Breaking News

ರಾಜ್ಯ

ಒಮಿಕ್ರಾನ್ ಭೀತಿ.. ಮುಂಜಾಗ್ರತಾ ಕ್ರಮ, ಚಟುವಟಿಕೆ ನಿರ್ಬಂಧ ಕುರಿತು ಇಂದು ನಿರ್ಧಾರ- ಸಚಿವ ಸುಧಾಕರ್​

ಬೆಂಗಳೂರು: ಹೊಸ ಪ್ರಬೇಧದ ಕೊರೊನಾ ವೈರಸ್​ ಭೀತಿ ಹಿನ್ನೆಲೆಯಲ್ಲಿ ಯಾವ ರೀತಿ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಚಟುವಟಿಕೆಗಳ ಮೇಲೆ ನಿರ್ಬಂಧದ ಬಗ್ಗೆ ಇಂದು ನಡೆಯುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿವಿಧ ದೇಶಗಳಲ್ಲಿ ಹೊಸ ಪ್ರಬೇಧದ ವೈರಸ್ ಒಮಿಕ್ರೋನ್​ ಪತ್ತೆಯಾಗಿದೆ. ಬೆಂಗಳೂರು, ಮಂಗಳೂರು ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಯಾವೆಲ್ಲಾ ರೀತಿಯ ನಿರ್ಬಂಧ ಹೇರಬೇಕು. ಅಲ್ಲದೇ …

Read More »

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ರಾಜಧಾನಿಯ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಅಕ್ರಮ ಚಟುವಟಿಕೆ ನಡೆಸುತ್ತಿರುವ ಆರೋಪದ ಮೇಲೆ ಮತ್ತು ಮೊಬೈಲ್, ಗಾಂಜಾ, ಇತರೆ ವಸ್ತುಗಳ ಪೂರೈಕೆ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈ ದಾಳಿ ನಡೆಸಿದ್ದಾರೆ. ಸಿಸಿಬಿ ಪೊಲೀಸರ ದಾಳಿ ಇನ್ನೂ ಮುಂದುವರೆದಿದೆ.

Read More »

ಕಚೇರಿಯಲ್ಲೇ ತಬ್ಕೊಂಡು ಪೀಡಿಸಿದ್ರೂ 9 ಮಹಿಳೆಯರಲ್ಲಿ ಯಾರೊಬ್ಬರೂ ಬಾಯ್ಬಿಟ್ಟಿಲ್ಲ ಏಕೆ?

ಮಂಗಳೂರು: ಆಯುಷ್​ ಇಲಾಖೆ ವೈದ್ಯಾಧಿಕಾರಿ ಡಾ.ರತ್ನಾಕರ್​ನ ಕಾಮಪುರಾಣದ ಅಸಹ್ಯ ಉಟ್ಟಿಸೋ ದೃಶ್ಯಗಳು ವೈರಲ್​ ಆಗಿದ್ದು, ಆರೋಗ್ಯ ಕಚೇರಿಯಲ್ಲೇ ಹಲವು ದಿನದಿಂದ ಚೆಲ್ಲಾಟ ನಡೆಸಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದರೂ ತಡವಾಗಿ ಪ್ರಕರಣ ಬೆಳಕಿಗೆ ಬಂದಿದ್ದೇಕೆ? ಈ ಹಿಂದೆಯೇ ವೈದ್ಯ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿ ಜತೆ ರತ್ನಾಕರ್​ ನಡೆದುಕೊಳ್ಳುತ್ತಿರುವ ರೀತಿಯ ವಿರುದ್ಧ ಅನಾಮಿಕ ಪತ್ರವೊಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಬಂದಿತ್ತು. ಆಗಲೂ ಸಂತ್ರಸ್ತ ಮಹಿಳೆಯರೂ ಬಾಯ್ಬಿಟ್ಟಿರಲಿಲ್ಲ ಏಕೆ? ರತ್ನಾಕರ್​ ಕಂಡರೆ ಸಂತ್ರಸ್ತೆಯರಿಗೆ …

Read More »

ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ತಂಡವೊಂದರ ಪಾಲಾಗಲಿದ್ದಾರೆ ಕನ್ನಡಿಗ ಕೆಎಲ್ ರಾಹುಲ್..?

15ನೇ ಆವೃತ್ತಿಯ ಐಪಿಎಲ್‌ಗೆ ಆಟಗಾರರ ರಿಟೇನ್ ಪಟ್ಟಿ ಅಂತಿಮ ಹಂತದಲ್ಲಿದೆ. ಹಾಲಿ 8 ತಂಡಗಳಿಗೆ ತಲಾ 4 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಆಟಗಾರರು ಬೇಕಿದ್ದರಷ್ಟೇ ತಮ್ಮ ಫ್ರಾಂಚೈಸಿಗಳೊಂದಿಗೆ ಒಪ್ಪಂದ ಮುಂದುವರಿಸಬಹುದು. ಇಲ್ಲವಾದರೆ ಹರಾಜಿಗೆ ದಾಖಲಿಸಬಹುದು. ಈ ಬಾರಿ ಲಖನೌ ಹಾಗೂ ಅಹಮದಾಬಾದ್ ತಂಡಗಳು ಕೂಡ ಸೇರ್ಪಡೆಗೊಂಡಿದ್ದು, ಸ್ಟಾರ್ ಆಟಗಾರರಿಗೆ ಮತ್ತಷ್ಟು ಡಿಮ್ಯಾಂಡ್ ಹೆಚ್ಚಾಗಿದೆ. ಕಳೆದೆರಡು ಆವೃತ್ತಿಗಳಲ್ಲಿ ಪಂಜಾಬ್ ಕಿಂಗ್ಸ್ ತಂಡ ಮುನ್ನಡೆಸಿದ್ದ ಕನ್ನಡಿಗ ಕೆಎಲ್ ರಾಹುಲ್ ತಂಡದಿಂದ …

Read More »

ಕುಷ್ಟಗಿ: ಪೊಲೀಸರ ಬಲೆಗೆ ಬಿದ್ದ ಟ್ರಾಲಿ ಸ್ಪೆಷಲಿಸ್ಟ್ ಕಳ್ಳರ ಗ್ಯಾಂಗ್

ಕುಷ್ಟಗಿ: ನಿಲ್ಲಿಸಿದ್ದ ರೈತರ ಟ್ರ್ಯಾಕ್ಟರ್ ಟ್ರಾಲಿ ಗಳನ್ನು ಕದ್ದು, ಮಾರುತ್ತಿದ್ದ ಟ್ರಾಲಿ ಸ್ಪೆಷಲಿಸ್ಟ್ ಕಳ್ಳರ ಗ್ಯಾಂಗನ್ನು ಕುಷ್ಟಗಿ ಪೊಲೀಸರು ಬಂಧಿಸಿದ್ದು, ಮೂರು ಟ್ರ್ಯಾಕ್ಟರ್ ಟ್ರಾಲಿ ವಶಪಡಿಸಿಕೊಂಡಿದ್ದಾರೆ. ಕಳೆದ ನ.26ರಂದು ಸಂಗನಾಳ ಗ್ರಾಮದ ಮುದಕನಗೌಡ ಭರಮಗೌಡ ಗೌಡ್ರು ಅವರು, ಗ್ರಾಮದ ನಿರುಪಾದೇಶ್ವರ ಮಠದ ಜಾಗದಲ್ಲಿ ನಿಲ್ಲಿಸಿದ್ದ ಟ್ರಾಲಿ ಕಳುವಾಗಿರುವ ಬಗ್ಗೆ ದೂರು ನೀಡಿದ್ದರು. ತಾವರಗೇರಾ ಪಿಎಸೈ ವೈಶಾಲಿ ಝಳಕಿ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ನ.28ರಂದು ನಾಲ್ವರು ಸ್ಪೆಷಲಿಸ್ಟ್ ಕಳ್ಳರು ಟ್ರಾಲಿ ತೆಗೆದುಕೊಂಡು ಹೋಗುವಾಗ ಪೊಲೀಸರು …

Read More »

4 ಬಾರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ನಾಲ್ಕು ಬಾರಿಯೂ ಅವನ್ಯಾವನ್ನೋ ಕರೆದುಕೊಂಡು ಬಾ. ಅವನಿಗೆ ದುಡ್ಡು ಕೊಡು ಹೀಗೆ ಇದೇ ಆಯ್ತು

ಕೊಪ್ಪಳ: ಕರ್ನಾಟಕ ರಾಜ್ಯದಲ್ಲಿ 4 ಬಾರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಆದ್ರೆ ನಮ್ಮ ಗ್ರಹಚಾರ ಸರಿ ಇಲ್ಲ, ಪೂರ್ಣ ಬಹುಮತ ಸಿಗಲಿಲ್ಲ. ನಾಲ್ಕು ಬಾರಿಯೂ ನಮಗೆ ಪೂರ್ಣ ಬಹುಮತ ಸಿಗಲೇ ಇಲ್ಲ. ಜನ ಆಡಳಿತ ಮಾಡಿ ಅಂತಾರೆ, ಆದ್ರೆ ಒಂದು ಸ್ಥಾನ ಕಡಿಮೆ, ನಾಲ್ಕು ಸ್ಥಾನ ಕಡಿಮೆ ಬರುತ್ತೆ, 4 ಬಾರಿಯೂ ಹಾಗೇ ಆಯ್ತು. ನಾಲ್ಕು ಬಾರಿಯೂ ಅವನ್ಯಾವನ್ನೋ ಕರೆದುಕೊಂಡು ಬಾ. ಅವನಿಗೆ ದುಡ್ಡು ಕೊಡು ಹೀಗೆ ಇದೇ ಆಯ್ತು …

Read More »

ಲಾಕ್ ಡೌನ್, ಶಾಲಾ, ಕಾಲೇಜು ಮುಚ್ಚುವ ಕುರಿತು ಸಿಎ ಹೇಳಿದ್ದೇನು?

ದಾವಣಗೆರೆ : ಸರ್ಕಾರದ ಮುಂದೆ ಲಾಕ್ ಡೌನ್ ಕುರಿತು ಯಾವುದೇ ಪ್ರಸ್ತಾವನೆ ಇಲ್ಲ. ಶಾಲಾ -ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೂಪಾಂತರಿ ವೈರಸ್ ಒಮಿಕ್ರಾನ್ ಕುರಿತು ಜನತೆ ಭಯಪಡದೆ, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.   ರೂಪಾಂತರಿ ವೈರಸ್ ಕಂಡು ಬಂದಿರುವ ದೇಶಗಳಿಂದ ಬಂದಿರುವವರ ಮೇಲೆ ನಿಗಾ ಇರಿಸಲಾಗಿದೆ. …

Read More »

ಶಿಕ್ಷಕ ಹುದ್ದೆ ನಿರೀಕ್ಷಿತರಿಗೆ ಗುಡ್‌ ನ್ಯೂಸ್‌ : ವಿವಿ, ಕಾಲೇಜುಗಳಲ್ಲಿ ಖಾಲಿ ಇರುವ ಅಧ್ಯಾಪಕರ ನೇಮಕಾತಿಗೆ ʼUGCʼ ಅಧಿಸೂಚನೆ

ದೇಶಾದ್ಯಂತ ಇರುವ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು. ವಿಶ್ವವಿದ್ಯಾನಿಲಯ ಅನುದಾನ ಆಯೋಗವು ದೇಶಾದ್ಯಂತ ವಿಶ್ವವಿದ್ಯಾಲಯಗಳ ಉಪಕುಲಪತಿಗಳು, ಸಂಸ್ಥೆಗಳು ಮತ್ತು ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯುಜಿಸಿ ಹೊರಡಿಸಿರುವ ನೋಟಿಸ್ ಪ್ರಕಾರ, ಅಧ್ಯಾಪಕರಲ್ಲಿ (Faculty) ಕಾಯಂ ನೇಮಕಾತಿಗೆ ಸಂಬಂಧಿಸಿದಂತೆ ಸೂಚನೆಗಳನ್ನ ನೀಡಲಾಗಿದೆ. ಏಪ್ರಿಲ್ 1, 2021ರ ಪ್ರಕಾರ, ದೆಹಲಿ ವಿಶ್ವವಿದ್ಯಾನಿಲಯದಲ್ಲಿ (DU) …

Read More »

LPG ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ 900 ರೂಪಾಯಿಗಲ್ಲ 587ಕ್ಕೆ ಸಿಗಲಿದೆ ಸಿಲಿಂಡರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಜನ ಸಾಮಾನ್ಯರನ್ನ ಬೆಚ್ಚಿ ಬೀಳಿಸಿದೆ. ಅಗತ್ಯ ವಸ್ತುಗಳ ಬೆಲೆಯೊಂದಿಗೆ ಪೆಟ್ರೋಲ್, ಡೀಸೆಲ್ ಬೆಲೆಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಜೊತೆಗೆ ಅಡುಗೆ ಅನಿಲದ ಬೆಲೆಯೂ ಏರಿಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಬೆಲೆ ಸಾರ್ವಕಾಲಿಕ ಗರಿಷ್ಠ 900 ರೂ.ಗೆ ಏರಿಕೆಯಾಗಿದೆ. ಅದ್ರಂತೆ, ದಿನ ಬಳಕೆಯ ವಸ್ತುಗಳ ಜತೆಗೆ 900 ರೂ.ಗೆ ಗ್ಯಾಸ್ ಸಿಲಿಂಡರ್ ಖರೀದಿಸುವುದು ಜನ ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಇನ್ನು ಕೆಲ ದಿನಗಳಿಂದ ಸರ್ಕಾರ ನೀಡುವ ಗ್ಯಾಸ್ …

Read More »

ಲೋಕಸಭೆ ಬೆನ್ನಲ್ಲೇ ರಾಜ್ಯಸಭೆಯಲ್ಲೂ ವಿವಾದಿತ 3 ಕೃಷಿ ಕಾಯ್ದೆ ವಾಪಸ್ -​ಸಂಭ್ರಮದಲ್ಲಿ ಮುಳುಗಿದ ರೈತರು 

ನವದೆಹಲಿ: ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳನ್ನು ಕೊನೆಗೂ ಇಂದಿನ ರಾಜ್ಯಸಭೆ ಸಂಸತ್ ಕಲಾಪದಲ್ಲಿ ವಾಪಸ್ ಪಡೆಯಲಾಗಿದೆ. ಈ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದಂತೆ ಈಗ ಕಲಾಪದಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​​, ವಿವಾದಿತ ಮೂರು ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯುವ ಸಂಬಂಧ ಬಿಲ್ ಮಂಡಿಸಿದರು. ರೈತರ ಉತ್ಪಾದನೆ ವ್ಯಾಪಾರ …

Read More »