Breaking News

ರಾಜ್ಯ

ಪೊಲೀಸ್‌ ಮಕ್ಕಳ ಅಧ್ಯನಕ್ಕೆ ಗ್ರಂಥಾಲಯ

ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯ ಹಳೇ ಸಶಸ್ತ್ರ ಮೀಸಲು ಮೈದಾನದ ಕಟ್ಟಡದಲ್ಲಿ ಪೊಲೀಸ್‌ ಸಿಬ್ಬಂದಿ ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲೆಂದು ನೂತನ ಗ್ರಂಥಾಲಯ ತೆರೆಯಲಾಗಿದೆ. ಕನ್ನಡ, ಇಂಗ್ಲೀಷ ಭಾಷೆಯಲ್ಲಿರುವ 750 ಪುಸ್ತಕಗಳು ಲಭ್ಯವಿದ್ದು, ಜಿಲ್ಲಾ ಕೇಂದ್ರ ಗ್ರಂಥಾಲಯದ ಸಹಯೋಗದಲ್ಲಿ ಆರಂಭಿಸಲಾಗಿದೆ. ಐಎಎಸ್‌, ಕೆಪಿಎಸ್‌, ಪಿಡಿಒ ಸೇರಿದಂತೆ ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಯ ಪರೀಕ್ಷೆಗಳಿಗೆ ಅನುಕೂಲವಾಗುವ ಪುಸ್ತಕಗಳು ಇಲ್ಲಿವೆ. ಏಕಕಾಲದಲ್ಲಿ 25 ಮಂದಿ ಕೂತು ಅಧ್ಯಯನ ನಡೆಸಲು ಅನುಕೂಲವಾಗುವಂತೆ …

Read More »

ಕೊಲೆ ಆರೋಪಿಯ ಮದುವೆಗೆ ಪೊಲೀಸರು ಹಾಜರ್.. ಕಡ್ಡಾಯ ರಜೆ ಶಿಕ್ಷೆ ಕೊಟ್ಟ ಎಸ್​ಪಿ

ಕೊಪ್ಪಳ: ಜಾಮೀನಿನ ಮೇಲೆ ಹೊರ ಬಂದ ಕೊಲೆ ಆರೋಪಿಯ ಮದುವೆಯಲ್ಲಿ ಭಾಗವಹಿಸಿದ ಪೊಲೀಸ್​ ಅಧಿಕಾರಿಗಳಿಗೆ ಎಸ್​ಪಿ ಕಡ್ಡಾಯ ರಜೆ ಶಿಕ್ಷೆ ನೀಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.     ಯಲ್ಲಾಲಿಂಗ ಕೊಲೆ ಪ್ರಕರಣದ ಆರೋಪಿ ಹನುಮೇಶ್ ನಾಯಕನ ಮಗ, ಮಹಾಂತೇಶ್ ನಾಯಕ ಕೂಡ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ ಎನ್ನಲಾಗಿದ್ದು ಕಳೆದ ಎರಡು ದಿನಗಳ ಹಿಂದೆ ಕನಕಗಿರಿ ತಾಲೂಕಿನ, ಹುಲಿಹೈದರ್ ಗ್ರಾಮದಲ್ಲಿ ಮದುವೆ ಮಾಡಿಕೊಂಡಿದ್ದಾನೆ. ಈ ಮದುವೆಯಲ್ಲಿ ಗಂಗಾವತಿ ಡಿವೈಎಸ್​ಪಿ …

Read More »

ಬಾಯ್​ಫ್ರೆಂಡ್ ಜೊತೆ ಸೇರಿ ಗಂಡನನ್ನೇ ಕೊಂದು, ಸುಟ್ಟುಹಾಕಿದ ಹೆಂಡತಿ; 10 ವರ್ಷಗಳ ಬಳಿಕ ಸೆರೆ ಸಿಕ್ಕ ಹಂತಕಿ

ನವದೆಹಲಿ: ಆಕೆ ಇನ್ನೂ ಕಾಲೇಜಿನ ಮೆಟ್ಟಿಲೇರಿದ ದಿನಗಳವು. ಚೆನ್ನಾಗಿ ಓದಿ, ಒಳ್ಳೆಯ ಕೆಲಸ ಹಿಡಿದು, ತಾನಿಷ್ಟ ಪಟ್ಟ ಹುಡುಗನೊಂದಿಗೆ ಮದುವೆಯಾಗಬೇಕೆಂಬ ಆಸೆ ಆಕೆಗಿತ್ತು. ಆದರೆ, ಮನೆಯಲ್ಲಿ ಆಕೆಗೆ ಇಷ್ಟವಿಲ್ಲದಿದ್ದರೂ 18ನೇ ವಯಸ್ಸಿಗೆ ಮದುವೆ ಮಾಡಿದ್ದರು. ಆದರೆ, ಆಕೆಯ ಮನಸಿನಲ್ಲಿ ಆತನಿಗೆ ಜಾಗವಿರಲಿಲ್ಲ. ಹೀಗಾಗಿ, ತನ್ನ ಬಾಯ್​ಫ್ರೆಂಡ್ ಜೊತೆ ಸೇರಿ ಗಂಡನನ್ನು ಕೊಲೆ (Murder) ಮಾಡಿದ್ದ ಆಕೆ ಆತನ ಶವವನ್ನು (Dead Body) ಸುಟ್ಟು ಹಾಕಿದ್ದಳು. ಅದೆಲ್ಲ ಆಗಿ ಬರೋಬ್ಬರಿ 10 …

Read More »

ಬೆಳಗಾವಿ ಜಿಲ್ಲಾ ಪೋಲೀಸರು ಬಕ್ರೀದ್ ಹಬ್ಬದ ಮುನ್ನಾದಿನ 209 ಆಕಳು ಕರುಗಳನ್ನು ರಕ್ಷಿಸಿದ್ದಾರೆ‌

ಬೆಳಗಾವಿ- ಬಕ್ರೀದ್ ಹಬ್ಬಕ್ಕಾಗಿ ಮಾರಾಟ ಮಾಡಲು ತರಲಾಗಿದ್ದ 209 ಆಕಳು ಕರುಗಳನ್ನು ರಾಯಬಾಗ ಪೋಲೀಸರು ವಶಪಡಿಸಿಕೊಂಡಿದ್ದಾರೆ. ರಾಯಬಾಗ ಪಟ್ಟಣದ ಸಾಯಿನಗರದಲ್ಲಿರುವ ಇಮ್ತಿಯಾಜ್ ಬೇಪಾರಿ ಜಾತಿ ಬೆಪಾರಿ ಎಂಬಾತ ನಡೆಸುತ್ತಿದ್ದ ಖಾಸಾಯಿ ಖಾನೆಗೆ ಸುಮಾರು 209 ದನಗಳು (ಆಕಳುಕರುಗಳು ಹಾಗೂ ಎಮ್ಮೆಕರುಗಳು) ಗಳನ್ನು ಬಕ್ರೀದ್ ಹಬ್ಬದ ನಿಮಿತ್ಯ ಕಸಾಯಿ ಖಾನೆಗೆ ತೆಗೆದುಕೊಂಡು ಬಂದಿದ್ದನ್ನು ರಾಯಭಾಗ ಪೊಲೀಸರು ತಮ್ಮ ವಶಕ್ಕೆ ತಗೆದುಕೊಂಡಿದ್ದಾರೆ. ವಶಪಡಿಸಿಕೊಂಡ ಆಕಳುಕರು,ಹಾಗು ಎಮ್ಮೆಗಳನ್ನು ನಸುಕಿನ ಜಾವ ಬೆಳಗಾವಿ, ಸದಲಗಾ ಹಾಗೂ …

Read More »

ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕೃಷಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಬ್ಬು, ಗೋವಿನಜೋಳ, ಸೂರ್ಯಕಾಂತಿ, ಸೊಯಾಬಿನ್ ಬೆಳೆಗಳು ಭಾಗಶಃ …

Read More »

ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಪೊಲೀಸರು ಬಂಧಿಸಿದ್ದಾರೆ.

ಮುಂಬೈ: ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಸೋಮವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಮತ್ತು ಕೆಲವು ಆಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪ ಅವರ ಮೇಲಿದೆ. ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು …

Read More »

ನೂತನ ” ಶ್ರೀದೇವಿ ಇನ್ಸೂರೆನ್ಸ್ ಜೋನ್” ಉದ್ಘಾಟಿಸಿದ ಸತೀಶ ಜಾರಕಿಹೊಳಿ

ಸವದತ್ತಿ: ತಾಲೂಕಿನ ಯರಗಟ್ಟಿಯಲ್ಲಿ ನೂತನ ನಿರ್ಮಾಣವಾದ ಶ್ರೀದೇವಿ ಇನ್ಸೂರೆನ್ಸ್ ಜೋನ್ ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ ಉದ್ಘಾಟಿಸಿ, ಹೊಲ್ ಸೆಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು.   ಕಾಂಗ್ರೆಸ್ ಮುಖಂಡರು ಬಸವರಾಜ್ ಸಾಯನ್ನವರ.     ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಯುವ ನಾಯಕ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ, ಆ.ಆ. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ ಸಂಗಪನವರ, ಹರಳಿ , ಹಾಗೂ ಸವದತ್ತಿ ತಾಲೂಕಿನ …

Read More »

ಮನೆಯ ಯಜಮಾನನಿಂದಲೇ ಕಳ್ಳತನ : ಘಟನೆ ನಡೆದ ಕೆಲವೇ ಗಂಟೆಯಲ್ಲಿ ಪ್ರಕರಣ ಭೇದಿಸಿದ ಪೊಲೀಸರು

ಕೊಪ್ಪಳ: ಕೊಪ್ಪಳದಲ್ಲಿನ ಕಲ್ಯಾಣ ನಗರದ ಮನೆಯೊಂದರಲ್ಲಿ ಆಭರಣ, ನಗದು ಕಳ್ಳತನ ಪ್ರಕರಣದಲ್ಲಿ ಮನೆಯ ಯಜಮಾನನೇ ಕಳ್ಳತನ ಮಾಡಿರುವ ವಿಚಿತ್ರ ಘಟನೆ ನಡೆದಿದ್ದು ಈ ಪ್ರಕರಣವನ್ನು ಪೊಲೀಸರು ಕೇವಲ ಕೆಲವೇ ಗಂಟೆಯಲ್ಲಿ ಪತ್ತೆ ಮಾಡಿ ಬಂಧಿತನಿಂದ ನಗದು, ಆಭರಣ ಜಪ್ತಿ ಮಾಡಿದ ಪ್ರಸಂಗವೂ ನಡೆದಿದೆ. ಕೊಪ್ಪಳದ ಕಲ್ಯಾಣ ನಗರದ ಜ್ಯೋತಿ ಶಿವರಾಜ ಭಜೇಂತ್ರಿ ಎನ್ನುವವರು ಊರಿಗೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಕಳ್ಳತನ ನಡೆದಿತ್ತು. ಅವರು ಮನೆಗೆ ಬಂದು ನೋಡಿದಾಗ ಆಭರಣ, ನಗದು …

Read More »

ತಗ್ಗಿದ ಮಳೆಯ ಅಬ್ಬರ: ಜಲಾಶಯಗಳಲ್ಲಿ ಹೆಚ್ಚಿದ ನೀರು

ಬೆಂಗಳೂರು: ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಬಹುತೇಕ ಕಡೆ ಸೋಮವಾರ ಸಾಧಾರಣ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಆರ್ಭಟಿಸಿದ್ದ ಮಳೆ ಸೋಮವಾರ ಸ್ವಲ್ಪ ಬಿಡುವು ನೀಡಿದೆ. ಶಿವಮೊಗ್ಗ ಸೇರಿ ಹಲವೆಡೆ ಬಿಸಿಲ ದರ್ಶನವಾದರೆ, ಸೊರಬ, ಹೊಸನಗರ, ತೀರ್ಥಹಳ್ಳಿ, ಸಾಗರದ ಕೆಲವೆಡೆ ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗಿದೆ. ಮಳೆ ಕ್ಷೀಣಿಸಿದರೂ ಜಲಾಶಯಗಳಿಗೆ ಸಾಕಷ್ಟು ನೀರು ಹರಿದುಬರುತ್ತಿದೆ. ಹೊಸನಗರ ತಾಲ್ಲೂಕಿನಲ್ಲಿ 17.1 ಸೆಂ.ಮೀ, ಹುಲಿಕಲ್‌ನಲ್ಲಿ 13.6 ಸೆಂ.ಮೀ, ಮಾಣಿಯಲ್ಲಿ 11.5 …

Read More »

ಮಹಿಳೆ ಸುಪಾರಿ ಕೊಲೆ ಶಂಕೆ ; ಗಂಡನ ತೀವ್ರ ವಿಚಾರಣೆ

ಉಡುಪಿ: ಇಲ್ಲಿಗೆ ಸಮೀಪದ ಬ್ರಹ್ಮಾವರದ ಉಪ್ಪಿನಕೋಟೆ ಅಪಾರ್ಟ್‌ಮೆಂಟ್‌ನಲ್ಲಿ ಕಳೆದ ಜುಲೈ.12 ರಂದು ಸಂಭವಿಸಿದ ವಿಶಾಲಾ ಗಾಣಿಗ ಎಂಬ ಮಹಿಳೆಯ ಕೊಲೆಗೆ ಸಂಬಂದಿಸಿದಂತೆ ಮಹಿಳೆಯ ಪತಿ ರಾಮಕೃಷ್ಣ ಗಾಣಿಗ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣದಲ್ಲಿ ತನಿಖೆಗೆ ಪೊಲೀಸರು ನಾಲ್ಕು ತಂಡ ರಚಿಸಿದ್ದು, ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಹೊರ ರಾಜ್ಯದ ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳಿಂದ …

Read More »