Breaking News

ರಾಜ್ಯ

ಆಗಸ್ಟ್ ತಿಂಗಳಲ್ಲಿ 12 ದಿನ ಬ್ಯಾಂಕ್ ಕಾರ್ಯ ನಿರ್ವಹಿಸಲ್ಲ ಏಕೆಂದ್ರೆ..

ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ . ಭಾರತದಲ್ಲಿ ಬ್ಯಾಂಕ್ ರಜಾ ದಿನಗಳು ಆಯಾ ರಾಜ್ಯಗಳ ಮೇಲೂ ಅವಲಂಬನೆ ಆಗಿರುತ್ತದೆ . ಇನ್ನು ಭಾರತದ ವಿವಿಧ ಭಾಗಗಳಲ್ಲಿ ನಿರ್ಬಂಧಿತ ರಜಾಗಳು ಹಾಗೂ ಗೆಜೆಟೆಡ್ ರಜಾ ದಿನಗಳಿವೆ . ಗೆಜೆಟೆಡ್ ಅಥವಾ ಸಾರ್ವಜನಿಕ ರಜಾ ದಿನಗಳು ದೇಶದಾದ್ಯಂತ ಅನ್ವಯಿಸುತ್ತದೆ. ಬ್ಯಾಂಕ್ ಗಳು ಪ್ರತಿ ತಿಂಗಳ ಎರಡು ಮತ್ತು ನಾಲ್ಕನೇ ಶನಿವಾರ ಹಾಗೂ …

Read More »

ರಿಯಾಲಿಟಿ ಶೋ ಜಡ್ಜ್ ಸ್ಥಾನದಿಂದ ಶಿಲ್ಪಾ ಔಟ್? ರಾಜ್ ಕುಂದ್ರ ಪತ್ನಿ ಜಾಗಕ್ಕೆ ಸ್ಟಾರ್ ದಂಪತಿ ಎಂಟ್ರಿ

ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಜುಲೈ 19ರಂದು ರಾಜ್ ಕುಂದ್ರ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪತಿಯ ಬಂಧನದಿಂದ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಮುಜುಗರ ಅನುಭವಿಸಬೇಕಾಗಿದೆ. ಪತಿಯ ಬ್ಲೂ ಫಿಲ್ಮ್ ಪ್ರಕರಣ ಶಿಲ್ಪಾ ಶೆಟ್ಟಿ ಪರಿಣಾಮ ಬೀರಿದೆ. ಇತ್ತೀಚಿಗೆ ಮುಂಬೈ ಪೊಲೀಸರು ಶಿಲ್ಪಾ ಶೆಟ್ಟಿಯನ್ನು ವಿಚಾರಣೆ ನಡೆಸಿದ್ದರು. ಇದೆಲ್ಲದರ ನಡುವೆ …

Read More »

ಕಂಗನಾಗೆ ಮುಂಬೈ ಕೋರ್ಟ್ ಖಡಕ್ ಎಚ್ಚರಿಕೆ: ಹಾಜರಾಗಿಲ್ಲ ಅಂದ್ರೆ ವಾರೆಂಟ್ ಜಾರಿ

ಚಿತ್ರಕತೆ ರಚನೆಕಾರ, ಚಿತ್ರಸಾಹಿತಿ, ಮಾಜಿ ಸಂಸದ ಜಾವೇದ್ ಅಖ್ತರ್ ದಾಖಲಿಸಿರುವ ಮಾನಹಾನಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ಕಂಗನಾ ರಣಾವತ್‌ಗೆ ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕೊನೆಯ ಎಚ್ಚರಿಕೆ ನೀಡಿದೆ. ಮುಂದಿನ ವಿಚಾರಣೆಗೆ ನಟಿ ಹಾಜರಾಗಿಲ್ಲ ಅಂದ್ರೆ ವಾರೆಂಟ್ ಜಾರಿ ಮಾಡಬೇಕಾಗುತ್ತದೆ ಎಂದು ಕಟುವಾಗಿ ಪ್ರತಿಕ್ರಿಯಿಸಿದೆ. ಕಂಗನಾ ಪರ ವಕೀಲರು, ”ಕಂಗನಾ ದೇಶದಲ್ಲಿಲ್ಲ, ಹಾಗಾಗಿ, ಇಂದಿನ (ಜುಲೈ 27) ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಇಂದಿನ ವಿಚಾರಣೆಗೆ ವಿನಾಯಿತಿ ಕೊಡಿ” ಎಂದು ನ್ಯಾಯಾಲಯಕ್ಕೆ ಕೋರಿದ್ದರು. …

Read More »

ಕರ್ನಾಟಕದ 20ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿನ್ನೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ ಬಳಿಕ ಹಂಗಾಮಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಐವರು ನಾಯಕರ ಜೊತೆ ನಿಯೋಜಿತ ಸಿಎಂ ಬೊಮ್ಮಾಯಿ ರಾಜಭವನಕ್ಕೆ ಆಗಮಿಸಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. …

Read More »

ಬಿಎಸ್​ವೈ ನಿರ್ಗಮನದ ಬೆನ್ನಲ್ಲೇ ಕೇಂದ್ರದಿಂದ ರಾಜ್ಯಕ್ಕೆ ₹629.3 ಕೋಟಿ ಬಿಡುಗಡೆ

ನವದೆಹಲಿ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಇಂದು ಬರೋಬ್ಬರಿ 629.03 ಕೋಟಿ ಹಣವನ್ನ ಪ್ರಕೃತಿ ವಿಕೋಪದ ಪರಿಹಾರವಾಗಿ ಬಿಡುಗಡೆ ಮಾಡಿದೆ. ಕಳೆದ ಬಾರಿಯ ಮುಂಗಾರು ಮಳೆ ಸಂದರ್ಭದಲ್ಲಿ ಭಾರೀ ಪ್ರವಾಹ ಉಂಟಾಗಿತ್ತು. ಉತ್ತರ ಕರ್ನಾಟಕವು ಮಹಾಮಳೆಗೆ ನಲುಗಿ ಹೋಗಿತ್ತು. ಮಳೆಯಿಂದ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿ ಅಪಾರ ಹಾನಿಯುಂಟಾಗಿತ್ತು. ಮಾತ್ರವಲ್ಲ ಮಹಾರಾಷ್ಟದಲ್ಲೂ ತೀವ್ರ ಹಾನಿಯಾಗಿತ್ತು. ಇದೀಗ ಕೇಂದ್ರ ಸರ್ಕಾರ 2020ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ಪರಿಹಾರವನ್ನ ನೀಡಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರ …

Read More »

ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

  ಗೋಕಾಕ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವುದರಿಂದ ಸರ್ಕಾರ ಮತ್ತು ಭಾರತೀಯ ಜನತಾ ಪಾರ್ಟಿಯ ಸಂಘಟನೆ ಹೆಚ್ಚು ಬಲಶಾಲಿಯಾಗಲಿದೆ. ಕ್ರಿಯಾಶೀಲ ವ್ಯಕ್ತಿತ್ವದ ಸ್ನೇಹಜೀವಿಯಾಗಿರುವ ಬೊಮ್ಮಾಯಿ ಅವರಿಂದ ರಾಜ್ಯ ಮತ್ತಷ್ಟು ಅಭಿವೃದ್ಧಿ ಕಾಣಲಿದೆ. ಇವರ ಆಯ್ಕೆಯಿಂದ ನಮ್ಮ ಉತ್ತರ ಕರ್ನಾಟಕಕ್ಕೂ ಹೆಚ್ಚಿನ …

Read More »

ತುಂಗಭದ್ರಾ ಜಲಾಶಯದ ಎಲ್ಲಾ ಗೇಟ್​ ಓಪನ್ -ವಿದ್ಯುತ್ ದೀಪಗಳಿಂದ ಕಂಗೊಳಿಸ್ತಿದೆ ಡ್ಯಾಂ

ವಿಜಯನಗರ: ಕಲ್ಯಾಣ ಕರ್ನಾಟಕದ ಜೀವನಾಡಿ ಎಂದೇ ಖ್ಯಾತಿ ಪಡೆದ ತುಂಗಭದ್ರಾ ಜಲಾಶಯ ವಿದ್ಯುತ್ ದೀಪಗಳಿಂದ ಕಂಗೊಳಿಸ್ತಿದೆ. ಈಗಾಗಲೇ ತುಂಗಭದ್ರಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು. ಡ್ಯಾಂ‌ನ 33 ಕ್ರಸ್ಟ್ ಗೇಟ್ ಮೂಲಕ ನದಿಗೆ ನೀರನ್ನು ಹರಿಸಲಾಗ್ತಿದೆ. ಗೇಟ್ ಗಳಿಗೆ ವಿವಿಧ ಬಣ್ಣಗಳ ವಿದ್ಯುತ್ ದೀಪಗಳನ್ನ ಅಳವಡಿಕೆ ಮಾಡಿ, ನೀರಿಗೆ ಬಣ್ಣ ಬಳಿದಂತೆ ಭಾಸವಾಗುತ್ತಿದೆ.     ಇನ್ನು ತುಂಗಭದ್ರಾ ಜಲಾಶಯದ ಪಾರ್ಕ್​​​ಗೂ ಜೀವ ಕಳೆ ಬಂದಿದೆ. ಕತ್ತಲಾಗುತ್ತಿಂದೆ ಜಲಾಶಯದ ಸೌಂದರ್ಯ ಜನರನ್ನ …

Read More »

ಸಂಸದೀಯ ಮಂಡಳಿಯಲ್ಲೇ ಸಿಎಂ ಹೆಸರು ಫೈನಲ್, ನೆಪ ಮಾತ್ರಕ್ಕೆ ಶಾಸಕಾಂಗ ಸಭೆ

ಬೆಂಗಳೂರು, ಜು.27- ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟ್ಟಾಗಿರುವುದರಿಂದ ದೆಹಲಿ ವರಿಷ್ಠರೇ ಪಕ್ಷದ ಸಂಸದೀಯ ಮಂಡಳಿಯಲ್ಲೇ ಒಬ್ಬರನ್ನು ಆಯ್ಕೆ ಮಾಡುವುದು ಖಚಿತವಾಗಿದೆ. ಸಿಎಂ ಸ್ಥಾನ ಅಲಂಕರಿಸಲು ಸುಮಾರು ಒಂದು ಡಜನ್‍ಗೂ ಅಧಿಕ ಆಕಾಂಕ್ಷಿಗಳು ಇರುವುದರಿಂದ ಸಂಸದೀಯ ಮಂಡಳಿಯಲ್ಲೇ ಹೆಸರು ಅಂತಿಮಗೊಳಿಸಿ ನೆಪಮಾತ್ರಕ್ಕೆ ಶಾಸಕಾಂಗ ಸಭೆ ನಡೆಯಲಿದೆ. ವರಿಷ್ಠರ ಸೂಚನೆಯನ್ನು ವಿಧಿಯಿಲ್ಲದೆ ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ. ಶಾಸಕರ ಅಭಿಪ್ರಾಯದಂತೆ ಶಾಸಕಾಂಗ ಪಕ್ಷದ ನಾಯಕನ್ನು ಆಯ್ಕೆ ಮಾಡಲು ಹೋದರೆ ನೂರೆಂಟು ತಾಪತ್ರಯಗಳು ಎದುರಾಗಬಹುದೆಂಬ ಹಿನ್ನೆಲೆಯಲ್ಲಿ ವರಿಷ್ಠರೇ …

Read More »

ಕೊಪ್ಪಳದಲ್ಲಿ ಕೊರೊನಾ ಮೂರನೇ ಅಲೆಯ ಮುನ್ಸೂಚನೆ; ಆರು ಮಕ್ಕಳಲ್ಲಿ ಕೊರೊನಾ ಸೋಂಕು ಧೃಡ

ಕೊಪ್ಪಳ: ಕೊರೊನಾ ಮೂರನೇ ಅಲೆಯ ಭೀತಿ ಹೆಚ್ಚುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಎಲ್ಲೆಡೆ ಕಟ್ಟುನಿಟ್ಟಾದ ಕ್ರಮಗಳನ್ನು ಮತ್ತೆ ಜಾರಿಗೊಳಿಸಬೇಕಾದ ಅನಿವಾರ್ಯತೆ ಕಾಣಿಸುತ್ತಿದೆ. ಅನ್​ಲಾಕ್​ ನಂತರ ಜನ ಸಂಪೂರ್ಣ ಮೈಮರೆತು ಮೋಜು ಮಸ್ತಿಯಲ್ಲಿ ತೊಡಗಿರುವುದರಿಂದ ಮೂರನೇ ಅಲೆ ಕಟ್ಟಿಟ್ಟ ಬುತ್ತಿ ಎನ್ನುವಂತಾಗಿದೆ. ಹೀಗಿರುವಾಗಲೇ ಕೊಪ್ಪಳದಲ್ಲಿ ಆರು ಮಕ್ಕಳಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಮತ್ತಷ್ಟು ಆತಂಕಕ್ಕೆ ಗುರಿ ಮಾಡಿದೆ. ಕೊಪ್ಪಳದ ಅಮೂಲ್ಯ ದತ್ತು ಕೇಂದ್ರದಲ್ಲಿನ ಆರು ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ದತ್ತು ಕೇಂದ್ರದ …

Read More »

ಮಂಗಳವಾರ ಸಂಜೆ 7 ಘಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಹುದ್ದೆಗೆ ಹೊಸಬರನ್ನು ನೇಮಿಸುವ ಕುರಿತು ಖಾಸಗಿ ಹೋಟೆಲ್‌ನಲ್ಲಿ ಇಂದು ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ.ಅರುಣ, ಕೇಂದ್ರೀಯ ವೀಕ್ಷಕ ಕಿಶನ್ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಕ್ಯಾಪಿಟಲ್ ಹೊಟೇಲ್​ನಲ್ಲಿ ನಡೆಯಲಿರುವ …

Read More »