ನವದೆಹಲಿ, ಜುಲೈ 30: ರೈಲಿನಲ್ಲಿ ಪ್ರಯಾಣಿಸಲು ಆನ್‌ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವವರಿಗೆ IRCTC (ಭಾರತೀಯ ರೈಲ್ವೆ ಕ್ಯಾಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮ) ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಸ್ವಲ್ಪ ಬದಲಾವಣೆ ಮಾಡಿರುವುದಾಗಿ ತಿಳಿಸಿದೆ. ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಸರಳಗೊಳಿಸಿದ್ದು, ಈ ಹೊಸ ವಿಧಾನದಲ್ಲಿ ಕೇವಲ 50 ರಿಂದ 60 ಸೆಕೆಂಡುಗಳಲ್ಲಿ ಆನ್‌ಲೈನ್ ರೈಲ್ವೆ ಟಿಕೆಟ್ ಬುಕ್ಕಿಂಗ್ ಮಾಡಬಹುದಾಗಿದೆ. ಕೊರೊನಾ ಕಾರಣವಾಗಿ IRCTC …
Read More »ಕೆರೆಗೆ ಉರುಳಿದ KSRTC ಬಸ್-
ಶಿವಮೊಗ್ಗ: ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ಸೊಂದು ಕೆರೆಗೆ ಉರುಳಿರುವ ಘಟನೆ ಸಾಗರ ತಾಲೂಕಿನ ಉಳ್ಳೂರು ಕಾಸ್ಪಾಡಿ ಕ್ರಾಸ್ ನ ಬಳಿ ನಡೆದಿದೆ. ಸಾಗರದಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಬೈಕೊಂದು ಎದುರಾಗಿದೆ. ಈ ಸಂದರ್ಭದಲ್ಲಿ ಬಸ್ ಬೈಕ್ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ ಎನ್ನಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಕೆರೆಗೆ ಉರುಳಿದೆ. ಪರಿಣಾಮ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, …
Read More »ಸಿಎಂಗೂ ಮೊದಲೇ ದೆಹಲಿ ಸೇರಿರುವ ಸಚಿವಾಕಾಂಕ್ಷಿಗಳು; ಮಂತ್ರಿ ಸ್ಥಾನಕ್ಕಾಗಿ ಎಂ.ಪಿ.ಕುಮಾರಸ್ವಾಮಿ ನೇರ ಲಾಬಿ
ನವದೆಹಲಿ: ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳಿದ್ದು, ಸಿಎಂ ದೆಹಲಿ ಭೇಟಿಗೂ ಮೊದಲೇ ಸಚಿವಾಕಾಂಕ್ಷಿಗಳು ರಾಷ್ಟ್ರ ರಾಜಧಾನಿಯಲ್ಲಿ ಬೀಡುಬಿಟ್ಟಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಮಂತ್ರಿ ಸ್ಥಾನಕ್ಕಾಗಿ ನೇರವಾಗಿ ವರಿಷ್ಠರ ಬಳಿ ಲಾಬಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕುಮಾರಸ್ವಾಮಿ, ಈ ಹಿಂದೆ 17 ಶಾಸಕರಿಗೆ ಮಂತ್ರಿ ಸ್ಥಾನ ನೀಡಲೇಬೇಕು ಎಂಬ ಅನಿವಾರ್ಯ ಇತ್ತು ಹಾಗಾಗಿ ನಾವೆಲ್ಲ ತಾಳ್ಮೆಯಿಂದ ಇದ್ದೆವು. …
Read More »ಸಂಕಷ್ಟದ ಪರಿಸ್ಥಿತಿಯಲ್ಲಿ ಕ್ಯಾಬಿನೆಟ್ ಕುಸ್ತಿ | ಬೇಕಿತ್ತಾ ಈ ಸರ್ಕಾರ..?
ಸಂಕಷ್ಟದ ಪರಿಸ್ಥಿತಿಯಲ್ಲಿ ಕ್ಯಾಬಿನೆಟ್ ಕುಸ್ತಿ.. ನೆರೆಗೆ ಉತ್ತರ ತತ್ತರಿಸುತ್ತಿದ್ದರೂ ಯಾಕೀ ವಿಳಂಬ..? ಸುಮ್ನೆ ಟೈಂ ಪಾಸ್ ಗೆ ಸಿಎಂ ಆದ್ರಾ ಬಾಮ್ಮಾಯಿ ಸಾಹೇಬ್ರೆ..? ರಾಮೇಶ್ವರಕ್ಕೆ ಹೋದ್ರು ಶನೇಶ್ವರನ ಕಾಟ ತಪ್ಪಲಿಲ್ಲ ಎಂಬಂತೆ ಮುಖ್ಯಮಂತ್ರಿ ಬದಲಾದರೂ ರಾಜ್ಯದ ಜನರ ಹಣೆಬರಹ ಬದಲಾಗೋ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ಕಡೆ ಕೊರೊನಾ ಮೂರನೇ ಅಲೆಯ ಎಚ್ಚರಿಕೆಯ ಗಂಟೆ ಬಾರಿಸುತ್ತಿದೆ. ಇನ್ನೊಂದೆಡೆ ಜಲಾಸುರ ಉತ್ತರ ಕರ್ನಾಟಕವನ್ನು ನುಂಗುತ್ತಾ ಬರುತ್ತಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಹಿತ ಕಾಯಬೇಕಿದ್ದ …
Read More »ವಲಸಿಗರ ಕೈ ಬಿಟ್ರಾ ಬಿ.ಎಸ್.ಯಡಿಯೂರಪ್ಪ..?
ಚಾಮರಾಜನಗರ : ಕೇವಲ ಬಿ.ಎಸ್.ಯಡಿಯೂರಪ್ಪ ಅವರನ್ನು ನಂಬಿ ಬಿಜೆಪಿಗೆ ಬಂದು ಸಚಿವರಾಗಿದ್ದ 17 ಮಂದಿ ಶಾಸಕರಿಗೆ ಬಿಎಸ್ ವೈ ಶಾಕ್ ನೀಡಿದ್ದಾರೆ. ಅವರಿಗೆ ಮತ್ತೆ ಮಂತ್ರಿ ಸ್ಥಾನ ಕೊಡೋದು ಬಿಡೋದು ಸಿಎಂ ಬೊಮ್ಮಾಯಿ ಅವರಿಗೆ ಬಿಟ್ಟಿದ್ದು ಎಂದು ಹೇಳುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಮೈತ್ರಿ ಸರ್ಕಾರದ ವೇಳೆ ಕಾಂಗ್ರೆಸ್ – ಜೆಡಿಎಸ್ ನಲ್ಲಿದ್ದ ಶಾಸಕರನ್ನು ಬಿಜೆಪಿಗೆ ಸೆಳೆದು ಸರ್ಕಾರ ರಚಿಸಿದ್ದ ಬಿಎಸ್ ವೈ ಕೊಟ್ಟ ಮಾತಿನಂತೆ ಅವರಿಗೆ ಸಚಿವ …
Read More »ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?
ಬೆಂಗಳೂರು: ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿದ ಬಳಿಕ ಬಸವರಾಜ ಬೊಮ್ಮಾಯಿಯವರು ಮೊದಲ ಬಾರಿ ದೆಹಲಿ ವಿಮಾನ ಏರಿದ್ದಾರೆ. ಸಿಎಂ ದೆಹಲಿ ಭೇಟಿ ರಾಜ್ಯದ ಸಚಿವ ಸ್ಥಾನಾಕಾಂಕ್ಷಿಗಳ ನೀರಿಕ್ಷೆ ಹೆಚ್ಚಿಸುವಂತೆ ಮಾಡಿದೆ. ಸಿಎಂ ಬೊಮ್ಮಾಯಿ ಇಂದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ತನ್ನನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ಹೇಳಲು ತಾನು ದೆಹಲಿಗೆ ಹೋಗುತ್ತಿರುವುದಾಗಿ ಬೊಮ್ಮಾಯಿ ಹೇಳಿಕೆ …
Read More »ಗದಗ ಜಿಲ್ಲೆಯಲ್ಲಿ ‘ಸಲ್ಮಾನ್ ಖಾನ್’ಗ್ರಾಮ ಕೇಳಿದ್ದೀರಾ? ಇಲ್ಲಿ ಮದುವೆಯಾಗಲು ಕ್ಯೂನಲ್ಲಿ ನಿಂತಿದ್ದಾರೆ ಯುವಕರು!
ಗದಗ:ಜಿಲ್ಲೆಯ ರೋಣ ತಾಲ್ಲೂಕಿನ ಸಣ್ಣ ಹಳ್ಳಿಯಿದು, ಈ ಹಳ್ಳಿ ಗದಗ ಪಟ್ಟಣದಿಂದ 59 ಕಿಲೋ ಮೀಟರ್ ದೂರದಲ್ಲಿದೆ. ಸಲ್ಮಾನ್ ಖಾನ್ ಗ್ರಾಮ ಎಂಬ ಹೆಸರು ಈ ಗ್ರಾಮಕ್ಕೆ ಬಂದಿದೆ, ಅರೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗೂ ಈ ಗ್ರಾಮಕ್ಕೂ ಏನು ಸಂಬಂಧ ಎಂದುಕೊಂಡಿರಾ? ಈ ಗ್ರಾಮದಲ್ಲಿ ಯಾರೂ ನಟರಿಲ್ಲ, ಬದಲಿಗೆ ಹಲವು ಯುವಕರು, ಪುರುಷರು ಮದುವೆಯಾಗಲು ಸೂಕ್ತ ಹೆಣ್ಣು ಸಿಗದೆ ಬ್ರಹ್ಮಚಾರಿಗಳಾಗಿಯೇ ಉಳಿದಿದ್ದಾರೆ. ಕಳೆದ 10 ವರ್ಷಗಳಿಂದ ಗ್ರಾಮದಲ್ಲಿ …
Read More »ಮೇರಿ ಕೋಮ್ ಎಂಬ ‘ಫೈಟಿಂಗ್ ಸ್ಪಿರಿಟ್’ಗೆ ವಿದಾಯ
ಇಂದು ನೂರಾರು ರಾಜಕೀಯ ಸುದ್ದಿಗಳ ನಡುವೆ ಇದೊಂದು ಸುದ್ದಿ ಪ್ರಾಮುಖ್ಯತೆ ಪಡೆಯಲೇ ಇಲ್ಲ! ಬಾಕ್ಸಿಂಗ್ ಲೆಜೆಂಡ್ ಮೇರಿ ಕೋಮ್ ಒಲಿಂಪಿಕ್ಸ್ ಕೂಟದ ಪ್ರಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಇಂದು ಕೊಲಂಬಿಯಾದ ವೇಲೆಂಶಿಯ ಎಂಬ ಬಾಕ್ಸರ್ ಗೆ ಭಾರೀ ಫೈಟ್ ಕೊಟ್ಟು 3-2 ಅಂಕಗಳಿಂದ ಸೋತು ರಿಂಗ್ಸ್ ನಿಂದ ನಿರ್ಗಮಿಸುವಾಗ ಆಕೆಯ ಕಣ್ಣಂಚಿನಲ್ಲಿ ಜಿನುಗಿದ ಕಣ್ಣೀರು ಯಾವುದೇ ಮಾಧ್ಯಮಕ್ಕೆ ಕೂಡ TRP ಕಂಟೆಂಟ್ ಆಗಿಲ್ಲ. ಇನ್ನು ಮುಂದೆ ಮೇರಿ ಕೋಮ್ ಬಾಕ್ಸಿಂಗ್ …
Read More »ಆಧಾರ್ ಕಾರ್ಡ್ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು
ಬಜಪೆ: ಎಷ್ಟು ಪ್ರಯತ್ನ ಪಟ್ಟರೂ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗದೆ ಇಲ್ಲೊಬ್ಬ ವಿಶೇಷ ಚೇತನ ಯುವತಿ ಸರಕಾರದ ಸವಲತ್ತುಗಳಿಂದ ವಂಚಿತರಾಗಿದ್ದಾರೆ. ಮಂಗಳೂರು ತಾಲೂಕು ಎಕ್ಕಾರು ಗ್ರಾಮ ಪಂಚಾಯತ್‌ನ ತೆಂಕ ಎಕ್ಕಾರು ಪಲ್ಲದ ಕೋಡಿ ಮುರ ಮನೆಯ ಪದ್ಮನಾಭ ಗೌಡ – ಮೀನಾಕ್ಷಿ ದಂಪತಿಯ ಪುತ್ರಿ ಧನ್ಯಶ್ರೀ (23) ಸಂತ್ರಸ್ತ ಯುವತಿ. ಕೂಲಿ ಕಾರ್ಮಿಕ ದಂಪತಿಗೆ ನಾಲ್ವರು ಮಕ್ಕಳು. ಧನ್ಯಶ್ರೀ ಹುಟ್ಟಿನಿಂದ ಅಂಗವೈಕಲ್ಯ ಮತ್ತು ಮಧ್ಯಮ ಬುದ್ಧಿ ಮಾಂದ್ಯತೆಯಿಂದ ಬಳಲುತ್ತಿದ್ದಾರೆ. ದಿನಗೂಲಿ …
Read More »ಮತ್ತೆ ಏರುಗತಿಯಲ್ಲಿ ಕೋವಿಡ್ ಪ್ರಕರಣಗಳು: ಸ್ವಯಂ ರಕ್ಷಣೆ ಅನಿವಾರ್ಯ
ನಮ್ಮ ನೆರೆ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ ಸಹಿತ ದೇಶದ ಹಲವೆಡೆ ಕೊರೊನಾ ಪ್ರಕರಣಗಳು ಕಳೆದ ಕೆಲವು ದಿನಗಳಿಂದೀಚೆಗೆ ಹೆಚ್ಚುತ್ತಲೇ ಸಾಗಿದೆ. ಕೊರೊನಾ ಮೊದಲನೇ ಅಲೆ ವೇಳೆ ಸಾಂಕ್ರಾಮಿಕದ ನಿಯಂತ್ರ ಣದಲ್ಲಿ ದೇಶ ಮಾತ್ರವಲ್ಲದೆ ವಿಶ್ವ ಆರೋಗ್ಯ ಸಂಸ್ಥೆಯ ಗಮನ ಸೆಳೆದಿದ್ದ ಕೇರಳ ಎರಡನೇ ಅಲೆಯನ್ನು ನಿಭಾಯಿಸುವಲ್ಲಿ ಸಂಪೂರ್ಣವಾಗಿ ವಿಫಲ ವಾಗಿರುವುದು ತೀವ್ರ ಅಚ್ಚರಿಯುಂಟು ಮಾಡಿದೆ. ದೇಶಾದ್ಯಂತ ಕೊರೊನಾ ಎರಡನೇ ಅಲೆ ವ್ಯಾಪಿಸಲಾರಂಭಿಸಿದಾಗಿನಿಂದಲೂ ಕೇರಳದಲ್ಲಿ ಸೋಂಕಿನ ಹರಡುವಿಕೆ ತೀವ್ರಗತಿಯಲ್ಲಿತ್ತು. ಸೋಂಕಿನ ಪ್ರಸರಣಕ್ಕೆ …
Read More »
Laxmi News 24×7