Breaking News

ರಾಜ್ಯ

KGF2 ಸಿನಿಮಾ ವೀಕ್ಷಣೆ ವೇಳೆ ಶೂಟೌಟ್ ಮಾಡಿ ಪರಾರಿಯಾಗಿದ್ದವನನ್ನು ಹಾವೇರಿ ಜಿಲ್ಲಾ ಪೊಲೀಸರು ಹೆಡೆಮುರಿಕಟ್ಟಿದ್ದಾರೆ.

ಹಾವೇರಿ: ಕಳೆದ ಏಪ್ರಿಲ್ 19 ರಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿ ಯುವಕನೊಬ್ಬನ ಮೇಲೆ ಶೂಟೌಟ್ ಮಾಡಿ ಪರಾರಿಯಾಗಿದ್ದವನನ್ನು ಹಾವೇರಿ ಜಿಲ್ಲಾ ಪೊಲೀಸರು ಅಂತೂ ಹೆಡೆಮುರಿಕಟ್ಟಿದ್ದಾರೆ. ಬಂಧಿತನನ್ನು ಶಿಗ್ಗಾವಿ ಧಖನಿ ಓಣಿಯ ಮಂಜುನಾಥ್ ಶಾಂತಪ್ಪ ಪಾಟೀಲ ಎಂದು ಗುರುತಿಸಲಾಗಿದೆ. ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಎಸ್‌ಪಿ ಹನುಮಂತರಾಯ ಈ ಮಾಹಿತಿ ತಿಳಿಸಿದರು. ಶಿಗ್ಗಾವಿ ತಾಲೂಕಿನ ಮುಗಳಿ ಗ್ರಾಮದ ವಸಂತಕುಮಾರ ಶಿವಪುರ ಹಾಗೂ ಆತನ ನಾಲ್ವರು ಸ್ನೇಹಿತರು ಏ.19 ರಂದು …

Read More »

ರಾಘವೇಂದ್ರ ಚನ್ನಣ್ಣನವರ ವಿರುದ್ಧ ಎಫ್‌ಐಆರ್

ಬೆಂಗಳೂರು : ವರದಕ್ಷಿಣೆ ತರುವಂತೆ ಪೀಡಿಸಿ ಪತ್ನಿಗೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಆರೋಪದಡಿ ರಾಘವೇಂದ್ರ ಚನ್ನಣ್ಣನವರ ಹಾಗೂ ಇತರರ ವಿರುದ್ಧ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.   ‘ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ನಿವಾಸಿ ರೋಜಾ (26) ಇತ್ತೀಚೆಗೆ ದೂರು ನೀಡಿದ್ದಾರೆ. ಆರೋಪಿಗಳಾದ ರಾಘವೇಂದ್ರ ಚನ್ನಣ್ಣನವರ ಹಾಗೂ ಅವರ ಸಂಬಂಧಿ ಹನುಮಂತ ತಿಮ್ಮಾಪುರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು  ತಿಳಿಸಿದರು. ವರದಕ್ಷಿಣೆ ಕಿರುಕುಳ (ಐಪಿಸಿ …

Read More »

ಪಿಎಸ್‌ಐ ನೇಮಕಾತಿ ಅಕ್ರಮ ಸೂಪರಿಂಟೆಂಡೆಂಟ್‌ ಮಂಜುನಾಥ್ ರನ್ನ ಬಂಧಿಸಿದ C.I.D.

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಕಚೇರಿ ಸೂಪರಿಂಟೆಂಡೆಂಟ್‌ ಮಂಜುನಾಥ್ ಅವರನ್ನು ಸಿಐಡಿ ಪೊಲೀಸರು ಇತ್ತೀಚೆಗೆ ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಮೇ 23ರವರೆಗೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ.   ‘ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯ ವಿಭಾಗವೊಂದರಲ್ಲಿ ಮಂಜುನಾಥ್ ಕೆಲಸ ಮಾಡುತ್ತಿದ್ದ. ಪೊಲೀಸ್ ನೇಮಕಾತಿ ವಿಭಾಗದ ನೌಕರರ ಜೊತೆ ಒಡನಾವಿಟ್ಟುಕೊಂಡು ಅಕ್ರಮದಲ್ಲಿ ಭಾಗಿಯಾಗಿದ್ದ’ ಎಂದು ಸಿಐಡಿ ಮೂಲಗಳು ಹೇಳಿವೆ. ‘ಪಿಎಸ್‌ಐ ಹುದ್ದೆಗೆ ಅಕ್ರಮವಾಗಿ …

Read More »

ಸಹಾಯಕ ಪ್ರಾಧ್ಯಾಪಕರ ನೇಮಕ ‘ಒಎಂಆರ್’ ತಿದ್ದಿ ಅಕ್ರಮ ?

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲೂ ‘ಒಎಂಆರ್’ ತಿದ್ದಿ ಅಕ್ರಮ ಎಸಗಿರುವ ಸಂಶಯ ವ್ಯಕ್ತವಾಗಿದ್ದು, ಈ ಬಗ್ಗೆ ಕೆಲವು ಮಾಹಿತಿ ಕೋರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಸಿಸಿಬಿ ಪೊಲೀಸರು ಪತ್ರ ಬರೆದಿದ್ದಾರೆ. ಇಬ್ಬರ ಮೇಲೆ ಅನುಮಾನ: ‘ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಬರೆದಿದ್ದ ಇಬ್ಬರು ಅಭ್ಯರ್ಥಿಗಳ ಒಎಂಆರ್ ಪ್ರತಿಯಲ್ಲಿ ವ್ಯತ್ಯಾಸ ಇರುವ ಮಾಹಿತಿ ಇದೆ. ಆ ಅಭ್ಯರ್ಥಿಗಳ ಒಎಂಆರ್‌ ಪ್ರತಿಗಳನ್ನು ನೀಡುವಂತೆ …

Read More »

ಮಳೆ ಹಾನಿ ವೀಕ್ಷಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಬೆಳಗ್ಗೆ ಸಿಟಿ ರೌಂಡ್ಸ್​

ಬೆಂಗಳೂರು: ಮಂಗಳವಾರ ರಾತ್ರಿ ಸುರಿದ ಮಹಾಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ಅಕ್ಷರಶಃ ತತ್ತರಿಸಿದೆ. ಬುಧವಾರವೂ ಅಬ್ಬರಿಸಿದ ವರುಣ, ಇಂದು ಬೆಳ್ಳಂಬೆಳಗ್ಗೆಯೂ ಅಬ್ಬರಿಸುತ್ತಿದ್ದು, ಜನಜೀವನ ಮೂರಾಬಟ್ಟೆಯಾಗಿದೆ. ಸಾವಿರಾರು ಮನೆಗಳಿಗೆ ಮಳೆ ನೀರಿನ ಜತೆಗೆ ಕೊಳಚೆ ನೀರೂ ನುಗ್ಗಿದೆ, ತಗ್ಗುಪ್ರದೇಶದಲ್ಲಿ ರಸ್ತೆಗಳು ಜಲಾವೃತಗೊಂಡಿದೆ. ಮಳೆ ಹಾನಿ ವೀಕ್ಷಿಸಲು ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಇಂದು ಬೆಳಗ್ಗೆ ಸಿಟಿ ರೌಂಡ್ಸ್​ ಮಾಡುತ್ತಿದ್ದಾರೆ. ಸಿಎಂ ನಿವಾಸದಿಂದ ಅಧಿಕಾರಿಗಳ ಜತೆ ವೋಲ್ವೋ ಬಸ್​ ಹತ್ತಿದ ಬೊಮ್ಮಾಯಿ ಅವರು …

Read More »

ನವಜೋತ್​ ಸಿಂಗ್​ ಸಿಧುಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂಕೋರ್ಟ್​

ನವದೆಹಲಿ: ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್​​ ನಾಯಕ ನವಜೋತ್​ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಸುಪ್ರೀಕೋರ್ಟ್​ ಗುರುವಾರ ಆದೇಶಿಸಿದೆ.ಮೂರು ದಶಕಗಳ ಬಳಿಕ ಇದೀಗ ನ್ಯಾಯಾಲಯ ಪ್ರಕರಣದ ತೀರ್ಪನ್ನು ಪ್ರಕಟಿಸಿದೆ. 1988ರಲ್ಲಿ ನಡೆದ ರಸ್ತೆ ಗಲಾಟೆ ಪ್ರಕರಣದಲ್ಲಿ ನವಜೋತ್​ ಸಿಂಗ್​ ಸಿಧು ಅಪರಾಧಿ ಎಂದು ಪರಿಗಣಿಸಿ ಜೈಲು ಶಿಕ್ಷೆ ವಿಧಿಸಿದೆ. ಈ ಗಲಾಟೆಯಲ್ಲಿ ಓರ್ವ ಮೃತಪಟ್ಟಿದ್ದ.ಇನ್ನು ಒಂದು ವರ್ಷದ ಜೈಲು ಶಿಕ್ಷೆ ಜತೆಗೆ 1 ಸಾವಿರ ರೂ. ದಂಡ ವಿಧಿಸಿದೆ. …

Read More »

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ, ಮೇ 19: ಈಗಾಗಲೇ ಬೆಲೆ ಏರಿಕೆಯಿಂದ ಬಸವಳಿದಿರುವ ಗ್ರಾಹಕರಿಗೆ ಮತ್ತೆ ಸಿಲಿಂಡರ್‌ ಬೆಲೆ ಏರಿಕೆಯ ಶಾಕ್‌ ನೀಡಲಾಗಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ರೂ. 3.50, ವಾಣಿಜ್ಯ ಸಿಲಿಂಡರ್‌ನ ಬೆಲೆಯನ್ನು 8 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ, ಹಲವಾರು ನಗರಗಳಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳ ದರವು 1000 ರೂಪಾಯಿ ಆಗಿದೆ. ಗುರುವಾರ, ಮೇ 19 ರಂದು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಈ ತಿಂಗಳು ಎರಡನೇ ಬಾರಿಗೆ ಹೆಚ್ಚಿಸಲಾಗಿದೆ. ಗೃಹಬಳಕೆಯ ಎಲ್ …

Read More »

‘ಮೈ ಬೆಳಗಾವಿ’ ಆಯಪ್‌ನಲ್ಲಿ ಹಲವು ಸೇವೆ

ಬೆಳಗಾವಿ: ‘ಮೈ ಬೆಳಗಾವಿ’ ಮೊಬೈಲ್‌ ಆಯಪ್ ಮೂಲಕ ಸಾರ್ವಜನಿಕರಿಗೆ ಹಲವು ಸೇವೆಗಳನ್ನು ಒದಗಿಸಲಾಗುತ್ತಿದೆ’ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ಬಾಗೇವಾಡಿ ತಿಳಿಸಿದರು. ಇಲ್ಲಿನ ವಿಶ್ವೇಶ್ವರಯ್ಯ ನಗರದ ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್‌ನಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.   ‘ಆಯಪ್ ಬಳಕೆ ಮೂಲಕ ಆಂಬುಲೆನ್ಸ್ ಸೇವೆ, ಪ್ರವಾಸಿ ತಾಣಗಳು ಮತ್ತು ಬಸ್ ಸಂಚಾರದ ಸಮಗ್ರ ಮಾಹಿತಿ ಪಡೆಯಬಹುದು. ನಗರ ಸಾರಿಗೆ ಬಸ್‌ಗಳ ಸ್ಥಳ ಪತ್ತೆ ಹಚ್ಚಬಹುದು. ಸರ್ಕಾರಿ ಜಿಲ್ಲಾ ಕಚೇರಿಗಳ …

Read More »

ಯರಗಟ್ಟಿ ತಾಲ್ಲೂಕಿನ ಸತ್ತಿಗೇರಿ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಸತ್ತಿಗೇರಿಯ ಸಹನಾ ಕನ್ನಡದಲ್ಲಿ ಟಾಪರ್

ಬೆಳಗಾವಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಪ್ರಕಟವಾಗಿದ್ದು, ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ಸತ್ತಿಗೇರಿ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಸಹನಾ ಮಹಾಂತೇಶ ರಾಯರ, ಕನ್ನಡ ವಿಭಾಗದಲ್ಲಿ ಪೂರ್ಣ ಅಂಕ ಗಳಿಸಿ ರಾಜ್ಯಕ್ಕೆ ಟಾಪರ್‌ ಆಗಿ ಹೊರಹೊಮ್ಮಿದ್ದಾರೆ.   ಸಂತಸ ಹಂಚಿಕೊಂಡ ಅವರು, ‘ಕೋವಿಡ್‌-19 ಸಂಕಷ್ಟದಿಂದ ತರಗತಿ ಸಮರ್ಪಕವಾಗಿ ನಡೆಯಲಿಲ್ಲ. ಆನ್‌ಲೈನ್‌ ತರಗತಿಗೆ ಹಾಜರಾಗಲು ನೆಟ್‌ವರ್ಕ್‌ ಸಮಸ್ಯೆಯೂ ಕಾಡುತ್ತಲಿತ್ತು. ಆದರೂ, ಸಮಸ್ಯೆಗೆ ಎದೆಗುಂದದೆ ಆತ್ಮವಿಶ್ವಾಸದಿಂದ ಓದು ಮುಂದುವರಿಸಿದೆ. ಶಿಕ್ಷಕರು ಮತ್ತು ಹೆತ್ತವರು ಪ್ರೋತ್ಸಾಹಿಸಿದರು. …

Read More »

ಬೆಳಗಾವಿ ಜಿಲ್ಲೆಯ 10 ಮಂದಿ ಟಾಪರ್ಸ್‌

ಬೆಳಗಾವಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಿದ 145 ವಿದ್ಯಾರ್ಥಿ, ವಿದ್ಯಾರ್ಥಿನಿಯರ ಪೈಕಿ ಜಿಲ್ಲೆಯ 10 ಮಂದಿ ಇದ್ದಾರೆ. ಈ ಪೈಕಿ 6 ವಿದ್ಯಾರ್ಥಿಗಳು ಬೆಳಗಾವಿ ಶೈಕ್ಷಣಿಕ ಜಿಲ್ಲೆಗೆ ಸೇರಿದವರಾಗಿದ್ದು, ನಾಲ್ವರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯವರಾಗಿದ್ದಾರೆ.   ಇವರಲ್ಲಿ ಕನ್ನಡ ಮಾಧ್ಯಮದವರು ಮೂವರು ಹಾಗೂ ಉಳಿದವರು ಇಂಗ್ಲಿಷ್ ಮಾಧ್ಯಮದಲ್ಲಿ ಕಲಿತವರಾಗಿದ್ದಾರೆ. ಎರಡೂ ಶೈಕ್ಷಣಿಕ ಜಿಲ್ಲೆಗಳು ‘ಎ’ ಗ್ರೇಡ್ ಪಡೆದಿವೆ. ಕನ್ನಡ ಮಾಧ್ಯಮದಲ್ಲಿ ಜಿಲ್ಲೆಯ ಯರಗಟ್ಟಿ ತಾಲ್ಲೂಕು ಸತ್ತಿಗೇರಿ …

Read More »