ಬೆಂಗಳೂರು : ರಾಜ್ಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಇಂದು ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್ ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದ್ದು, ಸಿಂದಗಿಯಲ್ಲಿ ಕಾಂಗ್ರೆಸ್ ನಿಂದ ಮನಗೂಳಿ ಪುತ್ರ ಅಶೋಕ್ ಮನಗೂಳಿ ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ರಮೇಶ್ ಭೂಸನೂರು, ಜೆಡಿಎಸ್ ನಿಂದ ನಾಜಿಯಾ ಅಂಗಡಿ ಸೇರಿದಂತೆ 6 …
Read More »ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ: ಎಚ್.ಡಿ ದೇವೇಗೌಡ ಬೇಸರ
ಬೆಂಗಳೂರು: ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ ದೇವೇಗೌಡರು ಬೇಸರ ವ್ಯಕ್ತಪಡಿಸಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ನಿಧನರಾದ ಹಿನ್ನೆಲೆಯಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಂಬನಿ ಮಿಡಿದಿದ್ದಾರೆ. ‘ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ಅವರ ನಟಿಸಿದ್ದ ‘ಪೃಥ್ವಿ’ ಮತ್ತು ‘ರಾಜಕುಮಾರ’ …
Read More »ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಮಾಡಿದರೆ ಕಠಿಣ ಕ್ರಮ: ಕಮಲ್ ಪಂತ್
ಬೆಂಗಳೂರು: ‘ನಟ ಪುನೀತ್ ರಾಜ್ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಗಣ್ಯರಿಗೆ ಪ್ರತ್ಯೇಕ ದ್ವಾರದ ಮೂಲಕ ಪ್ರವೇಶ ನೀಡಲಾಗುತ್ತದೆ. ತಮ್ಮ ನೆಚ್ಚಿನ ನಟನ ಅಂತಿಮ ದರ್ಶನ ಪಡೆಯಲು ಅಭಿಮಾನಿಗಳಿಗೂ ಅವಕಾಶ ನೀಡಲಾಗುತ್ತದೆ’ ಎಂದು ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದರು. ‘ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡುವ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಸಿದರು. ‘ಮುಂಜಾಗ್ರತಾ ದೃಷ್ಟಿಯಿಂದ ಶುಕ್ರವಾರ ಮಧ್ಯಾಹ್ನದಿಂದ …
Read More »ಫಿಟ್ನೆಸ್ ವಿಚಾರವಾಗಿ ಪುನೀತ್ ರಾಜ್ಕುಮಾರ್ ಯುವಕರಿಗೆ ರೋಲ್ ಮಾಡೆಲ್ ಆಗಿದ್ದರು. ಅಂತಹವರನ್ನು ಭಗವಂತ ಇಷ್ಟು ಬೇಗ ಕರೆಸಿಕೊಳ್ಳುತ್ತಾನೆ ಎಂದು ಕನಸಿನಲ್ಲಿಯೂ ಊಹಿಸಿರಲಿಲ್ಲ ಎಂದು ಡಿ.ಕೆ. ಶಿವಕುಮಾರ್
.ಬೆಂಗಳೂರು: ಸ್ಯಾಂಡಲ್ವುಡ್ನ ಪವರ್ ಸ್ಟಾರ್, ಆಪ್ತರು ಹಾಗೂ ಅಭಿಮಾನಿಗಳಿಂದ ಅಪ್ಪು ಎಂದೇ ಕರೆಸಿಕೊಳ್ಳುತ್ತಿದ್ದ ಪುನೀತ್ ರಾಜ್ಕುಮಾರ್ ತಮ್ಮ 46ನೇ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಎಸ್.ಎಂ. ಕೃಷ್ಣ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಪ್ರಧಾನಿ ದೇವೇಗೌಡರು ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಡಾ. ರಾಜ್ಕುಮಾರ್ ಕುಟುಂಬದ ಜೊತೆ ಆಪ್ತ ಸಂಬಂಧ ಹೊಂದಿದ್ದ ಡಿಕೆ ಶಿವಕುಮಾರ್ ಅಪ್ಪು ಜೊತೆಗಿನ ತಮ್ಮ …
Read More »ಮತ್ತೆ ಏರಿದ ಪೆಟ್ರೋಲ್ ಬೆಲೆ; ರಾಜ್ಯದಲ್ಲಿ ಎಷ್ಟಾಗಿದೆ ಇಂಧನ ದರ?
ಬೆಂಗಳೂರು: ವಾಹನ ಸವಾರರಿಗೆ ಮತ್ತೆ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಇಂದು ಕೂಡ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡಿದೆ. ನೆನ್ನೆ ಪೆಟ್ರೋಲ್-ಡೀಸೆಲ್ ದರಗಳಲ್ಲಿ ಏರಿಕೆ ಕಂಡುಬಂದಿದ್ದು, ಪೆಟ್ರೋಲ್ ದರದಲ್ಲಿ 36 ಪೈಸೆ ಮತ್ತು ಡೀಸೆಲ್ ದರದಲ್ಲಿ 37 ಪೈಸೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 35 ಪೈಸೆ ಮತ್ತು ಲೀಟರ್ ಡೀಸೆಲ್ ದರದಲ್ಲಿ 36 ಪೈಸೆ ಹೆಚ್ಚಳವಾಗಿದೆ. ಇದರಂತೆ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ …
Read More »ಪುನೀತ್ ರಾಜ್ಕುಮಾರ್ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ
ಬೆಂಗಳೂರು,ಅ.29- ಇಂದು ನಿಧನರಾದ ನಟ ಪುನೀತ್ ರಾಜ್ಕುಮಾರ್ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಯಿತು. ಪುನೀತ್ ಅವರ ತಂದೆ ವರನಟ ಡಾ.ರಾಜ್‍ಕುಮಾರ್ ಅವರು ನಿಧನರಾದಾಗ ಅವರ ನೇತ್ರಗಳನ್ನು ಕೂಡ ದಾನ ಮಾಡಲಾಗಿತ್ತು. ಆ ಸಂದರ್ಭದಲ್ಲೇ ತಮ್ಮ ನೇತ್ರಗಳನ್ನು ದಾನ ಮಾಡುವ ಸಹಮತಕ್ಕೆ ಸಹಿ ಹಾಕಿದ್ದರು. ಅದರಂತೆ ಇಂದು ಅಪ್ಪು ಅವರ ನೇತ್ರಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಗಿದೆ. ಡಾ.ರಾಜ್ ಅವರು ಮೃತಪಟ್ಟ ನಂತರ ಇಬ್ಬರು ಅಂಧರ ಬಾಳಿಗೆ ಬೆಳಕಾಗಿದ್ದರು. ಈಗ …
Read More »ನಾಳೆ ಸಂಜೆ ಪುನೀತ್ ಅಂತ್ಯಕ್ರಿಯೆ : ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನ
ಬೆಂಗಳೂರು : ಇಹಲೋಕ ತ್ಯಜಿಸಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಾಳೆ (ಶನಿವಾರ) ಸಂಜೆಯೊಳಗೆ ನಡೆಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಂಜೆ 5 ಗಂಟೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಪುನೀತ್ ಅವರ ಪಾರ್ಥಿವ ಶರೀರವನ್ನು ವಿಕ್ರಂ ಆಸ್ಪತ್ರೆಯಿಂದ ಅವರ ಸದಾಶಿವ ನಗರ ನಿವಾಸಕ್ಕೆ ತರಲಾಗಿದೆ. ಕುಟುಂಬ ಸದಸ್ಯರೊಂದಿಗೆ ಕನ್ನಡ ಚಿತ್ರ ರಂಗದ ಹಲವಾರು ಗಣ್ಯರು ಮನೆಯಲ್ಲಿದ್ದಾರೆ. …
Read More »ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಅನಾರೋಗ್ಯದಿಂದ ವಿಧಿವಶ.
ಬೆಂಗಳೂರು: ಇಂದು ಇಡೀ ಕನ್ನಡ ನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಜಿಮ್ ಮಾಡುವ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಪುನೀತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ವರನಟ ಡಾ. ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರ ಕಿರಿಯ ಪುತ್ರನಾಗಿ 1975ರಲ್ಲಿ ಜನಿಸಿದ್ದ ಪುನೀತ್ ರಾಜ್ …
Read More »ವಿದ್ಯಾರ್ಥಿಗಳೊಂದಿಗೆ ಕುಳಿತು ಬಿಸಿಯೂಟ ಸವಿದ ಆಹಾರ ನಿಗಮದ ಅಧ್ಯಕ್ಷ ನಡಹಳ್ಳಿ
ಮುದ್ದೇಬಿಹಾಳ: ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರಾಗಿ ಸಂಪುಟ ದರ್ಜೆ ಸಚಿವ ಸ್ಥಾನಮಾನ ಹೊಂದಿರುವ ವಿಜಯಪುರ ಜಿಲ್ಲೆ ಮುದ್ದೇಬಿಹಾಳದ ಬಿಜೆಪಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿಯವರು ಗುರುವಾರ ವಿದ್ಯಾರ್ಥಿಗಳೊಂದಿಗೆ ಸಹ ಪಂಕ್ತಿಯಲ್ಲಿ ಕುಳಿತು ಸರ್ಕಾರಿ ಶಾಲೆಯ ಮದ್ಯಾಹ್ನದ ಬಿಸಿಯೂಟ ಸೇವಿಸಿ ಗುಣಮಟ್ಟ ಖಚಿತಪಡಿಸಿಕೊಂಡರು. ಗುಡದಿನ್ನಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ತಮ್ಮ ಕುಟುಂಬದಿಂದ ಉಚಿತ ನೋಟಬುಕ್ ವಿತರಿಸಿದ ನಂತರ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಮತ್ತು ಎಲ್ಲ …
Read More »ಪುನೀತ್ ರಾಜ್ ಕುಮಾರ್ ಜಿಮ್ ಮಾಡುವ ಸಂದರ್ಭದಲ್ಲಿ ಎದೆ ನೋವು
ಬೆಂಗಳೂರು: ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಮ್ ಮಾಡುವ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡಿತ್ತು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪುನೀತ್ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.
Read More »
Laxmi News 24×7