ಕೊಪ್ಪಳ: ಜಯಮೃತ್ಯುಂಜಯ ಸ್ವಾಮೀಜಿ ಶಾಪದಿಂದಲೇ ಮಾಜಿ ಸಿಎಂ ಯಡಿಯೂರಪ್ಪ ಅಧಿಕಾರ ಹೋಗಿದೆ ಎಂದು ಕೊಪ್ಪಳದಲ್ಲಿ ಪಂಚಮಸಾಲಿ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ. ಯಡಿಯೂರಪ್ಪ ಅವರು ಅಧಿಕಾರ ಕಳೆದುಕೊಂಡ ಬಗ್ಗೆ ಮಾತನಾಡಿದ ಅವರು, ಜಯಮೃತ್ಯುಂಜಯ ಸ್ವಾಮೀಜಿ ಶಾಪದಿಂದಲೇ ಯಡಿಯೂರಪ್ಪ ಅವರ ಅಧಿಕಾರ ಹೋಗಿದೆ. ಮೀಸಲಾತಿ ಕೊಡ್ತೀನಿ ಎಂದು ಯಡಿಯೂರಪ್ಪ ಅವರು ಮೀಸಲಾತಿ ಕೊಡಲಿಲ್ಲ. ಅದೇ ಕಾರಣಕ್ಕಾಗಿಯೇ ಅವರ ಅಧಿಕಾರ ಹೋಯ್ತು. ಸ್ವಾಮೀಜಿ ಅವರ ಶಾಪವೇ ಯಡಿಯೂರಪ್ಪ ಅವರಿಗೆ ತಟ್ಟಿದೆ …
Read More »ಅಪಘಾತದಿಂದ ಜೀವ ಉಳಿಸಲು ಅಂಗಲಾಚಿದ ಯುವಕ, ಯುವತಿ
ವಿಜಯಪುರ: ನಗರದಲ್ಲಿ ಹಿಟ್ ಆ್ಯಂಡ್ ರನ್ ಕೇಸ್ ನಡೆದಿದೆ. ಯಾರೋ ಬೈಕ್‍ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ. ಪರಿಣಾಮ ಬೈಕ್ ಮೇಲಿಂದ ಬಿದ್ದು, ಗಾಯಗೊಂಡು ಯುವಕ, ಯುವತಿ ಒದ್ದಾಡಿದ್ದಾರೆ. ಅಲ್ಲದೆ ಸಹಾಯಕ್ಕಾಗಿ ಅಂಗಲಾಚಿದ ಹೃದಯವಿದ್ರಾವಕ ಘಟನೆ ನಡೆದಿದೆ. ನಗರದ ಜುಮನಾಳ ರಸ್ತೆಯ ದದಾಮಟ್ಟಿ ಕ್ರಾಸ್ ಬಳಿ ಘಟನೆ ನಡೆದಿದೆ. ಕಾಪಾಡುವಂತೆ ಯುವಕ, ಯುವತಿ ಅಂಗಲಾಚುತ್ತಿದ್ದ ವಿಡಿಯೋ ವೈರಲ್ ಆಗಿದೆ. ರಸ್ತೆಯಲ್ಲಿ ಒದ್ದಾಡುತ್ತ, ಕಾಪಾಡಿ ಎಂದು ಬೈಕ್ ಸವಾರರಾದ ಸಚಿನ್, ಸುಜಾತಾ …
Read More »ಮುಸ್ಲಿಂ ಯುವತಿಗೆ ಡ್ರಾಪ್ ಮಾಡಿದ್ದಕ್ಕೆ ಹಿಂದೂ ಯುವಕನಿಗೆ ಹಲ್ಲೆ; ಅರ್ಧ ದಿನದಲ್ಲಿ ಆರೋಪಿಗಳು ಅರೆಸ್ಟ್
ಬೆಂಗಳೂರು(ಸೆ.19): ತೆಲಂಗಾಣದ(Telangana) ನೈತಿಕ ಪೊಲೀಸ್ಗಿರಿ ಪ್ರಕರಣದ ಬೆನ್ನಲ್ಲೇ ಕರ್ನಾಟಕದಲ್ಲೂ ಅಂತಹದ್ದೇ ಘಟನೆ ಬೆಳಕಿಗೆ ಬಂದಿದೆ. ಕೆಲದಿನಗಳ ಹಿಂದೆ ತೆಲಂಗಾಣದ ನಿಜಾಮಾಬಾದ್ನಲ್ಲಿ ಮುಸ್ಲಿಂ ಯುವತಿ(Muslim Girl)ಯನ್ನು ಬೈಕ್ನಲ್ಲಿ ಕೂರಿಸಿಕೊಡಿದ್ದ ಹಿಂದೂ ಯುವಕನನ್ನು ಪುಂಡರ ಗುಂಪೊಂದು ಅಪಹರಿಸಿ, ಹಲ್ಲೆ ಮಾಡಿತ್ತು. ಅದರ ಬೆನ್ನಲ್ಲೇ ತೆಲಂಗಾಣ ಪೊಲೀಸರು 5 ಮಂದಿ ಯುವಕರನ್ನು ಬಂಧಿಸಿದ್ದರು. ಈಗ ಅದೇ ರೀತಿಯ ಘಟನೆ ಕರ್ನಾಟಕದಲ್ಲೂ(Karnataka) ನಡೆದಿದೆ. ಮುಸ್ಲಿಂ ಯುವತಿಯನ್ನು ತನ್ನ ಬೈಕ್ ನಲ್ಲಿ ಕೂರಿಸಿಕೊಂಡಿದ್ದ ಹಿಂದೂ ಯುವಕನ ಮೇಲೆ …
Read More »ನನ್ನ ಪ್ರವಾಸ ಆರಂಭವಾಗಿದೆ : ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ : ಬಿಎಸ್ ವೈ
ದಾವಣಗೆರೆ : ರಾಜ್ಯದಲ್ಲಿ ನನ್ನ ಪ್ರವಾಸ ಆರಂಭವಾಗಿದ್ದು ರಾಜ್ಯದಲ್ಲಿ ಎಲ್ಲಾ ಕಡೆ ಸಂಚರಿಸಿ 130 ರಿಂದ 140 ಸೀಟ್ ಗೆದ್ದು ಅಧಿಕಾರಕ್ಕೆ ಮತ್ತೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ದೃಷ್ಠಿಯಿಂದ ರಾಜ್ಯ ಕಾರ್ಯಕಾರಣಿ ಸಭೆ ನಡೆಸಲು ದಾವಣಗೆರೆಗೆ ಬಂದಿದ್ದ ಬಿಎಸ್ ವೈ ನನ್ನ ಪ್ರವಾಸ ಈಗಾಗಲೇ ಪ್ರಾರಂಭವಾಗಿದೆ, ರಾಜ್ಯದಲ್ಲಿ ಎಲ್ಲಾ ಕಡೆ ಸಂಚರಿಸಿ 130 -140 ಸೀಟ್ …
Read More »ಇಂದಿನಿಂದ IPL ಎರಡನೇ ಇನ್ನಿಂಗ್ಸ್ ಆರಂಭ : ಮುಂಬೈ-ಚೆನ್ನೈ ಜಟಾಪಟಿ
ದುಬೈ: ಮೇ ಆರಂಭದಲ್ಲಿ ಕೋವಿಡ್ ಕಾರಣದಿಂದ ಭಾರತದಲ್ಲಿ ಅರ್ಧಕ್ಕೆ ನಿಂತಿದ್ದ 2021ರ ಐಪಿಎಲ್‌ಗೆ ಬರೋಬ್ಬರಿ ನಾಲ್ಕೂವರೆ ತಿಂಗಳ ಬಳಿಕ ಯುಎಇಯಲ್ಲಿ ಮುಂದುವರಿಯುವ ಮುಹೂರ್ತ ಕೂಡಿಬಂದಿದೆ. ಭಾನುವಾರದಿಂದ ಅ.15ರ ತನಕ ದುಬೈ, ಶಾರ್ಜಾ, ಅಬುಧಾಬಿಯಲ್ಲಿ ಉಳಿದ 31 ಪಂದ್ಯಗಳು ನಡೆಯಲಿದ್ದು, ಕ್ರಿಕೆಟ್ ಪ್ರೇಮಿಗಳು ಮತ್ತೂಂದು ಕಂತಿನ ರೋಮಾಂಚನವನ್ನು ಅನುಭವಿಸುವ ಸಂಭ್ರಮದಲ್ಲಿದ್ದಾರೆ. ಮೇ 2ರಂದು ಅಹ್ಮದಾಬಾದ್‌ನಲ್ಲಿ ಪಂಜಾಬ್-ಡೆಲ್ಲಿ ನಡುವಿನ ಮುಖಾಮುಖೀ ಬಳಿಕ ಜೈವಿಕ ಸುರಕ್ಷಾ ವಲಯದಲ್ಲೂ ಕೊರೊನಾ ಕೇಸ್ ಕಂಡುಬಂದುದರಿಂದ ಪಂದ್ಯಾವಳಿಯನ್ನು ನಿಲ್ಲಿಸಲಾಗಿತ್ತು. …
Read More »ಸೈಟ್ ಮಾರಾಟ ಮಾಡಿಕೊಡುವುದಾಗಿ ನಂಬಿಸಿ ನಿವೃತ್ತ ಎಸಿಪಿಗೆ ವಂಚನೆ
ಬೆಂಗಳೂರು: ಸೈಟ್ ಮಾರಾಟ ಮಾಡಿಕೊಡುವುದಾಗಿ ನಂಬಿಸಿ ನಿವೃತ್ತ ಎಸಿಪಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪೆನಿ ಒಂದರ ವಿರುದ್ಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತ ಎಸಿಪಿ ಲವಕುಮಾರ್ ಎಂಬುವರು ಜಿಗಣಿಯ ನವ್ಯ ಲೇಔಟ್‍ನಲ್ಲಿ 90 ಲಕ್ಷ ಮೌಲ್ಯದ ಮೂರು ನಿವೇಶನ ಹೊಂದಿದ್ದರು. ಕೆಲದಿನಗಳ ಹಿಂದೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ನಿರ್ಮಾಣ್ ಶೆಲ್ಟರ್ಸ್ ಕಂಪೆನಿ ಸಂಪರ್ಕಿಸಿ ತಮ್ಮ ಬಳಿಯಿರುವ ನಿವೇಶನಗಳನ್ನು ಮಾರಾಟ ಮಾಡಿಕೊಡಿಕೊಡುವುದಾಗಿ ಹೇಳಿದ್ದು, …
Read More »ತಂದೆಯಿಂದಲೇ ಕಂದಮ್ಮನ ಕೊಲೆ!
ಚಿಕ್ಕೋಡಿ(ಬೆಳಗಾವಿ): ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ರಾಯಬಾಗ ತಾಲೂಕಿನ ಆಲಖನೂರಿನಲ್ಲಿ ಎರಡೂವರೆ ವರ್ಷದ ಮಗು ಬೋರ್ವೆಲ್ನಲ್ಲಿ ಸಿಕ್ಕಿ ಪ್ರಾಣ ಬಿಟ್ಟಿರುವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತಂದೆಯೇ ಮಗುವನ್ನು ಹೊಡೆದು ಕೊಲೆ ಮಾಡಿ ಬೋರ್ವೆಲ್ಗೆ ಎಸೆದಿರುವುದಾಗಿ ಬೆಳಕಿಗೆ ಬಂದಿದೆ. ಶರತ್ ಸಿದ್ದಪ್ ಹಸರೆ (2) ಮೃತ ದುರ್ದೈವಿ. ಹೆತ್ತ ತಂದೆಯೇ ಶರತ್ ನನ್ನು ಹೊಡೆದು ಕೊಂದು ಬೋರ್ವೆಲ್ಗೆ ಹಾಕಿ ಮಗು ಕಾಣೆಯಾಗಿದೆ, ಬೋರ್ವೆಲ್ನಲ್ಲಿ ಸಿಲುಕಿರುವ ಶಂಕೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದನು. ಆದರೆ …
Read More »ಬೆಂಗಳೂರು ಹೊರವಲಯದಲ್ಲಿ ರೇವ್ ಪಾರ್ಟಿ- ಅರೆನಗ್ನ ಸ್ಥಿತಿಯಲ್ಲಿ ಯುವತಿಯರ ಡ್ಯಾನ್ಸ್
ಬೆಂಗಳೂರು: ನಗರದ ಹೊರ ವಲಯದಲ್ಲಿ ರೇವ್ ಪಾರ್ಟಿ ನಡೆದಿರುವುದು ಮತ್ತೆ ಬೆಳಕಿಗೆ ಬಂದಿದ್ದು, ಒಟ್ಟು 20 ಜನರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ರೆಸಾರ್ಟ್‍ಗೆ ಎಂಟ್ರಿ ಕೊಡುತ್ತಿದ್ದಂತೆ ಯುವಕ, ಯುವತಿಯರು ಎದ್ನೋ ಬಿದ್ನೋ ಎಂದು ಓಡಿದ್ದಾರೆ. ಡ್ರಗ್ಸ್ ಸೇವಿಸಿ ಅರೆ ನಗ್ನ ಸ್ಥಿತಿಯಲ್ಲಿದ್ದ ಕೆಲವರನ್ನು ಖಾಕಿ ಪಡೆ ಹಿಡಿದಿದೆ. ರೇವ್ ಪಾರ್ಟಿಯ ಡ್ರಗ್ಸ್ ಜಾಲದಲ್ಲಿ ವಿದ್ಯಾರ್ಥಿಗಳು, ಶ್ರೀಮಂತರ ಮಕ್ಕಳು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಗರದ ಹೊರ ವಲಯದ ಆನೇಕಲ್ …
Read More »ಮೂರು ತಿಂಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಗೆ ಮೋದಿ ಚಿಂತನೆ
ಮಡಿಕೇರಿ: ಮೂರು ತಿಂಗಳಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಇಳಿಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಚಿಂತನೆ ನಡೆಸಿದ್ದಾರೆ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಪೆಟ್ರೋಲ್, ಡೀಸೆಲ್‍ನ್ನು ಜಿಎಸ್‍ಟಿ ವ್ಯಾಪ್ತಿಗೆ ತಂದರೆ ಪ್ರತಿ ಲೀಟರ್ ಗೆ 20 ರೂಪಾಯಿ ಕಡಿಮೆ ಆಗುತ್ತೆ. ಆದರೆ ಇದರಿಂದ ರಾಜ್ಯಗಳ ಆದಾಯಕ್ಕೆ ಪೆಟ್ಟು ಬೀಳುತ್ತದೆ. ಹೀಗಾಗಿ ಜಿಎಸ್‍ಟಿ ವ್ಯಾಪ್ತಿಗೆ ತರುವುದನ್ನು ರಾಜ್ಯಗಳು ವಿರೋಧಿಸುತ್ತಿವೆ. ಆದರೆ …
Read More »ದೇವಸ್ಥಾನ ಕೆಡವಿ ಹಿಂದೂ ಧರ್ಮಕ್ಕೆ ದ್ರೋಹ: ದಿಂಗಾಲೇಶ್ವರ ಶ್ರೀ
ಧಾರವಾಡ: ಅಧ್ಯಯನ ಮಾಡದೇ ದೇವಸ್ಥಾನ ಕೆಡವಿದ್ದು ಹಿಂದೂ ಧರ್ಮಕ್ಕೆ ಮಾಡಿದ ದ್ರೋಹ ಎಂದು ದಿಂಗಾಲೇಶ್ವರ ಶ್ರೀಗಳು ಸರ್ಕಾರದ ವಿರುದ್ಧ ಕಿಡಿಕಾರಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಅಧಿಕಾರಿಗಳು ಮೈಸೂರಿನಲ್ಲಿ ದೇವಸ್ಥಾನ ಕೆಡವಿ ವಿವಾದಕ್ಕೆ ಸೃಷ್ಟಿ ಮಾಡಿದ್ದಾರೆ. ಇದರಿಂದ ಸರ್ಕಾರದಲ್ಲಿ ಎಷ್ಟು ಬುದ್ಧಿಗೇಡಿ ಅಧಿಕಾರಿಗಳು ಕೆಲಸ ಮಾಡುತಿದ್ದಾರೆ ಎಂದು ತಿಳಿಯುತ್ತಿದೆ. ಯಾವುದೇ ಅಧ್ಯಯನ ನಡೆಸದೇ ದೇವಸ್ಥಾನ ಕೆಡವಿ ಹಿಂದೂ ಧರ್ಮಕ್ಕೆ ದ್ರೋಹ ಮಾಡಿದ್ದಾರೆ ಎಂದು ಬಾಲೇಹೊಸೂರ ಮಠದ ದಿಂಗಾಲೇಶ್ವರ ಶ್ರೀಗಳು …
Read More »
Laxmi News 24×7