Breaking News

ರಾಜ್ಯ

ಪರಿಷತ್ ನಲ್ಲಿ ಬಹುಮತವಿಲ್ಲ,ಮುಂದೆ ನೋಡೋಣ: ಸಿಎಂ ಬೊಮ್ಮಾಯಿ

ಬೆಳಗಾವಿ : ಇಂದು ಮತಾಂತರ ವಿರೋಧಿ ಕಾಯ್ದೆ ವಿಧಾನ ಸಭೆಯಲ್ಲಿ ಪಾಸಾಗಿದ್ದು, ನಮಗೆ ಗೊತ್ತಿದೆ ಇವತ್ತಿನ ಪರಿಸ್ಥಿತಿಯಲ್ಲಿ ಪರಿಷತ್ ನಲ್ಲಿ ಬಹುಮತವಿಲ್ಲ, ಮುಂದೆ ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗುರುವಾರ ಹೇಳಿಕೆ ನೀಡಿದ್ದಾರೆ.   ಇಡೀ‌ ದಿನ ಚರ್ಚೆಗೆ ಅವಕಾಶ ನೀಡಲಾಗಿತ್ತು. ಆದರೆ ವಿಪಕ್ಷದವರು ರಾಜಕೀಯ ಭಾಷಣ ಮಾಡಿದರು . ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ, ಕಾನೂನು ಸಂವಿಧಾನ ಬದ್ದವಾಗಿದೆ. ಸಿದ್ದರಾಮಯ್ಯ ಅವರೇ ಸಚಿವ ಸಂಪುಟಕ್ಕೆ ತರಲು ಒಪ್ಪಿದ್ದರು. ಆದರೆ …

Read More »

ಕೇಂದ್ರ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

  ಅಥಣಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾರ್ವಜನಿಕರ ಸಮಸ್ಯೆಗೆ ಸ್ಪಂದನೆ ನೀಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು. ಅಥಣಿ ಪಟ್ಟಣದಲ್ಲಿ ಪುರಸಭೆ ಚುನಾವಣಾ ನಿಮಿತ್ತ ಹಮ್ಮಿಕೊಂಡಿದ್ದ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಡಿ. 27ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ, ಕಾಂಗ್ರೆಸ್ ಪಕ್ಷದ ಶಕ್ತಿ ಬಲಪಡಿಸಬೇಕು ಎಂದರು. ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಹೆಚ್ಚಿನ ಅಭ್ಯರ್ಥಿಗಳು …

Read More »

ನನ್ನದು, ಈಶ್ವರಪ್ಪನದ್ದು ಲವ್ ಆಯಂಡ್ ಹೇಟ್ ರಿಲೇಷನ್‍ಶಿಪ್ ಎಂದ ಸಿದ್ದರಾಮಯ್ಯ

ಬೆಳಗಾವಿ, : ನನ್ನದು ಹಾಗೂ ಸಚಿವ ಕೆ.ಎಸ್.ಈಶ್ವರಪ್ಪನವರದ್ದು ಪ್ರೀತಿ ಮತ್ತು ದ್ವೇಷದ ಸಂಬಂಧ (ಲವ್ ಆಂಡ್ ಹೇಟ್) ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ ಪ್ರಸಂಗ ನಡೆಯಿತು. ಗುರುವಾರ ವಿಧಾನಸಭೆಯಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕದ ಮೇಲಿನ ಚರ್ಚೆಯಲ್ಲಿ ಮಾತನಾಡುತ್ತಿದ್ದ ವೇಳೆ ನನ್ನದು ಈಶ್ವರಪ್ಪನವರ ಸಂಬಂಧ ವಿಶೇಷ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಕಾಗೇರಿ, ನಿಮ್ಮ ಹಾಗೂ ಈಶ್ವರಪ್ಪ ನಡುವಿನ ಸ್ನೇಹದ ಗುಟ್ಟೇನು ಎಂದು ಕಾಲೆಳೆದರು. ಈ ವೇಳೆ …

Read More »

ಯಡಿಯೂರಪ್ಪ ಸಿಎಂ ಆಗಿದ್ದಾಗ ಡಿಸೆಂಬರ್‌ಗೆ ಇಳಿಯುತ್ತಾರೆ ಎಂದಿದ್ದೆ, ಈಗ ಬೊಮ್ಮಾಯಿ ಅವರು ಜನವರಿಗೆ ಇಳಿಯುತ್ತಾರೆ: ಸಿ.ಎಂ. ಇಬ್ರಾಹಿಂ

ಬೆಳಗಾವಿ: ಯಡಿಯೂರಪ್ಪ ಸಿಎಂ ಆಗಿದ್ದಾಗ ಡಿಸೆಂಬರ್‌ಗೆ ಇಳಿಯುತ್ತಾರೆ ಎಂದಿದ್ದೆ, ಈಗ ಬೊಮ್ಮಾಯಿ ಅವರು ಜನವರಿಗೆ ಇಳಿಯುತ್ತಾರೆ ಎಂದು ಹೇಳಿದ್ದೇನೆ. ನಮ್ಮ ಭವಿಷ್ಯ ಸುಳ್ಳಾಗುವುದಿಲ್ಲ ಎಂದು ಕಾಂಗ್ರೆಸ್‌ ಸದಸ್ಯ ಸಿ.ಎಂ. ಇಬ್ರಾಹಿಂ ಅವರು ಹೇಳಿದ್ದಾರೆ.   ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಅವರು, ಈಗಾಗಲೇ ಮೇಲ್ನೋಟಕ್ಕೆ ಎರಡು ಮೂರು ಹೆಸರು ಕೇಳಿ ಬರುತ್ತಿವೆ. ಬೊಮ್ಮಾಯಿ ಅವರ ಕಾಲು ಚೆನ್ನಾಗಿತ್ತು. ಕೆಲಸ ಮಾಡಿ ಕುಂಟುವಂತಾಗಿದೆ. ಮುಂಬಯಿಗೆ 12 ಜನರನ್ನು ಕರೆದುಕೊಂಡು ಹೋಗಿ ವೀಡಿಯೋ ಮಾಡಿಕೊಂಡು …

Read More »

ಕುಟುಂಬ ಸಮೇತ ದುಬೈಗೆ ಯಡಿಯೂರಪ್ಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತ ದುಬೈ ಪ್ರವಾಸ ಕೈಗೊಂಡಿದ್ದು, ನಾಳೆ ದುಬೈಗೆ ತೆರಳಲಿದ್ದಾರೆ. ಮೂರು ದಿನಗಳ ಪ್ರವಾಸಕ್ಕೆ ತೆರಳಲಿರುವ ಯಡಿಯೂರಪ್ಪ ದುಬೈ ಕನ್ನಡ ಸಂಘದ ಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಿನ್ನೆ ಬೆಳಗಾವಿಯ ಸುವರ್ಣಸೌಧದಲ್ಲಿ ಯಡಿಯೂರಪ್ಪ RTPCR ಟೆಸ್ಟ್ ಮಾಡಿಸಿದ್ದಾರೆ. ಇಂದು ಸಂಜೆ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿರುವ ಅವರು ನಾಳೆ ಕುಟುಂಬ ಸಮೇತರಾಗಿ ದುಬೈಗೆ ಪ್ರಯಾಣ ಬೆಳೆಸಲಿದ್ದಾರೆನ್ನಲಾಗಿದೆ.

Read More »

ಬೀದಿಗೆ ಬಂತು ಬಾಳೆ ಬೆಳೆಗಾರರ ಬದುಕು

ಲಕ್ಷ್ಮೇಶ್ವರ: ಪ್ರಸ್ತುತ ಮಾರುಕಟ್ಟೆಯಲ್ಲಿ ಬಾಳೆಹಣ್ಣಿಗೆ ಬೇಡಿಕೆ ಇಲ್ಲದ ಕಾರಣ ಬೆಲೆ ಕುಸಿತವಾಗಿ ಬಾಳೆ ಬೆಳೆದ ರೈತರ ಬದುಕು ಬೀದಿಗೆ ಬಿದ್ದಿದೆ. ಬೆಳೆದ ಹಣ್ಣನ್ನು ತಾವೇ ಮಾರಾಟ ಮಾಡಿ ಬದುಕಿನ ಬಂಡಿ ಸಾಗಿಸುವ ಅನಿವಾರ್ಯತೆ ನಿರ್ಮಾಣವಾಗಿದೆ.   ಒಣ ಬೇಸಾಯದಿಂದ ಕೈ ಸುಟ್ಟುಕೊಳ್ಳುತ್ತಿರುವ ರೈತರು ತೋಟಗಾರಿಕೆಯತ್ತ ಚಿತ್ತ ಹರಿಸಿ ಲಾಭದಾಯಕ ಬೆಳೆಗಳನ್ನು ಬೆಳೆದು ಒಂದಿಷ್ಟು ಆರ್ಥಿಕ ಸುಧಾರಣೆಯ ಯೋಜನೆ, ಕನಸುಗಳನ್ನುರೈತರು ಕಾಣುತ್ತಿದ್ದಾರೆ. ತೋಟಗಾರಿಕೆಯಲ್ಲಿ ಬಾಳೆ,ದಾಳಿಂಬೆ, ದ್ರಾಕ್ಷಿ, ಕಬ್ಬು, ಅಡಕೆ, ಮಾವು, ಚಿಕ್ಕು ಸೇರಿಕೆಲ …

Read More »

ಅಪ್ರಾಪ್ತರು, ಎಸ್,ಎಸಿ, ಎಸ್.ಟಿ ಸಮುದಾಯದವರ ಮತಾಂತರ ಮಾಡುವುದಕ್ಕೆ ಶಿಕ್ಷೆ ವಿಧಿಸಲಾಗುವುದು.

ಬೆಂಗಳೂರು : ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆ ನಡೆಯುತ್ತಿದ್ದು, ವಿಧೇಯಕದ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ (Minister Araga Gyanendra) ಮಾಹಿತಿ ನೀಡಿದ್ದಾರೆ. ಅಪ್ರಾಪ್ತರು, ಎಸ್,ಎಸಿ, ಎಸ್.ಟಿ ಸಮುದಾಯದವರ ಮತಾಂತರ ಮಾಡುವುದಕ್ಕೆ ಶಿಕ್ಷೆ ವಿಧಿಸಲಾಗುವುದು. ಬಲವಂತದ ಮತಾಂತರ ಮಾಡಿದರೆ ಶಿಕ್ಷೆ ಜೊತೆಗೆ ದಂಡ, ಬಲವಂತದ ಮತಾಂತರ ಮಾಡಿದರೆ 3 ರಿಂದ 10 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ. ಸಾಮೂಹಿಕವಾಗಿ ಮತಾಂತರ ಮಾಡಿದರೆ …

Read More »

ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸಿದರು.

ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸಿದರು. ಬುಧವಾರ ಸಾಯಂಕಾಲ ಬಿಮ್ಸ ಆವರಣದಲ್ಲಿ ಜಿನೊಮ್ ಸಿಕ್ವೆನ್ಸಿಂಗ್ ಲ್ಯಾಬ್, ನವಿಕೃತ ಅಡುಗೆ ಕೋಣೆ, ನವಿಕೃತ ವಿಶೇಷ ಕೊಠಡಿಗಳು, ಹೊಸ ವೈದ್ಯಕೀಯ ತುರ್ತು ನಿಗಾ ಘಟಕಗಳನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಉದ್ಘಾಟಿಸಿದರು. ಈ ವೇಳೆ ಜಲಸಂಪನ್ಮೂಲ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಉತ್ತರ …

Read More »

ಬೆಳಗಾವಿಯಲ್ಲಿ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರಿಂದ ಪ್ರತಿಭಟನೆ

ಬೆಳಗಾವಿಯ ಸುವರ್ಣ ಗಾರ್ಡನ್‍ನಲ್ಲಿ ಪ್ರತಿಭಟನೆ ನಡೆಸಿದ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರು ಸೇವಾ ಭದ್ರತೆ, ಹೊರ ಸಿಬ್ಬಂದಿಗಳ ಬಾಕಿ ವೇತನ ಮತ್ತು ಲಾಕ್‍ಡೌನ್ ಅವಧಿಯ ವೇತನ ಕೂಡಲೇ ಸಂದಾಯ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ನಮ್ಮ ಇನ್‍ನ್ಯೂಸ್ ಜೊತೆಗೆ ಮಾತನಾಡಿದ ಸಂಘದ ಮುಖಂಡ ಮರಡಿ ಎಮ್. ಚಂಬಯ್ಯನಾಯ್ಕ ಸೇವೆಯಿಂದ ಬಿಡುಗಡೆಗೊಳಿಸಲಾದ ಹಾಸ್ಟೆಲ್ ಹೊರ ಗುತ್ತಿಗೆ …

Read More »

ಶೀಘ್ರವೇ ರಾಜ್ಯದಲ್ಲಿ `ಉದ್ಯೋಗ ನೀತಿ’ ಜಾರಿ – ಸಿಎಂ ಬೊಮ್ಮಾಯಿ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅತ್ಯಂತ ರಚನಾತ್ಮಕವಾದ `ಉದ್ಯೋಗ ನೀತಿ’ಯನ್ನು ( Udyoga Neeti ) ಜಾರಿಗೆ ತರಲಾಗುವುದು. ಈ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ಕೊಡುತ್ತಿದ್ದು, ನಿರುದ್ಯೋಗ ಸಮಸ್ಯೆ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದ್ದಾರೆ.   ಇಲ್ಲಿನ ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ `ಸರ್ವರಿಗೂ ಉದ್ಯೋಗ’ ಕಾರ್ಯಕ್ರಮ ಲೋಕಾರ್ಪಣೆ ಮತ್ತು `ಉದ್ಯೋಗ ಮೇಳ’ವನ್ನು …

Read More »