ಕಲಬುರಗಿ: ಮಗ ಪಿಎಸ್‌ಐ ಆಗುತ್ತಾನೆಂದು ತಂದೆ ಮನೆ, ಸೈಟು ಮಾರಿ 50 ಲಕ್ಷ ರೂಪಾಯಿ ಲಂಚ ಕೊಟ್ಟು, ದುಡ್ಡೂ ಇಲ್ಲದೇ, ಕೆಲಸವೂ ಇಲ್ಲದೇ ಗೋಳಾಡುವ ಸ್ಥಿತಿ ಶರಣಪ್ಪ ಎನ್ನುವವರಿಗೆ ಬಂದಿದೆ. ಮಗ ಪ್ರಭು ಪಿಎಸ್‌ಐ ಆಗಲಿ ಎನ್ನುವ ಕಾರಣಕ್ಕೆ ಎಲ್ಲವನ್ನೂ ಮಾರಿ ಇದೀಗ ಬೀದಿಗೆ ಬಂದದ್ದೂ ಅಲ್ಲದೇ, ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ತಂದೆ-ಮಗನನ್ನು ವಶಕ್ಕೆ ಪಡೆಯಲಾಗಿದೆ. ಆಡಿಟರ್ ಚಂದ್ರಕಾಂತ್ ಕುಲಕರ್ಣಿ ಮುಖಾಂತರ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಿ ಆರ್.ಡಿ. ಪಾಟೀಲ್ ಅವರಿಗೆ …
Read More »ಮಠದಲ್ಲಿ ರಂಜಾನ್, ಬಸವ ಜಯಂತಿ ಆಚರಣೆ – ಬಸವಣ್ಣ, ಮಹಮ್ಮದ್ ಪೈಗಂಬರ್‌ಗೆ ಜಯಘೋಷ
ಗದಗ: ಜಿಲ್ಲೆಯ ಗಜೇಂದ್ರಗಡ ಪಟ್ಟಣ ಹಾಗೂ ಮುಂಡರಗಿ ಶ್ರೀ ಅನ್ನದಾನೀಶ್ವರ ಮಠದಲ್ಲಿ ವಿಭಿನ್ನವಾಗಿ ರಂಜಾನ್ ಹಾಗೂ 889ನೇ ಬಸವ ಜಯಂತಿ ಆಚರಿಸಲಾಯಿತು. ಗಜೇಂದ್ರಗಡ, ಸೂಡಿಯ ಮೈಸೂರು ಮಠದ ಶ್ರೀ ವಿಜಯ ಮಹಾಂತೇಶ್ವರ ಸ್ವಾಮೀಜಿ ಹಾಗೂ ಮೌಲ್ವಿ ನೇತೃತ್ವದಲ್ಲಿ ʻಭಾವೈಕ್ಯತೆ ನಡಿಗೆ ಸಾಮರಸ್ಯದ ಕಡೆಗೆʼ ಎಂಬ ವಿಭಿನ್ನ ಹಾಗೂ ವಿಶೇಷವಾದ ಪಾದಯಾತ್ರೆ ಮಾಡಲಾಯಿತು. ಈ ವೇಳೆ ಬಸವಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ಮಾಡಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಮರಸ್ಯ …
Read More »10 ಲಕ್ಷ ರೂಪಾಯಿ ಹಣವನ್ನು ಡಬಲ್ ಮಾಡಿ ಕೊಡಲಾಗುವುದು ಎಂದು ಪುಸಲಾಯಿಸಿ 5 ಲಕ್ಷ ರೂಪಾಯಿ ಹಣವನ್ನು ದೋಚಿಕೊಂಡು ಪರಾರಿ
ಮಂಡ್ಯ :- 5 ಲಕ್ಷ ರೂಪಾಯಿ ಹಣಕೊಟ್ಟರೆ 10 ಲಕ್ಷ ರೂಪಾಯಿ ಹಣವನ್ನು ಡಬಲ್ ಮಾಡಿ ಕೊಡಲಾಗುವುದು ಎಂದು ಪುಸಲಾಯಿಸಿ 5 ಲಕ್ಷ ರೂಪಾಯಿ ಹಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಮಂಗಳವಾರ ಮಧ್ಯಾಹ್ನ ಮದ್ದೂರು ತಾಲ್ಲೂಕಿನ ಉಪ್ಪಿನಕೆರೆ ಗೇಟ್ ಬಳಿ ನಡೆದಿದೆ. ಮದ್ದೂರು ತಾಲ್ಲೂಕಿನ ಉಪ್ಪಿನಕೆರೆ ಗೇಟ್ ಬಳಿಯ ಶ್ರೀ ಕಬ್ಬಾಳಮ್ಮ ಟೀ ಸ್ವಾಲ್ ಬಳಿ ಮಂಗಳವಾರ ಬೆಳಿಗ್ಗೆ ಸುಮಾರು 12 ಗಂಟೆ ವೇಳೆಗೆ ಕುಣಿಗಲ್ ಮೂಲದ ಪುನೀತ್, ಕಿರಣ್ ಎಂಬ …
Read More »ತಾಕತ್ತಿದ್ದರೆ ಮೊಳಕಾಲ್ಮೂರು ಕ್ಷೇತ್ರದಲ್ಲೇ ಸ್ಪರ್ಧಿಸಿ
ಮೊಳಕಾಲ್ಮೂರು: ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳದ ಸಚಿವ ಬಿ. ಶ್ರೀರಾಮುಲು ತಾಕತ್ತಿದ್ದರೆ ಮುಂಬರುವ ಚುನಾವಣೆಯಲ್ಲಿ ನನ್ನ ವಿರುದ್ಧ ಗೆದ್ದು ತೋರಿಸಲಿ ಎಂದು ಕಾಂಗ್ರೆಸ್ ಮುಖಂಡ ಡಾ| ಬಿ. ಯೋಗೇಶ್‌ಬಾಬು ಸವಾಲೆಸೆದರು. ತಾಲೂಕಿನ ಹಾನಗಲ್ ಗ್ರಾಮದ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಬಿ. ಶ್ರೀರಾಮುಲು ಕೆಲ ದಿನಗಳ ಹಿಂದೆ ಈ ಕ್ಷೇತ್ರ ಅಭಿವೃದ್ಧಿಯಿಂದ ಹಿಂದುಳಿಯಲು ಕಾಂಗ್ರೆಸ್ ಕಾರಣವಾಗಿದೆ ಎಂದು ಹೇಳಿಕೆ ನೀಡಿರುವುದು ಖಂಡನೀಯ. ತಾಕತ್ತಿದ್ದರೆ ಕಾಂಗ್ರೆಸ್‌ನವರು ನನ್ನ ವಿರುದ್ಧ …
Read More »ಅಶ್ವತ್ಥ ನಾರಾಯಣ್ ಸಹೋದರನ ಪಾತ್ರ ಎಷ್ಟಿದೆ ಅನ್ನೋದನ್ನ ತನಿಖೆ ಮಾಡ್ತಾರೆ: ಶಾಸಕ ಯತ್ನಾಳ್
ವಿಜಯಪುರ : ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಚಿವ ಸಿ.ಎನ್.ಅಶ್ವತ್ಥ ನಾರಾಯಣ್ ಸಹೋದರನ ಹೆಸರು ಕೇಳಿಬಂದಿರುವುದರ ಕುರಿತು ತನಿಖೆಯಾಗಬೇಕು. ಇದರಲ್ಲಿ ಯಾರೇ ಇದ್ದರೂ ಮುಲಾಜಿಲ್ಲದೆ ತನಿಖೆಯಾಗಲಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮದ ಕುರಿತು ಮಾತನಾಡಿದ ಅವರು, ಬಿಜೆಪಿ ಸರ್ಕಾರವೇ ಇದನ್ನು ತನಿಖೆ ಮಾಡಿದೆ. ನಮ್ಮ ಸರ್ಕಾರದಿಂದಲೇ ಈ ಪ್ರಕರಣ ಹೊರಗೆ ಬಂದಿದೆ. ಹಿಂದೆ ಕೂಡ ಇಂತಹ ಡೀಲ್ ನಡೆದಿವೆ, ಇದೆ ಮೊದಲೇನಲ್ಲ. ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ …
Read More »ಅನ್ಯಧರ್ಮದಲ್ಲಿ ಜನಿಸಿದ್ದರೆ ಬಸವಣ್ಣ ವಿಶ್ವಖ್ಯಾತಿ ಪಡೆಯುತ್ತಿದ್ದ: ಶಿವಾನಂದ ಪಾಟೀಲ
ವಿಜಯಪುರ: ಬಸವಣ್ಣ ಇಸ್ಲಾಂ ಧರ್ಮದಲ್ಲಿ ಜನಿಸಿದ್ದರೆ ಮಹ್ಮದ್ ಪೈಗಂಬರರನ್ನು, ಕ್ರೈಸ್ತ ಧರ್ಮದಲ್ಲಿ ಜನಿಸಿದ್ದರೆ ಏಸುವಿಗಿಂತ ಮಿಗಿಲಾಗಿ ಜಗತ್ತನ್ನು ಆವರಿಸಿರುತ್ತಿದ್ದರು. ಆದರೆ ಬಸವಣ್ಣ ಎಂಬ ಮಹಾನ್ ದಾರ್ಶನಿಕ ಕನ್ನಡ ನೆಲದ ಬಾಗೇವಾಡಿಯಲ್ಲಿ ನೆಲೆಸಿದ್ದರಿಂದ ಅವರ ವೈಚಾರಿಕ ಸಂದೇಶಗಳು ಜಗತ್ತಿನ ಮೂಲೆ ಮೂಲೆಗೆ ತಲುಪುವಲ್ಲಿ ವಿಫಲವಾಗಿದೆ ಎಂದು ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಹೇಳಿದರು. ಮಂಗಳವಾರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ರಾಜ್ಯ ಸರ್ಕಾರದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ …
Read More »ಮುಖ್ಯಮಂತ್ರಿ ಬೊಮ್ಮಾಯಿ ನಿವಾಸದಲ್ಲಿ ಹೋಳಿಗೆ ಊಟ ಸವಿದ ಅಮಿತ್ ಶಾ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಯೋಜಿಸಿದ್ದ ಭೋಜನಕೂಟದಲ್ಲಿ ಅಮಿತ್ ಶಾ ಭಾಗಿಯಾಗಿದ್ದು, ಇವರ ಜೊತೆಗೆರಾಜ್ಯ ಬಿಜೆಪಿ ನಾಯಕರು ಪಾಲ್ಗೊಂಡಿದ್ದು, ಬೆಳ್ಳಿ ತಟ್ಟೆಯಲ್ಲಿ ಭೋಜನ ಸೇವಿಸಿದರು. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏರ್ಪಡಿಸಿರುವ ಭೋಜನ ಕೂಟದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ …
Read More »ಪಿಎಸ್‌ಐ ನೇಮಕಾತಿ ಅಕ್ರಮ: ಹೋರಾಟ ಕೈಬಿಟ್ಟು ಕಾನೂನು ಸಮರಕ್ಕೆ ಸಜ್ಜಾದ ಅಭ್ಯರ್ಥಿಗಳು
ಬೆಂಗಳೂರು, ಮೇ. 03: ಪಿಎಸ್‌ಐ ಪರೀಕ್ಷೆಯನ್ನು ರದ್ದು ಗೊಳಿಸಿದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಪಿಎಸ್‌ಐ ಅಭ್ಯರ್ಥಿಗಳು ಹೋರಾಟವನ್ನು ಕೈ ಬಿಟ್ಟಿದ್ದಾರೆ. ಸರ್ಕಾರದ ಮರು ಪರೀಕ್ಷೆ ನಿರ್ಧಾರದ ವಿರುದ್ದ ಕಾನೂನು ಸಮರ ಸಾರಲು ನಿರ್ದಾರ ಕೈಗೊಂಡಿದ್ದು, ಮಂಗಳವಾರ ಹೋರಾಟವನ್ನು ಅಂತ್ಯಗೊಳಿಸಿದರು. ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಸರ್ಕಾರ ರದ್ದುಗೊಳಿಸಿತ್ತು. ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದ ಅಭ್ಯರ್ಥಿಗಳು ಸರ್ಕಾರದ …
Read More »ಅಮಿತ್ ಶಾ ಬೆಂಗಳೂರಿನಲ್ಲಿ ಇರುವಾಗಲೇ ಯತ್ನಾಳ್ ಹೊಸ ಬಾಂಬ್
ವಿಜಯಪುರ, ಮೇ 3: ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮಾತಿಗೆ ಬಿಜೆಪಿಯಲ್ಲಿ ಎಷ್ಟು ಬೆಲೆ ಇದೆಯೋ ತಿಳಿದಿಲ್ಲ. ಆದರೆ, ರಾಜಕಾರಣದ ಸುತ್ತಮುತ್ತ ವಿವಾದಕಾರೀ ಹೇಳಿಕೆಯನ್ನು ನೀಡುವುದರಲ್ಲಿ ಅವರು ನಿಸ್ಸೀಮರು. ಸ್ವಪಕ್ಷೀಯದವರನ್ನೇ ಅದರಲ್ಲೂ ಪ್ರಮುಖವಾಗಿ ಯಡಿಯೂರಪ್ಪ, ವಿಜಯೇಂದ್ರ ಮತ್ತು ಮುರುಗೇಶ್ ನಿರಾಣಿ ವಿರುದ್ದ ಕಿಡಿಕಾರುವ ಯತ್ನಾಳ್, ಅಮಿತ್ ಶಾ ಅವರು ರಾಜ್ಯ ಪ್ರವಾಸದಲ್ಲಿ ಇದ್ದಾಗಲೇ ಮತ್ತೊಂದು ಹೇಳಿಕೆಯನ್ನು ನೀಡಿ, ಪಕ್ಷದ ನಾಯಕರಿಗೆ ಮುಜುಗರ ತಂದಿದ್ದಾರೆ. “ಕೇಂದ್ರ ಗೃಹ …
Read More »ಟೋಲ್ ಸಂಗ್ರಹಕ್ಕೆ ಕೇಂದ್ರದ ಹೊಸ ಪ್ಲಾನ್-ಶೀಘ್ರದಲ್ಲಿ ಫಾಸ್ಟ್ ಟ್ರ್ಯಾಕ್ ರದ್ದು !
ನವದೆಹಲಿ: ಹೆದ್ದಾರಿಯ ಟೋಲ್ ಸಂಗ್ರಹ ಕೇಂದ್ರದಲ್ಲಿ ಈಗಾಗಲೇ ಫಾಸ್ಟ್ ಟ್ರ್ಯಾಕ್ ವ್ಯವಸ್ಥೆ ಇದೆ. ಆದರೆ, ಕೇಂದ್ರ ಸರ್ಕಾರ ಈ ಒಂದು ವ್ಯವಸ್ಥೆಯನ್ನ ರದ್ದುಗೊಳಿಸಲು ಮುಂದಾಗಿದೆ. ಅದರ ಬದಲು ಬೇರೆ ವ್ಯವಸ್ಥೆ ಮಾಡಲು ಸಿದ್ದತೆ ನಡೆಸಿದೆ. ಕೇಂದ್ರ ಸರ್ಕಾರ ಸ್ಯಾಟಲೈಟ್ ನ್ಯಾವಿಗೇಷನ್ ಸಿಸ್ಟಂ ಬಳಸಿ ಟೋಲ್ ಸಂಗ್ರಹಿಸಲು ಮುಂದಾಗಿದ್ದು, ಭಾರತದಲ್ಲಿ ಪ್ರಾಯೋಗಿಕವಾಗಿಯೇ ಇದರ ಪರೀಕ್ಷೆಯನ್ನೂ ಮಾಡಲಾಗುತ್ತಿದೆ. ವಿಶೇಷವೇನೆಂದ್ರೆ ಈ ವ್ಯವಸ್ಥೆಯಲ್ಲಿ ಎಷ್ಟು ಕಿಲೋಮೀಟರ್ ವಾಹನಗಳು ಓಡಿರುತ್ತವೆಯೋ ಅಷ್ಟೆಕ್ಕೆ ಮಾತ್ರ ಟೋಲ್ …
Read More »
Laxmi News 24×7