Breaking News

ರಾಜ್ಯ

ಪೆಗಾಸಸ್ ಬಳಕೆಗೆ ಪರವಾನಗಿ ಪಡೆದುಕೊಂಡಿದೆಯಾ ಕೇಂದ್ರ ಸರ್ಕಾರ!?

ನವದೆಹಲಿ, ಆಗಸ್ಟ್ 01: ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಬಳಸಿ ಬೇಹುಗಾರಿಕೆ ನಡೆಸಿರುವ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳು ಗುರುವಾರ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಗೆ ಬರಲಿವೆ. ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್ ವಿ ರಮಣ್ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಲಿದೆ. ಹಿರಿಯ ಪತ್ರಕರ್ತ ಎನ್ ರಾಮ್, ಶಶಿಕುಮಾರ್, ಸಿಪಿಎಂ ಸಂಸದ ಜಾನ್ ಬ್ರಿತ್ತಾಸ್ ಹಾಗೂ ವಕೀಲ ಎಂಎಲ್ ಶರ್ಮಾ …

Read More »

ಮುಖ್ಯಮಂತ್ರಿ ಬೊಮ್ಮಾಯಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಿ.ಪೊನ್ನುರಾಜ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೂತನ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಿ.ಪುಣ್ಣುರಾಜ್‌ ಅವರನ್ನು ನೇಮಕ ಮಾಡಲಾಗಿದೆ. ಐಎಎಸ್‌ ಅಧಿಕಾರಿ ಸೆಲ್ವರಾಜ್ ಅವರು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಕಾರ್ಯದರ್ಶಿಯಾಗಿದ್ದರು. ಪುಣ್ಣುರಾಜ್ ಅವರು ಕೆಪಿಸಿಎಲ್‌ ನ ನಿರ್ದೆಶಕರಾಗಿಯೂ ಮುಂದುವರೆಯಲಿದ್ದಾರೆ

Read More »

ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು.

ಗೋಕಾಕ : ಯುಕ್ರೇನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಿನಿಪುಟ್ ಬಾಲ್ ಸ್ಪರ್ಧೆಯಲ್ಲಿ ಇಂಡಿಯನ್ ಟೀಂ ಗೆ ಆಯ್ಕೆಯಾದ ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು.   ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಭಾನುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಸೂಚನೆಯಂತೆ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಪ್ರೋತ್ಸಾಹ ನೀಡಿ, …

Read More »

ಮಹಾರಾಷ್ಟ್ರದಲ್ಲಿಯೂ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನಾವಿಸ್ ಸಲಹೆ

  ಬೆಂಗಳೂರು : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಕೆಎಂಎಫ್‍ಗೆ ಸಲಹೆ ಮಾಡಿದರು. ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್‍ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ …

Read More »

ಮಹಾರಾಷ್ಟ್ರದಲ್ಲಿಯೂ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನವಿಸ್ ಸಲಹೆ

ನಾಗಪುರ : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ಕೆಎಂಎಫ್‌ಗೆ ಸಲಹೆ ಮಾಡಿದರು.         ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್‌ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ …

Read More »

ಕೊರೊನಾ 3ನೇ ಅಲೆ ಆತಂಕ; ನಾಳೆಯಿಂದ ಅಂಜನಾದ್ರಿ ಬೆಟ್ಟಕ್ಕೆ ನೋ ಎಂಟ್ರಿ

ಕೊಪ್ಪಳ: ನೆರೆ ರಾಜ್ಯಗಳಲ್ಲಿ ಕೊರೊನಾ 3ನೇ ಅಲೆ ಆರಂಭ ಹಿನ್ನೆಲೆ ರಾಜ್ಯದ ಪೌರಾಣಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಪ್ರವೇಶವನ್ನು ನಿಷೇಧಿಸಲಾಗಿದೆ. ಅಂಜನಾದ್ರಿ ಬೆಟ್ಟಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೊರೊನಾತಂಕ ವ್ಯಕ್ತಪಡಿಸಿದ ಕೊಪ್ಪಳ ಉಪ ವಿಭಾಗಾಧಿಕಾರಿ‌ ನಾರಾಯಣ ರೆಡ್ಡಿ ಕನಕ ರೆಡ್ಡಿ ನಾಳೆಯಿಂದ ಅಂಜನಾದ್ರಿ ಬೆಟ್ಟಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ. ಇನ್ನು ಅಂಜನಾದ್ರಿ ಬೆಟ್ಟದ ಸುತ್ತಮುತ್ತ ಕೂಡ 2 …

Read More »

2022ರ ಮಾರ್ಚ್​ನಲ್ಲಿ ಕರ್ನಾಟಕದ ಸಿಎಂ ಆಗ್ತಾರೆ ಗಡ್ಡಧಾರಿ ವ್ಯಕ್ತಿ! ಭಾರೀ ಕುತೂಹಲ ಮೂಡಿಸಿದೆ ಈ ಭವಿಷ್ಯವಾಣಿ

ವಿಜಯನಗರ: ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಇನ್ನೂ ಒಂದು ವಾರ ಆಗಿಲ್ಲ. ಇದೀಗ ‘ಕರ್ನಾಟಕ ರಾಜ್ಯದ ಗದ್ದುಗೆ ಏರಲಿದ್ದಾರಂತೆ ಗಡ್ಡಧಾರಿ ವ್ಯಕ್ತಿ’ ಎಂಬ ಮಾತು ಭಾರೀ ಕುತೂಹಲ ಮೂಡಿಸಿದೆ. ಮೈಲಾರ ವಾಣಿಯ ಭವಿಷ್ಯವಾಣಿಯಂತೆ ಈಗಿರುವ ಸರ್ಕಾರದಲ್ಲಿ ಮೂವರು ಸಿಎಂ ಆಗಿ ಮುಕ್ತಾಯ ಆಗುತ್ತೆ. ಇನ್ನು ಕೆಲವೇ ತಿಂಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ. ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಾವಧಿ …

Read More »

ಈ ಸರ್ಕಾರದ ಆಯಸ್ಸು 7 ತಿಂಗಳು:ಮೈಲಾರ ಶ್ರೀಗಳ ಭವಿಷ್ಯ

ವಿಜಯನಗರ : ಈಗಾಗಲೇ ರಾಜ್ಯ ರಾಜಕೀಯ, ನೆರೆ, ಪ್ರವಾಹ ಕುರಿತಂತೆ ಸ್ಪೋಟ ಭವಿಷ್ಯವನ್ನು ಕೋಡಿ ಮಠದ ಶ್ರೀಗಳು ( Kodi Matt Sri ) ನುಡಿದಿದ್ದಾರೆ. ಇದರ ಬೆನ್ನಲ್ಲೇ, ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ( Karnataka Next CM ) ಕುರಿತಂತೆ ಮೈಲಾರಲಿಂಗೇಶ್ವರ ಭವಿಷ್ಯವಾಣಿ ( Mylaralingeshwar Prediction ) ನುಡಿದಿದೆ.   ಈ ಕುರಿತಂತೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದ ಧರ್ಮಕರ್ತರು, ಇಂದು ರಾಜ್ಯದಲ್ಲಿ ಸಿಎಂ …

Read More »

ದಾವಣಗೆರೆ ಜಿಲ್ಲೆಯ ಐವರು ಬಿಜೆಪಿ ಶಾಸಕರಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಲಿ: ರೇಣುಕಾಚಾರ್ಯ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಐವರು ಬಿಜೆಪಿ ಶಾಸಕರಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಲಿ ಎಂದು ಹತ್ತೂರು ಗ್ರಾಮದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹತ್ತೂರು ಗ್ರಾಮದಲ್ಲಿ ಮಾತನಾಡಿದ ರೇಣುಕಾಚಾರ್ಯ, ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿ ಪಕ್ಷದ ವರಿಷ್ಠರು, ಸಿಎಂ ಸಂಪುಟ ರಚನೆ ಬಗ್ಗೆ ನಿರ್ಧರಿಸಲಿದ್ದಾರೆ. ಸಿಎಂ ಪರಮಾಧಿಕಾರ ಹೊಂದಿದ್ದು, ಪಕ್ಷದ ನಾಯಕರು ಮತ್ತು ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ಹೇಳಿದ್ದಾರೆ.

Read More »

ಸಂಧಾನ ಮಾಡಿದ್ರೂ ಸಹಿಸದ ಮನಸ್ಸು! ಮಗ ವಿದೇಶದಲ್ಲಿರುವಾಗ್ಲೇ ಸೊಸೆಯನ್ನು ಹತ್ಯೆ ಮಾಡಿದ ಮಾವ

ರಾಜಮಂಡ್ರಿ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಸೊಸೆಯನ್ನೇ ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮಲ್ಕಿಪುರಂ ಮಂಡಲದ ಮೆಡಿಚೆರ್ಲಾ ಪಾಳ್ಯಂನಲ್ಲಿ ನಡೆದಿದೆ. ಮೃತ ಸೊಸೆಯನ್ನು ಪ್ರಿಯಾಮಣಿ (25) ಎಂದು ಹಾಗೂ ಆರೋಪಿ ಮಾವನನ್ನು ಸತ್ಯನಾರಾಯಣ ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಪ್ರಿಯಾಮಣಿ, ಸತ್ಯನಾರಾಯಣ ಮಗ ವಿಜಯ್​ ಕುಮಾರ್​ನನ್ನು ಮದುವೆ ಆಗಿದ್ದಳು. ವಿಜಯ್​ ಕತಾರ್​ನಲ್ಲಿ ಕೆಲಸ ಮಾಡುತ್ತಿದ್ದಾನೆ. ಪ್ರಿಯಾಮಣಿಯ ಪಾಲಕರು …

Read More »