Breaking News
Home / ರಾಜ್ಯ (page 1781)

ರಾಜ್ಯ

ಕೋವಿಡ್ ಹೆಚ್ಚಳ ಹಿನ್ನೆಲೆ : ಸರ್ವಪಕ್ಷ ಸಭೆ ಕರೆದ ಸಿಎಂ ಯಡಿಯೂರಪ್ಪ

ಬೀದರ್ : ದಿನೇ ದಿನೇ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಸರ್ವ ಪಕ್ಷ ಸಭೆ ಕರೆದಿದ್ದಾರೆ. ಏಪ್ರಿಲ್ 18, 19ರಂದು ಎಲ್ಲಾ ಪಕ್ಷದ ಹಿರಿಯರ ಜೊತೆ ಕೋವಿಡ್ ನಿಯಂತ್ರಣದ ಬಗ್ಗೆ ಚರ್ಚೆ ನಡೆಸುವುದಾಗಿ ಸೋಮವಾರ ಸಿಎಂ ಯಡಿಯೂರಪ್ಪ ತಿಳಿಸಿದ್ರು. ಬಸವ ಕಲ್ಯಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ಸರ್ವ ಪಕ್ಷಗಳ ಹಿರಿಯರ ಜೊತೆ ಸಭೆ ನಡೆಸುವುದಾಗಿ ಸಿಎಂ ತಿಳಿಸಿದ್ದಾರೆ. ಸಭೆಯಲ್ಲಿ ಕಠಿಣ …

Read More »

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿ ಪಟವಾಗುತ್ತೆ : ಯಡಿಯೂರಪ್ಪ

ಬಸವಕಲ್ಯಾಣ : ಬಸವಕಲ್ಯಾಣದಲ್ಲೇ ಐತಿಹಾಸಿಕ ಅನುಭವ ಮಂಟಪ ನಿರ್ಮಾಣ ಕಾರ್ಯ ಆರಂಭಗೊಳಲ್ಲಿದೆ. ಮಾಜಿ ಸಚಿವ ಬಸವರಾಜ ಸೆಡಂ ಅವರಿಗೆ ಅನುಭವ ಮಂಟಪ ನಿರ್ಮಾಣದ ಜವಾಬ್ದಾರಿ ನೀಡಲಾಗಿದೆ ಎಂದು ಸೋಮವಾರ ಬಸವಕಲ್ಯಾಣದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇದೇ 17 ರಂದು ನಡೆಯಲಿರುವ ಉಪಚುನಾಣೆಯ ಪ್ರಚಾರಕ್ಕೆ ತೆರಳಿರುವ ಯಡಿಯೂರಪ್ಪ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡರು. ಕಾಂಗ್ರೆಸ್ ಮೂರು ಕ್ಷೇತ್ರದಲ್ಲಿಯೂ ಗೆಲವು ಸಾಧಿಸುತ್ತದೆ ಎಂಬ ಮಲ್ಲಿಕಾರ್ಜುನ ಖರ್ಗೆ ಮಾತಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಮಲ್ಲಿಕಾರ್ಜುನ ಖರ್ಗೆ …

Read More »

ಬೀದಿಗಿಳಿದ ಸಾರಿಗೆ ಕುಟುಂಬಸ್ಥರು ಬೆಳಗಾವಿಯಲ್ಲಿ ಪ್ರತಿಭಟನೆ

6ನೇ ವೇತನ ಆಯೋಗ ಜಾರಿ ಮಾಡುವಂತೆ ಸಾರಿಗೆ ನೌಕರರು ಪ್ರತಿಭಟನೆ ಮಾಡುತ್ತಿದ್ದಾರೆ.ಸಾರಿಗೆ ನೌಕರರ ಬೇಡಿಕೆಗೆ ಸ್ಪಂದಿಸದ ಸರ್ಕಾರದ ನಡೆಗೆ ನೌಕರರ ಕುಟುಂಬಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮಕ್ಕಳು, ಮಹಿಳೆಯರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ. ಮಕ್ಕಳು ಕೈಯಲ್ಲಿ ತಟ್ಟೆ ಹಿಡಿದು ಬಾರಿಸುತ್ತಾ ವಿನೂನತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಆರನೇ ವೇತನ ಅಸಯೋಗ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಮೂಲಕ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಿದ್ದಾರೆ‌. ಸಾರಿಗೆ ನೌಕರರು …

Read More »

ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಲು ಸರಕಾರಕ್ಕೆ ಯುಗಾದಿ ಗಡುವು: ಕೋಡಿಹಳ್ಳಿ

ಬೆಂಗಳೂರು: ಮುಷ್ಕರ ನಿರತ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಲು ಸರಕಾರಕ್ಕೆ ಯುಗಾದಿ ಹಬ್ಬದ ಗಡುವು ನೀಡಿರುವ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿ ಅರಿತು ಮುಷ್ಕರ ನಿರತರನ್ನು ಮಾತುಕತೆಗೆ ಕರೆದು ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ. ರವಿವಾರ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಮುಷ್ಕರ ನಿರತರೊಂದಿಗೆ ಮಾತನಾಡುವುದಿಲ್ಲ ಎಂದು ಪದೇಪದೆ ಹೇಳುತ್ತಿದೆ. ಈ …

Read More »

ಟ್ರ್ಯಾಕ್ಟರ್ ಕಂಪನಿಯ ಕಿರುಕುಳ : ದಯಾಮರಣ ಕೋರಿ ರೈತರಿಂದ ಅರ್ಜಿ

ವಿಜಯಪುರ : ಜಿಲ್ಲೆಯ ರೈತರೊಬ್ಬರು ಸೋಮವಾರ ಕುಟುಂಬ ಸಮೇತ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ದಯಾ ಮರಣಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ಜಿಲ್ಲಾಡಳಿತ ಸ್ವೀಕೃತಿ ನೀಡಿದೆ. ವಿಜಯಪುರ ತಾಲೂಕಿನ ಕತ್ನಳ್ಳಿ (ಕತಕನಹಳ್ಳಿ) ಗ್ರಾಮದ ಹಿರಗಪ್ಪ ಕೆ. ಅಲ್ಲಾಪುರ ಎಂಬ ರೈತರೇ ದಯಾ ಮರಣಕ್ಕೆ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದವರು. ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿಗಳಿಗೆ ತಾವು ಸಲ್ಲಿಸಿರುವ ದಯಾ ಮರಣ ಕೋರಿಕೆ ಅರ್ಜಿಯನ್ನು ರವಾನಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ …

Read More »

ಅಕ್ರಮವಾಗಿ ಆಧಾರ್ ಕಾರ್ಡ್ ತಯಾರಿಸಿದ್ದ ಮೂವರ ಬಂಧನ

ಡಿಸ್ಪೂರ್: ಅಕ್ರಮವಾಗಿ ಆಧಾರ್ ಕಾರ್ಡ್ ತಯಾರಿಸುತ್ತಿದ್ದ ಕೇಂದ್ರದ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಅಸ್ಸಾಂನ ದಿಬ್ರುಗಢದಲ್ಲಿ ನಡೆದಿದೆ. ಆರೋಪಿಗಳನ್ನು ಡಿಪೆನ್ ಡೋಲಿ(29), ಬಿಟುಪನ್ ಡಿಯೋರಿ(27) ಮತ್ತು ಐಬಿ ಡಿಯೋರಿ(30) ಎಂದು ಗುರುತಿಸಲಾಗಿದೆ. ಈ ಮೂವರು ದಿಬ್ರುಗಢದಿಂದ 120ಕಿ.ಮೀ ದೂರದಲ್ಲಿರುವ ಲಖಿಂಪುರದವರು. ಆರೋಪಿಗಳು ಒಂದು ಆಧಾರ್ ಕಾರ್ಡ್ ತಯಾರಿಸಲು ತಲಾ 300 ರೂ. ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಅವರ ಬಳಿ ಇದ್ದ …

Read More »

ಸಾರಿಗೆ ನೌಕರರ ಕುಟುಂಬಸ್ಥರು ತಟ್ಟೆ, ಲೋಟ ಬಡಿದು ಆಕ್ರೋಶ

ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೊಳಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಕಳೆದ ಆರು ದಿನಗಳಿಂದ ಸಾರಿಗೆ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಾರಿಗೆ ಸಿಬ್ಬಂದಿ ಕುಟುಂಬ ಸಮೇತರಾಗಿ ರಸ್ತೆಗಿಳಿದು ತಟ್ಟೆ ಹಾಗೂ ಲೋಟ ಬಡಿಯುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಚಿಕ್ಕಮಗಳೂರು: ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ಕುಟುಂಬ ಸಮೇತ ಬಂದು ರಸ್ತೆ ಮಧ್ಯೆ ತಟ್ಟೆ-ಲೋಟ ಬಡಿದು ಸರ್ಕಾರದ ವಿರುದ್ಧ …

Read More »

ಒಂದೇ ದಿನದಲ್ಲಿ 10,250 ಮಂದಿಗೆ ಸೋಂಕು..!

ಬೆಂಗಳೂರು: ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇಂದು ಬಂದ ನಂಬರ್ಸ್ ನಾಳೆಗೆ ಮತ್ತಷ್ಟು ಏರಿಕೆಯಾಗುತ್ತಿದೆ. ಸೋಂಕಿತರ ಸಂಖ್ಯೆ ನೋಡುತ್ತಿದ್ರೆ ತಲೆ ಗಿರ್ ಎನ್ನುತ್ತಿದೆ. ಇಂದು ಒಂದೇ ದಿನ 10,250 ಮಂದಿಗೆ ಸೋಂಕು ದೃಢಪಟ್ಟಿದೆ. 9,635 ರ್ಯಾಪಿಡ್ ಆಯಂಟಿಜೆನ್ ಹಾಗೂ 1,23,071 RTPCR ಟೆಸ್ಟ್ ಸೇರಿದಂಯೆ ಒಟ್ಟು 1,32,706 ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 10,250 ಮಂದಿಗೆ ಕೊರೊನಾ ದೃಢಪಟ್ಟಿದೆ. ಬೆಂಗಳೂರು ಒಂದರಲ್ಲೇ 7584 ಜನ ಸೋಂಕಿತರಿದ್ದಾರೆ. 27 …

Read More »

ಪಶ್ಚಿಮ ಬಂಗಾಳದ ಜನರು ಹೇಳಿದರೆ ರಾಜಿನಾಮೆ ನೀಡಲು ಸಿದ್ದ: ಅಮಿತ್ ಷಾ

ಕೊಲ್ಕತ್ತಾ:ಪಶ್ಚಿಮ ಬಂಗಾಳದ ಜನರು ಹಾಗೆ ಕೇಳಿದರೆ ಮಾತ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ. ಆದಾಗ್ಯೂ, ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸೋಲುವುದರಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇ 2 ರಂದು ತ್ಯಜಿಸಬೇಕಾಗುತ್ತದೆ ಎಂದು ಬಿಜೆಪಿಯ ಹಿರಿಯ ಮುಖಂಡ ಅಮಿತ್ ಷಾ ಪ್ರತಿಪಾದಿಸಿದರು. ಕೂಚ್ ಬೆಹಾರ್ ಜಿಲ್ಲೆಯ ಸಿಟಾಲ್ಕುಚಿಯಲ್ಲಿ ಶನಿವಾರ ನಡೆದ ನಾಲ್ಕನೇ ಹಂತದ ಮತದಾನದ …

Read More »

ಮೋದಿ ಗಡ್ಡಬಿಟ್ಟರೆ ಟ್ಯಾಗೋರ್ ಆಗೋದಿಲ್ಲ: ಖರ್ಗೆ

ಮಸ್ಕಿ (ರಾಯಚೂರು): ‘ಪ್ರಧಾನಿ ನರೇಂದ್ರ ಮೋದಿ ಗಡ್ಡಬಿಟ್ಟರೆ ರವೀಂದ್ರನಾಥ ಟ್ಯಾಗೋರ್ ಆಗೋದಿಲ್ಲ.‌ ಪಶ್ಚಿಮ ಬಂಗಾಳ ಚುನಾವಣೆ ಗಮನದಲ್ಲಿಟ್ಟುಕೊಂಡು ಮಾಡಿರುವ ನಕಲು ಇದಾಗಿದೆ’ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ‌ ಮಲ್ಲಿಕಾರ್ಜುನ ‌ಖರ್ಗೆ ಹೇಳಿದರು. ಮಸ್ಕಿಯಲ್ಲಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಪರ ಬಹಿರಂಗ ಸಭೆಯಲ್ಲಿ ಮಾತನಾಡಿದರು. ‘ಪಶ್ಚಿಮ ‌ಬಂಗಾಳಕ್ಕೆ ಹೋಗಿದ್ದ ಪ್ರಧಾನಿ ಪಕ್ಷದ ನೀತಿ‌ಗಳನ್ನು ಹೇಳುವ ಬದಲಾಗಿ, ಮಮತಾ‌ ಬ್ಯಾನರ್ಜಿ‌ ಅವರನ್ನು ವ್ಯಂಗ್ಯ ಮಾಡಿದ್ದಾರೆ. ಪ್ರಧಾನಿ ಜೋಕರ್ ರೀತಿ‌ ವರ್ತನೆ ತೋರಿಸಿದ್ದಾರೆ’ …

Read More »