ಮೈಸೂರು : ಜಿಲ್ಲೆಯಲ್ಲಿ ಅವೈಜ್ಞಾನಿಕವಾಗಿ ಕೊರೋನಾ ವೀಕ್ ಎಂಡ್ ರೂಲ್ಸ್ ಅನ್ನು ಜಾರಿಗೊಳಿಸಲಾಗಿದೆ. ಮೈಸೂರು ಪ್ರವಾಸಿಗರ ನಗರ, ಗಡಿ ಭಾಗದಿಂದ ನಗರ ದೂರವೇ ಇದೆ. ಹೀಗಿದ್ದೂ ಕೊರೋನಾ ವೀಕೆಂಡ್ ರೂಲ್ಸ್ ಅನ್ನು ಸರ್ಕಾರ ಜಾರಿಗೊಳಿಸಿದೆ. ಇದಕ್ಕೆ ನಮ್ಮ ವಿರೋಧವಿದೆ. ಬೇಕಾದ್ರೆ.. ನೀವು ನಮ್ಮನ್ನು ಅರೆಸ್ಟ್ ಮಾಡಿ.. ಅಂಗಡಿ ಬಂದ್ ಮಾಡೋದಿಲ್ಲ ಎಂಬುದಾಗಿ ಮೈಸೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧವೇ ವ್ಯಾಪಾರಿಗಳು ಸೆಡ್ಡು ಹೊಡೆದಿದ್ದಾರೆ. ಇಂದು ಮೈಸೂರಿನ ಸಂಘ ಸಂಸ್ಥೆಗಳ …
Read More »ಫ್ಲೈ ಓವರ್‌ನಿಂದ ನೆಲಕ್ಕೆ ಉರುಳಿದ ಕ್ಯಾಂಟರ್ : ಡ್ರೈವರ್ ಮತ್ತು ಕ್ಲಿನರ್ ಪ್ರಾಣಾಪಾಯದಿಂದ ಪಾರು MORNING TOP NEWS
ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಮೋಟ ಸಾಗಣೆ ಮಾಡುತ್ತ ಲಾರಿ ಪಲ್ಟಿ ಹೊಡೆದ ಘಟನೆ ಗುಡಿಬಂಡೆಯಲ್ಲಿ ನಡೆದಿದೆ. ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ಕಮ್ ದೂರ್ ನಿಂದ ಕೋಲಾರಕ್ಕೆ ಹೊರಟಿದ್ದ ಟೊಮೆಟೊ ಹೊತ್ತ ಐಚರ್ ಕ್ಯಾಂಟರ್ ನಿಯಂತ್ರಣ ತಪ್ಪಿ ಮೇಲ್ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಸುಮಾರು 10 ಅಡಿಯಿಂದ ಸರ್ವಿಸ್ ರಸ್ತೆಯ ಕೆಳಗೆ ಬಿದ್ದಿದೆ.ಅದೃಷ್ಟವಶ್ ಚಾಲಕ ಮತ್ತು ಕ್ಲೀನರ್ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ …
Read More »ಕೃಷಿ ಹೊಂಡಕ್ಕೆ ಎರಡು ಜೀವ ಬಲಿ; 4 ಮತ್ತು 6ನೇ ತರಗತಿ ವಿದ್ಯಾರ್ಥಿಗಳಿಬ್ಬರ ಸಾವು
ಚಿತ್ರದುರ್ಗ: ರಜೆಯಲ್ಲಿ ಮಕ್ಕಳು ನೀರಿಗಿಳಿದು ಅನಾಹುತ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಮುಂದುವರಿದಿದ್ದು, ಜಮೀನೊಂದರಲ್ಲಿದ್ದ ಕೃಷಿಹೊಂಡಕ್ಕೆ ಎರಡು ಜೀವಗಳು ಬಲಿಯಾಗಿವೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಐಮಂಗಲ ಹೋಬಳಿಯ ವದ್ದಿಕೆರೆ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಜಮೀನಿನ ಕೃಷಿಹೊಂಡಕ್ಕೆ ಬಿದ್ದ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಆರನೇ ತರಗತಿಯ ರಘು (12), ನಾಲ್ಕನೇ ತರಗತಿ ಸಿದ್ಧೇಶ್ (10) ಮೃತಪಟ್ಟವರು.
Read More »ಕೋವಿಡ್ ಮೂರನೇ ಅಲೆ ಆತಂಕ; ಸರಳವಾಗಿ ಸ್ವಾತಂತ್ರ್ಯೋತ್ಸವ ಆಚರಣೆಗೆ ನಿರ್ಧಾರ
ಬೆಂಗಳೂರು: ಕೋವಿಡ್ ಮೂರನೇ ಅಲೆ ಆತಂಕ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯೋತ್ಸವನ್ನ ಈ ಬಾರಿ ಸರಳವಾಗಿ ಆಚರಿಸಲು ಬಿಬಿಎಂಪಿ ನಿರ್ಧರಿಸಿದೆ. ಅದರಂತೆ ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಗಳ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸಭೆ ಕರೆದಿದ್ದಾರೆ. ಇಂದು ಬೆಳಗ್ಗೆ 11ಕ್ಕೆ ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಗಳ ಬಗ್ಗೆ ಸಭೆ ನಡೆಯಲಿದೆ. ಸಭೆಯಲ್ಲಿ ವಲಯವಾರು ಬಿಬಿಎಂಪಿ ಅಧಿಕಾರಿಗಳು, ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಸೋಂಕು ಹರಡದಂತೆ ಸರಳವಾಗಿ ಯಾವ ರೀತಿ ಆಚರಿಸಬೇಕು. …
Read More »ಎಸ್ಎಸ್ಎಲ್ಸಿ ಫಲಿತಾಂಶ ಆಗಸ್ಟ್ 9 ರ ಸೋಮವಾರ ಪ್ರಕಟ
ಬೆಂಗಳೂರು: ಭಾರೀ ನಿರೀಕ್ಷೆ ಮೂಡಿಸಿರುವ ಎಸ್ಎಸ್ಎಲ್ಸಿ ಫಲಿತಾಂಶ ಆಗಸ್ಟ್ 9 ರ ಸೋಮವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ. ಸೋಮವಾರ ಮಧ್ಯಾಹ್ನ 3:30 ಕ್ಕೆ ಪರೀಕ್ಷೆಯ ಫಲಿತಾಂಶ ಹೊರಬೀಳಲಿದೆ. ವಿದ್ಯಾರ್ಥಿಗಳ ಮೊಬೈಲ್ಗಳಿಗೆ ನೇರವಾಗಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನ ಕಳುಹಿಸಲಾಗುವುದು ಎಂದು ಹೇಳಲಾಗಿದೆ. ಅಂದು ಮಧ್ಯಾಹ್ನ 3:30ಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಸಚಿವರಿಗೆ ಇಲಾಖೆಯ ನಿರ್ದೇಶಕರು, ಕಾರ್ಯದರ್ಶಿಗಳು ಸಾಥ್ ನೀಡಲಿದ್ದಾರೆ.
Read More »ಚಿನ್ನ ಖರೀದಿಗೆ ಒಳ್ಳೆ ಅವಕಾಶ; ಆಗಸ್ಟ್ 7ರಂದು ಭಾರೀ ಇಳಿಕೆಯಾಗಿದೆ ಬೆಲೆ
ನವದೆಹಲಿ, ಆಗಸ್ಟ್ 07: ಭಾರತೀಯ ಮಾರುಕಟ್ಟೆಯಲ್ಲಿ ಆಗಸ್ಟ್ ತಿಂಗಳ ಮೊದಲ ವಾರವಿಡೀ ಚಿನ್ನದ ವಹಿವಾಟು ನಿರಂತರ ಕುಸಿತ ಕಂಡಿದ್ದು, ಆಗಸ್ಟ್ 7ರ ಶನಿವಾರ ಕೂಡ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಹಬ್ಬದ ಸಮಯ ಹತ್ತಿರ ಬರುತ್ತಿದ್ದು, ಚಿನ್ನ ಖರೀದಿಸಲು ಗ್ರಾಹಕರಿಗೆ ಇದು ಉತ್ತಮ ಅವಕಾಶವೂ ಆಗಿದೆ. ಭಾರತದ ಎಲ್ಲಾ ಪ್ರಮುಖ ನಗರಗಳಲ್ಲಿ ಶನಿವಾರ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಬೆಳ್ಳಿ ಬೆಲೆ ಕೂಡ ಸತತ ಇಳಿಕೆಯಾಗಿದೆ. ಶನಿವಾರದ ಈ …
Read More »ಈ ಬಾರಿಯೂ ಸರಳ ದಸರಾ ಆಚರಣೆಗೆ ಚಿಂತನೆ: ಎಸ್.ಟಿ. ಸೋಮಶೇಖರ್
ಮೈಸೂರು, ಆಗಸ್ಟ್ 7: “ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿಯೂ ಸರಳವಾಗಿ ಆಚರಿಸಲು ಚಿಂತಿಸಲಾಗಿದೆ,” ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ಸಹಕಾರ ಮತ್ತು ಮೈಸೂರು ಜಿಲ್ಲಾ ಕೋವಿಡ್ ಸೋಂಕು ನಿಯಂತ್ರಣ ಹಾಗೂ ಪ್ರವಾಹ ಪರಿಸ್ಥಿತಿ ನಿಯಂತ್ರಣ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್, ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲ್ಲೂಕು ಬಾವಲಿ ಚೆಕ್‌ಪೋಸ್ಟ್ ಪರಿಶೀಲನೆ ವೇಳೆ ದಸರಾ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಸಚಿವ ಸೋಮಶೇಖರ್ …
Read More »ಬಿಎಸ್ವೈ-ಬೊಮ್ಮಾಯಿ ಇಬ್ಬರೂ ನನಗೆ ಕೊಟ್ಟ ಮಾತು ಉಳಿಸಿಕೊಂಡಿಲ್ಲ: ಎಂಟಿಬಿ ನಾಗರಾಜ್ ಆಕ್ರೋಶ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಆನಂದ್ ಸಿಂಗ್ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದರು. ಇದೀಗ ಎಂಟಿಬಿ ನಾಗರಾಜ್ ಕೂಡ ಇದೇ ಹಾದಿ ತುಣಿದಿದ್ದು, ಇನ್ನೆರಡು ದಿನದಲ್ಲಿ ಮುಂದಿನ ನಿರ್ಧಾರ ಪ್ರಕಟಿಸುವೆ ಎಂದು ಟ್ವೀಟ್ ಮೂಲಕ ಎಚ್ಚರಿಸಿದ್ದಾರೆ. ನಾನು ಕೇಳಿರೋದೇ ಒಂದು, ಕೊಟ್ಟಿರೋದೇ ಮತ್ತೊಂದು. ನನಗೆ ಕೊಟ್ಟಿರುವ ಖಾತೆಯನ್ನು ಬದಲಾವಣೆ ಮಾಡಬೇಕೆಂದು ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ …
Read More »ಜೋಗ: ಅಧಿಕಾರಿಗಳ ಹಾಗೂ ಪ್ರವಾಸಿಗರ ಸಂಘರ್ಷ
ಕಾರ್ಗಲ್: ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ದೃಢೀಕರಣ ಕಡ್ಡಾಯಗೊಳಿಸಿರುವ ಜಿಲ್ಲಾಧಿಕಾರಿ ಆದೇಶ ಶುಕ್ರವಾರ ಸಂಘರ್ಷಕ್ಕೆ ಕಾರಣವಾಗಿತ್ತು. ಉತ್ತರ ಕರ್ನಾಟಕ ಮತ್ತು ಉತ್ತರ ಕನ್ನಡ ಜಿಲ್ಲೆಯಿಂದ ಬಂದಿದ್ದ ಭಾರಿ ಸಂಖ್ಯೆಯ ಪ್ರವಾಸಿಗರು, ‘ಆರ್‌ಟಿಪಿಸಿಆರ್ ಪರೀಕ್ಷಾ ವರದಿ ಕಡ್ಡಾಯ ಎಂದು ಸರ್ಕಾರ ಘೋಷಣೆ ಮಾಡಿಲ್ಲ. ಈ ಬಗ್ಗೆ ಎಲ್ಲಿಯೂ ಮುಂಚಿತವಾಗಿ ಮಾಹಿತಿ ನೀಡಿಲ್ಲ. ಪ್ರಕೃತಿ ಸೌಂದರ್ಯವನ್ನು ವೀಕ್ಷಿಸುವ ಆಶಯದಿಂದ ನೂರಾರು ಕಿ.ಮೀ. ದೂರದಿಂದ ನಿರೀಕ್ಷೆಯೊಂದಿಗೆ ಬರುವ ನಮಗೆ ನಿರಾಸೆ ಮೂಡಿಸಿದಂತಾಗಿದೆ. …
Read More »ಜಾವೆಲಿನ್ ಥ್ರೋನಲ್ಲಿ ಚಿನ್ನಕ್ಕೆ ಗುರಿಯಿಟ್ಟ ನೀರಜ್ ಚೋಪ್ರಾ ಭಾರತದಒಲಿಂಪಿಕ್ಸ್ ನಲ್ಲಿ 13 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದಿತು.
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತದ ಬಂಗಾರದ ಬರ ನೀಗಿದೆ. ಪುರುಷರ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಬಂಗಾರದ ಪದಕ ಗೆದ್ದು ಕೊಂಡಿದ್ದಾರೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಆರಂಭದಿಂದಲೇ ಉತ್ತಮ ಪ್ರದರ್ಶನ ತೋರಿದರು. ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಎಸೆದ ನೀರಜ್, ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಜಾವೆಲಿನ್ ಎಸೆದರು. ಆದರೆ ಮೂರನೇ ಪ್ರಯತ್ನದಲ್ಲಿ ನೀರಜ್ 76.79 ಮೀಟರ್ ಎಸೆದರು. ನಾಲ್ಕನೇ ಸುತ್ತಿನಲ್ಲಿ ಫೌಲ್ ಆಯಿತು. …
Read More »
Laxmi News 24×7