Breaking News

ರಾಜ್ಯ

ಪರಿಷತ್ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ-ಜಿಲ್ಲಾಧಿಕಾರಿ ಆರ್ ವೆಂಕಟೇಶ್‍ಕುಮಾರ್

ಜಿಲ್ಲೆಯಲ್ಲಿ ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್ ವೆಂಕಟೇಶಕುಮಾರ್ ತಿಳಿಸಿದ್ದಾರೆ. ಇಂದು ತಮ್ಮ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪರಿಷತ್ ಚುನಾವಣೆಗೆ ಈಗಾಗಲೇ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 8875 ಮರದಾರರು ಅಂತಿಮ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ. ಇನ್ನು ಚುನಾವಣೆಗೆ 511 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದ್ದು ಪ್ರತಿ ಗ್ರಾಮ ಪಂಚಾಯತ ಹಾಗೂ ನಗರ ಸ್ಥಳೀಯ ಆಡಳಿತ …

Read More »

ಬಾವನ ಜೊತೆಯೇ ಲವ್ವಿ ಡವ್ವಿ: ಗಂಡನಿಗೆ ಪ್ರಸಾದ ಎಂದು ನಿದ್ದೆ ಮಾತ್ರೆ! ಕತ್ತು ಹಿಸುಕುವಾಗ ಎದ್ದ ಗಂಡ, ಮುಂದೆ ಆಗಿದ್ದೇನು?

ಯಾದಗಿರಿ(ನ.21): ನಿದ್ದೆ ಮಾತ್ರೆ ನೀಡಿ ಹೆಂಡತಿಯೇ ಗಂಡನನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೊವಿನಹಳ್ಳಿಯಲ್ಲಿ ನಡೆದಿದೆ. ಪಾಪಿ ಪತ್ನಿ ತನ್ನ ಅಕ್ರಮ ಸಂಬಂಧ ಮುಚ್ಚಿ ಹಾಕಲು ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾಳೆ ಎಂದು ತಿಳಿದು ಬಂದಿದೆ.   ಚಂದ್ರಕಲಾ ತನ್ನ ಪ್ರಿಯತಮ ಬಸನಗೌಡನ ಜೊತೆ ಸೇರಿ ತನ್ನ ಪತಿ ವಿಶ್ವನಾಥರಡಿಯನ್ನು ಕೊಲೆ ಮಾಡಲು ಯತ್ನಿಸಿದ ಆರೋಪಿ. ಚಂದ್ರಕಲಾ ತನ್ನ ಸಹೋದರಿಯ ಪತಿಯೊಂದಿಗೆ ಅನೈತಿಕ ಸಂಬಂಧ …

Read More »

ಭಯಾನಕ ಮಳೆಯಲ್ಲಿ ಪುನೀತ್‌ ಬ್ಯಾನರ್‌ ಎದುರು ಕೈಮುಗಿದು ಕುಳಿತ ಅಭಿಮಾನಿ- ವಿಡಿಯೋ ವೈರಲ್‌

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಎಲ್ಲರನ್ನೂ ಅಗಲಿ ತಿಂಗಳಾಗುತ್ತ ಬಂದರೂ ಅವರ ಸಾವಿನ ಬಗ್ಗೆ ಇದುವರೆಗೂ ಹಲವು ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವೇ ಆಗುತ್ತಿಲ್ಲ. ಅಂಥ ಬೆಲೆ ಕಟ್ಟಲಾಗದ ಅಭಿಮಾನ ಅವರ ಮೇಲಿದೆ. ಇದಾಗಲೇ ಸಿನಿಕ್ಷೇತ್ರದವರು, ಕುಟುಂಬಸ್ಥರು ಸೇರಿದಂತೆ ಸಾಮಾನ್ಯ ಜನರು ಕೂಡ ಅಪ್ಪುವಿನ ಜತೆಗಿನ ತಮ್ಮ ಒಡನಾಟವನ್ನು ನೆನಪಿಸಿಕೊಳ್ಳುತ್ತಿರುವ ಬೆನ್ನಲ್ಲೇ ಪುನೀತ್‌ ಅವರ ಸಮಾಧಿಯ ಮುಂದೆ ಬಂದು ರೋಧಿಸುತ್ತಿರುವವರೂ ಹಲವರು.   ಇದೀಗ ಅಭಿಮಾನಿಯೊಬ್ಬ ಸುರಿಯುವ ಮಳೆಯನ್ನೂ ಲೆಕ್ಕಿಸದೇ ಪುನೀತ್​ ಅವರ …

Read More »

ನಿಜಕ್ಕೂ ನಿಮಗೆ ತಾಕತ್ತಿದ್ರೆ, ಪ್ರತಾಪ ಸಿಂಹಗೆ ಹೊಡೀರಿ: ಶ್ರೀ ಸಿದ್ದಲಿಂಗ ಸ್ವಾಮೀಜಿ

ಕಲಬುರಗಿ: ರಾಜಕೀಯ ನಾಯಕರಿಬ್ಬರ ವಿಚಾರದಲ್ಲಿ ಸ್ವಾಮೀಜಿಗಳಿಬ್ಬರ ನಡುವೆ ವಾಕ್ಸಮರ ಏರ್ಪಟ್ಟಿದೆ. ಬಿಟ್​ಕಾಯಿನ್ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ನಡೆದ ಮಾತಿನ ಜಟಾಪಟಿ ಈಗ ಕಲಬುರಗಿಯ ಸುಲಫಲ ಮಠದ ಶ್ರೀ ಮಹಾಂತ ಸ್ವಾಮೀಜಿ ಮತ್ತು ಆಂದೋಲಾ ಮಠದ ಸಿದ್ದಲಿಂಗ ಸ್ವಾಮಿಗಳ ನಡುವೆ ನಡೆದಿದೆ.   ಪ್ರಿಯಾಂಕ್ ಖರ್ಗೆ ಗಂಡಸೋ, ಹೆಂಗಸೋ ಎಂದಿರುವ ಪ್ರತಾಪ ಸಿಂಹಗೆ ಮೈಸೂರಿಗೆ ತೆರಳಿ ಚಡ್ಡಿ ಬಿಚ್ಚಿ ಹೊಡಿತೀವಿ ಎಂದು ಸುಲಫಲ ಮಠದ ಶ್ರೀ …

Read More »

ನಾಳೆ ಮಂಗಳವಾರ,ಲಖನ್, ಚನ್ನರಾಜ್ ಕವಟಗಿಮಠ ಅವರಿಂದ ನಾಮಪತ್ರ…!!!

ಬೆಳಗಾವಿ-ನಾಳೆ ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಈ ದಿನ ಬೆಳಗಾವಿ ಜಿಲ್ಲೆಯ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಲಖನ್ ಜಾರಕಿಹೊಳಿ ಅವರು ಸಾವಿರಾರು ಪಂಚಾಯತಿ ಸದಸ್ಯರನ್ನು ಬೆಳಗಾವಿಯಲ್ಲಿ ಸಮಾವೇಶಗೊಳಿಸಲಿದ್ದು ಸರ್ದಾರ್ ಮೈದಾನದಿಂದ ಸಾವಿರಾರು ಸಪೋಟರ್ಸ್ ಜೊತೆಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಮತ್ತು ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ನಾಳೆ ಮಂಗಳವಾರವೇ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಮಂಗಳವಾರ ಕೊನೆಯ ದಿನ ಈ ದಿನವೇ …

Read More »

ಉಡುಪಿ – ಬಾಲಕಿ ಮೇಲೆ ನಿರಂತರ ಅತ್ಯಾಚಾರ

ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳುಗಳಿಂದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಮಹಿಳಾ ಠಾಣೆಯ ಪೊಲೀಸರು ಪೊಕ್ಸೊ ಕಾಯಿದೆಯಡಿ ಬಂಧಿಸಿದ್ದಾರೆ. ಸಂದೀಪ್ ನಾಯ್ಕ ಹಾಗೂ ವಿಘ್ನೇಶ್ ನಾಯ್ಕ ಬಂಧಿತ ಆರೋಪಿಗಳು.   ಬಾಲಕಿಯ ತಂದೆ ಹಾಗೂ ತಾಯಿ ಕೆಲಸಕ್ಕೆಂದು ಹೊರ ಹೋದ ಸಂದರ್ಭ ಆಕೆ ಮನೆಯಲ್ಲಿ ಒಬ್ಬಳೇ ಇರುತ್ತಿದ್ದಳು. ಈ ವೇಳೆ ಸಮೀಪದ ಮನೆಯಲ್ಲಿರುವ ಬಾಲಕಿಯ ಸಂಬಂಧಿಕರಾದ ಆರೋಪಿಗಳು, …

Read More »

ವಾಹನ ಸವಾರರಿಗೆ ರಿಲೀಫ್ ಪೆಟ್ರೋಲ್, ಡಿಸೇಲ್ ದರ ಇಳಿಕೆ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಬಕಾರಿ ತೆರಿಗೆಯ ಜೊತೆಯಲ್ಲಿ ರಾಜ್ಯ ಸರ್ಕಾರವು ಮಾರಾಟ ತೆರಿಗೆಯನ್ನು ಶೇಕಡಾ 35 ರಿಂದ ಶೇಕಡಾ 25.9ಕ್ಕೆ ಮತ್ತು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 24 ರಿಂದ ಶೇಕಡಾ 14.34ಕ್ಕೆ ಇಳಿಸಿವೆ. ಇದರಿಂದ ನ.3ರಂದು ಇದ್ದ ಪೆಟ್ರೋಲಿನ ಚಿಲ್ಲರೆ ಮಾರಾಟ ದರವು 113.93 ರೂಪಾಯಿಯಿಂದ 100.63 ರೂಪಾಯಿಗೆ ಬಂದಿದ್ದು, ಒಟ್ಟಾರೆ ದರ ಕಡಿತ 13.30 ರೂಪಾಯಿ ಆಗಲಿದೆ. ಇನ್ನು ನ.3 ರಂದು ಇದ್ದ ಡೀಸೆಲ್​​​ …

Read More »

ರಾಜ್ಯದಲ್ಲಿ 40 ಪರ್ಸೆಂಟ್ ಸರ್ಕಾರ:ಕಾಂಗ್ರೆಸ್‌

ತುಮಕೂರು: ‘ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮನ್ನು 10 ಪರ್ಸೆಂಟ್ ಸರ್ಕಾರ ಎನ್ನುತ್ತಿದ್ದರು. ಈಗ ರಾಜ್ಯದಲ್ಲಿ 40 ಪರ್ಸೆಂಟ್ ಸರ್ಕಾರ ಆಡಳಿತ ನಡೆಸುತ್ತಿದೆ’ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ನೇತೃತ್ವದ ಸರ್ಕಾರ ಈವರೆಗೆ ದೇಶದಲ್ಲಿ ಜಾರಿಗೊಳಿಸಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸುವ ಸಲುವಾಗಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಜನಜಾಗೃತಿ ಅಭಿಯಾನಕ್ಕೆ ತುಮಕೂರಿನಲ್ಲಿ ಭಾನುವಾರ ಚಾಲನೆ ನೀಡಲಾಯಿತು.   ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ …

Read More »

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಎಲ್ಲ ವರ್ಗದ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ

ಬೆಂಗಳೂರು : ರಾಜ್ಯ ಸರ್ಕಾರವು (State Government) ಸರ್ಕಾರಿ ನೌಕರರಿಗೆ (Government Employees) ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲ ವರ್ಗದ ಸರ್ಕಾರಿ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ ಕೊಡುವ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ ಎನ್ನಲಾಗಿದೆ.     ಕರ್ನಾಟಕ ನಾಗರಿಕ ಸೇವೆಗಳ ನಿಯಮಾವಳಿಗಳ ಪ್ರಕಾರ ಪ್ರತಿವರ್ಷ ಸರ್ಕಾರಿ ನೌಕರರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ಅರ್ಹತೆಗೆ ಅನುಗುಣವಾಗಿ ಮುಂಬಡ್ತಿ ಕೊಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, …

Read More »

ಪರಿಷತ್ ಚುನಾವಣೆ: ಮತದಾರರ ಅಂತಿಮ‌ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್

ಬೆಳಗಾವಿ  : 04-ಬೆಳಗಾವಿ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 511 ಮತಗಟ್ಟೆಗಳ ಅಂತಿಮ ಮತದಾರರ ಪಟ್ಟಿಗಳನ್ನು ಭಾನುವಾರ(ನ.21) ಪ್ರಸಿದ್ದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ತಿಳಿಸಿದ್ದಾರೆ. ಮತದಾರರ ಕರಡು ಪಟ್ಟಿಯನ್ನು 11-11-2021 ರಂದು ಪ್ರಕಟಿಸಲಾಗಿತ್ತು. ಸಾರ್ವಜನಿಕರ ಆಕ್ಷೇಪಣೆಗಳನ್ನು ಆಧರಿಸಿ ಸರಿಪಡಿಸಲಾಗಿರುವ ಮತದಾರರ ಅಂತಿಮ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಮತದಾರರ ಪಟ್ಟಿಗಳು ಸಂಬಂಧಿಸಿದ ಗ್ರಾಮ ಪಂಚಾಯತಿಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ, …

Read More »