ಬೆಳಗಾವಿ: ಅತಿಥಿ ಉಪನ್ಯಾಸಕರ ಸೇವಾಭದ್ರತೆಗೆ ಸಂಬಂಧಿಸಿದಂತೆ ಮಾನವೀಯತೆಯಆಧಾರದ ಮೇಲೆ ತ್ವರಿತವಾಗಿ ಸೂಕ್ತ ತೀರ್ಮಾನತೆಗೆದುಕೊಳ್ಳುವ ಮೂಲಕ ಅವರ ಕುಟುಂಬದ ಹಿತಕಾಯಬೇಕು ಎಂದು ಆಗ್ರಹಿಸಿ ರಾಜ್ಯ ಸರಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕ ರಹಿತ ರಕ್ಷಣಾ ಸಮಿತಿ ಜಿಲ್ಲಾ ಘಟಕದ ಸದಸ್ಯರು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ ಅವರಿಗೆ ಮನವಿ ಸಲ್ಲಿಸಿದರು. ಬೆಳಗಾವಿಯಲ್ಲಿ ಸಚಿವರಿಗೆ ಮನವಿ ಸಲ್ಲಿಸಿದ ಸದಸ್ಯರು, 2021-22ನೇ ಶೈಕ್ಷಣಿಕ ಸಾಲಿಗೆ ಹಾಲಿಕರ್ತವ್ಯನಿರ್ವಹಿಸುತ್ತಿರುವಅತಿಥಿಉಪನ್ಯಾಸಕರನ್ನುಸೇವೆಯಲ್ಲಿ ಮುಂದುವರೆಸಬೇಕು. ಮಾಸಿಕಸಂಚಿತ ಗೌರವಧನ ನಿಗದಿಪಡಿಸಬೇಕು …
Read More »‘ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ’ ದಿನೇಶ್ ಗುಂಡೂರಾವ್ ಆಕ್ರೋಶ
ಬೆಂಗಳೂರು: ಆರೋಗ್ಯ ಸಿಬ್ಬಂದಿಯ ವೇದನೆ ಕೇಳದೆ ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿ ವೇತನ ಸಮಸ್ಯೆ ಕುರಿತಂತೆ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ ಅವರು ‘ಇಲಾಖೆಯ ಸಿಬ್ಬಂದಿಗೆ ಕಳೆದ 3 ತಿಂಗಳಿನಿಂದ ವೇತನ ಬಿಡುಗಡೆಯಾಗಿಲ್ಲ. ಆರೋಗ್ಯ ಸಿಬ್ಬಂದಿ ಕೊರೋನಾ ಫ್ರಂಟ್‌ಲೈನ್ ವರ್ಕರ್‌ಗಳಾಗಿ ಕಾರ್ಯನಿರ್ವಹಿಸಿದ್ದಾರೆ.ಆದರೂ ಕೊರೊನಾ ಭತ್ಯೆ ಸಿಕ್ಕಿಲ್ಲ. ತಮ್ಮ ಇಲಾಖೆಯ ಸಿಬ್ಬಂದಿಗಳ …
Read More »ತೈವಾನ್‍ನಲ್ಲಿ ಬೆಂಕಿ ಅವಗಡ, 14 ಮಂದಿ ಸಾವು..!
ಥೈಪೆ, ಅ.14- ತೈವಾನ್‍ನ ದಕ್ಷಿಣ ವಲಯದಲ್ಲಿ ನಡೆದಿರುವ ಬೆಂಕಿ ಅವಗಡದಿಂದ ಸುಮಾರು 14 ಮಂದಿ ಮೃತಪಟ್ಟು, 51ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಇಂದು ಮುಂಜಾನೆ 3 ಗಂಟೆ ಸುಮಾರಿನಲ್ಲಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಆದರೆ ತಳಮಹಡಿಯಿಂದ ಆರಂಭವಾದ ಬೆಂಕಿ ಇಡೀ ಕಟ್ಟಡವನ್ನು ಆಕ್ರಮಿಸಿದೆ. ದುರ್ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ಕೆಲವರು ಸ್ಥಳದಲ್ಲೇ ಸಜೀವ ದಹನವಾದರೆ ಇನ್ನೂ ಕೆಲವರು …
Read More »ಕೆಲವು ಗಣಿಗಳನ್ನು ಮುಚ್ಚುವುದು, ಮುಂಗಾರು ಮಳೆಯಿಂದಾಗಿ ಪ್ರವಾಹವು ಕಲ್ಲಿದ್ದಲು ಬಿಕ್ಕಟ್ಟಿಗೆ ಕಾರಣವಾಯಿತು: ಪ್ರಲ್ಹಾದ್ ಜೋಶಿ
(ಜಾರ್ಖಂಡ್): ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಗುರುವಾರ ಕೆಲವು ಗಣಿಗಳನ್ನು ಮುಚ್ಚಲಾಗಿದೆ ಮತ್ತು ಮುಂಗಾರು ಮಳೆಯಿಂದಾಗಿ ಇತರ ಕೆಲವು ಪ್ರವಾಹಗಳು ಬಿಕ್ಕಟ್ಟಿಗೆ ಕಾರಣವಾದವು ಆದರೆ ಪರಿಸ್ಥಿತಿ ಸುಧಾರಿಸುತ್ತಿರುವುದರಿಂದ ಭಯಪಡುವ ಅಗತ್ಯವಿಲ್ಲ. ಜಾರ್ಖಂಡ್‌ನ ಚತ್ರ ಜಿಲ್ಲೆಯ ಪಿಪರ್‌ವಾರ್‌ನಲ್ಲಿರುವ ಸೆಂಟ್ರಲ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಸಿಸಿಎಲ್) ಅಶೋಕ ಗಣಿಗೆ ಭೇಟಿ ನೀಡಿದ ಜೋಶಿ, ದೇಶದ ವಿದ್ಯುತ್ ಸ್ಥಾವರಗಳು ಅಗತ್ಯ ಪ್ರಮಾಣದ ಕಲ್ಲಿದ್ದಲನ್ನು ಪಡೆಯುವುದನ್ನು ಮುಂದುವರಿಸುತ್ತವೆ ಎಂದು ಹೇಳಿದರು.”ನಾವು ಈಗ ಸುಧಾರಣೆಯನ್ನು ನೋಡುತ್ತಿದ್ದೇವೆ” ಎಂದು ಅವರು …
Read More »ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಛಾಟಿತ ಆಗಿರುವ ಎಂ.ಎ. ಸಲೀಂ ಡಿ.ಕೆ. ಶಿವಕುಮಾರ್ ಅವರಿಗೆ ಕೈಮುಗಿದು ಕ್ಷಮೆ ಕೋರಿದ್ದಾರೆ.
ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಛಾಟಿತ ಆಗಿರುವ ಎಂ.ಎ. ಸಲೀಂ ಡಿ.ಕೆ. ಶಿವಕುಮಾರ್ ಅವರಿಗೆ ಕೈಮುಗಿದು ಕ್ಷಮೆ ಕೋರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಕುರಿತು ಲಘುವಾಗಿ ಮತ್ತ ಬೇಜವಾಬ್ದಾರಿಯಿಂದ ಮಾತನಾಡಿದ ಕಾರಣ ಸಲೀಂ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ ಪಕ್ಷದ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ. ರೆಹಮಾನ್ ಖಾನ್ ಬುಧವಾರ ಆದೇಶ ಹೊರಡಿಸಿದ್ದರು. ಎಂ.ಎ. ಸಲೀಂ ಕೆಪಿಸಿಸಿ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು. “ಡಿ.ಕೆ. …
Read More »ನೈತಿಕ ಪೊಲೀಸ್‌ಗಿರಿ ಪರ ಸಿಎಂ ಹೇಳಿಕೆ: ಟ್ರೆಂಡ್ ಆದ ‘ರಿಸೈನ್ ಕರ್ನಾಟಕ ಸಿಎಂ’
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ಭೇಟಿ ವೇಳೆ ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಹೇಳಿಕೆ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ‘ರಿಸೈನ್ ಕರ್ನಾಟಕ ಸಿಎಂ’ (#ResignKarnatakaCM) , ‘ಸಿಎಂ ಸಪೋರ್ಟ್ ಮಾರಲ್ ಪೊಲೀಸಿಂಗ್’ (#CMSupportsMoralPolicing) ಹ್ಯಾಷ್‌ಟ್ಯಾಗ್‌ನಡಿ ನೀಡುತ್ತಿರುವ ಪ್ರತಿಕ್ರಿಯೆಗಳು ಟ್ರೆಂಡ್ ಆಗಿವೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹಿತ ಹಲವರು ಮುಖ್ಯಮಂತ್ರಿ ಹೇಳಿಕೆಯನ್ನು ಖಂಡಿಸಿದ್ದಾರೆ. ಅ.13ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಬಸವರಾಜ …
Read More »100 ರೂ.ನಲ್ಲಿ ಬಸ್ ಪೂಜೆ ಮಾಡುವುದು ಹೇಗೆ ಸಾರಿಗೆ ಇಲಾಖೆ: ಸಿಬ್ಬಂದಿ ಆಕ್ರೋಶ
ಬೆಂಗಳೂರು, ಅಕ್ಟೋಬರ್ 14: ನಾಡಿನೆಲ್ಲಡೆ ಸಂಭ್ರಮದ ದಸರಾ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಈ ಬಾರಿ ಕೊರೊನಾ ಸೋಂಕು ಪ್ರಕರಣಗಳು ತಗ್ಗಿದ್ದರಿಂದ ದಸರಾ ಆಚರಣೆ ತುಸು ಮೆರುಗನ್ನು ಪಡೆದುಕೊಂಡಿದೆ. ಇಂದು ರಾಜ್ಯಾದ್ಯಂತ ಆಯುಧ ಪೂಜೆಯ ಸಂಭ್ರಮ ಮನೆ ಮಾಡಿದೆ. ಕಚೇರಿಗಳಲ್ಲಿ, ಮನೆಗಳಲ್ಲಿ, ವಾಹನಗಳಿಗೆ ಆಯುಧ ಪೂಜಾ ಹಬ್ಬವನ್ನು ಬಂಧು ಬಳಗದ ಜೊತೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಆದರೆ ಸದಾ ಸುದ್ದಿಯಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಬೆಂಗಳೂರು ಮಹಾನಗರ …
Read More »ಕರೋನಾ ಸೇನಾನಿಗಳಿಗೆ ಹಾಗೂ ಕೋವಿಡ್ 19 ಲಸಿಕಾ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ
ಕರೋನಾ ಸೇನಾನಿಗಳಿಗೆ ಹಾಗೂ ಕೋವಿಡ್ 19 ಲಸಿಕಾ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ ನಗರದ ಶ್ರೀ ಎಸ್ ಜಿ ಬಾಳೆಕುಂದ್ರಿ ಇಂಜಿನಿಯರಿಂಗ ಕಾಲೇಜು ಸಭಾಗೃಹ ಬೆಳಗಾವಿಯಲ್ಲಿ ಜರುಗಿತು. ಮಾನ್ಯ ಪ್ರಧಾನಿ ಶ್ರೀ ಮೋದಿಜಿ ಹಾಗೂ ಆರೋಗ್ಯ ಇಲಾಖೆಯ ಸತತ ಪ್ರಯತ್ನದಿಂದ ಭಾರತ ದೇಶಾದ್ಯಂತ 100 ಕೋಟಿ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ 30,18,570 ಜನರಿಗೆ ಕೋವಿಡ್ 19 ಲಸಿಕೆ ನೀಡಿದ ಪ್ರಯುಕ್ತ ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಳಗಾವಿ ಜಿಲ್ಲಾ ಆರೋಗ್ಯ …
Read More »ಇಂದು ರಿಲೀಸ್ ಆಗಲೇ ಇಲ್ಲ ಕೋಟಿಗೊಬ್ಬ : ಸುದೀಪ್ ಸರ್ ಗೆ ಸತ್ಯ ಗೊತ್ತಿದೆ ಎಂದ ಸೂರಪ್ಪ ಬಾಬು
ಬೆಂಗಳೂರು: ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಆಗದ ಕಾರಣ ಅಭಿಮಾನಿಗಳಲ್ಲಿ ನಟ ಕಿಚ್ಚಾ ಸುದೀಪ್ ಕ್ಷಮೆ ಕೇಳಿದ್ದಾರೆ. ಟ್ವಿಟ್ಟರ್ ನಲ್ಲಿ ಕ್ಷಮೆಯಾಚಿಸಿರುವ ಸುದೀಪ್, ಈಗಾಗಲೇ ಥಿಯೇಟರ್ಗಳ ಬಳಿ ಆಗಮಿಸಿರುವ ಎಲ್ಲ ಅಭಿಮಾನಿಗಳಿಗೂ ಶೋ ತಡವಾದ ಬಗ್ಗೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ಥಿಯೇಟರ್ ನಲ್ಲಿ ಸಿನಿಮಾ ಇದೆ.. ಆದರೆ ತಾಂತ್ರಿಕ ಸಮಸ್ಯೆಯಿಂದ ಸಿನಿಮಾ ತೋರಿಸಲು ಆಗುತ್ತಿಲ್ಲ ಎಂದಿದ್ದಾರೆ. ಟ್ವಿಟ್ಟರ್ ನಲ್ಲಿ ಅಭಿಮಾನಿಗಳಿಗೆ ಮನವಿ ಮಾಡಿದ ಸುದೀಪ್ ಸದ್ಯ …
Read More »ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು: ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಮನಮೋಹನ್ ಸಿಂಗ್ ಅವರ ಆರೋಗ್ಯ ಬುಧವಾರ ಹದಗೆಟ್ಟಿದೆ. ಡಾ.ನಿತೀಶ್ ನಾಯಕ್ ಅವರ ನೇತೃತ್ವದ ವೈದ್ಯರ ತಂಡದ ಮೇಲ್ವಿಚಾರಣೆಯಲ್ಲಿ ಸಿಂಗ್ ಆರೋಗ್ಯ ತಪಾಸಣೆ ನಡೆಸಲಾಗಿದೆ. ಅವರು ಉಸಿರಾಟದ ತೊಂದರೆಗೊಳಲಾಗಿದ್ದಾರೆ. ಮತ್ತು ಎದೆನೋವು ಕಾಣಿಸಿಕೊಂಡಿದೆ. ಡಾ.ಮನಮೋಹನ್ ಸಿಂಗ್ ಅವರ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ನೇತೃತ್ವದ ವೈದ್ಯಕೀಯ ತಂಡ ಕಾರ್ಯೋನ್ಮುಖವಾಗಿದೆ. ಹೆಚ್ಚಿನ ವಿವರಗಳನ್ನು …
Read More »
Laxmi News 24×7