ್ ಅಳವಡಿಕೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ಪಾಲಿಸದವರ ಮೇಲೆ ಗುಂಡು ಹಾರಿಸುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುತಾಲಿಕ್, ಒಂದು ವರ್ಷದಿಂದ ಲೌಡ್ಸ್ಪೀಕರ್ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇಲ್ಲಿಯವರೆಗೆ ಸುಪ್ರೀಂಕೋರ್ಟ್ ಆದೇಶ ಪಾಲನೆಯಾಗಿಲ್ಲ. ಹಿಂದುಗಳ ಬೆಂಬಲದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವೂ ನ್ಯಾಯಾಲಯದ ಆದೇಶಕ್ಕೆ ಕಿಮ್ಮತ್ತು ನೀಡಿಲ್ಲ. ಜೂ. 8ರಂದು ಬಿಜೆಪಿಯ ಶಾಸಕರು, ಮಂತ್ರಿಗಳ …
Read More »ನಾನು ಏನು ಹೇಳುತ್ತೇನೋ ಅದನ್ನು ಮಾತ್ರ ಮಾಡುತ್ತೇನೆ. ಶುರುವಾಯ್ತು ಉಪ್ಪಿ ‘UI’
ಬೆಂಗಳೂರು: ‘ಉಪ್ಪಿ 2’ ಬಿಡುಗಡೆಯಾಗಿ ಸುಮಾರು ಏಳು ವರ್ಷಗಳ ನಂತರ ಉಪೇಂದ್ರ ಕೊನೆಗೂ ನಿರ್ದೇಶನಕ್ಕಿಳಿದಿದ್ದಾರೆ. ಅವರ ಹೊಸ ಚಿತ್ರ ‘ಯು/ಐ’ ಶುಕ್ರವಾರ ಅಧಿಕೃತವಾಗಿ ಪ್ರಾರಂಭವಾಗಿದೆ. ಲಹರಿ ಸಂಸ್ಥೆ ಮತ್ತು ಕೆ.ಪಿ. ಶ್ರೀಕಾಂತ್ ಜಂಟಿಯಾಗಿ ನಿಮಿರ್ಸುತ್ತಿರುವ ಈ ಚಿತ್ರದ ಮುಹೂರ್ತ ಬಂಡೆ ಮಾಂಕಾಳಮ್ಮ ದೇವಸ್ಥಾನದಲ್ಲಿ ನಡೆದಿದೆ. ಈ ಮುಹೂರ್ತಕ್ಕೆ ಸುದೀಪ್ ಮುಖ್ಯ ಅತಿಥಿಯಾಗಿ ಬಂದು ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರು. ಶಿವರಾಜಕುಮಾರ್, ಧನಂಜಯ್, ವಸಿಷ್ಠ ಸಿಂಹ ಮುಂತಾದವರು ಹಾಜರಿದ್ದು, ಚಿತ್ರತಂಡಕ್ಕೆ ಶುಭ …
Read More »ಬದಲಾಗಲಿದೆಯೇ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ?: ಸಚಿವರ ಪ್ರತಿಕ್ರಿಯೆ ಇಲ್ಲಿದೆ..
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹೆಸರು ಬದಲಿಸುವ ವಿಷಯಕ್ಕೆ ಸಂಬಂಧಿಸಿದಂತೆ ಈ ಭಾಗದ ಅಭಿಪ್ರಾಯಕ್ಕೆ ಅನುಗುಣವಾಗಿಯೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಅಭಿಪ್ರಾಯಕ್ಕೆ ವಿರೋಧವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹೇಳಿದರು. ಜಿಲ್ಲೆಗೊಂದು ನೂತನ ವಿಶ್ವ ವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಆರು ವಿವಿ ಸ್ಥಾಪಿಸಲಾಗಿದೆ. ಇನ್ನೊಂದು ವಿವಿ ಸ್ಥಾಪಿಸಬೇಕೆಂಬ ಚರ್ಚೆಯೂ ಇದೆ. ಶಿಕ್ಷಣದಲ್ಲಿ ಗುಣಮಟ್ಟ ಇರಬೇಕು. ಆ ನಿಟ್ಟಿನಲ್ಲಿ …
Read More »ಬೈಕ್ಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿತು ಸರ್ಕಾರಿ ಬಸ್!
ಹಾವೇರಿ: ವೇಗವಾಗಿ ಚಲಿಸುತ್ತಿದ್ದ ಸರ್ಕಾರಿ ಬಸ್ ಬೈಕ್ಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕದ ಹಳ್ಳದಲ್ಲೇ ಉರುಳಿಬಿದ್ದಿರುವ ಘಟನೆ ನಡೆದಿದೆ. ಜಿಲ್ಲೆಯ ಶಿಗ್ಗಾವಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕಂದಕಕ್ಕೆ ಬಸ್ ಉರುಳಿದ್ದು, ಸದ್ಯ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾವೇರಿ ಬಸ್ ಡಿಪೋಗೆ ಸೇರಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಉರುಳಿಬಿದ್ದಿದೆ. ಘಟನೆಗೆ ಚಾಲಕನ ಅಜಾಗರೂಕತೆ ಹಾಗೂ ವೇಗದ ಚಾಲನೆಯೇ ಕಾರಣ ಎಂದು ಹೇಳಲಾಗಿದೆ. ಬಸ್ನಲ್ಲಿದ್ದ ನಾಲ್ಕು ಪ್ರಯಾಣಿಕರು ಗಾಯಗೊಂಡಿದ್ದು, …
Read More »ಬೆಳಗಾವಿ: ನಗರದಲ್ಲಿ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಕುಡುಕನಿಗೆ ಸಾರ್ವಜನಿಕರಿಂದ ಬಿತ್ತು ಗೂಸಾ..
ಬೆಳಗಾವಿ: ನಗರದಲ್ಲಿ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಕುಡುಕನನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ಕ್ಲಬ್ ರಸ್ತೆಯ ನೀರಾವರಿ ಇಲಾಖೆಯ ಕಚೇರಿ ಎದುರು ಶುಕ್ರವಾರ ನಡೆದಿದೆ. ಹಿರಿಯ ಅಧಿಕಾರಿಗಳು ಮಾತ್ರವಲ್ಲದೆ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಸಾಮಾನ್ಯ ಜನರು ಸಂಚರಿಸುತ್ತಾರೆ. ಇಂಥ ಸ್ಥಳದಲ್ಲಿ ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಕುಡುಕನಿಗೆ ಸಾರ್ವಜನಿಕರು ಥಳಿಸಿದ್ದಾರೆ. ವಾಹನ ದಟ್ಟನೆ ಕಂಡ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಪಟ್ಟರೂ ಕುಡಿದ ಮತ್ತಿನಲ್ಲಿದ್ದ ಕುಡುಕ …
Read More »ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ!; ಮೂವರ ಬಂಧನ, ಇನ್ನೊಬ್ಬ ಪರಾರಿ..
ಗದಗ: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆಯೇ ಕಿಡಿಗೇಡಿಗಳು ಹಲ್ಲೆ ನಡೆಸಿದ ಪ್ರಕರಣವೊಂದು ವರದಿಯಾಗಿದೆ. ಗದಗ ಜಿಲ್ಲೆಯಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ನಾಲ್ವರು ಬೈಕ್ ಸವಾರರು ಈ ದುಷ್ಕೃತ್ಯ ನಡೆಸಿದ್ದಾರೆ. ಗದಗದ ಬೆಟಗೇರಿ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಅಶೋಕ್ ದಾನಿ ಹಲ್ಲೆಗೊಳಗಾದವರು. ಗದಗ-ಬಾದಾಮಿ ರಸ್ತೆಯ ಜನನಿಬಿಡ ಪ್ರದೇಶದಲ್ಲಿ ಅಡ್ಡಾದಿಡ್ಡಿಯಾಗಿ ಬೈಕ್ ಓಡಿಸಿದ್ದಕ್ಕೆ ತಡೆದು ಬುದ್ಧಿವಾದ ಹೇಳಿದ್ದಕ್ಕೆ ಅವರು ಪೊಲೀಸ್ ಸಿಬ್ಬಂದಿ ಮೇಲೆಯೇ ಕೈ ಮಾಡಿದ್ದಾರೆ. ಈ ಕುರಿತು ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಮೂವರು …
Read More »ಜಿಲ್ಲಾ ಎಸ್ಪಿಗಳಿಗೆ ಟಾಸ್ಕ್ ನೀಡಿದ ಅಲೋಕ್ ಕುಮಾರ್:
ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡಲು, ಕೋಮು ಸಂಘರ್ಷ ಹಾಗೂ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣ ತಗ್ಗಿಸುವ ದೃಷ್ಟಿಯಿಂದ ಜಿಲ್ಲಾ ಎಸ್ಪಿಗಳಿಗೆ ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೊಸ ಟಾಸ್ಕ್ ನೀಡಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುವ ಅಪರಾಧ ಪ್ರಕರಣಗಳ ಬಗ್ಗೆ ಆಯಾ ಎಸ್ಪಿ ಮಾಹಿತಿ ತಿಳಿದುಕೊಂಡಿರಬೇಕು. ಗಂಭೀರ ಅಪರಾಧ ಕೃತ್ಯಗಳು ನಡೆದಾಗ ಕಡ್ಡಾಯವಾಗಿ ಸ್ಥಳಕ್ಕೆ ಹೋಗಬೇಕು. ಅಹಿತಕರ ಘಟನೆ ನಡೆದಾಗ ಸ್ಥಳಕ್ಕೆ ಮಾರ್ಕ್ ಮಾಡಿಸಿ ತ್ವರಿತಗತಿಯಲ್ಲಿ ಪ್ರಕರಣ ಬೇಧಿಸಬೇಕು ಎಂದು …
Read More »ರಾತ್ರಿ ಸರಣಿ ಕಳ್ಳತನ ಮಾಡುವಾಗ ಗ್ರಾಮಸ್ಥರ ಕೈಯಲ್ಲಿ ಸಿಕ್ಕಿಬಿದ್ದ ಕಳ್ಳ ಖದೀಮರು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ರಾತ್ರಿ ಸರಣಿ ಕಳ್ಳತನ ಮಾಡುವಾಗ ಗ್ರಾಮಸ್ಥರ ಕೈಯಲ್ಲಿ ಸಿಕ್ಕಿಬಿದ್ದ ಕಳ್ಳ ಖದೀಮರು. ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನೆನ್ನೆ ರಾತ್ರಿ ಒಂದು ಮಹಿಳೆಯ ಸಮೇತ ನಾಲ್ಕು ಜನರು ಮಹಾರಾಷ್ಟ್ರ ಮೂಲದ ನೀಲಿ ಕಲರ ಇಂಡಿಕಾ ವಾಹನದ ಸಂಖ್ಯೆ MH 06 AF 4072 ಸಂಖ್ಯೆಯ ವಾಹನದಲ್ಲಿ ಬಂದು ಬಂಬಲವಾಡ ಗ್ರಾಮದಲ್ಲಿ ಕಳ್ಳತನ ನಡೆಸಿದ್ದರು. ಬಂಬಲವಾಡ ಗ್ರಾಮದ ಹನುಮಾನ ಮಂದಿರ ಸೇರಿದಂತೆ ರಾಜು …
Read More »ನಾವು ಅಧಿಕಾರಕ್ಕೆ ಬರದೇ ಹೋದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ತೀನಿ: ಸಿಎಂ ಇಬ್ರಾಹಿಂ
ಬೆಂಗಳೂರು: ನಮ್ಮ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತೆ. ನಾವು ಅಧಿಕಾರಕ್ಕೆ ಬರದೇ ಹೋದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ತೀನಿ. ಕಾಂಗ್ರೆಸ್‍ನವರು ಈ ಚಾಲೆಂಜ್ ತಗೋತಾರಾ ಎಂದು ಸಿಎಂ ಇಬ್ರಾಹಿಂ ಪ್ರಶ್ನಿಸುತ್ತಾ ಸವಾಲೆಸೆದಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಪರಿಷತ್ ನಲ್ಲಿ ಹೆಚ್ಚು ಸ್ಥಾನ ಇದ್ದರೂ ಮುಸ್ಲಿಮರಿಗೆ ಯಾಕೆ ವಿಪಕ್ಷ ಸ್ಥಾನ ಕೊಟ್ಟಿಲ್ಲ. ಎರಡನೇ ಅಭ್ಯರ್ಥಿ ಯಾಕೆ ಕಾಂಗ್ರೆಸ್ ಹಾಕಿದ್ದಾರೆ ಅಂತ ಬಂದು ಪ್ರಮಾಣ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲೆಸೆದರು. …
Read More »
Laxmi News 24×7