ಜೆಡಿಎಸ್ ಪಕ್ಷವನ್ನು ಅಲ್ಪಸಂಖ್ಯಾತರರು ನಂಬುವುದಿಲ್ಲ ಎಂಬುದಕ್ಕೆ ಉಪ ಚುನಾವಣೆ ಫಲಿತಾಂಶ ಸಾಕ್ಷಿ. ಎರಡೂ ಕಡೆ ಠೇವಣಿ ಕಳೆದುಕೊಂಡಿದ್ದಾರೆ. ಹಾನಗಲ್ ನಲ್ಲಿ ಪಕ್ಷೇತರ ಅಭ್ಯರ್ಥಿಗಿಂತ ಕಡಿಮೆ ಮತ ಜೆಡಿಎಸ್ ಗೆ ಬಂದಿದೆ. ಉಪ ಚುನಾವಣೆ ಫಲಿತಾಂಶದ ಕುರಿತಾಗಿ ಮಾತನಾಡಿದ ಅವರು, ಹಾನಗಲ್ ನಲ್ಲಿ ಕಾಂಗ್ರೆಸ್ ಒಗ್ಗಟ್ಟಿನ ಹೋರಾಟ ನಡೆಸಿತ್ತು. ಸಿದ್ದರಾಮಯ್ಯ, ಡಿ. ಕೆ.ಶಿವಕುಮಾರ್ ಸೇರಿ ಎಲ್ಲ ನಾಯಕರೂ ಶ್ರಮ ಹಾಕಿದರು ಎಂದರು. ಸಿಂದಗಿಯಲ್ಲಿ ಕಾಂಗ್ರೆಸ್ ಕಳೆದ ಚುನಾವಣೆಗಿಂತ 40 ಸಾವಿರ …
Read More »ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಹೊಂದಾಣಿಕೆಯಾಗದೆ ಸಿಂದಗಿಯಲ್ಲಿ ಸೋಲು: ಸಿದ್ದರಾಮಯ್ಯ
ಬೆಂಗಳೂರು: ಸಿಂದಗಿಯಲ್ಲಿ ನಮ್ಮನಿರೀಕ್ಷೆ ಹುಸಿಯಾಗಿದೆ. ಅಲ್ಲಿ ತೀವ್ರ ಸ್ಪರ್ಧೆಯನ್ನು ನಿರೀಕ್ಷಿಸಿದ್ದೆವು. ಆದರೆ ದೊಡ್ಡ ಅಂತರದಲ್ಲಿಸೋತಿದ್ದೇವೆ. ಆದರೆ ಕಳೆದ ಬಾರಿ ನಾವು ಮೂರನೇ ಸ್ಥಾನದಲ್ಲಿದ್ದೆವು, ಈಗ ಎರಡನೇ ಸ್ಥಾನಕ್ಕೆ ಬಂದಿದ್ದೇವೆ. ಸೋಲನ್ನು ಒಪ್ಪಿಕೊಳ್ಳಬೇಕು. ನಮ್ಮ ಅಭ್ಯರ್ಥಿ ಅಶೋಕ್ ಮನಗೂಳಿ ಜೆಡಿಎಸ್ ನಿಂದ ಬಂದವರು. ಅವರಿಗೆ ನಾವು ಟಿಕೆಟ್ ಕೊಟ್ಟಿದ್ದೆವು. ಆದರೆ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರಿಗೆ ಹೊಂದಾಣಿಕೆಯಾಗಿಲ್ಲ, ಅವರ ಜೊತೆ ಬಂದ ಜೆಡಿಎಸ್ ಕಾರ್ಯಕರ್ತರ ಜೊತೆ ಹೊಂದಾಣಿಕೆಯಾಗಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ …
Read More »ಸಿಂದಗಿಯಲ್ಲಿ ಸೋತರೂ ಸಮಾಧಾನವಿದೆ; ಹಾನಗಲ್ ನ ಸ್ವಾಭಿಮಾನಿ ಮತದಾರರಿಗೆ ನನ್ನ ಸೆಲ್ಯೂಟ್
ಬೆಂಗಳೂರು: ಸಿಂದಗಿ ಉಪಚುನಾವಣೆಯಲ್ಲಿ ಸೋತರೂ ನಮಗೆ ಸಮಾಧಾನವಿದೆ. ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಖಚಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಮತ ಗಳಿಸಿದೆ. ಸಿಂದಗಿಯಲ್ಲಿ ಸೋತರೂ ನಮಗೆ ಸಮಾಧಾನವಿದೆ. ಕಳೆದ ಚುನಾವಣೆಗೆ ಹೋಲಿಸಿದರೆ ಕಾಂಗ್ರೆಸ್ ಗೆ ಹೆಚ್ಚು ಮತ ಬಂದಿದೆ. ರಾಜ್ಯದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ಹೇಳಿದರು.ಜೆಡಿಎಸ್ ಮತಗಳನ್ನು ಬಿಜೆಪಿಯವರು ಪಡೆದಿದ್ದಾರೆ. ಸಿಂದಗಿಯಲ್ಲಿ ಕಾಂಗ್ರೆಸ್ 3ನೇ …
Read More »ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದೇನು ಗೊತ್ತಾ.?
ನವದೆಹಲಿ: ಇಂದು ಪ್ರಕಟಗೊಂಡಿರುವಂತ ಹಾನಗಲ್ ಹಾಗೂ ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಹೀನಾಯ ಸೋಲು ಕಂಡಿದ್ದಾರೆ. ಇದಕ್ಕೆ ಮಾಡಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಏನ್ ಹೇಳಿದ್ರು ಅಂತ ಮುಂದೆ ಓದಿ. ನವದಹೆಲಿಯಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ಇದುವರೆಗೂ ನಾನು ಉಪಚುನಾವಣೆ ಪ್ರಚಾರ ಮಾಡಿರಲಿಲ್ಲ ಆದರೆ ಸಿಂದಗಿ ಉಪಚುನಾವಣೆ ಹೋಗಿದ್ದೆ. ಸಿಂದಗಿ ಜನರು ಕಷ್ಟದಲ್ಲಿದ್ದರು, ಕೂಲಿಗೆ ಮಹಾರಾಷ್ಟ್ರಕ್ಕೆ ಗುಳೆ ಹೋಗುತ್ತಿದ್ದರು ಆ ಭಾಗದ ಜನರಿಗೆ …
Read More »ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ : ಚೆಲುವರಾಯಸ್ವಾಮಿ
ಬೆಂಗಳೂರು, ನ.2- ನಿಜವಾದ ಹೋರಾಟ ನಡೆದಿದ್ದು, ಹಾನಗಲ್‍ನಲ್ಲಿ. ಸ್ವತಃ ಮುಖ್ಯಮಂತ್ರಿಗಳೇ ಪ್ರಚಾರಕ್ಕೆ ಇಳಿದು ತಮ್ಮೆಲ್ಲಾ ಬಲವನ್ನು ಪ್ರಯೋಗಿಸಿದರೂ ಮತದಾರ ಪ್ರಭು ಕಾಂಗ್ರೆಸ್ ಕೈ ಹಿಡಿದಿರುವುದು ಮುಂದಿನ 2023 ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದು ಮಾಜಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಮಂತ್ರಿಮಂಡಲವೇ ಹಾನಗಲ್‍ನಲ್ಲಿ ಪ್ರಚಾರ ನಡೆಸಿತು. ಇದಲ್ಲದೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ತವರು ಜಿಲ್ಲೆಯಲ್ಲಿ ಬರುವ ಈ ಕ್ಷೇತ್ರವನ್ನು ಗೆಲ್ಲಲು ನಾನಾ …
Read More »ಅಪ್ಪು ಇಲ್ಲದ ‘ಜೇಮ್ಸ್’, ನಿರ್ದೇಶಕ ಚೇತನ್‍ಕುಮಾರ್ ಹೇಳಿದ್ದೇನು..?
ಬೆಂಗಳೂರು, ನ.1- ನಾವು ದೇವರನ್ನು ಕಳೆದುಕೊಂಡಿದ್ದೇವೆ. ಸದ್ಯ ಜೇಮ್ಸ್ ಚಿತ್ರದ ಬಗ್ಗೆ ಮಾತನಾಡುವ ಪರಿಸ್ಥಿತಿಯಲ್ಲಿ ಯಾರೂ ಇಲ್ಲ.ಅಪ್ಪು ಸರ್ ಹೋಗುವಾಗಲೂ ಯಾರಿಗೂ ತೊಂದರೆ ಮಾಡದೆ ಸಿನಿಮಾದ ಎಲ್ಲ ಜವಾಬ್ದಾರಿಯನ್ನು ಮುಗಿಸಿ ಕೊಟ್ಟಿದ್ದಾರೆ. ಅವರು ಇರುವಾಗಲೂ ಹೋದಾಗಲೂ ಒಬ್ಬರಿಗೂ ತೊಂದರೆ ಮಾಡಲಿಲ್ಲ. ನಿರ್ಮಾಪಕರಿಗೂ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಜೇಮ್ಸ್ ಚಿತ್ರದ ನಿರ್ದೇಶಕ ಚೇತನ್‍ಕುಮಾರ್ ತಿಳಿದ್ದಾರೆ. ಚಿತ್ರದ ಡಬ್ಬಿಂಗ್ ಮಾತ್ರ ಬಾಕಿ ಇದೆ. ಇದಕ್ಕೆ ಯಾರ ಬಳಿ ಡಬ್ಬಿಂಗ್ ಮಾಡಿಸಬೇಕೆಂದು ಇನ್ನು …
Read More »ಎರಡೂ ಕಡೆ ಠೇವಣಿ ಕಳೆದುಕೊಂಡ ಜೆಡಿಎಸ್
ಬೆಂಗಳೂರು, ನ.2- ಸಿಂಧಗಿ, ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದ ಜೆಡಿಎಸ್‍ಗೆ ಫಲಿತಾಂಶ ಭಾರೀ ನಿರಾಸೆಯನ್ನುಂಟುಮಾಡಿದೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಪರಾಜಿತರಾಗಿದ್ದು, ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ನಿರೀಕ್ಷಿತ ಮತಗಳು ಜೆಡಿಎಸ್‍ಗೆ ಲಭಿಸಿಲ್ಲ. ಹೀಗಾಗಿ ಜೆಡಿಎಸ್ ನಾಯಕರಿಗೆ ಭಾರೀ ನಿರಾಸೆಯಾಗಿದೆ. ಹಾನಗಲ್ ಕ್ಷೇತ್ರದಲ್ಲಿ ನಿಯಾಜ್ ಶೇಖ್ ಜೆಡಿಎಸ್ ಅಭ್ಯರ್ಥಿಯಾಗಿ ಸ್ರ್ಪಸಿದ್ದರು. ಸಿಂಧಗಿ ಕ್ಷೇತ್ರದಲ್ಲಿ ಅಂಗಡಿ ನಾಜಿಯಾ ಜೆಡಿಎಸ್‍ನಿಂದ ಕಣಕ್ಕಿಳಿದಿದ್ದರು. …
Read More »ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಿಂದಗಿ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು 74,463 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮುನಗೂಳಿ 49,897 ಮತಗಳನ್ನು …
Read More »ಪುನೀತ್ ಅಭಿಮಾನಿಗಳೇ ಗಮನಿಸಿ: ಇಂದಿನಿಂದಲೇ ಪುನೀತ್ ಸಮಾಧಿ ದರ್ಶನಕ್ಕೆ ಅವಕಾಶ
ಬೆಂಗಳೂರು: ಶುಕ್ರವಾರದಂದು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಂತ ನಟ ಪುನೀತ್ ರಾಜ್ ಕುಮಾರ್ ( Puneet Rajkumar ) ನಿಧನರಾಗಿದ್ದರು. ಅವರನ್ನು ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿತ್ತು. ಇಂತಹ ಪುನೀತ್ ಸಮಾಧಿ ದರ್ಶನಕ್ಕೆ, ಇಂದಿನಿಂದಲೇ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ. ಇಂದು ಪುನೀತ್ ಅವರು ನಿಧನರಾಗಿ ಐದನೇ ದಿನ. ಈ ಹಿನ್ನಲೆಯಲ್ಲಿ ಅವರ ಸಮಾಧಿ ಸ್ಥಳಕ್ಕೆ, ರಾಜ್ ಕುಟುಂಬಸ್ಥರೆಲ್ಲಾ ಸೇರಿ ತೆರಳಿ, 5ನೇ ದಿನದ ಹಾಲು-ತುಪ್ಪ ಕಾರ್ಯವನ್ನು ನೆರವೇರಿಸಿದರು. ಅಪ್ಪುವಿಗೆ ಇಷ್ಟವಾದಂತ …
Read More »ಅಪ್ಪುಗೆ ಇಂದು ಹಾಲು ತುಪ್ಪ ವಿಧಿವಿಧಾನ ಕಾರ್ಯ
ಪುನೀತ್ ಸಮಾಧಿಯ ಬಳಿ ಹಾಲು ತುಪ್ಪ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮತ್ತೊಂದೆಡೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸಮಾಧಿಗೆ ನಮಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಬೆಂಗಳೂರಿನ ನಗರ ಜಿಲ್ಲಾಧಿಕಾರಿ ಮಂಜುನಾಥ್ ಇಂದು ಹಾಲು ತುಪ್ಪ ಕಾರ್ಯಕ್ರಮ ಮುಗಿಯವರೆಗೂ ಅಭಿಮಾನಿಗಳಿಗೆ, ಇನ್ನೂ ಎರಡು ದಿನ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ. ಆದರೂ ರಾಜ್ಕುಮಾರ್ ಸಮಾಧಿ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರು. ಹಾಗಾಗಿ ರಾಜ್ಕುಮಾರ್ ಸಮಾಧಿ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಂಗಳವಾರ …
Read More »
Laxmi News 24×7