Breaking News
Home / ರಾಜ್ಯ (page 19)

ರಾಜ್ಯ

ಮಟನ್ ಚೀಟಿ ಹೆಸರಿನಲ್ಲಿ ಮಕ್ಮಲ್ ಟೋಪಿ ಹಾಕಿದ್ದ ಆರೋಪಿ ಅರೆಸ್ಟ್, ಮನೆ ಜಪ್ತಿ!

ಬೆಂಗಳೂರು:- ಹೊಸ ತೊಡಕಿಗೆ ಮಟನ್ ಚೀಟಿ ಹೆಸರಲ್ಲಿ ಮೋಸ ಮಾಡಿದ ಆರೋಪಿಯ ಮನೆ ಜಪ್ತಿ ಮಾಡಲಾಗಿದೆ. ಪುಟ್ಟಸ್ವಾಮಿಗೌಡ ಬಂಧಿತ ಆರೋಪಿ.   ಆರೋಪಿಯು ಯುಗಾದಿ ಹಬ್ಬದ ಹೊಸ ತೊಡಕಿಗೆ ಮಟನ್ ಚೀಟಿ ಹೆಸರಿನಲ್ಲಿ ಹಣ ಪಡೆದು ವಂಚಿಸಿದ್ದ. ಈ ಸಂಬಂಧ ಈತನ ಮೇಲೆ ಹಲವು ಪ್ರಕರಣ ದಾಖಲಾಗಿದವು. ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪುಟ್ಟಸ್ವಾಮಿಗೌಡ ಮನೆಯನ್ನು ಸುಪರ್ದಿಗೆ ಪಡೆದಿದ್ದು, ಈತ ಸಂಗ್ರಹಿಸಿದ ಹಣದಲ್ಲಿ ತನ್ನ ಸಾಲ ತೀರಿಸಿರುವುದು ಪೊಲೀಸ್ ತನಿಖೆಯಲ್ಲಿ ತಿಳಿದು …

Read More »

ನಾಮಪತ್ರ ಸಲ್ಲಿಸಿದ ಬಿಜೆಪಿ‌ ಅಭ್ಯರ್ಥಿ ಜಗದೀಶ್ ಶೆಟ್ಟರ್

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸೋಮವಾರ (ಏ.15) ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ರಮೆಶ್ ಜಾರಕಿಹೊಳಿ, ಸಂಸದರಾದ ಮಂಗಲ ಅಂಗಡಿ, ಮಾಜಿ ಶಾಸಕ ಅನಿಲ್ ಬೆನಕೆ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಉಪಸ್ಥಿತರಿದ್ದರು.

Read More »

ಗೋವಾದಲ್ಲಿ ಕನ್ನಡಿಗರ ಮನೆ ನೆಲಸಮ: ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಕಿಡಿ

ಪಣಜಿ: ಗೋವಾದ ಸಂಗೋಲ್ಡಾದಲ್ಲಿ ಕನ್ನಡಿಗರಿಗೆ ಸೇರಿದ ಮನೆಗಳನ್ನು ನೆಲಸಮಗೊಳಿಸಲಾಗಿದೆ ಎಂಬ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಗೋವಾ ಬಿಜೆಪಿ ವಕ್ತಾರ ಗಿರಿರಾಜ್ ಪೈ ವೆರ್ಣೇಕರ್ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ರಾಜ್ಯದ ಸಮಸ್ಯೆಗಳ ಬಗ್ಗೆ ಮೊದಲು ಗಮನಕೊಡಲಿ ಎಂದಿದ್ದಾರೆ. ಉತ್ತರ ಗೋವಾ ಜಿಲ್ಲೆಯ ಸಂಗೋಲ್ಡಾ ಗ್ರಾಮದಲ್ಲಿ ಕಮ್ಯುನಿಡೇಡ್‌ಗೆ ಸೇರಿದ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಒಟ್ಟು 22 ಮನೆಗಳನ್ನು ಶುಕ್ರವಾರ ಅಧಿಕಾರಿಗಳು ನೆಲಸಮಗೊಳಿಸಿದ್ದರು. ಈ ಕುರಿತು ಎಕ್ಸ್‌ನಲ್ಲಿ ಕಳವಳ ವ್ಯಕ್ತಪಡಿಸಿದ್ದ ಮುಖ್ಯಮಂತ್ರಿ …

Read More »

ಡಿ.ಕೆ.ಶಿ ಆಪ್ತ ಕೆಂಪರಾಜು ನಿವಾಸದ ಮೇಲೆ‌ ದಾಳಿ

ಬೆಂಗಳೂರು : ಆದಾಯ ತೆರಿಗೆ ಅಧಿಕಾರಿಗಳು ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಂಸದ ಡಿ.ಕೆ.ಸುರೇಶ್ ಆಪ್ತ ಕೆಂಪರಾಜು ನಿವಾಸದ ಮೇಲೆ‌ ದಾಳಿ (IT Raid) ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ನಗರದ ಕನಕಪುರ ರಸ್ತೆಯ ವಾಜರ ಹಳ್ಳಿಯಲ್ಲಿರುವ ನಿವಾಸದ ಮೇಲೆ‌ ಐಟಿ ದಾಳಿ ನಡೆದಿದೆ. ಈ ಹಿಂದೆ ಯುವ ಕಾಂಗ್ರೆಸ್ ಚುನಾವಣೆ ಕೆಂಪರಾಜು ಸ್ಪರ್ಧಿಸಿದ್ದರು. ಕನಕಪುರ ಮೂಲದ ಕೆಂಪರಾಜು ಗ್ರಾನೈಟ್, ಕ್ರಷರ್ ಸೇರಿದಂತೆ ಹಲವು ಬ್ಯುಸಿನೆಸ್ ಹೊಂದಿದ್ದಾರೆ. ಇವರ ನಿವಾಸದ‌ ಮೇಲೆ …

Read More »

ದಕ್ಷಿಣ ಒಳನಾಡು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾನುವಾರ ಕೂಡ ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಕಡೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಳೆಗಳಲ್ಲಿ ಮಳೆಯಾಗಿದ್ದು, ಇನ್ನೂ ಮೂರು ದಿನ ರಾಜ್ಯದಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ ಜಿಲ್ಲೆ ಆಗುಂಬೆಯಲ್ಲಿ 8 ಸೆ.ಮೀ. ಕೊಪ್ಪಳ ಜಿಲ್ಲೆ ತಾವರೆಗೇರಾದಲ್ಲಿ 7 ಸೆ.ಮೀ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಚಿಕ್ಕಮಗಳೂರು ಜಿಲ್ಲೆಯ ಜಯಪುರ, ಎನ್.ಆರ್. ಪುರದಲ್ಲಿ 4 ಸೆ.ಮೀ. ಮಳೆಯಾಗಿದೆ. …

Read More »

ಗ್ಯಾರಂಟಿಗಳಿಂದ ಹಳ್ಳಿ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ ಎಂದ ಕುಮಾರಸ್ವಾಮಿ

ಬೆಂಗಳೂರು, ಏಪ್ರಿಲ್‌ 14: ಕಾಂಗ್ರೆಸ್​ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ವಿವಾದಿತ ಹೇಳಿಕೆ ನೀಡಿದ್ದು, ಹೆಣ್ಣುಮಕ್ಕಳ ಬಗ್ಗೆ ಕುಮಾರಸ್ವಾಮಿಯವರ ಮನಸ್ಥಿತಿ ಏನು ಎಂದು ಅರ್ಥವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದಾಗಿ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. …

Read More »

ಕುರಿ ಕಾಯುತ್ತಿದ್ದ ನಾನು ಸಿಎಂ ಆಗಲು ಅಂಬೇಡ್ಕರ್​ ಸಂವಿಧಾನ ಕಾರಣ: ಸಿಎಂ

ಮೈಸೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹುಟ್ಟಿರದೆ ಇದ್ದರೆ ಭಾರತ ಏನಾಗಿರುತ್ತಿತ್ತು ಎನ್ನುವುದನ್ನು ಒಂದು ಕ್ಷಣ ಕಲ್ಪಿಸಿಕೊಂಡರೆ ನಮ್ಮೆಲ್ಲರ ಬದುಕಿನಲ್ಲಿ ಅವರ ಪಾತ್ರದ ಅರಿವಾಗಬಹುದು. ಈ ಕಾರಣಕ್ಕಾಗಿ ಜಾತಿ, ಧರ್ಮ, ಪಂಥ, ಪ್ರದೇಶವನ್ನು ಮೀರಿ ಭಾರತದ ನೆಲದಲ್ಲಿ ಹುಟ್ಟಿದವರು ಮತ್ತು ಹುಟ್ಟಲಿರುವವರೆಲ್ಲರೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಋಣಿಗಳಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂಬೇಡ್ಕರ್​ ಜಯಂತಿಯಂತಿಯಂದು ಅವರ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ. ಹಳ್ಳಿಯಲ್ಲಿ ಕುರಿಕಾಯುತ್ತಿದ್ದ ನಾನು …

Read More »

ಕಾಗೇರಿ ಆರು ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಬಗ್ಗೆ ಮಾತನಾಡಲಿ,: ಡಾ.ಅಂಜಲಿ ಸವಾಲು

ಭಟ್ಕಳ: ನಾನು ಬಹಿರಂಗ ಚರ್ಚೆಗೆ ಸಿದ್ಧಳಿದ್ದೇನೆ. ಬಿಜೆಪಿ ಆಡಳಿತವಿದ್ದರೂ ಖಾನಾಪುರದಲ್ಲಿ ಐದು ವರ್ಷದಲ್ಲಿ ನಾನು ಮಾಡಿದ ಅಭಿವೃದ್ಧಿ ಕಾರ್ಯಗಳು, ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಆರು ಅವಧಿಯಲ್ಲಿ ಮಾಡಿದ ಕೆಲಸಗಳನ್ನ ತೋರಿಸಲಿ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಸವಾಲೆಸೆದರು. ಮಾವಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಬಡವರು, ರೈತರಿಗೆ ಅನ್ಯಾಯವಾದರೆ ಯಾರಿಗೂ ಬಿಡಲ್ಲ, ಅದು ಎಷ್ಟೇ …

Read More »

ಬರ ಬಂದಾಗ ಬರುವುದಿಲ್ಲ, ಚುನಾವಣಾ ಪ್ರಚಾರಕ್ಕೆ ಮಾತ್ರ ತಪ್ಪಿಸುವುದಿಲ್ಲ’ ಮೋದಿ ರಾಜ್ಯ ಪ್ರವಾಸಕ್ಕೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು : ನೆರೆ ಬಂದಾಗ ಬರುವುದಿಲ್ಲ, ಬರ ಬಂದಾಗಲೂ ಬರುವುದಿಲ್ಲ, ಚುನಾವಣಾ ಪ್ರಚಾರಕ್ಕೆ ಬರುವುದನ್ನು ಮಾತ್ರ ತಪ್ಪಿಸುವುದಿಲ್ಲ. ಹೀಗಿದ್ದರೂ ನಿಮ್ಮ ಬರುವಿಕೆಗಾಗಿ ಆರುವರೆ ಕೋಟಿ ಕನ್ನಡಿಗರು ಕಾತರದಿಂದ ಕಾಯುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕಕ್ಕೆ ಸ್ವಾಗತ. ನೆರೆ ಬಂದಾಗ ಬರುವುದಿಲ್ಲ, ಬರ ಬಂದಾಗಲೂ ಬರುವುದಿಲ್ಲ, ಚುನಾವಣಾ ಪ್ರಚಾರಕ್ಕೆ ಬರುವುದನ್ನು ಮಾತ್ರ ತಪ್ಪಿಸುವುದಿಲ್ಲ. ಹೀಗಿದ್ದರೂ ನಿಮ್ಮ …

Read More »

BJP ಸಂಜಯ ಪಾಟೀಲ ಮನೆ ಎದುರು ರಾತ್ರೋರಾತ್ರಿ ಮಹಿಳೆಯರ ಪ್ರತಿಭಟನೆ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ ಅವರ ಮನೆ ಎದುರು ಕಾಂಗ್ರೆಸ್ ನ ಮಹಿಳಾ ಕಾರ್ಯಕರ್ತೆಯರು ಶನಿವಾರ ರಾತ್ರಿ ಪ್ರತಿಭಟನೆ ನಡೆಸಿ, ಸಂಜಯ ಭಾವಚಿತ್ರಕ್ಕೆ ಬಳೆ, ಸೀರೆ ತೊಡಿಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿರುವ ಸಂಜಯ ಪಾಟೀಲ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದ ನೂರಾರು ಮಹಿಳಾ ಕಾರ್ಯಕರ್ತೆಯರು, ಸಂಜಯ ಪಾಟೀಲ ಅವರು ಕೂಡಲೇ ಮನೆಯಿಂದ ಹೊರಗೆ ಬಂದು ನಾಡಿನ ಎಲ್ಲ …

Read More »