Breaking News

ರಾಜ್ಯ

ಕಾಂಗ್ರೆಸ್‌ಗೆ ಅಭ್ಯರ್ಥಿ ಸಿಗದೆ ಮನಗೂಳಿ ಪುತ್ರನನ್ನು ಹೈಜಾಕ್ ಮಾಡಿದೆ; ಎಚ್‌ಡಿಕೆ

ವಿಜಯಪುರ, ಅಕ್ಟೋಬರ್ 20: ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ, ಜಾತ್ಯತೀತ ಜನತಾದಳ ಮತ್ತು ಸಿಂದಗಿ ಕ್ಷೇತ್ರದ ನಡುವೆ ವಾತ್ಸಲ್ಯಪೂರ್ಣವಾದ ಕರುಳುಬಳ್ಳಿಯ ಸಂಬಂಧ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಣ್ಣಿಸಿದರು. ಸಿಂದಗಿ ಕ್ಷೇತ್ರದ ಹೊಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಂಗಳವಾರ ಚುನಾವಣಾ ಪ್ರಚಾರ ಮಾಡುವ ವೇಳೆ ಅವರು ಮಾತನಾಡಿದರು. ಸುಮಾರು ಮೂವತ್ತು ವರ್ಷಗಳ ಕಾಲ ದಿವಂಗತ ಎಂ.ಸಿ. ಮನಗೂಳಿ ಕಾಕಾ ದೇವೇಗೌಡರ ಕುಟುಂಬದ ಸದಸ್ಯರಂತೆ ಇದ್ದರು. ಅವರನ್ನು …

Read More »

ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ C.M. ನೀಡಿದ ಪ್ರತಿಕ್ರಿಯೆ

ಬೆಳಗಾವಿ – ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡುವ ಸಂಬಂಧ ತಜ್ಞರ ಜೊತೆ ಚರ್ಚಿಸಿ ತೀರ್ಮಾನಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಮೆರವಣಿಗೆಗಳಿಗೆ ಅನುಮತಿ ನೀಡಲಾಗುತ್ತಿಲ್ಲ. ಆದರೆ ಬೆಳಗಾವಿ ಕನ್ನಡ ರಾಜ್ಯೋತ್ಸವದಲ್ಲಿ ಮೆರವಣಿಗೆಗೆ ಅನುಮತಿ ನೀಡಬೇಕೆನ್ನುವ ಬೇಡಿಕೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ತಜ್ಞರ ಜೊತೆ ಚರ್ಚಿಸುತ್ತೇನೆ ಎಂದರು. ಸಿಂದಗಿ ಚುನಾವಣೆ ಪ್ರಚಾರ ಮುಗಿಸಿ ಈಗ ಬೆಂಗಳೂರಿಗೆ …

Read More »

ರೈತರನ್ನು ಕಡೆಗಣಿಸಿದ ಬಿಜೆಪಿ ಸರ್ಕಾರ’

ಹಾವೇರಿ: ಹೋರಾಟ ನಿರತ ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಜೀಪ್‌ ಹರಿಸುತ್ತಾನೆ ಎಂದರೆ ದೇಶ ಯಾವ ಕಡೆ ಹೊರಟಿದೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು. ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದವರನ್ನು ರೈತರೇ ಅಲ್ಲ ಎಂದು ಬಿಜೆಪಿಯವರು ಪಟ್ಟ ಕಟ್ಟುತ್ತಾರೆ ಎಂದು ಜೆಡಿಎಸ್‌ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ.ಸುಂಕದ ಆಕ್ರೋಶ ವ್ಯಕ್ತಪಡಿಸಿದರು. ಹಾವೇರಿ ನಗರದ ವಿದ್ಯಾನಗರ (ಪಶ್ಚಿಮ) ಭಾಗದಲ್ಲಿರುವ ಪಕ್ಷದ ಕಚೇರಿಯಲ್ಲಿ ಮಂಗಳವಾರ ಹಾವೇರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಪದಾಧಿಕಾರಿಗಳ ಸಭೆಯಲ್ಲಿ ಅವರು …

Read More »

ಜೈಲುಗಳಲ್ಲಿ ಇನ್ನು ಸಿಬಂದಿಗೂ ಮೊಬೈಲ್‌ ನಿಷೇಧ!

ಬೆಂಗಳೂರು: ಜೈಲುಗಳಲ್ಲಿ ನಡೆಯುವ ಎಲ್ಲ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣ ಸೇವೆಗಳ ಇಲಾಖೆ ಮುಂದಾಗಿದೆ. ಬೆಂಗಳೂರಿನ ಕೇಂದ್ರ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಪ್ರಾಯೋಗಿಕವಾಗಿ ಈ ಪ್ರಕ್ರಿಯೆ ಆರಂಭವಾಗಿದ್ದು, ಜೈಲಿನ ಮುಖ್ಯ ಅಧೀಕ್ಷಕರು, ಅಧೀಕ್ಷಕರಿಗೆ ಮಾತ್ರ ಮೊಬೈಲ್‌ ಬಳಕೆಗೆ ಅವಕಾಶವಿರಲಿದೆ. ಕಾರಾಗೃಹದ ಮುಂಭಾಗದಲ್ಲೇ “ಮೊಬೈಲ್‌, ಲ್ಯಾಪ್‌ಟಾಪ್‌ ಮತ್ತು ಇತರ ಎಲೆಕ್ಟ್ರಾನಿಕ್‌ ವಸ್ತುಗಳ ಸಹಿತ ನಿಷೇಧಿತ ವಸ್ತುಗಳನ್ನು ಜೈಲಿನ ಒಳಗೆ ಕೊಂಡೊಯ್ಯುವಂತಿಲ್ಲ’ ಎಂಬ ಸೂಚನೆ ಫ‌ಲಕ ಹಾಕಲಾಗಿದೆ. ಇದೇ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮೋದಲ್ನೆಯ ಸಕ್ಕರೆ ಉತ್ಪಾದನೆ ಪೂಜೆ ಸಲ್ಲಿಸಿದ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಹಾಗೂ ಛೋಟಾ ಸಾಹುಕಾರ

      ಗೋಕಾಕ ;ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಈ ವರ್ಷದ ಸಕ್ಕರೆ ಉತ್ಪಾದನೆ ಪ್ರಾರಂಭ ವಾಗಿದೆ     ಹೌದು ಶ್ರೀ ಸಂತೋಷ್ ಜಾರಕಿಹೊಳಿ ಅವರ್ ನೇತೃತ್ವದ ಈ ಒಂದು ಕಾರ್ಖಾನೆ ಮೊನ್ನೆ ಯಷ್ಟೇ ಕಬ್ಬು ನೂರಿಸಲು ಪ್ರಾರಂಭ ಮಾಡಿತ್ತು ಇಂದು ಸಕ್ಕರೆ ಆಗಿ ಹೊರ ಹೊಮ್ಮಿದೆ .ಇಂದು ಈ ವರ್ಷದ ಮೊದಲನೆಯ ಸಕ್ಕರೆ ಉತ್ಪಾದನೆ ಯಾಗಿದ್ದು ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಹಾಗೂ ಸುಪುತ್ರ ಶ್ರೀ ಸೂರ್ಯ …

Read More »

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ಪ್ರಕರಣ ಬೆಳಕಿಗೆ

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಅನ್ಯಕೋಮಿನ ಸ್ನೇಹಿತೆಯರ ಜತೆ ಮಾತನಾಡುತ್ತಿದ್ದ ಯುವಕನನ್ನು ಪ್ರಶ್ನಿಸಿದ ಕೆಲ ಸ್ಥಳೀಯರು, ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಒಂದು ವಾರದ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಕಾಲೇಜು ಸ್ನೇಹಿತೆಯರ ಜತೆಗೆ ಮಾತನಾಡುತ್ತಿದ್ದ ಅನ್ಯಕೋಮಿನ ಯುವಕ ಮತ್ತು ಯುವತಿಯರ ಜತೆಗೆ ವಾಗ್ವಾದ ನಡೆಸಿದ ಕೆಲವರು, ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೇ ಯುವತಿಯರಿಬ್ಬರನ್ನು …

Read More »

ದೇಶಿ ತಳಿಗಳ ಅಭಿವೃದ್ಧಿಗೆ ಅಮೃತ ಸಿರಿ, ಅಮೃತ ಧಾರಾ

ಬೆಂಗಳೂರು: ಸರಕಾರವು ದೇಶಿ ಗೋ ತಳಿ ಸಂವರ್ಧನೆಗಾಗಿ ರೈತರಿಗೆ ಕಡಿಮೆ ದರದಲ್ಲಿ ಕರುಗಳನ್ನು ವಿತರಣೆ ಮಾಡಲು ನಿರ್ಧರಿಸಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪಶು ಸಂಗೋಪನೆ ಇಲಾಖೆ ಯಿಂದ ಜಾರಿಗೊಳ್ಳುತ್ತಿರುವ ಯೋಜನೆಗೆ “ಅಮೃತ ಸಿರಿ’ ಮತ್ತು “ಅಮೃತ ಧಾರಾ’ ಎಂದು ಹೆಸರಿಡಲು ನಿರ್ಧರಿಸಲಾಗಿದೆ. ಗಂಡು ಕರು ವಿತರಣೆಗೆ ಅಮೃತ ಧಾರಾ, ಹೆಣ್ಣು ಕರು ವಿತರಣೆಗೆ ಅಮೃತ ಸಿರಿ ಎಂದು ನಾಮಕರಣ ಮಾಡಲಾಗಿದ್ದು, ದೇಶಿ ತಳಿಗಳಾದ ಮಲೆನಾಡು ಗಿಡ್ಡ, ಹಳ್ಳಿಕಾರ್‌, ಅಮೃತ …

Read More »

ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಟಿಎಂಸಿ ನಾಯಕ ಬಾಬುಲ್ ಸುಪ್ರಿಯೊ

ನವದೆಹಲಿ: ತಿಂಗಳ ಹಿಂದೆಯಷ್ಟೇ ಬಿಜೆಪಿ ತೊರೆದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಪಕ್ಷ ಸೇರಿದ್ದ ಕೇಂದ್ರದ ಮಾಜಿ ಸಚಿವ ಬಾಬುಲ್ ಸುಪ್ರಿಯೊ ಮಂಗಳವಾರ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಇಷ್ಟು ದಿನ ನನ್ನ ಮೇಲೆ ವಿಶ್ವಾಸವಿಟ್ಟ ಪಕ್ಷ ಮತ್ತು ಬಿಜೆಪಿ ನಾಯಕರಾದ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ …

Read More »

ಎಚ್‌ಆರ್‌ಪಿ ಹಗರಣದಲ್ಲಿ ರಾಜಕಾರಣಿಗಳೂ ಭಾಗಿ: ಆರೋಪ

ಹಾಸನ: ಹೇಮಾವತಿ ಜಲಾಶಯ ಯೋಜನೆ (ಎಚ್‌ಆರ್‌ಪಿ) ಮುಳುಗಡೆ ಸಂತ್ರಸ್ತರ ಅಕ್ರಮ ಭೂ ಮಂಜೂರಾತಿ ಪ್ರಕರಣದಲ್ಲಿ ಅಧಿಕಾರಿಗಳ ಜತೆ ಭಾಗಿಯಾಗಿರುವ ರಾಜಕಾರಣಿಗಳ ವಿರುದ್ಧವೂ ಮೂರು ತಿಂಗಳ ಒಳಗೆ ತನಿಖೆ ಪೂರ್ಣಗೊಳಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಎ.ಮಂಜು ಒತ್ತಾಯಿಸಿದರು. ಹೇಮಾವತಿ ಜಲಾಶಯ ನಿರ್ಮಾಣ ವೇಳೆ 13,500 ಸಂತ್ರಸ್ತರು ಸುಮಾರು 21 ಸಾವಿರ ಎಕರೆ ಭೂಮಿ ಕಳೆದುಕೊಂಡಿದ್ದರು. ನಂತರದಲ್ಲಿ ಸಂತ್ರಸ್ತರಿಗೆ ಹಂಚಿಕೆ ಮಾಡಲು 25,554 ಎಕರೆ ಜಮೀನನ್ನು ವಿವಿಧ ತಾಲ್ಲೂಕುಗಳಲ್ಲಿ …

Read More »

45ರ ವ್ಯಕ್ತಿ, 25ರ ಯುವತಿ ನಡುವೆ ವಿವಾಹ; ಏನಿದು ವೈರಲ್ ಫೋಟೋ ಹಿಂದಿನ ಕಹಾನಿ

ಕುಣಿಗಲ್ : 45 ವರ್ಷದ ವ್ಯಕ್ತಿಯೋರ್ವನು 25 ವರ್ಷದ ಯುವತಿಯನ್ನು ಮದುವೆಯಾಗಿರುವ , ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುರುದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಹಸವಾಗಿದೆ, ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಅಕ್ಕಿಮರಿಪಾಳ್ಯ ಗ್ರಾಮದ ಶಂಕರಣ್ಣ (45) ವರ್ಷ, ಸಂತೇಮಾವತ್ತೂರು ಗ್ರಾಮದ ಮೇಘನಾ (25) ವರ್ಷದ ಯುವತಿಯನ್ನು ಮಧುವೆಯಾಗಿದ್ದು, ಯುವಕರನ್ನು ನಿಬ್ಬೆರಗಾಗಿಸಿದೆ. ಕಳೆದ ಹಲವು ದಿನಗಳ ಹಿಂದೆ ಯುವಕರು ನಾವು ಮದುವೆಯಾಗಬೇಕು, ಹುಡುಗಿಯನ್ನು ಹುಡುಕಿ ಮದುವೆ ಮಾಡಿಸಿ ಎಂದು …

Read More »