ನವದೆಹಲಿ: ಕೊರೋನಾ ಸಂಕಷ್ಟದ ಕಾರಣದಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ 5 ಕೆಜಿ ಉಚಿತ ಪಡಿತರ ವಿತರಿಸುವ ಯೋಜನೆಯನ್ನು ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಿಸಲಾಗಿದೆ. ಗರಿಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಪಡಿತರ ಫಲಾನುಭವಿಗಳಿಗೆ ಉಚಿತ ಪಡಿತರ ನೀಡಲಾಗುತ್ತದೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕಾಗಿ 53,344 ಕೋಟಿ ರೂ. ವೆಚ್ಚ ಮಾಡಲಾಗುವುದು. ಇದರೊಂದಿಗೆ ಉಚಿತ ಪಡಿತರ ವಿತರಣೆ ಮಾಡಲು …
Read More »ಇಂದು ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆ ಪ್ರವಾಸ : ಸಂವಿಧಾನ ದಿವಸ ಆಚರಣೆಯಲ್ಲಿ ಭಾಗಿ
ದಾವಣಗೆರೆ : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾವಣಗೆರೆಗೆ ಭೇಟಿ ನೀಡಲಿದ್ದಾರೆ.ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂವಿಧಾನ ದಿವಸ ಆಚರಣೆ ಅಂಗವಾಗಿ ಭಾರತ ಸಂವಿಧಾನದ ಪ್ರಸ್ತಾವನೆ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮುಖ್ಯಮಂತ್ರಿಗಳು ನ.26 ರ ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ತುಮಕೂರು-ಚಿತ್ರದುರ್ಗ ಮಾರ್ಗವಾಗಿ ಬೆಳಿಗ್ಗೆ 10.30 ಕ್ಕೆ ದಾವಣಗೆರೆಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 11.30 ಕ್ಕೆ ನಗರದ ಹದಡಿ ರಸ್ತೆಯಲ್ಲಿರುವ ಎಸ್.ಎಸ್.ಕಲ್ಯಾಣ ಮಂಟಪದಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ ಶಾಸಕರಾದ …
Read More »150 ರೂ. ಗಡಿ ದಾಟಿದ ಟೊಮೆಟೋ ದರ!
ದಕ್ಷಿಣ ಭಾರತದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಚೆನ್ನೈನಲ್ಲಿ ಪ್ರತಿ ಕೆಜಿ ಟೊಮೊಟೋ ದರವನ್ನು 150 ರೂ..ಗೆ ಮುಟ್ಟಿದೆ. ಇತ್ತ ಕರ್ನಾಟಕದಲ್ಲಿ ಟೊಮೆಟೋ ಆಗಮನ ಸ್ಥಗಿತವಾಗಿರುವುದು, ಕೃಷ್ಣಗಿರಿಯಲ್ಲಿ ಮಳೆಯಿಂದಾಗಿ ಬೆಳೆ ನಷ್ಟವಾದ ಕಾರಣ, ಬೇಡಿಕೆಗೆ ತಕ್ಕಂತೆ ಪೂರೈಕೆ ಆಗುತ್ತಿಲ್ಲ. ಮಳೆ ಆರಂಭಕ್ಕಿಂತ ಮೊದಲು ಪ್ರತೀ ಕೆಜಿ ಟೊಮ್ಯಾಟೊಗೆ ೨೦ ರು. ನಂತೆ ಮಾರಾಟ ಮಾಡಲಾಗುತಿತ್ತು. ಏಕಾಏಕಿ ಆರಂಭವಾದ ಮಳೆ ತರಕಾರಿ ಬೆಲೆಗಳನ್ನು ಗಗನಕ್ಕೆ ಏರುವಂತೆ ಮಾಡಿತ್ತು. ಇದರಿಂದ …
Read More »ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಶಬ್ಧಕೇಳಿಬಂದಿದ್ದು, ಹಲವೆಡೆ ಭೂಮಿ ಕಂಪಿಸಿದ ಅನುಭವ.
ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಶಬ್ಧವೊಂದು ಕೇಳಿಬಂದಿದ್ದು, ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಆರ್.ಆರ್.ನಗರ, ಮಾಗಡಿ, ಹೆಮ್ಮಿಗೆಪುರ, ಕಗ್ಗಲಿಪುರ, ಕೆಂಗೇರಿ, ಬಿಡದಿ ಭಾಗಗಳಲ್ಲಿ ಹಲವೆಡೆ ಭೂಗರ್ಭದೊಳಗಿಂದ ಭಾರಿ ಶಬ್ಧ ಕೇಳಿಬಂದಿದ್ದು, ಕೆಲಕಾಲ ಭೂಮಿ ಕಂಪಿಸಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಜನರು ಆತಂಕಕ್ಕೀಡಾಗಿ ಮನೆಯಿಂದ ಹೊರಗೋಡಿ ಬಂದ ಘಟನೆ ನಡೆದಿದೆ. ಮಧ್ಯಾಹ್ನ 12.15ರ ಸುಮಾರಿಗೆ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದೆ. ಬೆಂಗಳೂರಿನ ಹಲವೆಡೆ ಹಾಗೂ ರಾಮನಗರದಲ್ಲಿ ಭೂಕಂಪನದ ಅನುಭವವಾಗಿದೆ. ಆದರೆ ರಿಕ್ಟರ್ …
Read More »ಮೋದಿ ಸರ್ಕಾರಕ್ಕೆ ಜ.26ರವರೆಗೆ ಗಡುವು: MSPಗಾಗಿ ಒತ್ತಾಯ
ನವದೆಹಲಿ ನವೆಂಬರ್ 26: ದೆಹಲಿ ಗಡಿ ಭಾಗದಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಬೇಡಿಕೆ ಈಡೇರಿಕೆಗಾಗಿ ಕೇಂದ್ರ ಸರ್ಕಾರಕ್ಕೆ ರೈತರು ಗಡುವು ಕೊಟ್ಟಿದ್ದಾರೆ. ಸಂಸತ್ತಿನ ಅಧಿವೇಶನ ನಡೆಯುವವರೆಗೂ ಸರ್ಕಾರಕ್ಕೆ ಯೋಚಿಸಲು ಮತ್ತು ಅರ್ಥಮಾಡಿಕೊಳ್ಳಲು ಸಮಯವಿದೆ. ಕೇಂದ್ರ ಸರ್ಕಾರಕ್ಕೆ ಜನವರಿ 26 ರವರೆಗೆ ಬೇಡಿಕೆ ಈಡೇರಿಕೆಗೆ ಸಮಯ ನೀಡಿದ್ದೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ …
Read More »ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ವಿಪ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ
ಬೆಳಗಾವಿ : ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೇಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರಾತ್ರಿ ಸಭೆ ನಡೆಸಲಾಯಿತು. ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅವರುಗಳು ಪಾಲ್ಗೊಂಡು …
Read More »ಸ್ಥಳೀಯ ವ್ಯಾಪಾರಿಗಳ ಬೇಡಿಕೆಗೆ ಪಟ್ಟಣದ ವಿವಿಧ ಸಂಘಟನೆಗಳು ಸ್ವಯಂಪ್ರೇರಿತವಾಗಿ ಬೆಂಬಲ ನೀಡಿದ್ದರಿಂದ ಬಂದ್ ಶಾಂತಿಯುತವಾಗಿ ಸಂಪನ್ನಗೊಂಡಿತು.
ಖಾನಾಪುರ: ಪರಜಿಲ್ಲೆ, ಪರರಾಜ್ಯಗಳಿಂದ ಬಂದು ಪಟ್ಟಣದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವವರಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಖಾನಾಪುರ ಶಹರ ವ್ಯಾಪಾರಸ್ಥರ ಒಕ್ಕೂಟ ಶುಕ್ರವಾರ ಕರೆ ನೀಡಿದ್ದ ಖಾನಾಪುರ ಬಂದ್ ಸಂಪೂರ್ಣ ಯಶಸ್ವಿಯಾಗಿ ಸಂಪನ್ನಗೊಂಡಿತು. ಸ್ಥಳೀಯ ವ್ಯಾಪಾರಿಗಳ ಬೇಡಿಕೆಗೆ ಪಟ್ಟಣದ ವಿವಿಧ ಸಂಘಟನೆಗಳು ಸ್ವಯಂಪ್ರೇರಿತವಾಗಿ ಬೆಂಬಲ ನೀಡಿದ್ದರಿಂದ ಬಂದ್ ಶಾಂತಿಯುತವಾಗಿ ಸಂಪನ್ನಗೊಂಡಿತು. ಬಂದ್ ಅಂಗವಾಗಿ ಔಷಧ ಅಂಗಡಿಗಳು, ಪೆಟ್ರೋಲ್ ಬಂಕ್ ಹೊರತುಪಡಿಸಿ ಉಳಿದ ಎಲ್ಲ ಬಗೆಯ ವ್ಯಾಪಾರ ವಹಿವಾಟುಗಳು ನಡೆಯಲಿಲ್ಲ. ಹಣ್ಣು, ತರಕಾರಿ …
Read More »ಛೋಟಾ ಸಾಹುಕಾರರ ಪ್ರಚಾರ ಇಂದಿನಿಂದ ಪ್ರಾರಂಭ ,ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಕೂಡ ಭೇಟಿ ನೀಡಿದ ಲಖನ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಲೋಕಸಭೆ ಚುನಾವಣೆ ಫುಲ್ ಜೋರಾಗಿ ಪ್ರಚಾರ ನಡೆಸಿದ್ದಾರೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಿನ್ನೆ ವರೆಗೂ ಸುಮ್ಮನಿದ್ದ ಛೋಟಾ ಸಾಹುಕಾರ ಇಂದಿನಿಂದ ಪ್ರಚಾರ ಪ್ರಾರಂಭ ಮಾಡಿದ್ದಾರೆ ಯರಗಟ್ಟಿ ಯಲ್ಲಿ ಕಾರ್ಯಕರ್ತರಿಗೆ ಭೇಟಿಯಾದಲಖನ ಜಾರಕಿಹೊಳಿ ಅವರು ಎಲ್ಲ ಕಾರ್ಯ ಕರ್ತರನ್ನು ಒಗ್ಗೂಡಿಸಿ ಮಾತ ಯಾಚನೆ ಮಾಡಿದ್ದಾರೆ . ಬಹುಶಃ ಲಖನ ಜಾರಕಿಹೊಳಿ ಅವರ ನಾಮ ನಿರ್ದೇಶನ ಮಾಡಲು ಬಂದ ದಿನವೇ ಅವರು ಗೆದ್ದ ಹಾಗೆ ಎಂದು ಎಲ್ಲ ಅಭಿಮಾನಿ …
Read More »ಸುಳ್ಳು ಹೇಳುವುದರಲ್ಲಿ ಬಿಜೆಪಿ ನಂಬರ್ 1: ಸತೀಶ್ ಜಾರಕಿಹೊಳಿ
ಬೈಲಹೊಂಗಲ : “ಬಿಜೆಪಿ ಸರ್ಕಾರ ಮೂರು ವರ್ಷದಲ್ಲಿ ಒಂದೇ ಒಂದು ಮನೆ ನಿರ್ಮಾಣ ಮಾಡಲಿಕ್ಕೆ ಆಗಿಲ್ಲ. ಆದರೆ ಚುನಾವಣೆ ಸಂದರ್ಭದಲ್ಲಿ ಸಾವಿರಾರು ಮನೆಗಳನ್ನು ನೀಡಿದ್ದೇವೆಂದು ಸುಳ್ಳಿನ ಸರಮಾಲೆಯನ್ನೇ ಕಟ್ಟುತ್ತಿದ್ದಾರೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ವಿಧಾನಪರಿಷತ್ ಚುನಾವಣೆಯ ಪ್ರಚಾರಾರ್ಥವಾಗಿ ಬೈಲಹೊಂಗಲ ಮತಕ್ಷೇತ್ರದ ಗ್ರಾಮ ಪಂಚಾಯ್ತಿ ಚುನಾಯಿತ ಜನಪ್ರತಿನಿಧಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿ, ” ಈಗಿರುವ ರಸ್ತೆಗಳು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿದ್ದವು. ಬಿಜೆಪಿ ಸರ್ಕಾರ …
Read More »ಹೆಬ್ಬಾಳ್ಕರ್-ಜಾರಕಿಹೊಳಿ ಕುಟುಂಬಕ್ಕೆ ಪ್ರತಿಷ್ಠೆಯಾದ ಪರಿಷತ್ ಚುನಾವಣೆ
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿ ಜಿಲ್ಲಾ ರಾಜಕಾರಣದ ಕಡು ವೈರಿಗಳೆಂದೇ ಬಿಂಬಿತರಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಮತ್ತೊಂದು ಸೆಣಸಾಟಕ್ಕೆ ಪರಿಷತ್ ಚುನಾವಣೆ ಕಣ ವೇದಿಕೆಯಾಗಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಕಾಂಗ್ರೆಸ್ ಅಭ್ಯರ್ಥಿ ಆಗಿ ಕಣಕ್ಕಿಳಿದಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿ ಆಗಿ ಕಣದಲ್ಲಿದ್ದಾರೆ. ತಮ್ಮ ಸಹೋದರರನ್ನು ಗೆಲ್ಲಿಸಲೇಬೇಕು ಎಂದು ಪಣತೊಟ್ಟಿರುವ …
Read More »
Laxmi News 24×7