Home / ರಾಜ್ಯ (page 20)

ರಾಜ್ಯ

‘ಆರೋಗ್ಯ ಚಿಂತನ ಮಾಲಿಕೆ’ 12 ಕೃತಿಗಳ ಬಿಡುಗಡೆ

ಬೆಂಗಳೂರು: ವಸಂತ ಪ್ರಕಾಶನ ವತಿಯಿಂದ ಡಾ. ವಸುಂಧರಾ ಭೂಪತಿ ಅವರ ಸಂಪಾದಕತ್ವದಲ್ಲಿ ಮೂಡಿಬಂದಿರುವ ‘ಆರೋಗ್ಯ ಚಿಂತನ ಮಾಲಿಕೆ’ ಯ 4ನೇ ಕಂತಿನ 12 ಕೃತಿಗಳ ಲೋಕಾರ್ಪಣೆ ಮತ್ತು ಪದ್ಮಶ್ರೀ ಪುರಸ್ಕೃತ ಡಾ. ಸಿ.ಆರ್. ಚಂದ್ರಶೇಖರ್ ಅವರ ಅಭಿನಂದನಾ ಸಮಾರಂಭ ಏ. 13ರಂದು ಆಯೋಜಿಸಲಾಗಿದೆ.   ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ ಅಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಹಿತಿ ಡಾ. ಕೆ. ಮರುಳಸಿದ್ದಪ್ಪ ಕೃತಿಗಳ ಲೋಕಾರ್ಪಣೆ ಮಾಡಲಿದ್ದಾರೆ. ಲೇಖಕಿಯರಾದ …

Read More »

ತೋಟದಲ್ಲಿ ಬಾಡೂಟ ವ್ಯವಸ್ಥೆ: ಶಾಮಿಯಾನ, ಕುರ್ಚಿ ತೆಗೆಸಿದ ಅಧಿಕಾರಿಗಳು

ರಾಮನಗರ: ತಾಲ್ಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿರುವ ಜೆಡಿಎಸ್ ಅಧ್ಯಕ್ಷ ಹಾಗೂ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ರಾಜಕೀಯ ಮುಖಂಡರಿಗೆ ಬಾಡೂಟ ವ್ಯವಸ್ಥೆ ಮಾಡಲಾಗಿದೆ ಎಂಬ ಆರೋಪದ ಮೇಲೆ, ಚುನಾವಣಾ ಅಧಿಕಾರಿಗಳ ತಂಡ ಬುಧವಾರ ತೋಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.   ಮಾಗಡಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ, ಕ್ಷಿಪ್ರ ಕಾರ್ಯಪಡೆ ತಂಡ (ಎಫ್‌ಎಸ್‌ಟಿ) ಹಾಗೂ ವಿಡಿಯೊ ಪರಿವೀಕ್ಷಣಾ ತಂಡ (ವಿಡಿಯೊ ಪರಿವೀಕ್ಷಣಾ ತಂಡ) ಸ್ಥಳಕ್ಕೆ …

Read More »

ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಈ ವೆಬ್ ಗೆ ಲಾಗಿನ್ ಆಗಿ.!

ಬೆಂಗಳೂರು : ದ್ವಿತೀಯ ಪಿಯುಸಿ ಬರೆದ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಇಂದಿನಿಂದಲೇ ಅವಕಾಶ ನೀಡಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್​​​ ಪ್ರತಿಯನ್ನು ಪಡೆಯಲು ಏಪ್ರಿಲ್​ 16ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ಸ್ಕ್ಯಾನ್ಡ್​​ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಳ್ಳಲು ಏಪ್ರಿಲ್​ 19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್​ 14 ರಿಂದ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವವರು …

Read More »

ಬಾಡಿಗೆ ಮನೆ ಪ್ರವೇಶ ಮಾಡಿದ ಶೆಟ್ಟರ್

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮಾತು ಕೊಟ್ಟಂತೆ ಬೆಳಗಾವಿಯಲ್ಲಿ ಮನೆ ಮಾಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ ಕುಮಾರಸ್ವಾಮಿ ಬಡಾವಣೆಯಲ್ಲಿ ಎರಡು ಮಹಡಿಯ ಮನೆಯನ್ನು ಬಾಡಿಗೆ ಪಡೆದಿರುವ ಜಗದೀಶ್ ಶೆಟ್ಟರ್ ಯುಗಾದಿ ಹಬ್ಬದ ದಿನವೇ ಗೃಹಪ್ರವೇಶ ಮಾಡಿದ್ದಾರೆ. ಹೊಸ ಮನೆಯಲ್ಲಿ ಜಗದೀಶ್ ಶೆಟ್ಟರ್ ಕುಟುಂಬದ ಸದಸ್ಯರು ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಗದೀಶ ಶೆಟ್ಟರ್ ಅವರ ಪತ್ನಿ ಶಿಲ್ಪಾ ಶೆಟ್ಟರ್, ಸಂಸದೆ ಮಂಗಲ ಅಂಗಡಿ, ಸೊಸೆ …

Read More »

ಅವಳಿ ಜವಳಿಗೆ ಪಿಸಿಎಂಸಿಯಲ್ಲಿ ಅವಳಿ ಅಂಕ ವ್ಯತ್ಯಾಸ!

ಸಾಗರ: ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿರುವ ಅವಳಿ ಜವಳಿ ಹೆಣ್ಣು ಮಕ್ಕಳಿಬ್ಬರು ಈ ಬಾರಿ ನಡೆದ ಪಿಯುಸಿ ಪರೀಕ್ಷೆಯಲ್ಲಿ ಪಿಸಿಎಂಸಿ ವಿಷಯದಲ್ಲಿ ಅವಳಿ ಅಂಕಗಳ ವ್ಯತ್ಯಾಸದೊಂದಿಗೆ ಉತ್ತಮ ಸಾಧನೆ ಮಾಡಿರುವ ಫಲಿತಾಂಶ ಬುಧವಾರ ಲಭ್ಯವಾಗಿದೆ.

Read More »

ಹೆಬ್ಬಾಳ್ಕರ್ ಪಂಚಮಸಾಲಿ ಹೌದೊ ಅಲ್ಲವೋ ಎನ್ನುವ ಗೊಂದಲ ವಿಚಾರ ಇಡೀ ಜಗತ್ತಿಗೆ ಗೊತ್ತಿದೆ.:ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರಿಂದಲೇ ಸಮಾಜದವರು ಅವರನ್ನು ನಮ್ಮವರು ಎಂದು ಒಪ್ಪಿಕೊಂಡಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ನೀಡಿದರು. ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಚುನಾವಣೆಯ ಸಂದರ್ಭದಲ್ಲಿ ಯಾರೂ ಸಹ ವಿಷಯಾಂತರ ಮಾಡಬಾರದು. ನಮ್ಮವರು ಎನ್ನುವ ಕಾರಣಕ್ಕೆ ಮೀಸಲಾತಿ ಹೋರಾಟದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಂಡಿದ್ದರು ಎಂದು ಸಮರ್ಥಿಸಿಕೊಂಡರು. ಯಾರೊ ಒಬ್ಬರು ಏನೇನೋ ಮಾತನಾಡುತ್ತಾರೆ …

Read More »

ನಟರಾದ ಪ್ರಕಾಶ್ ರಾಜ್- ಕಮಲ್ ಹಾಸನ್ ಟೀಕೆಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಪ್ರಲ್ಹಾದ ಜೋಶಿ

ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ನಟರಾದ ಪ್ರಕಾಶ್ ರಾಜ್ ಮತ್ತು ಕಮಲ್ ಹಾಸನ್ ಅವರ ಅಭಿಪ್ರಾಯಗಳು ಮತ್ತು ಟೀಕೆಗಳನ್ನು ಗಂಭೀರವಾಗಿ ಪರಿಗಣಿಸಬಾರದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಅವರು ಮಂಗಳವಾರ ಹೇಳಿದ್ದಾರೆ. ಪ್ರಕಾಶ್ ರಾಜ್ ಮತ್ತು ಕಮಲ್ ಹಾಸನ್ ಇಬ್ಬರೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ಇತ್ತೀಚಿಗೆ ಟೀಕಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಜೋಶಿ, ‘ಆ ಹೇಳಿಕೆಗಳಲ್ಲಿ …

Read More »

ಮೋದಿ ಭಾವಚಿತ್ರ, ಹೆಸರು ಬಳಕೆಗೆ ಈಶ್ವರಪ್ಪಗೆ ನಿರ್ಬಂಧಿಸಿ : ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಬೆಂಗಳೂರು : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ನೀಡಿಲ್ಲವೆಂದು ಬಂಡಾಯ ಎದ್ದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಈ ವೇಳೆ ಅವರು ಮೋದಿ ಅವರ ಭಾವಚಿತ್ರ ಹಾಗೂ ಹೆಸರನ್ನು ಬಳಸಿದಂತೆ ನಿರ್ಬಂಧಿಸಿ ಇದೀಗ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಚುನಾವಣಾ ವೇಳೆ ಮೋದಿ ಭಾವಚಿತ್ರ ಹೆಸರು ಬಳಕೆಗೆ ಕೆಎಸ್ ಈಶ್ವರಪ್ಪಗೆ ನಿರ್ಬಂಧ ವಿಧಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಇದೀಗ …

Read More »

ಸಾಲು ಸಾಲು ಹಬ್ಬ; ಕೋಳಿ ಮಾಂಸ ದುಬಾರಿ

ಹೊಸಕೋಟೆ: ಮುನಿ ದ್ಯಾವರ, ಜಾತ್ರೆ, ಯುಗಾದಿಯ ಹೊಸ ತೊಡಕು, ನಂತರ ರಂಜಾನ್ ಹಬ್ಬಗಳು ಸಲುಸಾಲಾಗಿ ಬಂದಿರುವುದರಿಂದ ಕೋಳಿ ಮಾಂಸದ ಬೆಲೆ ದಿಢೀರನೆ ಏರಿಕೆಯಾಗಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಚಿಕ್ಕ ಬಾಯ್ಲರ್ ಕೋಳಿ ಕೆ.ಜಿಗೆ ₹170 ಇದ್ದದ್ದು, ಏಕಾಏಕಿ ₹240 ಆಗಿದೆ. ಅದೇ ರೀತಿಯಲ್ಲಿ ದೊಡ್ಡ ಬಾಯ್ಲರ್ ಕೋಳಿ ₹180ರಿಂದ ₹240ಕ್ಕೆ ಮುಟ್ಟಿದೆ. ಕೆಲವೆಡೆ ಹತ್ತಿಪ್ಪತ್ತು ರೂಪಾಯಿ ವ್ಯತ್ಯಾಸವೂ ಆಗಿದೆ. ಚಿಕ್ಕಬಾಯ್ಲರ್ ಮಾಂಸದ ಬೆಲೆ ₹70 ಹೆಚ್ಚಳವಾಗಿದ್ದರೆ, ದೊಡ್ಡ ಬಾಯ್ಲರ್ …

Read More »

ಸರ್ವಾಧಿಕಾರಿಯನ್ನು ಅಧಿಕಾರದಿಂದ ಕೆಳಗಿಳಿಸಿ- ಪ್ರಕಾಶ ರಾಜ್‌

ಸರ್ವಾಧಿಕಾರಿಯನ್ನು ಅಧಿಕಾರದಿಂದ ಕೆಳಗಿಳಿಸಿ- ಪ್ರಕಾಶ ರಾಜ್‌ ಟೀಕೆ ಬೆಳಗಾವಿ: ‘ಒಂದೇ ಪಕ್ಷ, ಒಂದೇ ಭಾಷೆ ಎನ್ನುವ ಮಹಾಪ್ರಭು ಎರಡು ನಾಲಿಗೆ ಹಾವು ಇದ್ದಂತೆ. ಸುಳ್ಳುಗಳ ಮಹಾಪುರಾಣ ಹೇಳುವ ಈ ದುರಹಂಕಾರಿ ಮತ್ತು ಸರ್ವಾಧಿಕಾರಿಯನ್ನು ಕೆಳಗಿಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ನಟ ಪ್ರಕಾಶ ರಾಜ್‌ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷವಾಗಿ ಟೀಕಿಸಿದರು.   ಕರ್ನಾಟಕದ ಸಮಸ್ತ ಜನಪರ ಸಂಘಟನೆಗಳು ಸೋಮವಾರ ಹಮ್ಮಿಕೊಂಡಿದ್ದ ‘ದೇಶ ಉಳಿಸಿ ಸಂಕಲ್ಪ ಸಮಾವೇಶ’ದಲ್ಲಿ …

Read More »