Breaking News
Home / ರಾಜ್ಯ (page 2349)

ರಾಜ್ಯ

ಟೈರ್‌ಗೆ ಬೆಂಕಿ ಹಚ್ಚಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಿದ ಕನ್ನಡಿಗರು

ಬೆಂಗಳೂರು: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಇಂದು ಕರ್ನಾಟಕ ಬಂದ್‍ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್‍ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಹೊಸೂರು ರಸ್ತೆಯಲ್ಲಿ ಪ್ರತಿಭಟನಾಕಾರರು ಟೈರ್‌ಗೆ  ಬೆಂಕಿ ಹಚ್ಚಿ ಪ್ರತಿಭಟನೆ ಇಳಿದಿದ್ದಾರೆ. ಕಳೆದ 101 ದಿನಗಳಿಂದ ಮೌರ್ಯ ಸರ್ಕಲ್‍ನಲ್ಲಿ ಕನ್ನಡ ಪರ ಸಂಘಟನೆಗಳು ಧರಣಿ ಮಾಡುತ್ತಿದ್ದು, ಇಂದು ಬಂದ್‍ಗೆ ಕರೆಕೊಟ್ಟಿದ್ದಾರೆ. ಈ ಹಿನ್ನೆಲೆ ಇಂದು ರಸ್ತೆಯಲ್ಲಿ …

Read More »

ಜಾಕೆಟ್ ಕೊಡಿಸುವಲ್ಲಿ ವಿಳಂಬ ಮಾಡಿದ್ದಕ್ಕೆ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ: ಜಾಕೆಟ್ ಕೊಡಿಸುವಲ್ಲಿ ವಿಳಂಬ ಮಾಡಿದ್ದಕ್ಕೆ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ತಾಲೂಕಿನ ಬಸೂರ್ತೆ ಗ್ರಾಮದಲ್ಲಿ ನಡೆದಿದೆ. ಶುಭಂ ಗಜಾನನ ಹನ್ನೂರಕರ(15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಬಸೂರ್ತೆ ಗ್ರಾಮದವನಾಗಿರುವ ಶುಭಂ ತನ್ನ ತಂದೆಗೆ ಹೊಸ ಜಾಕೆಟ್ ಕೊಡುವಂತೆ ಹೇಳಿದ್ದಾನೆ. ಇದಕ್ಕೆ ತಂದೆ ಗಜಾನನ ನಾನು ಬೆಳಗಾವಿಯಲ್ಲಿ ಖರೀದಿ ಮಾಡಿಕೊಂಡು ಬರುತ್ತೇನೆ. ಆನ್‍ಲೈನಲ್ಲಿ ಖರೀದಿಸಬೇಡ ಎಂದು ತಿಳಿಸಿದ್ದಾ ಎಂದಿನಂತೆ ಬೆಳಗ್ಗೆ ತಂದೆ ಗಜಾನನ ಉದ್ಯಮಬಾಗದ ಕಾರ್ಖಾನೆಗೆ ಕೆಲಸಕ್ಕೆ ಎಂದು …

Read More »

ಫೆಬ್ರವರಿ 13ರ ಬಂದ್‍ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.

ಬೆಳಗಾವಿ/ಚಿಕ್ಕೋಡಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿರುವ ಫೆಬ್ರವರಿ 13ರ ಬಂದ್‍ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬಂದ್ ಕುರಿತು ಚಿಕ್ಕೋಡಿಯಲ್ಲಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ನಾರಾಯಣಗೌಡರು, ಸರೋಜಿನಿ ಮಹಿಷಿ ವರದಿ ಜಾರಿ ವಿಚಾರವಾಗಿ ಕರವೇ ಹೋರಾಟ ಮುಂದುವರಿಯಲಿದೆ. ಆದರೆ ನಾಳೆ ನಡೆಯುವ ಬಂದ್‍ಗೆ ಯಾವುದೇ ಬೆಂಬಲವನ್ನು ಕರವೇ ನೀಡುವುದಿಲ್ಲ. ಕೆಲ ಕನ್ನಡ ಸಂಘಟನೆಗಳು ಮಾತು …

Read More »

 ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ತಮ್ಮನ್ನ ನೋಡಲು ಕಾಯುತ್ತಿದ್ದ 16 ವರ್ಷದ ಬಾಲಕನ ಆಸೆಯನ್ನು ಈಡೇರಿಸಿದ್ದಾರೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ತಮ್ಮನ್ನ ನೋಡಲು ಕಾಯುತ್ತಿದ್ದ 16 ವರ್ಷದ ಬಾಲಕನ ಆಸೆಯನ್ನು ಈಡೇರಿಸಿದ್ದಾರೆ. ಜೊತೆಗೆ ಪುಟ್ಟ ಅಭಿಮಾನಿಯ ಆಸ್ಪತ್ರೆಯ ಖರ್ಚನ್ನು ಭರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. 16 ವರ್ಷದ ಬಾಲಕ ಆದರ್ಶ್, ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿಯಾಗಿದ್ದು, ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾನೆ. ಬಳ್ಳಾರಿ ಜಿಲ್ಲೆಯ ಹೊಸಪೇಟ್ ನಗರದ ಇಂದಿರ ನಗರ ನಿವಾಸಿಗಳಾದ ಹನಮಂತ್ ಮತ್ತು ರೇಖಾ ದಂಪತಿಯ ಹಿರಿಯ ಮಗನಾಗಿರುವ ಆದರ್ಶ್ ಹುಟ್ಟಿದ್ದಾಗಿನಿಂದ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾನೆ. …

Read More »

ಸಿರಿ ಎಂದರೆ ಚಿಗುರು, ಸಿರಿ ಎಂದರೆ ಮಹಿಳೆ, ಸಿರಿ ಎಂದರೆ ಸಂಪತ್ತು “

” ಸಿರಿ ಎಂದರೆ ಚಿಗುರು, ಸಿರಿ ಎಂದರೆ ಮಹಿಳೆ, ಸಿರಿ ಎಂದರೆ ಸಂಪತ್ತು ” ಪರಶುರಾಮ ಸೃಷ್ಟಿ ಎಂದೇ ಪ್ರಸಿದ್ಧವಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಹಳೇ ಪೇಟೆಯಲ್ಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಭೇಟಿ ನೀಡಿ, ಸಿದ್ಧ ಉಡುಪುಗಳು, ಖಾದಿ …

Read More »

ತಿಂಗಳಾಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಈ ಸುದ್ದಿಯನ್ನು ಶೇರ್ ಮಾಡಿ ನವದೆಹಲಿ, ಫೆ.12- ತಿಂಗಳಾಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅವಿಸ್ಮರಣೀಯ ಸ್ವಾಗತ ನೀಡುವುದಾಗಿ ಪ್ರಧಾನಮಂತ್ರಿ ಮೋದಿ ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅಮೆರಿಕ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡುತ್ತಿರುವುದು ನಮಗೆ ಅತ್ಯಂತ ಸಂತಸ ಉಂಟು ಮಾಡಿದೆ. ಅವರಿಗೆ ನಾವು ಅವಿಸ್ಮರಣೀಯ ಸ್ವಾಗತ ಕೋರುತ್ತೇವೆ. ಟ್ರಂಪ್ ಅವರ ಭೇಟಿಯಿಂದ ಉಭಯ ದೇಶಗಳ ಸಂಬಂಧ ಮತ್ತಷ್ಟು ಬಲವಾಗಲಿದೆ …

Read More »

ಸಂಭವನೀಯ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಲೆಕ್ಕಾಚಾರ

ಬೆಂಗಳೂರು, ಫೆ.12- ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕಸರತ್ತಿನಿಂದ ಹೊರ ಬಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇದೀಗ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡುವುದು ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ರಾಜಧಾನಿ ಬೆಂಗಳೂರು, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಿಗೆ ಉಸ್ತುವಾರಿ ವಹಿಸಿಕೊಳ್ಳಲು ಆಡಳಿತಾರೂಢ ಬಿಜೆಪಿಯಲ್ಲಿ ಪೈಪೋಟಿಯೇ ಆರಂಭವಾಗಿದೆ. ಇದು ಯಡಿಯೂರಪ್ಪನವರಿಗೆ ಮತ್ತೊಂದು ಸುತ್ತಿನ ಬಿಕ್ಕಟ್ಟು ತರುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ನಿರೀಕ್ಷಿತ ಖಾತೆಗಳು ಸಿಕ್ಕಿಲ್ಲ ಎಂದು ಮುನಿಸಿಕೊಂಡಿದ್ದ ಕೆಲವು ಸಚಿವರ …

Read More »

ಮಂತ್ರಿ ಸ್ಥಾನ ನೀಡದ ಹೈಕಮಾಂಡ್ ಮುಂದೆ ಉಮೇಶ್ ಕತ್ತಿ ಹೊಸ ಬೇಡಿಕೆ

ನವದೆಹಲಿ: ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗದೆ ನಿರಾಶೆಗೊಂಡಿದ್ದ ಶಾಸಕ ಉಮೇಶ್ ಕತ್ತಿ ಹೊಸ ದಾಳ ಉರುಳಿಸಿದ್ದಾರೆ. ಮಂತ್ರಿ ಮಾಡಿ ಇಲ್ಲ ರಾಜ್ಯಸಭೆಗೆ ಟಿಕೆಟ್ ನೀಡಿ ಎಂದು ಹೈಕಮಾಂಡ್ ಮುಂದೆ ಪಟ್ಟು ಹಿಡಿದಿದ್ದಾರೆ. ದೆಹಲಿಯಲ್ಲಿರುವ ಉಮೇಶ್ ಕತ್ತಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಯಾಗಿ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ಜೂನ್ ನಲ್ಲಿ ನಾಲ್ಕು ಸ್ಥಾನಗಳು ಖಾಲಿಯಾಗಲಿದ್ದು, ಈ ಪೈಕಿ ಎರಡು …

Read More »

ಯುಬಿ ಸಿಟಿ ಗಲಾಟೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಬಂದ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಸುದ್ದಿಯಾಗಿದ್ದಾನೆ

ಬೆಂಗಳೂರು: ಯುಬಿ ಸಿಟಿ ಗಲಾಟೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಬಂದ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಸುದ್ದಿಯಾಗಿದ್ದಾನೆ. ಕಾರ್ ಅಪಘಾತ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಭಾನುವಾರ ನಗರದ ಮೇಖ್ರಿ ಸರ್ಕಲ್ ಬಳಿ ಐಷಾರಾಮಿ ಬೆಂಟ್ಲಿ ಕಾರು ಅಪಘಾತ ಮಾಡಿದ್ದು ಮಹಮ್ಮದ್ ನಲಪಾಡ್ ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಮೂರು ವಾಹನಗಳಿಗೆ ಡಿಕ್ಕಿ ಹೊಡೆದ ಬೆಂಟ್ಲಿ ಕಾರನ್ನು ಅಂದು ನಲಪಾಡ್ ಅವರೇ ಚಲಾಯಿಸುತ್ತಿದ್ದುದು ಪೊಲೀಸ್ ವಿಚಾರಣೆಯಿಂದ ತಿಳಿದುಬಂದಿದ್ದು, ನಲಪಾಡ್ …

Read More »

ಗೋಕಾಕ್​​ನ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಗೋಕಾಕ್​​ನ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಚೇರಿ ಹೊರಗಡೆ ಜನ ಕಿಕ್ಕಿರಿದು ತುಂಬಿರುವುದನ್ನ ಗಮನಿಸದೇ ಕಸ್ತೂರಿ ಮುಳವಾಡ ಎಂಬ ಹಿರಿಯ ಉಪ ನೋಂದಣಾಧಿಕಾರಿ ಮೊಬೈಲ್ ಚಾಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಅಲ್ಲದೇ ತಮ್ಮ ಕೆಲಸಕ್ಕಾಗಿ ಹತ್ತಾರು ಮಂದಿ ಕಚೇರಿಯ ಹೊರಗಡೆ ಕಾಯುತ್ತಿದ್ದರೂ ಅಧಿಕಾರಿಗಳು ಅದರ ಪರಿವೇ ಇಲ್ಲದಂತೆ ವರ್ತಿಸಿದ್ದಾರೆ ಎನ್ನಲಾಗಿದೆ.

Read More »