Breaking News

ರಾಜ್ಯ

ಪಿಡಿಒನನ್ನು ಹೊರದಬ್ಬಿ ಪಂಚಾಯಿತಿ ಕಚೇರಿಗೆ ಬೀಗ ಜಡಿದ ಗ್ರಾಪಂ ಸದಸ್ಯರು!

ಚಿಕ್ಕಬಳ್ಳಾಪುರ: ಪಿಡಿಒ ಅವರನ್ನು ಹೊರಗೆ ಹಾಕಿ ಗ್ರಾಮ ಪಂಚಾಯಿತಿ ಕಚೇರಿಗೆ ಸದಸ್ಯರು ಬೀಗ ಜಡಿದ ಘಟನೆ ಗುಡಿಬಂಡೆ ತಾಲೂಕು ವರ್ಲಕೊಂಡ ಗ್ರಾಮದಲ್ಲಿ ಸಂಭವಿಸಿದೆ. ಪಂಚಾಯಿತಿ ಕಾರ್ಯಾಲಯಕ್ಕೆ ಪಿಡಿಒ ಶ್ರೀನಿವಾಸ್​ ಸರಿಯಾಗಿ‌ ಬರುತ್ತಿಲ್ಲ, ಅಭಿವೃದ್ಧಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಗ್ರಾಪಂ ಸದಸ್ಯರು ಅಧ್ಯಕ್ಷೆ ಆನಂದಮ್ಮ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪಿಡಿಒ ಶ್ರೀನಿವಾಸ್ ಅವರನ್ನ ವರ್ಗಾವಣೆ ಮಾಡುವಂತೆ ಜಿಪಂ ಸಿಇಒ ಸೇರಿದಂತೆ ಮೇಲಧಿಕಾರಿಗಳಿಗೆ ಜನಪತ್ರಿನಿಧಿಗಳು ದೂರು‌ ನೀಡಿದ್ದರು. ಆದರೂ …

Read More »

ಅರಣ್‌ಸಿಂಗ್ ರಾಜ್ಯಕ್ಕೆ ಬರೋದೇ ದುಡ್ಡು ವಸೂಲಿ ಮಾಡೋದಕ್ಕೆ : ಹೆಚ್.ಡಿ.ಕೆ ವಾಗ್ದಾಳಿ

ಮೈಸೂರು : ರಾಜ್ಯ ಬಿಜೆಪಿ ಉಸ್ತುವಾರಿ ಸಚಿವ ಅರುಣ್ ಸಿಂಗ್ ರಾಜ್ಯಕ್ಕೆ ಬರುವುದು ಕೇವಲ ದುಡ್ಡು ವಸೂಲಿ ಮಾಡುವುದಕ್ಕಾಗಿ ಅದು ಬಿಟ್ಟರೆ ಅವರಿಗೆ ಬೇರೇನೂ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅರುಣ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಹೇಳಿಕೆ ನೀಡಿದ ಅರುಣ್ ಸಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಕರ್ನಾಟಕ ಹಾಗೂ ಇಲ್ಲಿನ ಸ್ಥಳೀಯ ಪಕ್ಷದ ಬಗ್ಗೆ ಆತನಿಗೆ …

Read More »

ಮಹಾನ್ ನಾಯಕರ ಪುತ್ಥಳಿಗಳನ್ನು ತೆರವು ಮಾಡಲು BBMPಯಿಂದ ತಯಾರಿ

ಬೆಂಗಳೂರು :ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಬಿಎಂಪಿಯಿಂದ ಅನುಮತಿ ಪಡೆಯದೇ ಅಭಿಮಾನಿಗಳು ನಿರ್ಮಿಸಿದ ರಾಜ್ ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್, ಬಸವಣ್ಣ ಸೇರಿದಂತೆ ಮಹಾನ್ ನಾಯಕರ ಪುತ್ಥಳಿಗಳನ್ನು ಶೀಘ್ರದಲ್ಲೇ ತೆರವು ಮಾಡಲು ಬಿಬಿಎಂಪಿ ನಿರ್ಧರಿಸಿದೆ. ಸಿನಿ ಪ್ರೇಮಿಗಳು ತಮಗೆ ಇಷ್ಟವಾದ ನೆಚ್ಚಿನ ನಟರ ಸಂಘಗಳನ್ನು, ಬಳಗಗಳನ್ನು ಮಾಡಿಕೊಂಡು ಏರಿಯಾದಲ್ಲಿ ಪುತ್ಥಳಿಗಳನ್ನು ನಿರ್ಮಿಸಿರುತ್ತಾರೆ. ಅಂತವರ ಕನಸಿನ ಪುತ್ಥಳಿಯ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿದೆ. ಅಭಿಮಾನಿಗಳು ಅನಧಿಕೃತವಾಗಿ ನಗರದಲ್ಲಿ ಪುತ್ಥಳಿ ಸ್ಥಾಪನೆ ಮಾಡಿದ್ದಾರೆ. ಅವರು ಬಿಬಿಎಂಪಿಯಿಂದ …

Read More »

ನ.1ರಿಂದ ಆಡಳಿತ ಸುಧಾರಣೆ ಜಾರಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಟಿ.ಎಂ. ವಿಜಯ ಭಾಸ್ಕರ್‌ ನೇತೃತ್ವದ ಆಡಳಿತ ಸುಧಾರಣಾ ಆಯೋಗದ ಮೊದಲ ವರದಿಯಲ್ಲಿನ ಶಿಫಾರಸುಗಳನ್ನು ನವೆಂಬರ್‌ 1ರಿಂದ ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕಾಗಿ ಸಲಹಾ ಸಮಿತಿ ರಚಿಸಲಾಗುವುದು. ಸಮಿತಿಯ ಸಲಹೆಗಳ ಆಧಾರದಲ್ಲಿ ನ.1ರಿಂದಲೇ ಅನುಷ್ಠಾನಕ್ಕೆ ಚಾಲನೆ ನೀಡಲಾಗುವುದು’ ಎಂದರು. ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ …

Read More »

ವ್ಯಾಕ್ಸಿನ್ ಪಡೆಯದಿದ್ದರೆ ರೇಷನ್ ಕೊಡಲ್ಲ ಅನ್ನೋದು ತಪ್ಪು : ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ : ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯದವರಿಗೆ ರೇಷನ್ ಕೊಡಲ್ಲ ಎಂಬುದರ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ವ್ಯಾಕ್ಸಿನ್ ಪಡೆಯದಿದ್ದರೆ ರೇಷನ್ ಕೊಡಲ್ಲ ಅನ್ನೋದು ತಪ್ಪು ಎಂದು ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಕೊರೊನಾ ಲಸಿಕೆ ಪಡೆಯದಿದ್ದರೆ ರೇಷನ್ ಕೊಡಲ್ಲ ಅನ್ನೋದು ತಪ್ಪು, ಜನರ ಮನವೊಲಿಸಿ ಕೋವಿಡ್ ವ್ಯಾಕ್ಸಿನ್ ಹಾಕಿಸಬೇಕು ಎಂದು ಹೇಳಿದ್ದಾರೆ. ಇನ್ನು ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾ …

Read More »

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ : ಕರ್ನಾಟಕ ಪೊಲೀಸ್ ಕಾನ್ಸ್ ಟೇಬಲ್-ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕ್ರೀಡಾಪಟುಗಳಿಗೆ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಕಾನ್ ಸ್ಟೆಬಲ್ ಮತ್ತು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪೋಸ್ಟ್ ಗಳಿಗೆ (ಸಿವಿಲ್) (ಪುರುಷರು ಮತ್ತು ಮಹಿಳೆಯರು) ಇನ್-ಸರ್ವೀಸ್ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ಇನ್-ಸರ್ವೀಸ್ ಪೋಸ್ಟ್ ಗಳು ಸೇರಿದಂತೆ ನೇಮಕಾತಿಗಾಗಿ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.   ಒಟ್ಟು 100 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ನಮೂನೆಗಳು ಕರ್ನಾಟಕ ರಾಜ್ಯ ಪೊಲೀಸ್ …

Read More »

ಮಹಿಳೆಗೆ ಚುಡಾಯಿಸಿದ ಆರೋಪ.. ಸ್ಥಳೀಯರಿಂದ ಪರಿಸರವಾದಿ ಡಿ.ವಿ.ಗಿರೀಶ್ ಮೇಲೆ ಹಲ್ಲೆ

ಚಿಕ್ಕಮಗಳೂರು: ಮಹಿಳೆಗೆ ಚುಡಾಯಿಸಿದರೆಂದು ಆರೋಪಿಸಿ ಪರಿಸರವಾದಿ ವೈಲ್ಡ್ ಕ್ಯಾಟ್ – ಸಿ ಸಂಸ್ಥೆಯ ಡಿ.ವಿ.ಗಿರೀಶ್ ಮೇಲೆ ಸ್ಥಳೀಯರು ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಿಲ್ಲೆಯ ಕಂಬಿಹಳ್ಳಿ ಗ್ರಾಮದ ಮಹಿಳೆಯೊಬ್ಬರಿಗೆ ಚುಡಾಯಿಸಿದ್ದಾರೆ ಎಂದು ಆರೋಪಿಸಿ ಕೆಲ ಸ್ಥಳೀಯರು ಡಿ.ವಿ.ಗಿರೀಶ್ ಹಾಗೂ ಅವರ ಸ್ನೇಹಿತರು ತೆರಳುತ್ತಿದ್ದ ಕಾರನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ. ಅಲ್ಲದೇ ಅವರ ಜೊತೆಯಲ್ಲಿದ್ದವರಿಗೂ ಥಳಿಸಿದ್ದಾರೆ ಎಂದು ಕೆಲ ಸ್ಥಳೀಯರು ಹೇಳುತ್ತಿದ್ದಾರೆ. ಇನ್ನೂ ಕೆಲ …

Read More »

ಮಹಾಮಾರಿ ಕೋವಿಡ್‌ಗೆ ಕುಖ್ಯಾತ ರೌಡಿಶೀಟರ್‌ ಬಾಂಬೆ ರವಿ ಬಲಿ

ಬೆಂಗಳೂರು: ಕೊಲೆ, ಕೊಲೆ ಯತ್ನ ಹಾಗೂ ದರೋಡೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಹಲವು ವರ್ಷಗಳಿಂದ ಭೂಗತನಾಗಿದ್ದ ಕುಖ್ಯಾತ ರೌಡಿಶೀಟರ್ ಬಾಂಬೆ ರವಿ ಕೊರೊನಾಗೆ ಬಲಿಯಾಗಿದ್ದಾನೆ‌. ಹಲವು ವರ್ಷಗಳಿಂದ ದಕ್ಷಿಣ ಆಫ್ರಿಕಾದಲ್ಲಿ ತಲೆಮರೆಸಿಕೊಂಡಿದ್ದ ಬಾಂಬೆ ರವಿಗೆ ಕೋವಿಡ್‌ ಸೋಂಕು ತಗುಲಿ ಸ್ಥಳೀಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ‌. ಮೃತ ರೌಡಿಶೀಟರ್‌ ಹಲವು ವರ್ಷಗಳಿಂದ ಬೆಂಗಳೂರು ಪೊಲೀಸರಿಗೆ ತಲೆನೋವಾಗಿದ್ದ. ಭೂಗತನಾಗಿದ್ದುಕೊಂಡೇ ನಗರದಲ್ಲಿ ರೌಡಿ ಚಟುವಟಿಕೆಯಲ್ಲಿ ಪರೋಕ್ಷವಾಗಿ ಭಾಗಿಯಾಗಿದ್ದ. ಕಳೆದ …

Read More »

ಯುವ ಜನತೆ ಕ್ರೀಡೆಯಲ್ಲಿ ಹೆಚ್ಚಿಗೆ ಭಾಗವಹಿಸಬೇಕು, ಶಿಕ್ಷಣ ಹಾಗೂ ಕ್ರೀಡೆಗೆ ಒತ್ತು ನೀಡಿ ನಮ್ಮ ನಾಡಿಗೆ ಕೀರ್ತಿ ತರಬೇಕು ಎಂದು ರಾಹುಲ್ ಜಾರಕಿಹೊಳಿ.ಹೇಳಿದರು

ಗೋಕಾಕ: ಅಗಸ್ಟ್ 28 ರಿಂದ 30 ರವರೆಗೆ ನವದೆಹಲಿಯಲ್ಲಿ ನಡೆದಂತಯ ಯೂತ್ ಗೇಮ್ಸ್ ಫಡೇರೆಷಣ ಆಫ್ ಇಂಡಿಯಾ ದ ಯುತ್ ಗೇಮ್ಸ್ ಆಲ್ ಇಂಡಿಯಾ ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಗೋಕಾಕದ ಯುವಕರು ವಿಜೇತರಾಗಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರನ್ನು ಭೇಟಿಯಾದರು. ಇಲ್ಲಿನ ಹಿಲ್ ಗಾರ್ಡನ್ ಕಛೇರಿಯಲ್ಲಿ ಬುಡೊಬಾಸ್ ಇಂಟರ್ ನ್ಯಾಶನಲ್ ಕರಾಟೆ ಡು ಅಕಾಡೆಮಿ ಗೋಕಾಕದ ತರಬೇತಿಗಾರರಾದ ದುರ್ಯೋಧನ ಕಡಕೋಳ ಹಾಗೂ ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ವಿಜೇತರಾದ ಮಹೇಶ್ …

Read More »

ಗೋಕಾಕ ಮತ್ತೆ ಸರಣಿ ಕಳ್ಳತನ….

    ಗೋಕಾಕ: ನಗರದ ಕಿಲ್ಲಾ ಆಚಾರ ಗಲ್ಲಿಯಲ್ಲಿ ಸೋಮವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ. ಬೀಗ ಹಾಕಿರುವ ಮನೆಗಳಲ್ಲಿ ಕಳ್ಳತನ ನಡೆದಿವೆ. ಪೋಲಿಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಪದೇ ಪದೆ ಕಳ್ಳತನಗಳು ನಡೆಯುತ್ತಿದ್ದುದರಿಂದ ನಗರದ ಜನರಲ್ಲಿ ಆತಂಕ ಮೂಡಿದೆ. ಕಳ್ಳರು 12 ಸಾವಿರ ರೂ. ದೋಚಿರುವುದಾಗಿ ಮಾಹಿತಿ ಲಭ್ಯವಾಗಿದೆ. ಈ ಮೊದಲು ವಿವೇಕಾನಂದ ನಗರದಲ್ಲಿ ಸರಣಿ ಕಳ್ಳತನ ನಡೆದಿತ್ತು. ಕಳ್ಳರನ್ನು ಹಿಡಿಯುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಕಳ್ಳರು ಈಗಾಗಲೇ …

Read More »