Breaking News

ರಾಜ್ಯ

ಬಿಬಿಎಂಪಿಯ ಡೆಡ್ಲಿ ಕಸದ ಲಾರಿಗಳಿಗೆ ಶೀಘ್ರವೇ ಸ್ಪೀಡ್ ಗವರ್ನರ್ ಅಳವಡಿಕೆ

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗಳಿಂದ ಅಪಘಾತ ಹಿನ್ನಲೆ ಸ್ಪೀಡ್ ಗವರ್ನರ್ ಅಳವಡಿಕೆಗೆ ಸೂಚನೆ ನೀಡಲಾಗಿದೆ ಎಂದು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೆಗೌಡ ಹೇಳಿದ್ದಾರೆ. ಲಾರಿಗಳು 40 ಕಿಮೀ.ಗಿಂತ ವೇಗವಾಗಿ ಚಲಿಸದಂತೆ ವ್ಯವಸ್ಥೆಗೊಳಿಸಬೇಕು. ಸ್ಪೀಡ್ ಗವರ್ನರ್ ಅಳವಡಿಕೆಗೆ ಸೂಚನೆ ನೀಡಲಾಗಿದೆ. ಆಲ್ಕೋ ಮೀಟರ್ ಮೂಲಕ ಚಾಲಕರ ತಪಾಸಣೆಗೆ ಸೂಚಿಸಲಾಗಿದೆ. ಈಗಾಗಲೇ ಬಿಬಿಎಂಪಿ ಕೆಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ ಎಂದಿದ್ದಾರೆ.  ಈಗಾಗಲೇ ಸುಮಾರು ಚಾಲಕರಿಗೆ ಟ್ರಾಫಿಕ್ ಪೊಲೀಸರು ಹಂತ ಹಂತವಾಗಿ ತರಬೇತಿ ನೀಡುತ್ತಿದ್ದಾರೆ. …

Read More »

ಬಸವರಾಜ ಬೊಮ್ಮಾಯಿ ಎದುರಾಳಿ ಯಾರು?

ಹಾವೇರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಜಿಲ್ಲೆಯಲ್ಲಿ ಚುನಾವಣೆ ಕಾವು ನಿಧಾನವಾಗಿ ಏರುತ್ತಿದ್ದು, ರಾಜಕೀಯ ವಲಯದಲ್ಲಿ ಚುನಾವಣೆ ಪೂರ್ವ ಚಟುವಟಿಕೆಗಳು ಗರಿಗೆದರಿವೆ. ಮುಖ್ಯವಾಗಿ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ತಾವು ಸ್ಪರ್ಧಾಕಾಂಕ್ಷಿ ಎಂಬುದನ್ನು ಬಿಂಬಿಸಲು ನಾನಾ ಕಸರತ್ತು ನಡೆಸುತ್ತಿದ್ದು, ಕುತೂಹಲ ಮೂಡಿಸಿದೆ.   ಜಿಲ್ಲೆಯ 6 ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಬಿಜೆಪಿ (ಬ್ಯಾಡಗಿ, ಶಿಗ್ಗಾವಿ-ಸವಣೂರು, ರಾಣಿಬೆನ್ನೂರು, ಹಿರೇ ಕೆರೂರು, ಹಾವೇರಿ-ಮೀಸಲು) ಶಾಸಕರಿದ್ದಾರೆ. ಹಾನಗಲ್ಲ ಕ್ಷೇತ್ರ ಮಾತ್ರ ಕಾಂಗ್ರೆಸ್‌ ತೆಕ್ಕೆಯಲ್ಲಿದೆ. ಈ ಬಾರಿಯ ಚುನಾ ವಣೆಯಲ್ಲಿ ಯಾವುದೇ …

Read More »

ಜೈಲಿನಿಂದ ಹೊರ ಬರುತ್ತಲೇ ಅದ್ದೂರಿ ಸಮಾರಂಭ ಏರ್ಪಡಿಸಲು ಸೂಚಿಸಿದ್ದ ಪಿಎಸ್‌ಐ ನೇಮಕ ಪರೀಕ್ಷೆ ಅಕ್ರಮದ ಕಿಂಗ್ ಪಿನ್…!

ಪಿಎಸ್‌ಐ ನೇಮಕ ಪರೀಕ್ಷೆ ಅಕ್ರಮದ ಆರೋಪಿಗಳ ಪೈಕಿ ಈಗಾಗಲೇ ಬಹುತೇಕರು ಕಂಬಿ ಹಿಂದಿದ್ದಾರೆ. ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಪ್ರಕರಣದ ಪ್ರಮುಖ ಆರೋಪಿಗಳಾದ ದಿವ್ಯ ಹಾಗರಗಿ ಹಾಗೂ ಮಂಜುನಾಥ್ ತಮ್ಮ ಮೊಬೈಲ್ ಗಳನ್ನು ನಾಶಪಡಿಸಿದ್ದ ಸಂಗತಿ ಈ ಹಿಂದೆ ಬಯಲಾಗಿತ್ತು.   ಇದೀಗ ಈ ಪ್ರಕರಣದ ‘ಕಿಂಗ್ ಪಿನ್’ ಆರ್.ಡಿ. ಪಾಟೀಲ್ ಅಲಿಯಾಸ್ ರುದ್ರಗೌಡನ ಕುರಿತ ಸ್ವಾರಸ್ಯಕರ ಸಂಗತಿಯೊಂದು ಬಹಿರಂಗವಾಗಿದೆ. ರುದ್ರಗೌಡ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಇರಾದೆ …

Read More »

ಸಿದ್ದರಾಮಯ್ಯ ಟೀಂನ ವೈಸ್ ಕ್ಯಾಪ್ಟನ್ ಗೋರಿ ಪಾಳ್ಯದ ಬಸ್ಸು, ಜಮೀರಣ್ಣ: ಡಿಕೆ ಟೀಂನ ಉಪಾಧ್ಯಕ್ಷ ನಲಪಾಡ್, ಇಬ್ಬರಿಗೂ ಸಾಬ್ರೇ ಬೇಕು!

ಮಂಡ್ಯ: ಕಾಂಗ್ರೆಸ್‌ ಪಕ್ಷದಲ್ಲಿ ಎರಡು ಗುಂಪುಗಳಿವೆ. ಒಂದು ಗುಂಪು ಸಿದ್ದರಾಮಯ್ಯ ಪರ ಇದ್ದರೆ, ಮತ್ತೊಂದು ಗುಂಪು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪರ ಇದೆ ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಟೀಕಿಸಿದ್ದಾರೆ. ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೋರಿ ಪಾಳ್ಯದ ಬಸ್ಸು ಸಿದ್ದರಾಮಯ್ಯ ಟೀಂನ ವೈಸ್‌ ಕ್ಯಾಪ್ಟನ್‌ ಆಗಿ ಜಮೀರಣ್ಣ ಇದ್ದಾರೆ. ಡಿ.ಕೆ.ಶಿವಕುಮಾರ್‌ ಟೀಂನ ವೈಸ್‌ ಕ್ಯಾಪ್ಟನ್‌ ಆಗಿ ನಲಪಾಡ್‌ ಕೆಲಸ …

Read More »

ಗೋಕಾಕನಲ್ಲಿ ಸ್ವಂತ ತಮ್ಮನ ಹೆಣ ಉರುಳಿಸಿದ ಪಾಪಿ ಅಣ್ಣ

ಬೆಳಗಾವಿ: ಒಡ ಹುಟ್ಟಿದ ತಮ್ಮನ ಏಳಿಗೆಯನ್ನೇ ಸಹಿಸದ ಸಹೋದರನೊಬ್ಬ ತಮ್ಮನ ಎದೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಗೋಕಾಕ್​ ತಾಲೂಕಿನ ಶಿಂಗಳಾಪುರ ಗ್ರಾಮದಲ್ಲಿ ‌ನಡೆದಿದೆ. ಜಿಲ್ಲೆಯ ಗೋಕಾಕ್​ ತಾಲೂಕಿನ ಶಿಂಗಳಾಪುರ ಗ್ರಾಮದ ಮಾಳಪ್ಪ ಭೀಮಪ್ಪ ಚಳಾಯಿ (33)ಕೊಲೆಯಾದ ವ್ಯಕ್ತಿ. ಆತನ ಸಹೋದರನಾದ ವಾಶಪ್ಪ ಭೀಮಪ್ಪ ಚಳಾಯಿ ಕೊಲೆ ಮಾಡಿದ ಆರೋಪಿ.‌ ತಮ್ಮ ಜಮೀನಿನಲ್ಲಿ ದುಡಿದು ಶ್ರೀಮಂತನಾಗುತ್ತಿರುವುದನ್ನು ಕಂಡು ಹೊಟ್ಟೆ ಕಿಚ್ಚಿನಿಂದ ಅಣ್ಣನೇ ತಮ್ಮನ ಕೊಲೆ ಮಾಡಿದ್ದಾನೆ ಎಂದು …

Read More »

ಹಿಂದು ಯುವಕ-ಮುಸ್ಲಿಂ ಯುವತಿಯ ಲವ್ ಸ್ಟೋರಿ: ಮದುವೆಯಾದ ಬಳಿಕ ನಡೀತು ಭಾರೀ ಹೈಡ್ರಾಮಾ!

ಕೊಪ್ಪಳ: ಒಂದು ವರ್ಷದಿಂದ ಪ್ರೀತಿಸುತ್ತಿದ್ದ ಅಂತರ್ಧಮೀಯ ಜೋಡಿ, 5 ದಿನದ ಹಿಂದೆ ಮನೆ ಬಿಟ್ಟು ಹೋಗಿ ಮದುವೆ ಆಗಿದೆ. ಇದೀಗ ನವ ದಂಪತಿ ರಕ್ಷಣೆ ಕೋರಿ ಪೊಲೀಸ್ ಠಾಣೆಗೆ ಬಂದಿದ್ದು, ಎರಡೂ ಗುಂಪಿನ ಮುಖಂಡರು ಠಾಣೆಗೆ ದೌಡಾಯಿಸಿದ್ದಾರೆ. ನಿನ್ನೆ ಸಂಜೆಯಿಂದಲೂ ಹೈಡ್ರಾಮ ಶುರುವಾಗಿದ್ದು, ಮದುವೆ ಪ್ರಹಸನ ಇಂದು ಮುಂದುವರಿಯಿತು.   ಕನಕಗಿರಿ ಪಟ್ಟಣದ 21 ವರ್ಷದ ದಿಲ್ ಶಾದ್ ಬೆಗಂ‌ ಮತ್ತು 22 ವರ್ಷದ ಕನಕರೆಡ್ಡಿ ಪ್ರೇಮ ವಿವಾಹ ಪ್ರಕರಣ ನಿನ್ನೆಯಿಂದ …

Read More »

: ಮೈಸೂರಿನ ಮಾನಸಗಂಗೋತ್ರಿಯ ಮಹಿಳಾ ಹಾಸ್ಟೆಲ್ ನಲ್ಲಿ ಏನ್ರೀ ಇದು ಕಥೆ..!

ಮೈಸೂರು: ಮೈಸೂರಿನ ಮಾನಸಗಂಗೋತ್ರಿಯ ಮಹಿಳಾ ವಿದ್ಯಾರ್ಥಿನಿಲಯ ಸಮಸ್ಯೆಯ ಆಗರವಾಗಿದೆ. ಸದ್ಯ ಇಲ್ಲಿನ ವಿದ್ಯಾರ್ಥಿನಿಯರ ಗೋಳು ಹೇಳತೀರದಾಗಿದ್ದು,ಹಾಸ್ಟೆಲ್‌ ಮುಂದೆ ನಿಂತು ಮೈಸೂರು ವಿವಿ ಕುಲಪತಿಗೆ ಧಿಕ್ಕಾರ ಹಾಕಿದ್ದಾರೆ.   ಅಂದ ಹಾಗೇ ಮಾನಸಗಂಗೋತ್ರಿಯ ಆವರಣದಲ್ಲಿರುವ ಬ್ಲಾಕ್ 1 (ಕಟ್ಟಡ) ರಲ್ಲಿರುವ ಮಹಿಳಾ ವಿದ್ಯಾರ್ಥಿನಿಲಯದ ಹಲವು ಕೊಠಡಿಗಳು ಕಳೆದ ಕೆಲವು ದಿನಗಳಿಂದ ಅವ್ಯವಸ್ಥೆಯಿಂದ ಕೂಡಿವೆ. ಅದರಲ್ಲೂ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಿಲಯದ ಕೊಠಡಿಗಳಿಗೆ ನೀರು ನುಗ್ಗಿದೆ.ಅಲ್ಲದೆ, ಕೆಲ ಕೊಠಡಿಗಳ ಗೋಡೆಗಳು ಬಿರುಕು …

Read More »

35 ವಯೋಮಾನದವರಿಗೆ ಆದ್ಯತೆ.. 75 ದಾಟಿದವರಿಗೆ ಕೋಕ್ : ಇದು ಕಾಂಗ್ರೆಸ್ ನ ತೀರ್ಮಾನ

ಉದಯಪುರ: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು, ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ರಾಜಸ್ಥಾನದಲ್ಲಿ ಕಾಂಗ್ರೆಸ್ ಚಿಂತನಾ ಶಿಬಿರ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದಿಂದ ಸಿದ್ದರಾಮಯ್ಯ, ಡಿಕೆಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಇನ್ನು ಗುಲಾಬ್ ನಬಿ, ಹಿರಿಯ ನಾಯಕ ಪಿ ಚಿದಂಬರಂ, ಪ್ರಿಯಾಂಕ ಗಾಂಧಿ ವಾದ್ರಾ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ದೇಶದ ವಿವಿದೆಡೆಯ ನಾಯಕರು ಒಟ್ಟಿಗೆ ಸೇರಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಚಿಂಥನ ಮಂಥನ …

Read More »

ಸೋಮವಾರ ಶಾಲೆ ಆರಂಭ, ಸಿಹಿಯೊಂದಿಗೆ ಮಕ್ಕಳಿಗೆ ಸ್ವಾಗತ

ಬೆಂಗಳೂರು,ಮೇ 15: ಕೋವಿಡ್‌ನಿಂದಾಗಿ ಕಳೆದ ಎರಡೂವರೆ ವರ್ಷಗಳಲ್ಲಿ ಶಾಲೆಗಳಲ್ಲಿ ಸರಿಯಾಗಿ ಭೌತಿಕ ತರಗತಿಗಳು ನಡೆದಿಲ್ಲ. ವಿದ್ಯಾರ್ಥಿಗಳು ಸಹ ಶೈಕ್ಷಣಿಕವಾಗಿ ಬಹಳ ಹಿಂದೆ ಉಳಿದಿದ್ದಾರೆ. ಇದರಿಂದಾಗಿ 2022-23 ನೇ ಶೈಕ್ಷಣಿಕ ವರ್ಷವನ್ನು ಮೇ 16ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಅದರಂತೆ ಮೇ 16ರ ಸೋಮವಾರ ಕಲಿಕಾ ಚೇತರಿಕೆ ಕಾರ್ಯಕ್ರಮ ಆರಂಭವಾಗಲಿದ್ದು ಮಕ್ಕಳನ್ನು ಬಹಳ ಸಂತೋಷದಿಂದ ಬರಮಾಡಿಕೊಳ್ಳಲು ಸರ್ಕಾರಿ ಶಾಲೆಗಳಲ್ಲಿ ಸಿಹಿ ಖಾದ್ಯವನ್ನು ನೀಡಲು ಶಿಕ್ಷಣ ಇಲಾಖೆ ಸೂಚಿಸಿದೆ. ಮಕ್ಕಳು ಶಾಲೆಗೆ …

Read More »

ಪ್ರಜ್ವಲ್​ ಅವರಿಗೆ ಎಂದು ಎಷ್ಟು ಸರಿ ಕೂಗ್ತೀರಾ, ನನಗೂ ಒಂದು ಸರಿ ಜೈಕಾರ ಹಾಕಿದ್ರೆ ನಿಮ್ ಗಂಟಲು ಹೋಗ್ಬಿಡ್ತಿತ್ತಾ?: ಶಾಸಕ ಶಿವಲಿಂಗೇಗೌಡ

ಹಾಸನ: ಪ್ರಜ್ವಲ್ ಅವರಿಗೆ, ಪ್ರಜ್ವಲ್ ಅವರಿಗೆ ಎಂದು ಎಷ್ಟು ಸಲ ಕೂಗುತ್ತೀರಾ ನಾನು ಇಲ್ಲೇ ಇದ್ದೀನಿ ಒಬ್ಬನಾದ್ರೂ ಜೈ ಕಾರ ಹಾಕೋದು ಬೇಡ್ವಾ ಎಂದು ಶಾಸಕ ಶಿವಲಿಂಗೇಗೌಡ ಅಸಮಾಧಾನ ಹೊರಹಾಕಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂಜಾನಳ್ಳಿಯಿಂದ ಒಬ್ಬ ಹುಡುಗ ಬಂದಿದ್ದಾನೆ. ಶಿವಲಿಂಗೇಗೌಡನಿಗೆ ಜೈ ಅಂದ್ರೆ ನಿನ್ನ ಗಂಟು ಹೋಗ್ಬಿಡುತ್ತಾ, ನಿಮ್ಮ ಪಿಎ ಒಬ್ಬ ಇದ್ದಾನೆ ಬೇಜಾರು ಮಾಡ್ಕೋಬೇಡಿ. ಅವನು ಹತ್ತು ಹುಡುಗರು ಕಟ್ಟಿಕೊಂಡು ಎಲ್ಲಿ ಹೋದರೂ ಹೀಗೆ ಕೂಗಿಸುತ್ತಾನೆ ಯಾಕೆ ಎಂದು …

Read More »