Breaking News

ರಾಜ್ಯ

ಚಿತ್ರದುರ್ಗ: ಅತ್ಯಾಚಾರ ಪ್ರಕರಣದ ಬಗ್ಗೆ ವದಂತಿ ಹಬ್ಬಿಸಿ ಜೈಲು ಸೇರಿದ ಯುವಕ

ಚಿತ್ರದುರ್ಗ: ತಾಲ್ಲೂಕಿನ ಭರಮಸಾಗರ ಠಾಣೆಯ ವ್ಯಾಪ್ತಿಯ 13 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವದಂತಿ ಹಬ್ಬಿಸಿ ಗೊಂದಲ ಸೃಷ್ಟಿಸಿದ ಆರೋಪದ ಮೇರೆಗೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ರಾಜೇಂದ್ರನಗರದ ನಿವಾಸಿ ಎಸ್‌.ದರ್ಶನ್‌ (21) ಬಂಧಿತ ಆರೋಪಿ. ನ್ಯಾಯಾಧೀಶರ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ‘ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವ ಸಿಕ್ಕಿಬಿದ್ದ. ಆದರೆ, ಅವನಿಗೆ ₹ 10 ಸಾವಿರ ದಂಡ ಹಾಗೂ ಎರಡು …

Read More »

ಆತ್ಮಹತ್ಯಾ ತಡೆ ಸಹಾಯವಾಣಿ ‘ಸಹಾಯ್‌’ಗೆ ಕರೆಗಳ ಹೆಚ್ಚಳ

ಘಟನೆ 1: 2020ರ ಏಪ್ರಿಲ್‌-ಮೇ ತಿಂಗಳಲ್ಲಿ ಕೋವಿಡ್‌ ಲಾಕ್‌ಡೌನ್ ಆದ ಸಂದರ್ಭ. ವಿಮಾನ, ರೈಲು ಸೇವೆಗಳೆಲ್ಲ ಬಂದ್‌ ಆಗಿದ್ದವು. ಆಗ ಬೆಂಗಳೂರಿನ ಅಪಾರ್ಟ್‌ಮೆಂಟ್‌ ಒಂದರ ಫ್ಲ್ಯಾಟ್‌ನಲ್ಲಿ ಇದ್ದು ಓದುತ್ತಿದ್ದ ಯುವಕನೊಬ್ಬನಿಗೆ ಎಲ್ಲೂ ಓಡಾಡಲಾಗದ ಸನ್ನಿವೇಶ ಜುಗುಪ್ಸೆ ತರಿಸಿತು. ಮನಸ್ಸಿನಲ್ಲಿ ಆತ್ಮಹತ್ಯೆಯ ಆಲೋಚನೆ ಸುಳಿಯಿತು. ನವದೆಹಲಿಯಲ್ಲಿದ್ದ ತಂದೆ-ತಾಯಿಗೆ ಕರೆ ಮಾಡಿದ ಆತ ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆ ಮಾಡಿರುವುದಾಗಿ ಹೇಳಿದ. ತಕ್ಷಣ ಆತನ ತಂದೆ-ತಾಯಿ ‘ಸಹಾಯ್‌’ ಹೆಲ್ಪ್‌ಲೈನ್‌ (08025497777)ಗೆ ಕರೆ ಮಾಡಿ ವಿಷಯ …

Read More »

ಕೆಲಸದ ಆಮಿಷವೊಡ್ಡಿ ಕರೆಸಿಕೊಂಡ ಭೂಪ; ಹಣ ದೋಚಿ ಪರಾರಿಯಾದ ಖದೀಮ

ಬೆಂಗಳೂರು: ಕೊರೊನಾ ಲಾಕ್ ಡೌನ್ ನಡುವೆಯೇ ಕೆಲಸ ಕಳೆದುಕೊಂಡು ಹಲವರು ಸಂಕಷ್ಟಕ್ಕೀಡಾಗಿದ್ದರೆ ಇನ್ನು ಹಲವರು ಕೆಲಸದ ಆಮಿಷವೊಡ್ಡಿ, ವಂಚನೆ ಮಾಡುವುದನ್ನೇ ಕಾಯಕವನ್ನಾಗಿಸಿಕೊಳ್ಳುತ್ತಿದ್ದಾರೆ. ಇಂಥದ್ದೇ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ. ಬ್ಯಾಂಕ್ ಉದ್ಯೋಗ ಕೊಡಿಸುವುದಾಗಿ ಹೇಳಿ ಯುವಕನನ್ನು ಕರೆಸಿಕೊಂಡ ಖದೀಮನೊಬ್ಬ, ಆತನ ಬಳಿ ಇದ್ದ ಹಣ, ಎಟಿಎಂ, ಮೊಬೈಲ್, ಉಂಗುರಗಳನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಾಜಿ ನಗರದಲ್ಲಿರುವ ಬಂಧನ್ ಬ್ಯಾಂಕ್ ಹೆಸರಲ್ಲಿ ರಾಜನ್ …

Read More »

ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಐಜಿಪಿ ಪ್ರವೀಣ್ ಸೂದ್ ಖಡಕ್ ಸೂಚನೆ..

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಖಡಕ್ ಆದೇಶ ಹೊರಡಿಸಲಾಗಿದೆ. ರೌಡಿಶೀಟರ್ಗಳು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು, ಸಮಾಜಘಾತುಕ ವ್ಯಕ್ತಿಗಳ ಜತೆ ಸಂಪರ್ಕ ಇಟ್ಟುಕೊಳ್ಳಬಾರದು. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಭಾಗಿಯಾಗಬಾರದು. ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸೂಕ್ತವಲ್ಲ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಖಡಕ್ ಆದೇಶ ಹೊರಡಿಸಿದ್ದಾರೆ. ಪೊಲೀಸರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಮುನ್ನ ತಿಳಿದುಕೊಳ್ಳಬೇಕು. ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆ, ವ್ಯಕ್ತಿ ಹಿನ್ನೆಲೆ ತಿಳಿಯಬೇಕು ಎಂದು ಪ್ರವೀಣ್ …

Read More »

ಕೇರಳ, ಮಹಾರಾಷ್ಟ್ರದಿಂದ ನಗರಕ್ಕೆ ಬರುವವರಿಗೆ ಆರ್’ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಬಿಬಿಎಂಪಿ

ಬೆಂಗಳೂರು: ಕೋವಿಡ್-19 ಸೋಂಕು ಹೆಚ್ಚಾಗಿರುವ ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರಿಗೆ ತಕ್ಷಣದಿಂದ ಆರ್’ಟಿ-ಪಿಸಿಆರ್ ವರದಿ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದ್ದೇವೆಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ. ನಗರದಲ್ಲಿ ಕೋವಿಡ್ ನಿಯಂತ್ರಣ ನಿಯಮಗಳ ಅನುಷ್ಠಾನ ಸಂಬಂಧ ನಿನ್ನೆ ನಡೆದ ಬಿಬಿಎಂಪಿ ಮತ್ತು ಪೊಲೀಸ್‌ ಇಲಾಖೆಯ ಸಮನ್ವಯ ಸಮಿತಿ ಸಭೆ ಬಳಿಕ ಮಾತನಾಡಿರುವ ಗೌರವ್ ಗುಪ್ತಾ ಅವರು, ಕೋವಿಡ್-19 ಪರೀಕ್ಷೆ ವರದಿ ಇಲ್ಲದೆ ಬೆಂಗಲೂರಿಗೆ ಬರುವ …

Read More »

ಆ. 10 ರಂದು ಕತ್ತಲಲ್ಲಿ ಮುಳುಗಲಿದೆ ಇಡೀ ದೇಶ, ದೇಶಾದ್ಯಂತ ವಿದ್ಯುತ್ ಸ್ಥಗಿತಕ್ಕೆ ನಿರ್ಧಾರ

ದೇಶಾದ್ಯಂತ ಆಗಸ್ಟ್ 10 ರಂದು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುವುದು. ವಿದ್ಯುತ್ ಕಾಯ್ದೆ – 2003ರ ತಿದ್ದುಪಡಿ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ, ಅಧಿಕಾರಿಗಳ ಅಸೋಸಿಯೇಷನ್ ಒಕ್ಕೂಟ ಈ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆ 2003 ರ ತಿದ್ದುಪಡಿಯನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವುದಾಗಿ ಘೋಷಿಸಿದ್ದು ಇದನ್ನು ವಿರೋಧಿಸಿ ವಿದ್ಯುತ್ ನೌಕರರ ಸಂಘಟನೆಯ ಅಧಿಕಾರಿಗಳು, ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಹೋರಾಟ ಕೈಗೊಳ್ಳಲಿದ್ದಾರೆ. ಹೋರಾಟಕ್ಕೆ ರೈತ ಸಂಘಟನೆಗಳು, …

Read More »

ಡಿಸಿಎಂ ಹುದ್ದೆ ಆಸೆ ಇಟ್ಟುಕೊಂಡವರಿಗೆ ಶಾಕ್ ಕೊಟ್ಟ ಬಿಜೆಪಿ ಹೈಕಮಾಂಡ್!

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ರೇಸ್‌ನಲ್ಲಿದ್ದವರು, ಅದು ತಪ್ಪಿದ್ದರಿಂದ ಉಪ ಮುಖ್ಯಮಂತ್ರಿ ಆದರೂ ಆಗಬಹುದು ಎಂಬ ಲೆಕ್ಕಾಚಾರವನ್ನಿಟ್ಟುಕೊಂಡಿದ್ದರು. ಆದರೆ ಅವರಿಗೆ ಬಿಜೆಪಿ ಹೈಕಮಾಂಡ್ ಶಾಕ್ ಕೊಟ್ಟಿದೆ ಎಂಬ ಮಾಹಿತಿ ದೆಹಲಿಯಿಂದ ಬಂದಿದೆ. ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಬಳಿಕ ಇದೀಗ ಸಚಿವ ಸಂಪುಟ ವಿಸ್ತರಣೆ ಕಸರತ್ತು ಬಿಜೆಪಿಯಲ್ಲಿ ನಡೆದಿದೆ. ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದು, ಒಬ್ಬರಾದ ಮೇಲೆ ಒಬ್ಬರಂತೆ ಪಕ್ಷದ ವರಿಷ್ಠರನ್ನು ಭೇಟಿ …

Read More »

ಡಿಸಿಎಂ ಹುದ್ದೆ ಸಿಗದಿದ್ದರೆ ಬಂಡಾಯ ; ಗೋವಿಂದ ಕಾರಜೋಳ ಮುನ್ಸೂಚನೆ ?

ಬೆಂಗಳೂರು, – ರಾಜ್ಯ ಸಚಿವ ಸಂಪುಟ ರಚನೆ ಆಗುವುದಕ್ಕೆ ಎಲ್ಲ ಮುಹೂರ್ತ ಕೂಡಿ ಬಂದಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಸೋಮವಾರ ಸಂಜೆಯ ವೇಳೆಗೆ ಯಾರು ಮೊದಲ ಹಂತದ ಸಂಪುಟ ರಚನೆಯಲ್ದಲಿ ಸ್ಥಾನ ಪಡೆದಿದ್ದಾರೆ ಎಂದು ಗೊತ್ತಾಗುತ್ತದೆ. ಈ ಬೆನ್ನಲ್ಲೇ ಸ್ಥಾನ ಸಿಗದಿದ್ದರೆ ಬಂಡಾಯ ಏಳುವ ಸೂಚನೆಯೂ ಕಂಡು ಬಂದಿದೆ. ಸೌಮ್ಯ ಮತ್ತು ಸಾತ್ವಿಕ ರಾಜಕಾರಣಿ ಎಂದೇ ಗುರುತಿಸಿಕೊಂಡಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಗೋವಿಂದ ಕಾರಜೋಳ ಅವರು ಡಿಸಿಎಂ …

Read More »

ಮುಖ್ಯಮಂತ್ರಿ ಸಲಹೆಗಾರರ ಕಚೇರಿ ಸಿಬ್ಬಂದಿ ಕರ್ತವ್ಯಮುಕ್ತಗೊಳಿಸಿ ಆದೇಶ: ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆ ಸರ್ಕಾರದ ಕ್ರಮ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರ ಅವಧಿಯಲ್ಲಿ ಪ್ರಮುಖ ಸ್ಥಾನಗಳಿಗೆ ನೇಮಕವಾಗಿದ್ದ ವಿವಿಧ ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಕಚೇರಿಯ ನಾಲ್ವರು, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಕಚೇರಿಯ ಎಂಟು ಮಂದಿ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರ ಕಚೇರಿಯ ಐವರು, ಮಾಧ್ಯಮ ಸಂಯೋಜಕರ ಕಚೇರಿಯ ಐವರು, ಕಾನೂನು ಸಲಹೆಗಾರರ ಕಚೇರಿಯ ಮೂವರು, ಸಿಎಂ ಇ-ಆಡಳಿತ ಸಲಹೆಗಾರರ ಕಚೇರಿಯ ಮೂವರು, ಸಲಹೆಗಾರರ ಕಚೇರಿಯ …

Read More »

ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ಸೀಲ್: ನೂತನ ಸಚಿವರಿಗಾಗಿ ಕಾಯುತ್ತಿವೆ ವಿಧಾನಸೌಧ-ವಿಕಾಸ ಸೌಧ ಕೊಠಡಿಗಳು!

ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ವಿಧಾನ ಸೌಧ ಮತ್ತು ವಿಕಾಸ ಸೌಧಗಳಲ್ಲಿನ ಸಚಿವರ ಮತ್ತು ಅವರ ಕಾರ್ಯದರ್ಶಿಗಳ ಕೊಠಡಿಗಳಿಗೆ ಬೀಗ ಹಾಕಲಾಗಿದೆ, ಸೋಮವಾರ ಎಲ್ಲಾ ಕೊಠಡಿಗಳನ್ನು ಸೀಲ್ ಮಾಡಲಾಗಿದೆ. ಜೆಡಿಎಸ್ ಮುಖಂಡ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಕಳೆದುಕೊಂಡು ಜುಲೈ 23 2019 ರಲ್ಲಿ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಕೊಠಡಿಗಳನ್ನು ಸೀಲ್ ಮಾಡಲಾಗಿತ್ತು. ಇಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಕಡತಗಳನ್ನು ಮತ್ತು ಕಂಪ್ಯೂಟರ್‌ಗಳಂತಹ ಸಾಧನಗಳನ್ನು …

Read More »