ಬೆಂಗಳೂರು : ಸುದೀರ್ಘ ರಜೆ, ಗೌರಿ – ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಊರುಗಳತ್ತ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಆಗಸ್ಟ್ 25 ರಿಂದ 31ರವರೆಗೆ ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆಯನ್ನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್‌ಟಿಸಿ) ಕಲ್ಪಿಸಿದೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಹಾಗೂ ಅಂತರ್ ರಾಜ್ಯಗಳ ವಿವಿಧ ಸ್ಥಳಗಳಿಗೆ ಒಟ್ಟು 1500 ಬಸ್ಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕೆಎಸ್ಆರ್‌ಟಿಸಿ ತಿಳಿಸಿದೆ. ಬೆಂಗಳೂರು, ಮಂಗಳೂರು, ಮುಂಬೈ, ಪುಣೆ, ಗೋವಾ ಮತ್ತಿತರ ಕಡೆಗಳಿಗೆ …
Read More »ಧರ್ಮಸ್ಥಳ ಕೇಸ್: ಬಂಧಿತ ಮಾಸ್ಕ್ಮ್ಯಾನ್ ಸಿಎನ್ ಚಿನ್ನಯ್ಯ ಯಾರು?
ಮಂಗಳೂರು, ಆಗಸ್ಟ್ 23: ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ರಾಜಕೀಯ ತಿರುವು ಪಡೆದುಕೊಂಡಿದೆ. ಇತ್ತ ಬಿಜೆಪಿ ಧರ್ಮದ ಉಳಿವಿಗಾಗಿ ಧರ್ಮಯುದ್ಧ ಎಂಬ ಚಳವಳಿ ಶುರುಮಾಡಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವ ಬೆಳವಣಿಗೆಯೊಂದು ನಡೆದಿದೆ. ಸಾಕ್ಷಿದಾರನಾಗಿ ಬಂದಿದ್ದ ಅನಾಮಿಕ ಮಾಸ್ಕ್ಮ್ಯಾನ್ (Masked man) ನನ್ನು ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನ ಬಂಧಿತ ಆರೋಪಿ. ಈ ಮಾಸ್ಕ್ಮ್ಯಾನ್ ಯಾರು, ಎಲ್ಲಿಯವನು ಎಂದು ಸಾಕಷ್ಟು ಚರ್ಚೆಗಳು ನಡೆದಿದ್ದವು. ಸ್ವತಃ ಎಸ್ಐಟಿ ಅಧಿಕಾರಿಗಳು …
Read More »ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು
ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್ನಲ್ಲಿ ಫ್ರಾನ್ಸ್‌ನಲ್ಲಿ ನಡೆಯಲಿದೆ. ಇಲ್ಲಿ ನಡೆಯುವ ಗಾಳಿಪಟ ಉತ್ಸವಕ್ಕೆ ಮಂಗಳೂರಿನ ಗಾಳಿಪಟ ಆಸಕ್ತರ ತಂಡವೊಂದು ವಿಶೇಷ ಗಾಳಿಪಟವನ್ನು ತಯಾರಿಸಿ, ಸಿದ್ಧವಾಗಿದೆ. ಫ್ರಾನ್ಸ್‌ನಲ್ಲಿ ಸೆಪ್ಟಂಬರ್ 13 ರಿಂದ ಪ್ರಪಂಚದ ಅತೀ ದೊಡ್ಡ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ. ಈ ಉತ್ಸವದಲ್ಲಿ ಗಾಳಿಪಟ ಹಾರಿಸಲು ‘ಟೀಮ್ ಮಂಗಳೂರು’ ತಂಡ ವಿಶೇಷವಾದ ಗಾಳಿಪಟವನ್ನು ತಯಾರಿಸಿದೆ. ಇದೇ ಗಾಳಿಪಟ ಫ್ರೆಂಚರ …
Read More »ಲಕ್ಕಿ ಸ್ಕೀಮ್ ಹೆಸರಲ್ಲಿ ಜನರಿಗೆ ನಂಬಿಸಿ ₹14 ಕೋಟಿಗೂ ಅಧಿಕ ವಂಚನೆ: ನಾಲ್ವರ ಬಂಧನ
ಮಂಗಳೂರು: ಲಕ್ಕಿ ಸ್ಕೀಮ್ ಮೂಲಕ ಗ್ರಾಹಕರಿಂದ ಕೋಟ್ಯಂತರ ರೂ. ಸಂಗ್ರಹಿಸಿ ವಂಚನೆ ಮಾಡಿದ ಎರಡು ಸಂಸ್ಥೆಗಳ ನಾಲ್ವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಅಹಮದ್ ಖುರೇಶಿ, ನಝೀರ್ ಯಾನೆ ನಾಸಿರ್, ಮುಹಮ್ಮದ್ ಅಶ್ರಫ್, ಮುಹಮ್ಮದ್ ಹನೀಫ್ ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣ 1: ನ್ಯೂ ಶೈನ್ ಎಂಟರ್ಪ್ರೈಸಸ್ ಎಂಬ ಲಕ್ಕಿ ಸ್ಕೀಮ್ನಲ್ಲಿ 9 ತಿಂಗಳು 1,000 ರೂ. ಹಾಗೂ ಕೊನೆಯ 2 …
Read More »ಜಾತಿ ನಿಂದನೆ ಆರೋಪದಡಿ ವಕೀಲ ಕೆ.ಎನ್. ಜಗದೀಶ್ ಬಂಧನ
ಬೆಂಗಳೂರು: ಜಾತಿ ನಿಂದನೆ ಆರೋಪದಡಿ ಬಿಗ್ಬಾಸ್ ಮಾಜಿ ಸ್ಪರ್ಧಿ, ವಕೀಲ ಕೆ.ಎನ್. ಜಗದೀಶ್ ಅವರನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ಎಂಬುವವರು ನೀಡಿದ ದೂರಿನನ್ವಯ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ಜಗದೀಶ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಜಾತಿ ನಿಂದನೆ ಮಾಡಿರುವ ಆರೋಪ ಜಗದೀಶ್ ಅವರ ವಿರುದ್ಧ ಕೇಳಿ ಬಂದಿತ್ತು. ಅದರನ್ವಯ ಜಗದೀಶ್ ಅವರಿಗೆ ಗುರುವಾರ ನೋಟಿಸ್ ನೀಡಲು ಪೊಲೀಸರು ತೆರಳಿದ್ದಾಗ ಮನೆಯ ಬಾಗಿಲು ತೆರೆಯದೇ ಹೈಡ್ರಾಮಾ …
Read More »ಒಂದು ಲಕ್ಷ ಯುನಿಟ್ ರಕ್ತವನ್ನು ಸಂಗ್ರಹದ ಗುರಿ: ಬೆಳಗಾವಿಯ ಹಿಂಡಲಗಾದಲ್ಲಿ ಬೃಹತ್ ರಕ್ತಧಾನ ಶಿಬಿರ…. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ
ಒಂದು ಲಕ್ಷ ಯುನಿಟ್ ರಕ್ತವನ್ನು ಸಂಗ್ರಹದ ಗುರಿ: ಬೆಳಗಾವಿಯ ಹಿಂಡಲಗಾದಲ್ಲಿ ಬೃಹತ್ ರಕ್ತಧಾನ ಶಿಬಿರ…. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಬೆಳಗಾವಿಯ ಹಿಂಡಲಗಾದಲ್ಲಿ ಬೃಹತ್ ರಕ್ತಧಾನ ಶಿಬಿರ ಸ್ವಯಂ ಪ್ರೇರಿತರಾಗಿ ಬಂದು ರಕ್ತಧಾನ ಮಾಡಿದ ಸಾರ್ವಜನಿಕರುಒಂದು ಲಕ್ಷ ಯುನಿಟ್ ರಕ್ತವನ್ನು ಸಂಗ್ರಹದಗುರಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಒಂದು ಲಕ್ಷ ಯುನಿಟ್ ರಕ್ತವನ್ನು ಸಂಗ್ರಹಿಸಿ ಸರ್ಕಾರಕ್ಕೆ ನೀಡುವ ಗುರಿ ಹೊಂದಲಾಗಿದೆ ಎಂದು ರಾಜಯೋಗಿನಿ ಬಿಕೆ ಸುಲೋಚನಾ …
Read More »ಬೃಹತ್ ಗಾಂಜಾ ಪ್ರಕರಣ ಬೇಧಿಸಿದ ಬೆಳಗಾವಿಯ ನಗರ ಪೊಲೀಸರು 6 ಆರೋಪಿಗಳನ್ನು
ಬೃಹತ್ ಗಾಂಜಾ ಪ್ರಕರಣ ಬೇಧಿಸಿದ ಬೆಳಗಾವಿಯ ನಗರ ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದಾರೆ….50ಕೆಜಿ ಗಾಂಜಾ ಪ್ರಕರಣ ಭೇದಿಸಿದ ಬೆಳಗಾವಿಯ ಖಾಕಿ ಪಡೆಗಾಂಜಾ ಜಾಲವನ್ನು ಬುಡಸಮೇತ ಕಿತ್ತು ಹಾಕಲಾಗುವುದುಜಾಲದಲ್ಲಿರುವ ವ್ಯಕ್ತಿಗಳ ಪತ್ತೆಗೆ ಮೂಹರ್ತವಿಟ್ಟ ಕಮೀಷನರ್ ಜಾಲವನ್ನು ಬೇಧಿಸಿದ ಪೊಲೀಸ್ ತಂಡಕ್ಕೆ ಬಹುಮಾನ ಘೋಷಣೆ ಬೆಳಗಾವಿ-ಚಂದಗಡ ರಸ್ತೆಯಲ್ಲಿರುವ ದಾಭಾ ಒಂದರ ಬಳಿ ಕಾರ ಪರಿಶೀಲನೆ ನಡೆಸಿದಾಗ ಆರು ಜನ ಆರೋಪಿಗಳು ಸುಮಾರು 50 ಕೆಜಿಯಷ್ಟು ಗಾಂಜಾದೊಂದಿಗೆ ಸಿಕ್ಕಿ ಬಿದ್ದಿರುವದಾಗಿ ಬೆಳಗಾವಿ ನಗರ ಪೊಲೀಸ್ …
Read More »ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ಬಿಜೆಪಿ ಧರ್ಮ ಯುದ್ಧ ನಡೆಸುವುದಾಗಿ ಘೋಷಿಸಿದೆ.
ಬೆಂಗಳೂರು: ಧರ್ಮಸ್ಥಳದ ವಿಚಾರವಾಗಿ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ “ಧರ್ಮದ ಉಳಿವಿಗಾಗಿ ಧರ್ಮ ಯುದ್ಧ” ಹೋರಾಟವನ್ನು ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, “ಧರ್ಮಸ್ಥಳದ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ದಿನೇಶ್ ಗುಂಡೂರಾವ್ ಅವರು ನೀಡಿರುವ ಹೇಳಿಕೆಗಳು ಎಲ್ಲರಿಗೂ ತಿಳಿದಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ವಿಚಾರವಾಗಿ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ನಮಗೂ ಅನುಮಾನಗಳು ಕಾಡುತ್ತಿವೆ” ಎಂದು ಹೇಳಿದರು. “ರಾಜ್ಯ ಸರ್ಕಾರದ ಈ …
Read More »ನಾನು ಹುಟ್ಟು ಕಾಂಗ್ರೆಸಿಗ, ಬಿಜೆಪಿ – ಆರ್ಎಸ್ಎಸ್ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ: ಡಿಸಿಎಂ
ಬೆಂಗಳೂರು : ನಾನು ಅಪ್ಪಟ ಕಾಂಗ್ರೆಸಿಗ. ಹುಟ್ಟಿನಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಜೀವ ಇರುವ ತನಕವೂ ಕಾಂಗ್ರೆಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಆರ್ಎಸ್ಎಸ್ ಗೀತೆ ಹಾಡಿದ್ದರ ಪರಿಣಾಮ ನೀವು ಬಿಜೆಪಿ ಹಾಗೂ ಆರ್ಎಸ್ಎಸ್ ಜೊತೆ ಕೈ ಜೋಡಿಸುವ ಬಗ್ಗೆ ಚರ್ಚೆಯಾಗುತ್ತಿದೆ …
Read More »ಮಹೇಶ್ ಶೆಟ್ಟಿ ತಿಮರೋಡಿ ಕರೆತರುವಾಗ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಮೂವರು ಬೆಂಗಲಿಗರ ಬಂಧನ
ಉಡುಪಿ: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ವಾಹನಗಳನ್ನು ಹಿಂಬಾಲಿಸಿಕೊಂಡು ಬಂದು, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಅವರ ಮೂವರು ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ. ಉಜಿರೆ ನಿವಾಸಿಗಳಾದ ಸೃಜನ್ ಎಲ್., ಹಿತೇಶ್ ಶೆಟ್ಟಿ ಹಾಗೂ ಸಹನ್ ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳು ತಿಮರೋಡಿಯನ್ನು ಹಿಂಬಾಲಿಸಿ, ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಂದಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಬೇಡಿ ಎಂದು ಪೊಲೀಸರು ಸೂಚನೆ ನೀಡಿದರೂ ಕೇಳಿರಲಿಲ್ಲ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ …
Read More »
Laxmi News 24×7