ಬೆಂಗಳೂರು : ಬುರುಡೆ ರಾಮಯ್ಯ ಎಂದು ಟ್ವೀಟ್ ಮಾಡಿ ರಾಜ್ಯದ ಪ್ರತಿಯೊಬ್ಬ ಪ್ರಜೆಯ ತಲೆಯ ಮೇಲೂ 44 ಸಾವಿರಕ್ಕೂ ಅಧಿಕ ಸಾಲದ ಹೊರೆ ಹೇರಿದ್ದೀರಿ ಎಂದು ಟ್ವೀಟ್ ಮಾಡಿದ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಅವರು ಶನಿವಾರ ”ಬುರುಡೆ ಬೊಮ್ಮಾಯಿ” ಎನ್ನುವ ಟ್ಯಾಗ್ ಬಳಸಿಕೊಂಡು ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಮಾಡಿರುವ ಸರಣಿ ಟ್ವೀಟ್ ಗಳು ಹೀಗಿವೆ ”ಬಿಜೆಪಿ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ಈಗಿನ ಸಾಲ ರೂ.4,57,899 ಕೋಟಿ. 2020-21 ರಲ್ಲಿಯೇ …
Read More »ಕಿತ್ತೂರು ಉತ್ಸವದಲ್ಲಿ ಸಿಎಂ ಮಹತ್ವದ ಘೋಷಣೆ: ಮುಂಬೈ ಕರ್ನಾಟಕಕ್ಕೆ ‘ಕಿತ್ತೂರು ಕರ್ನಾಟಕ’ ಎಂದು ಮರುನಾಮಕರಣ
ಬೆಳಗಾವಿ: ಮುಂದಿನ ವರ್ಷದಿಂದ ರಾಜ್ಯಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆಯುತ್ತಿರುವ ಕಿತ್ತೂರು ಉತ್ಸವದಲ್ಲಿ ಅವರು ಮಾತನಾಡಿ, ಒಂದು ತಿಂಗಳ ಕಾಲ ಕಿತ್ತೂರು ಜ್ಯೋತಿ ರಾಜ್ಯದಲ್ಲಿ ಸಂಚರಿಸಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಮರು ನಾಮಕರಣ ಮಾಡುವ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
Read More »ಶಿಕ್ಷಕರಿಗೆ ದೀಪಾವಳಿ ಗಿಫ್ಟ್: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ -ಟ್ರಾನ್ಸ್ಫರ್ ನಿರೀಕ್ಷೆಯಲ್ಲಿದ್ದವರಿಗೆ ಕೊನೆಗೂ ಸಿಹಿ ಸುದ್ದಿ
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ನಾಳೆಯಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. 2022ರ ಫೆಬ್ರವರಿ 26 ರವರೆಗೂ ವರ್ಗಾವಣೆ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಅರ್ಜಿ ಸಲ್ಲಿಸಿದ 72,000 ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ಸಿಗಲಿದೆ. ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕಡ್ಡಾಯ ವರ್ಗಾವಣೆ ಆಗಿದ್ದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಮೊದಲ ಹಂತದ ಕೌನ್ಸೆಲಿಂಗ್ ನವೆಂಬರ್ 2 ರಂದು ನಡೆಯಲಿದೆ. ಎರಡನೇ ಹಂತದ ಕೌನ್ಸೆಲಿಂಗ್ 2021ರ ಜನವರಿ 18 …
Read More »ಕಿತ್ತೂರು ಉತ್ಸವಕ್ಕೆ ಸಿಗಲಿ ರಾಜ್ಯಮಟ್ಟದ ಮಾನ್ಯತೆ
ಬೆಳಗಾವಿ: ಸತತವಾಗಿ ಕಾಡುತ್ತಲೇ ಇರುವ ಕೊರೊನಾ ಹಾವಳಿ ನಡುವೆ ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಇಡೀ ಕಿತ್ತೂರು ಸಂಸ್ಥಾನ ಸಜ್ಜಾಗಿದ್ದು, ಜಿಲ್ಲಾಡಳಿತ ಕೊರೊನಾ ಮಾರ್ಗಸೂಚಿ ಅನ್ವಯ ಎರಡು ದಿನಗಳ ಉತ್ಸವದ ಅರ್ಥಪೂರ್ಣ ಆಚರಣೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಉತ್ಸವದ ಈ ಬಾರಿಯ ವಿಶೇಷ ಆಕರ್ಷಣೆ ಎಂದರೆ ಬಹಳ ವರ್ಷಗಳ ನಂತರ ಮುಖ್ಯಮಂತ್ರಿಗಳು ಉತ್ಸವದ ಉದ್ಘಾಟನೆಗೆ ಬರುತ್ತಿದ್ದಾರೆ. ಉತ್ಸವಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ಮೂಢ ನಂಬಿಕೆ ಮಾತುಗಳಿಗೆ ಕಿವಿಗೊಡದೆ ಸಿಎಂ ಬಸವರಾಜ ಬೊಮ್ಮಾಯಿ ಉತ್ಸವದ …
Read More »ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ; ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮಕ್ಕೆ ಗೈರು
ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಇಂದು (ಅಕ್ಟೋಬರ್ 23) ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯೋತ್ಸವ ಆಚರಣೆ ಮಾಡಲಾಗಿದೆ. ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜನೆ ಮಾಡಲಾದ ಈ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್ ಮತ್ತು ಅಧ್ಯಕ್ಷತೆ ವಹಿಸಬೇಕಿದ್ದ ಶಾಸಕ ಉದಯ ಗರುಡಾಚಾರ್ ಗೈರಾಗಿದ್ದಾರೆ. ಹಾನಗಲ್ ಉಪಚುನಾವಣಾ ಪ್ರಚಾರದಲ್ಲಿರುವ ಕಾರಣ ಜಯಂತ್ಯೋತ್ಸವ ಉದ್ಘಾಟಿಸಬೇಕಿದ್ದ ಸಿಎಂ ಬಸವರಾಜ …
Read More »ಬಾಯಲ್ಲಿತ್ತು 100 ಗ್ರಾಂ ಚಿನ್ನದ ಬಿಸ್ಕೆಟ್.. ಕಸ್ಟಮ್ಸ್ ಅಧಿಕಾರಿಗಳ ಬಳಿ ಸಿಕ್ಕಿಬಿದ್ದಿದ್ದು ಹೇಗೆ?
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದ 4.5 ಲಕ್ಷ ಮೌಲ್ಯದ 100 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಚೆನ್ನೈ ಮೂಲಕ ಪ್ರಯಾಣಿಕನೊಬ್ಬ ಬಾಯಿಯೊಳಗೆ ಚಿನ್ನದ ಬಿಸ್ಕೆಟ್ಗಳನ್ನು ಇಟ್ಟುಕೊಂಡು ಅಕ್ರಮವಾಗಿ ಸಾಗಾಣಿಕೆ ಮಾಡ್ತಿದ್ದ. ವಿಚಾರಣೆ ನಡೆಸುವ ವೇಳೆ ಮಾತನಾಡಲು ಪ್ರಯಾಣಿಕ ಕಷ್ಟಪಡುತ್ತಿದ್ದ. ಇದರಿಂದ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನ ತಪಾಸಣೆ ನಡೆಸಿದ್ದು, 15 ಚಿನ್ನದ ಬಿಸ್ಕೆಟ್ಗಳನ್ನು ವಶಪಡಿಸಿಕೊಂಡಿದ್ದಾರೆ. ಇಂಡಿಗೋ ವಿಮಾನದಲ್ಲಿ ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಣಿಕೆ …
Read More »ಕೊವಿಡ್ ವ್ಯಾಕ್ಸಿನ್ ಬಗ್ಗೆ ಬಿಲ್ ಗೇಟ್ಸ್ ಅವರೇ ಮೆಚ್ಚಿದ್ದಾರೆ; ಕಾಂಗ್ರೆಸ್ ಟೀಕೆ ಮಾಡಿಕೊಂಡು ಕೂತಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ಕೋವಿಡ್ ವಿರುದ್ಧದ ಸಮದಲ್ಲಿ ಭಾರತ ಸರ್ಕಾರ ಸಾಧಿಸಿರುವ ಶತಕೋಟಿ ಕೋವ್ಯಾಕ್ಸಿನ್ ವಿರುದ್ಧ ಕಾಂಗ್ರೆಸ್ ಟೀಕೆ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯೆ ನೀಡಿದ್ದು, ಕೊವಿಡ್ ವ್ಯಾಕ್ಸಿನ್ ಬಗ್ಗೆ ಬಿಲ್ ಗೇಟ್ಸ್ ಅವರೇ ಮೆಚ್ಚಿದ್ದಾರೆ. ಆ ಬಗ್ಗೆ ಟ್ವಿಟ್ ಮಾಡಿದ್ದಾರೆ. ಅಂತಹುದರಲ್ಲಿ ಕಾಂಗ್ರೆಸ್ ಪಕ್ಷ ಇನ್ನೂ ಟೀಕೆ ಮಾಡಿಕೊಂಡು ಕೂತಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಪಕ್ಷವು ದೇಶದ ಸಾಧನೆ ಕೊಂಡಾಡುವ ಮಾನಸಿಕತೆ ಕಳೆದುಕೊಂಡಿದೆ. ಒಂದು ದೇಶವಾಗಿ ಶತಮಾನದ …
Read More »ಕಿತ್ತೂರಿನಲ್ಲಿ ಮನಸೂರೆಗೊಂಡ ಜನಪದ ಕಲಾವಾಹಿನಿ
ಬೆಳಗಾವಿ: ಚನ್ನಮ್ಮನ ಕಿತ್ತೂರು ಉತ್ಸವದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಜ್ಯೋತಿ ಸ್ವಾಗತದ ಬಳಿಕ ಚನ್ನಮ್ನ ಕಿತ್ತೂರಿನ ರಾಜಗುರು ಸಂಸ್ಥಾನ ಮಠದ ಮಡಿವಾಳ ರಾಜ ಯೋಗೀಂದ್ರ ಸ್ವಾಮೀಜಿ ಅವರು ಜಾನಪದ ಕಲಾವಾಹಿನಿಗೆ ಚಾಲನೆ ನೀಡಿದರು. ನವಿಲು ನೃತ್ಯ, ಕೇರಳ ತೆಯಮ್ ನೃತ್ಯ, ಚೆಂಡೆ ಮದ್ದಳೆ, ಪೂಜಾ ಕುಣಿತ, ನಂದಿಧ್ವಜ, ಪಟಾಕುಣಿತ, ಚಿಟ್ಟೆಮೇಳ, ಗೊಂಬೆ ಕುಣಿತ, ಝಾಂಜ್ ಪಥಕ ಸೇರಿದಂತೆ ವಿವಿಧ ಕಲಾತಂಡಗಳ ನೂರಾರು ಕಲಾವಿದರು ಕಲಾವಾಹಿನಿಯಲ್ಲಿ ಪಾಲ್ಗೊಂಡಿದ್ದರು. ಜನಪದ ಗೀತೆಗಳನ್ನು ಹಾಡುತ್ತಾ ಸಾಗಿದ …
Read More »ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಶೂನ್ಯ : ಬಿ.ವೈ.ವಿಜಯೇಂದ್ರ
ವಿಜಯಪುರ: ಹಾನಗಲ್, ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ದಿನೇ ದಿನೇ ಬಿಜೆಪಿ ಗೆಲುವು ನಿಶ್ಚಿತ ಎಂಬ ಸ್ಥಿತಿ ನಿರ್ಮಾಣವಾಗಿದೆ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಶೂನ್ಯವಾಗಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತವಾಗಿದ್ದು, ಆತಂಕದಲ್ಲಿರುವ ಕಾಂಗ್ರೆಸ್, ಜೆಡಿಎಸ್ ಮೇಲ್ನೋಟದ ಹೋರಾಟ ನಡೆಸಿದ್ದಾರೆ ಅಷ್ಟೇ ಎಂದರು. ಜನರ ಮುಂದೆ ಮಂಡಿಸಲು ವಿಷಯಗಳೇ ಇಲ್ಲದ ವಿಪಕ್ಷಗಳು …
Read More »‘ಹಣ ಹಂಚುವಷ್ಟು ಕೆಳಮಟ್ಟಕ್ಕೆ ಇಳಿದವರು ನಾವಲ್ಲ’ ; ಕಾಂಗ್ರೆಸ್ ಆರೋಪಕ್ಕೆ ಸವದಿ ತಿರುಗೇಟು
ಬೈ ಎಲೆಕ್ಷನ್ ಭರಾಟೆ ಜೋರಾಗಿರುವ ಬೆನ್ನಲ್ಲೇ ರಾಜಕೀಯ ಕೆಸರೆರೆಚಾಟ ಕೂಡ ಹೆಚ್ಚಾಗಿದೆ. ಬಿಜೆಪಿ ನಾಯಕರು ಹಣ ಹಂಚಿ ಮತ ಬೇಟೆ ಮಾಡುತ್ತಿದ್ದಾರೆ ಎಂಬ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಆರೋಪಕ್ಕೆ ವಿಜಯಪುರದ ಸಿಂದಗಿಯಲ್ಲಿ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ರು . ಹಣ ಹಂಚಿಕೆ ಮಾಡಿ ಮತ ಪಡೆದು ನಮಗೆ ರೂಢಿ ಇಲ್ಲ. ನಮ್ಮ ಪಕ್ಷ ಅಷ್ಟೊಂದು ಕೆಳ ಮಟ್ಟಕ್ಕೆ ಇಳಿದೂ ಇಲ್ಲ. ಕಾಂಗ್ರೆಸ್ ಪಕ್ಷದವರೇ ಮೂಟೆ ಮೂಟೆ ಹಣ ತಂದು …
Read More »
Laxmi News 24×7