Breaking News
Home / ರಾಜ್ಯ (page 2)

ರಾಜ್ಯ

ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

ಧಾರವಾಡ : ಇದೇ ಮೊದಲ ಬಾರಿಗೆ ಕಾವಿ ಧರಿಸಿ ಧಾರವಾಡ ಲೋಕಸಭಾ ಚುನಾವಣಾ ಕಣಕ್ಕಿಳಿದು ರಂಗೇರುವಂತೆ ಮಾಡಿರುವ ಶಿರಹಟ್ಟಿಯ ಫಕ್ಕೀರ ದಿಂಗಾಲೇಶ್ವರರು ಕೋಟ್ಯಧೀಶ್ವರರು..! ಅಷ್ಟೇಯಲ್ಲ, ಕೆಲ ಪ್ರಕರಣಗಳಲ್ಲಿ ಆರೋಪಿ ಕೂಡ. ಹೌದು…ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ತೊಡೆ ತಟ್ಟಿ ಪಕ್ಷೇತರರಾಗಿ ಸ್ಪರ್ಧೆಗೆ ಇಳಿದಿರುವ ದಿಂಗಾಲೇಶ್ವರರು ಕೋಟಿ ಕೋಟಿ ಮೌಲ್ಯದ ಮಠದ ಟ್ರಸ್ಟ್ ಆಸ್ತಿಯನ್ನು ತಮ್ಮ ಹೆಸರಿನಲ್ಲಿ ಹೊಂದಿ ಕೋಟ್ಯಧಿಪತಿಯಾಗಿದ್ದಾರೆ.   ನಾಮಪತ್ರ ಸಲ್ಲಿಸುವ ವೇಳೆ ಸಲ್ಲಿಸಿರುವ ಆಸ್ತಿ ವಿವರದ ಅಫಿಡೆವಿಟ್‌ನಲ್ಲಿ …

Read More »

ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿಯವರಿಗೆ ಚುನಾವಣೆ ವೇಳೆಯಲ್ಲಿ ಬಿಟ್ಟರೆ ಬೇರೆ ಸಮಯದಲ್ಲಿ ನಮ್ಮ ರಾಜ್ಯ ನೆನಪಾಗುವುದೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುರುವಾರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಬಾಗೇಪಲ್ಲಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಮೋದಿ ಪ್ರವಾಹ ಬಂದಾಗಲೂ ಈ ಕಡೆ ತಲೆ ಹಾಕಲಿಲ್ಲ, ಬರಗಾಲ ಬಂದಾಗಲೂ ಬರಲಿಲ್ಲ ಎಂದು ಕಿಡಿಕಾರಿದರು. ಚುನಾವಣೆ ವೇಳೆ ಭ್ರಷ್ಟರನ್ನು ಗೆಲ್ಲಿಸಲು ರಾಜ್ಯಕ್ಕೆ ಮೇಲಿಂದ ಬರುತ್ತಾರೆ ಅಂದರೆ ಅದು ರಾಜ್ಯದ …

Read More »

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

ಹೊಸದಿಲ್ಲಿ: ವಿಶ್ವದ ಖ್ಯಾತ ಆಹಾರೋತ್ಪನ್ನ ಕಂಪೆನಿ ನೆಸ್ಲೆ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಭಾರತದಲ್ಲಿ ವಿತರಿಸುವ ಶಿಶು ಆಹಾರವಾದ ಪ್ರತೀ ಸಿರಿಲ್ಯಾಕ್‌ ಪೊಟ್ಟಣದಲ್ಲಿ ಸಕ್ಕರೆ ಪ್ರಮಾಣವನ್ನು 3 ಗ್ರಾಮ್‌ನಷ್ಟು ಹೆಚ್ಚಿಸಿದೆ ಎಂದು “ಪಬ್ಲಿಕ್‌ ಐ’ ಸಂಸ್ಥೆಯ ವರ ದಿ ಆರೋಪಿಸಿದೆ. ಈ ಅಧ್ಯಯನ ವರದಿಯು ಕೇಂದ್ರ ಆರೋಗ್ಯ ಸಚಿವಾಲಯದ ಕೈಸೇರಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಲಾಗುವುದು ಎಂದು ಸಚಿವಾಲಯ ಹೇಳಿದೆ ಎಂದು ಮೂಲಗಳು ತಿಳಿಸಿವೆ. ಆರೋಪವೇನು? ಭಾರತದಲ್ಲಿ ಮಾರಾಟವಾಗುವ 15 ವಿಧದ …

Read More »

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

ಕಾಸರಗೋಡು: ಕೇರಳದ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದ ಅಣಕು ಮತದಾನ ವೇಳೆ ಬಿಜೆಪಿ ಪರವಾಗಿ ಹೆಚ್ಚು ಮತಗಳು ಚಲಾವಣೆ ಆಗಿವೆ; ಯಾವುದೇ ಗುಂಡಿ ಅದುಮಿದರೂ ಬಿಜೆಪಿಗೆ ಮತ ಚಲಾವಣೆ ಆಗಿರುವ ಆರೋಪಗಳು ಕೇಳಿಬಂದಿವೆ. ಈ ಕುರಿತು ಚುನಾವಣ ಆಯೋಗಕ್ಕೆ ದೂರು ನೀಡುವುದಾಗಿ ಸಿಪಿಎಂ ನೇತೃತ್ವದ ಎಲ್‌ಡಿಎಫ್ ತಿಳಿಸಿದೆ. ಆದರೆ ಇದು ಸುಳ್ಳು ಆರೋಪ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣ ಆಯೋಗ ತಿಳಿಸಿದೆ. ಅಣಕು ಮತದಾನದ ವೇಳೆ ಎಲ್ಲ 190 ಇವಿಎಂಗಳಲ್ಲಿ …

Read More »

ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ಗದಗ: ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆಯಾದ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನರ ಕೊಲೆಯಾಗಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಮೊದಲನೇ ಮಹಡಿಯ ಕೊಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳ ಕೊಲೆಯಾಗಿದ್ದು, ಈ ಮೂವರು ಕೊಪ್ಪಳ ಮೂಲದವರು ಎಂದು ತಿಳಿದು …

Read More »

ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು ಉಡುಪಿ: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ಶುಕ್ರವಾರ ನಡೆದಿದೆ. ಅಂಬಾಗಿಲು – ಉಡುಪಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್ ನ ಅಡಿ ಭಾಗಕ್ಕೆ ಬೈಕ್ ಬಿದ್ದಿದೆ.   ಮೃತ ಬೈಕ್ ಸವಾರನನ್ನು ಬ್ರಹ್ಮಾವರದ ಮಟಪಾಡಿ ಮೂಲದ ಪ್ರಭಾಕರ ಆಚಾರಿ …

Read More »

ಮತದಾನದ ವೇಳೆ ಕಲ್ಲು ತೂರಾಟ. ಬಿಜೆಪಿ ನಾಯಕನಿಗೆ ಗಾಯ

ಪಶ್ಚಿಮ ಬಂಗಾಳ: 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಕ್ಷೇತ್ರಗಳಿಗೆ ಇಂದು (ಶುಕ್ರವಾರ) ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಡೆದ ವರದಿಯಾಗಿದೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನಲ್ಲಿ ಬೆಳಿಗ್ಗೆ ಮತದಾನ ಪ್ರಕ್ರಿಯೆ ನಡೆದ ಕೆಲ ಹೊತ್ತಿನಲ್ಲೇ ಹಿಂಸಾಚಾರ ಭುಗಿಲೆದ್ದಿದ್ದು, ಚಂದಮಾರಿಯ ಮತಗಟ್ಟೆಯೊಂದರ ಬಳಿ ಕಲ್ಲು ತೂರಾಟದ ವರದಿಗಳು ಹೊರಹೊಮ್ಮಿವೆ. ಈ ವೇಳೆ ಬಿಜೆಪಿ ಬೂತ್ ಅಧ್ಯಕ್ಷರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ …

Read More »

ಮಗಳ ಹತ್ಯೆ ಬಗ್ಗೆ ತಂದೆ ನಿರಂಜನ್ ಹಿರೇಮಠ ಪ್ರತಿಕ್ರಿಯೆ

ಬೆಂಗಳೂರು, ಏಪ್ರಿಲ್ 19: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಅವರ ಮಗಳು ನೇಹಾ ಹಿರೇಮಠರನ್ನು ಮುಸ್ಲಿಂ ಸಮುದಾಯದ ವ್ಯಕ್ತಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಈ ಕುರಿತು ಸ್ವತಃ ಮೃತಳ ತಂದೆ ಪ್ರತಿಕ್ರಿಯಿಸಿದ್ದಾರೆ. ಮಗಳು ಕಳೆದುಕೊಂಡ ತಂದೆಯ ಆಕ್ರಂದನ ಮುಗಿಲು ಮುಟ್ಟಿದೆ. ಈ ನೋವಿನಲ್ಲೇ ಮಗಳ ಕುರಿತು ಮಾತನಾಡಿರುವ ಅವರು, ನನ್ನ ಮಗಳ ಕೊಲೆ ಹಿಂದೆ ಲಬ್ ಜಿಹಾದ್ ಇದೆ. ಕೊಲೆಗಾರನ ಜೊತೆಗೆ ನಾಲ್ಲೈದು ಅದೇ …

Read More »

ಬಾಗಲಕೋಟೆ ಲೋಕಸಭಾ ಕ್ಷೇತ್ರ: ಮೊದಲ ಬಾರಿಗೆ ಅರಳಿದ್ದ ಕಮಲ

ಬಾಗಲಕೋಟೆ: ಕೆಲವೊಮ್ಮೆ ಸ್ವತಂತ್ರವಾಗಿ, ಕೆಲವೊಮ್ಮೆ ಜನಸಂಘಕ್ಕೆ ಬೆಂಬಲ ಕೊಟ್ಟು ಬಂದಿದ್ದ ಬಿಜೆಪಿ ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗಳ ಆರಂಭದ 54 ವರ್ಷಗಳ ನಂತರ ಮೊದಲ ಬಾರಿಗೆ ಖಾತೆ ತೆರೆಯುವಲ್ಲಿ ಯಶಸ್ವಿಯಾಯಿತು. ರಾಜ್ಯದಲ್ಲಿ ಸಂಘಟನೆ ಆರಂಭವಾಗಿ ಹಲವು ದಶಕಗಳೇ ಕಳೆದಿದ್ದವು. ವಿಧಾನಸಭೆಗೆ ಹಲವರು ಆಯ್ಕೆ ಕೂಡ ಆಗಿದ್ದರು. ಲೋಕಸಭೆಗೆ ಆಯ್ಕೆಯಾಗಿರಲಿಲ್ಲ. ಕಾಂಗ್ರೆಸ್‌ ಹಾಗೂ ಜನತಾ ಪರಿವಾರದ ನಡುವಿನ ಪೈಪೋಟಿ ಎಂದೇ ಪರಿಗಣಿಸಲಾಗುತ್ತಿತ್ತು. ಮೊದಲ ಬಾರಿಗೆ ಗೆದ್ದ ಬಿಜೆಪಿ ಅಭ್ಯರ್ಥಿ ಹಿಂದಿನ ಚುನಾವಣೆಗಳಲ್ಲಿಗಿಂತ ಹೆಚ್ಚಿನ …

Read More »

ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ

ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ ಹುಬ್ಬಳ್ಳಿ,ಏ.19- ಹಾಡಹಗಲೇ ಕಾಲೇಜು ಕ್ಯಾಂಪಸ್‍ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ, ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಪ್ರಕರಣವನ್ನು ಎಸ್‍ಐಟಿಗೆ ವಹಿಸಿ ತನಿಖೆ ನಡೆಸಬೇಕೆಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ನೇಹಾ ಪಾರ್ಥಿವ ಶರೀರ ಇರುವ ಕಿಮ್ಸ್‍ಗೆ ಭೇಟಿ ನೀಡಿ, …

Read More »