ಮೈಸೂರು: ಮುಂದಿನ 2022ರ ದಸರಾ ಹಬ್ಬಕ್ಕೆ ಮುಂಚಿತವಾಗಿ ಬೆಂಗಳೂರು-ಮೈಸೂರು ಹತ್ತು ಪಥದ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನ ಮೊದಲ ಹಾಗೂ ಎರಡನೇ ಅಲೆ ಹಿನ್ನೆಲೆ ರಸ್ತೆ ಕಾಮಗಾರಿ ನಡೆಯೋದಿಲ್ಲ ಎಂಬ ಭಾವನೆ ಇತ್ತು. ಆದರೆ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 2022ರ ಮೈಸೂರು ದಸರಾ ವೇಳೆಗೆ ಸಿದ್ಧಗೊಳ್ಳಲಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರದ ನೆರವು ಇಲ್ಲದೆ, ಸಂಪೂರ್ಣ ಕೇಂದ್ರ …
Read More »ಸರಕಾರಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಿ : ಅಧಿಕಾರಿಗಳಿಗೆ ಸಚಿವೆ ಜೊಲ್ಲೆ ಸೂಚನೆ
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸುವಂತೆ ಮುಜರಾಯಿ, ವಕ್ಪ್ ಮತ್ತು ಹಜ್ ಸಚಿವರಾದ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆಯಾದ ಮೇಲೆ ಬುಧವಾರ ಶಶಿಕಲಾ ಜೊಲ್ಲೆಯವರು ನೂತನ ಕಚೇರಿ ಪೂಜೆ ನೆರವೇರಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಮುಜರಾಯಿ ಇಲಾಖೆಯ ಅಧಿಕಾರಿಗಳಿಂದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಎ. ಬಿ ಮತ್ತು ಸಿ ದರ್ಜೆಯ ದೇವಸ್ಥಾನಗಳ ಜಿಲ್ಲಾವಾರು ದೇವಸ್ಥಾನಗಳ …
Read More »ಮಾಡದ ತಪ್ಪಿಗೆ ಸೌದಿ ಜೈಲಿನಲ್ಲಿದ್ದ ಕನ್ನಡಿಗ ಕೊನೆಗೂ ಬಂಧಮುಕ್ತ…!
ತಾನು ಮಾಡದ ತಪ್ಪಿಗೆ ಸೌದಿಯಲ್ಲಿ ಬಂಧನಕ್ಕೊಳಗಾಗಿದ್ದ ಕನ್ನಡಿಗ ಹರೀಶ್ ಬಂಗೇರ 2 ವರ್ಷಗಳ ಬಳಿಕ ತಾಯ್ನಾಡಿಗೆ ಮರಳಿದ್ದಾರೆ. ಸೌದಿ ದೊರೆ ಮತ್ತು ಧರ್ಮ ನಿಂದನೆ ಆರೋಪದ ಅಡಿಯಲ್ಲಿ ಹರೀಶ್ ಬಂಗೇರರನ್ನು ಬಂಧಿಸಲಾಗಿತ್ತು. ಹರೀಶ್ ಬಂಗೇರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದ ಮೂಡಬಿದಿರೆ ಮೂಲಕ ಮುಸ್ಲಿಂ ಸಹೋದರರು ಸೌದಿ ದೊರೆ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಉಡುಪಿ ಸೆಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. …
Read More »ಉಣಕಲ್ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣಕ್ಕೆ ಹೈಕೋರ್ಟ್ ಆದೇಶ
ಧಾರವಾಡ: ಹುಬ್ಬಳ್ಳಿಯ ಐತಿಹಾಸಿಕ ಉಣಕಲ್ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣ ಮಾಡಬೇಕು ಎಂದು ಮಹಾನಗರ ಪಾಲಿಕೆಗೆ ಹೈಕೋರ್ಟ್ ಆದೇಶ ನೀಡಿದೆ . 2003 ರ ಜನವರಿ 16 ರಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಿದ್ದರೂ ನಿರ್ಣಯ ಜಾರಿಗೆ ಕ್ರಮ ಕೈಗೊಳ್ಳದ ಪಾಲಿಕೆ ವಿರುದ್ಧ ಹಲವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠ ಈ ಆದೇಶ ನೀಡಿದೆ. ಹುಬ್ಬಳ್ಳಿ- ಧಾರವಾಡ ಮಧ್ಯದ ಪ್ರಮುಖ …
Read More »ಅಫ್ಘಾನಿಸ್ತಾನದಿಂದ ಬರಲು ಇಚ್ಛಿಸುವ ಹಿಂದೂಗಳಿಗೆ ಆಶ್ರಯ: ಪ್ರಧಾನಿ ಮೋದಿ
ನವದೆಹಲಿ, ಆಗಸ್ಟ್ 18: ಭಾರತಕ್ಕೆ ಬರಲು ಇಚ್ಛಿಸುವ ಅಫ್ಘಾನಿಸ್ತಾನದ ಅಲ್ಪಸಂಖ್ಯಾತ ಸಿಖ್ ಹಾಗೂ ಹಿಂದೂಗಳಿಗೆ ಆಶ್ರಯ ನೀಡಲು ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ತಾಲಿಬಾನ್ ಅಟ್ಟಹಾಸದಿಂದ ಅಫ್ಘಾನಿಸ್ತಾನ ನಲುಗುತ್ತಿದ್ದು, ಅಲ್ಲಿನ ಭಾರತೀಯರ ಸಹಾಯಕ್ಕೆ ಪ್ರಧಾನಿ ಮೋದಿ ಮುಂದಾಗಿದ್ದಾರೆ. ಆಫ್ಘನ್‌ನಲ್ಲಿ ಇರುವ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಕರೆದುಕೊಂಡು ಬರಬೇಕು ಎಂದು ವಿದೇಶಾಂಗ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸಹಾಯಕ್ಕಾಗಿ ಭಾರತದತ್ತ ನೋಡುತ್ತಿರುವ ನಿರಾಶ್ರಿತರಿಗೆ ಎಲ್ಲ ನೆರವು ನೀಡುವ ಜವಾಬ್ದಾರಿ ನಮ್ಮ …
Read More »ಮಳೆಯಿಂದ ಹಾನಿಯಾದ ರಸ್ತೆ ದುರಸ್ತಿಗೆ ಮೊದಲ ಆದ್ಯತೆ ನೀಡಿ : ಸಿಎಂ
ಬೆಂಗಳೂರು, ಆ. 17 : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ. ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು. ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ ಸುಧಾರಣೆಗೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಈ ಅನುದಾನವನ್ನು ವಾಸ್ತವವಾಗಿ ಹಾನಿಯಾದ ಪ್ರದೇಶದಲ್ಲಿಯೇ …
Read More »ದಿಢೀರನೇ ದೆಹಲಿಗೆ ಹಾರಿದ ಸಚಿವ ಆನಂದ್ ಸಿಂಗ್..!
ನವದೆಹಲಿ,ಆ.18- ಖಾತೆ ಕ್ಯಾತೆ ತೆಗೆದು ಮುನಿಸಿಕೊಂಡಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಕಳೆದ ರಾತ್ರಿ ದಿಢೀರನೇ ದೆಹಲಿಗೆ ತೆರಳಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಯಲ್ಲಾಪುರ ಪ್ರವಾಸದಲ್ಲಿದ್ದ ಆನಂದ್ ಸಿಂಗ್ ದಿಢೀರನೇ ಗೋವಾ ಮೂಲಕ ಕಳೆದ ರಾತ್ರಿ ದೆಹಲಿಗೆ ತೆರಳಿದ್ದಾರೆ. ಮೂಲಗಳ ಪ್ರಕಾರ ಅವರು ಇಂದು ದೆಹಲಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ವೈಯಕ್ತಿಕ ಕೆಲಸದ ಹಿನ್ನೆಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರಕ್ಕೆ ಬಂದಿದ್ದ ಆನಂದ್ …
Read More »2027 ರಲ್ಲಿ ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿರುವ ನ್ಯಾಯಮೂರ್ತಿ ಬಿ.ವಿ ನಾಗರತ್ನ
ನವದೆಹಲಿ: 2027 ರಲ್ಲಿ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗುವ ಮೊದಲ ಮಹಿಳೆಯಾಗಲಿದ್ದಾರೆ ಎನ್ನಲಾಗಿದೆ. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು 2027 ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯಾಗುವ ಮೊದಲ ಮಹಿಳೆಯಾಗಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ಒಂಬತ್ತು ನ್ಯಾಯಾಧೀಶರ ಹೆಸರನ್ನು ಉನ್ನತ ನ್ಯಾಯಾಲಯದ ಮುಖ್ಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಿದೆ. ಪ್ರಸ್ತುತ ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರನ್ನು ಸಹ …
Read More »ರಾಜ್ಯದ ಸರಣಿ ಚುನಾವಣೆಗಳಿಗೆ ಬಿಜೆಪಿ ತಂತ್ರ: ಹೊಸ ಬ್ರಾಂಡ್ ಅಂಬಾಸಿಡರ್ ಗಳನ್ನು ಸೃಷ್ಟಿಸುತ್ತಿದೆ ಜನಾಶೀರ್ವಾದ ಯಾತ್ರೆ!
ಚಿಕ್ಕಮಗಳೂರು : ರಾಷ್ಟ್ರೀಯ ನಾಯಕರ ಬಗ್ಗೆ ಅವಹೇಳನ ಸರಿಯಲ್ಲ, ಅವರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಇದಕ್ಕೆ ಪಕ್ಷ, ಜಾತಿ, ಧರ್ಮ ಭೇದವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಚಿಕ್ಕಮಗಳೂರಿಗೆ ಭೇಟಿ ನೀಡಿದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಷ್ಟ್ರೀಯ ನಾಯಕರ ಬಗ್ಗೆ ಹುಕ್ಕಾ ಬಾರ್, ಎಣ್ಣೆ ಚರ್ಚೆ ವಿಚಾರವಾಗಿ ಮಾತನಾಡಿದ ಅವರು ರಾಷ್ಟ್ರೀಯ ನಾಯಕರು ಗೌರವಾನ್ವಿತರು ಅವರನ್ನು ನಾವು ಗೌರವ ಪೂರ್ವಕವಾಗಿ ನೋಡಬೇಕು ಇಲ್ಲಿ ಯಾವುದೇ ಪಕ್ಷ, …
Read More »ಮಳೆ ಕಮ್ಮಿ ಆಗ್ತಿದ್ದಂತೆ ಸಮುದ್ರಕ್ಕೆ ಇಳಿದ ಹವ್ಯಾಸಿ ಮೀನುಗಾರರು
ಉಡುಪಿ: ಮುಂಗಾರು ಮಳೆಯ ಅಬ್ಬರ ಕಡಿಮೆಯಾದ ಕೂಡಲೇ ಅರಬ್ಬಿ ಸಮುದ್ರದಲ್ಲಿ ಹವ್ಯಾಸಿ ಮೀನುಗಾರಿಕೆ ಜೋರಾಗಿದೆ. ಗಾಳ ಹಾಕಿ ಮೀನು ಹಿಡಿಯುವ ಹವ್ಯಾಸ ಹೊಂದಿರುವ ಯುವಕರು ದೋಣಿಗಳ ಜೊತೆ ಅರಬ್ಬಿ ಸಮುದ್ರಕ್ಕೆ ಇಳಿಯುತ್ತಿದ್ದಾರೆ. ಉದ್ಯಾವರ ನಾಗೇಶ್ ಕುಮಾರ್ ಮತ್ತು ಅವರ ಗೆಳೆಯರ ತಂಡ ಅರಬ್ಬಿ ಸಮುದ್ರದಲ್ಲಿ ಗಾಳ ಹಾಕಿದಾಗ ಶಾರ್ಕ್ ಮೀನೊಂದು ಗಾಳಕ್ಕೆ ಸಿಲುಕಿತ್ತು. ಗಾಳಕ್ಕೆ ಸಿಲುಕಿದ ನಂತರ ಕೆಲಕಾಲ ಸೆಣೆಸಾಟ ನಡೆಸಿದೆ. ತುಳುವಿನಲ್ಲಿ ತಾಟೆ ಮೀನು ಎಂದು ಕರೆಯುತ್ತಾರೆ. ಇದು …
Read More »
Laxmi News 24×7