Breaking News

ರಾಜ್ಯ

ಮಂತ್ರಿಗಿರಿಗೆ ಮುಹೂರ್ತ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟ ಸೇರುವ ಶಾಸಕರ ಪಟ್ಟಿ ಅಂತಿಮವಾಗಿದ್ದು, ಬುಧವಾರ ಅಪರಾಹ್ನ 2.15ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ಬಗ್ಗೆ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್‌ ಅವರಿಗೆ ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಈಗಾಗಲೇ ನೂತನ ಸಚಿವರಾಗುವ ಶಾಸಕರಿಗೆ ಮಾಹಿತಿ ರವಾನೆಯಾಗಿದೆ ಎನ್ನಲಾಗುತ್ತಿದೆ. 20ರಿಂದ 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ಅಳೆದು ತೂಗಿ …

Read More »

ಮಕ್ಕಳಿಗೆ ದಿನಾಲೂ ಪಾಠ – ಕೊಪ್ಪಳದ ಯುವಕರ ಶಿಕ್ಷಣ ಪ್ರೇಮ

ಕೊಪ್ಪಳ: ಕೊರೊನಾದಿಂದಾಗಿ ಶಾಲೆಗಳು ಬಂದ್ ಆಗಿವೆ. ಹೀಗಾಗಿ ಓಣಿಯಲ್ಲಿ ಆಟವಾಡುತ್ತಾ ಕಾಲಹರಣ ಮಾಡುವ ಮಕ್ಕಳಿಗೆ ನಿರಂತರ ಶಿಕ್ಷಣ ನೀಡುತ್ತಿರುವ ಕೊಪ್ಪಳ ಯುವಕರಿಬ್ಬರು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಕೊರನಾದಿಂದಾಗಿ ಪ್ರಾಥಮಿಕ ಶಾಲೆಗಳಂತೂ ಆರಂಭವಾಗಿಲ್ಲ. ಪ್ರೌಢ ಶಾಲೆಗಳಲ್ಲಿ ಆನ್ ಲೈನ್ ಶಿಕ್ಷಣ ನೀಡುತ್ತಿದ್ದಾರೆ. ಈ ವರ್ಷ ಒಂದನೆಯ ತರಗತಿಯಿಂದಲೇ ಆನ್‍ಲೈನ್ ಶಿಕ್ಷಣ ನೀಡಲು ಮುಂದಾಗಿದ್ದಾರೆ. ಆದರೆ ಬಡವರ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಪಡೆಯಲು ಸಾಧ್ಯವಿಲ್ಲ, ಶಾಲೆಯಿಂದ ದೂರವಾದ ಮಕ್ಕಳು …

Read More »

ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಧನಸಹಾಯ ಒದಗಿಸಿದ ಪ್ರಿಯಾಂಕಾ ಜಾರಕಿಹೊಳಿ

    ಗೋಕಾಕ: ನೇಪಾಳದಲ್ಲಿ ಅಗಸ್ಟ್ 10 ರಂದು ನಡೆಯಲಿರುವ 19 ವರ್ಷದೊಳಗಿನ ಇಂಡೋ-ನೇಪಾಳ ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯಲ್ಲಿ ದೇಶವನ್ನು ಪ್ರತಿನಿಧಿಸಲು ಹೊರಟಿರುವ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೆಳವಂಕಿ ಗ್ರಾಮದ ಸಿದ್ದಪ್ಪ ಹಂಜಿ ಹಾಗೂ ತಪಸಿ ಗ್ರಾಮದ ಮಲ್ಲಪ್ಪ ನಾಯಕ ಎಂಬ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಪ್ರವೇಶ ಶುಲ್ಕ ಹಾಗೂ ಪ್ರಯಾಣ ಖರ್ಚುನ್ನು ನೀಡಿ ಸಹಾಯ ಒದಗಿಸಿದರು.   ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ …

Read More »

2021-22ನೇ ಸಾಲಿನ ಪದವಿ ಕೋರ್ಸ್​ಗಳ ಪ್ರವೇಶ ಪ್ರಕ್ರಿಯೆಗೆ ತಾತ್ಕಾಲಿಕ ತಡೆ

ಬೆಂಗಳೂರು: ಪದವಿ ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ. 2021-22ನೇ ಸಾಲಿನ ಪದವಿ ಕೋರ್ಸ್​ಗಳ ಪ್ರವೇಶ (UG College Admission) ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ ಮಾಡಲಾಗಿದೆ. ಈ ಮುನ್ನ ಆಗಸ್ಟ್ 4 ರಿಂದ ಪ್ರವೇಶ ಪ್ರಾರಂಭಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಿಗೆ ನಿರ್ದೇಶನ ನೀಡಿತ್ತು. ಆದರೆ ಮುಂದಿನ ಪ್ರವೇಶ ಪ್ರಕ್ರಿಯೆ ದಿನಾಂಕವನ್ನು ಸದ್ಯದಲ್ಲೇ ಪ್ರಕಟ ಮಾಡಲಾಗುವುದು …

Read More »

ಯಡಿಯೂರಪ್ಪನ್ನು ತೆಗೆದು ಹಾಕಿದ್ದು ವಯಸ್ಸಾಗಿದೆ ಎಂದಲ್ಲ; ಅಪ್ಪ-ಮಗ ಸೇರಿ ಲೂಟಿ ಮಾಡಿದ್ರು ಅಂತಾ ತೆಗೆದ್ರು: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಬಿ ಎಸ್​ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದು ಹಾಕಿದ್ದಾರೆ. ವಯಸ್ಸು ಆಗಿದೆ ಎಂದು ತೆಗೆದಿಲ್ಲ. ಬದಲಾಗಿ ದುಡ್ಡು ಹೊಡೆದ್ರು ಅಂತಾ ತೆಗೆದಿದ್ದು. ಅಪ್ಪ-ಮಗ ಜೋಡಿ ಲೂಟಿ ಮಾಡಿದರು ಅಂತಾ ತೆಗೆದರು ಎಂದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಐಟಿ, ಇಡಿ ಇದೆ ಎಂದು ಹೇಳಿ ಯಡಿಯೂರಪ್ಪ ಅವರನ್ನು ಕೆಳಗಿಳಿಸಿದ್ದಾರೆ. ಆರ್​ಟಿಜಿಎಸ್ ಮೂಲಕ ಯಡಿಯೂರಪ್ಪ ಹಣ ತೆಗೆದುಕೊಂಡಿದ್ದಾರೆ. ಯಡಿಯೂರಪ್ಪ ಮದುವೆ ಊಟ ಮಾಡೇ ಇಲ್ಲ. …

Read More »

ಆಟೋ ಗ್ಯಾಸ್ ದರ ಹೆಚ್ಚಳ; ಆಟೋ ಮೀಟರ್ ಮಿನಿಮಮ್ ದರ ಹೆಚ್ಚಿಸಲು ಸರ್ಕಾರಕ್ಕೆ ಮನವಿ

ಬೆಂಗಳೂರು: ಆಟೋ ಗ್ಯಾಸ್ ದರ ಏರಿಸಿರುವ ಸರ್ಕಾರದ ನಡೆಗೆ ಆಟೋ ಚಾಲಕರು ಮತ್ತು ಮಾಲೀಕರ ಅಸೋಸಿಯೇಷನ್‌ಗಳು ಖಂಡನೆ ವ್ಯಕ್ತಪಡಿಸಿದ್ದು, ಆಟೋ ಪ್ರಯಾಣದ ಕನಿಷ್ಠ ದರವನ್ನು ಹೆಚ್ಚಿಸಲು ಆಗ್ರಹಿಸಿವೆ. ಆಟೋ ಗ್ಯಾಸ್ ದರ (Auto Gas Rate) ಏರಿಕೆ ಮಾಡಿರುವುದು ಹೊರೆಯಾಗಿ ಪರಿಣಮಿಸುತ್ತಿದೆ. ಹೀಗಾಗಿ, ಆಟೋ ಮೀಟರ್ ಮಿನಿಮಮ್ ದರ ಏರಿಸಬೇಕು ಎಂದು ಸಹ ಅಸೋಸಿಯೇಶನ್ ಆಗ್ರಹಿಸಿದೆ. ಆಟೋ ಮೀಟರ್ ಕನಿಷ್ಠ ದರವನ್ನು 25 ರೂಪಾಯಿಯಿಂದ 30 ರೂಪಾಯಿಗೆ ಏರಿಕೆ ಮಾಡುವಂತೆ …

Read More »

ಬಿಎಸ್‍ವೈ ನಿವಾಸದಲ್ಲಿ ಇಂದೂ ಮುಂದುವರೆದ ಸಚಿವಾಕಾಂಕ್ಷಿಗಳ ಲಾಬಿ

ಬೆಂಗಳೂರು,ಆ.3- ತಮ್ಮನ್ನು ಸಂಪುಟಕ್ಕೆ ತೆಗೆದುಕೊಳ್ಳುವಂತೆ ಮಾಜಿ ಸಿಎಂ ಯಡಿಯೂರಪ್ಪನವರ ನಿವಾಸ ಕಾವೇರಿ ನಿವಾಸಕ್ಕೆ ಸಚಿವ ಆಕಾಂಕ್ಷಿಗಳ ದಂಡು ಇಂದೂ ಕೂಡ ಧಾವಿಸಿ ಲಾಬಿ ಮುಂದುವರೆಸಿದೆ. ಬೆಳಗ್ಗೆ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಕಾವೇರಿ ನಿವಾಸಕ್ಕೆ ಆಗಮಿಸಿ ಸುಮಾರು ಹೊತ್ತು ಚರ್ಚೆ ನಡೆಸಿ ಅಲ್ಲಿಂದ ನಿರ್ಗಮಿಸಿದರು. ಆದರೆ ಅವರು ಸಂಪುಟಕ್ಕೆ ತೆಗೆದುಕೊಳ್ಳುವಂತೆ ತಮ್ಮ ತಂದೆಯ ಬಳಿ ಮನವಿ ಮಾಡಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಲಭ್ಯವಾಗಲಿಲ್ಲ. ಇನ್ನು ಕಡೂರು ಶಾಸಕ ಬೆಳ್ಳಿ ಪ್ರಕಾಶ್, ಗಂಗಾವತಿಯ …

Read More »

ಯಡಿಯೂರಪ್ಪ ಮುಂದೆ ದೆಹಲಿ ಹೈಕಮಾಂಡ್ ಮಂಡಿಯೂರಿ ಶರಣಾಗಿದೆಯೇ? ಧೃತರಾಷ್ಟ್ರ ಪುತ್ರಪ್ರೇಮವೇ ಕುರುಕ್ಷೇತ್ರಕ್ಕೆ ಕಾರಣ!

ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿ ಸಿಎಂ ಪುತ್ರನನ್ನು ಸಿಎಂ ಮಾಡಿದ ಹೆಗ್ಗಳಿಕೆಯೊಂದಿಗೆ ಈಗ ಚುನಾಯಿತ ಪ್ರತಿನಿಧಿಯೇ ಅಲ್ಲದ ಬಿವೈ ವಿಜಯೇಂದ್ರ ಅವರನ್ನು ಸಚಿವರನ್ನಾಗಿಸಲು ಬಿಜೆಪಿ ಮುಂದಾಗಿದೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮುಂದೆ ದೆಹಲಿ ಹೈಕಮಾಂಡ್ ಮಂಡಿಯೂರಿ ಶರಣಾಗಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಹಿಂಬಾಗಿಲಲ್ಲಿ ಆಡಳಿತ ನಡೆಸುತ್ತಿದ್ದ ‘ಸೂಪರ್ ಸಿಎಂ’ ವಿಜಯೇಂದ್ರ …

Read More »

ಇಂದಿನಿಂದ ನೈಟ್​ ಕರ್ಫ್ಯೂ: ಅನಗತ್ಯವಾಗಿ ಓಡಾಡಿದ್ರೆ ಬೀಳುತ್ತೆ ಕೇಸ್- ಯಾವುದಕ್ಕೆಲ್ಲ ವಿನಾಯಿತಿ?

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್​ ಕರ್ಫ್ಯೂ ಘೋಷಿಸಲಾಗಿದೆ. ಇಂದಿನಿಂದ ನೈಟ್​ ಕರ್ಫ್ಯೂ ಜಾರಿಯಾಗಲಿದ್ದು, ರಾತ್ರಿ 10 ಗಂಟೆ ನಂತರ ಅನಗತ್ಯವಾಗಿ ರಸ್ತೆಗಿಳಿಯುವ ಸಾರ್ವಜನಿಕರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಮತ್ತು ಪೊಲೀಸ್​ ಇಲಾಖೆ ತಿಳಿಸಿದೆ. ಪೊಲೀಸರು, ಮಾರ್ಷಲ್ಸ್ ನೇತೃತ್ವದಲ್ಲಿ ಇಂದಿನಿಂದ ಕಾರ್ಯಾಚರಣೆ ಆರಂಭವಾಗುತ್ತಿದೆ. ಆದ್ದರಿಂದ ಇಂದು (ಮಂಗಳವಾರ- ಜುಲೈ 3) ರಾತ್ರಿ 10 ಗಂಟೆಯಿಂದ ರಾತ್ರಿ …

Read More »

ದಿಢೀರ್ ಇಳಿಕೆ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 30,549 ಕೋವಿಡ್ ಪ್ರಕರಣ ಪತ್ತೆ

ನವದೆಹಲಿ:ಭಾರತದಲ್ಲಿ ದಿಢೀರ್ ಏರಿಕೆ ಕಂಡಿದ್ದ ಕೋವಿಡ್ ಪ್ರಕರಣಗಳ ಸಂಖ್ಯೆ ಕಳೆದ 24 ಗಂಟೆಗಳಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು, 30,549 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ(ಆಗಸ್ಟ್ 03) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.   ಕಳೆದ 24ಗಂಟೆಗಳಲ್ಲಿ ಕೋವಿಡ್ 19 ಸೋಂಕಿನಿಂದ 422 ಮಂದಿ ಸಾವನ್ನಪ್ಪಿದ್ದು, 38,887 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,17,26,507ಕ್ಕೆ ಏರಿಕೆಯಾಗಿದೆ. ಸಾವಿನ ಪ್ರಮಾಣ 4,25,195ಕ್ಕೆ ತಲುಪಿದೆ. …

Read More »