Breaking News

ರಾಜ್ಯ

ದುಬೈನಿಂದ‌ ಬಂದ ಇಬ್ಬರಿಂದ ₹34.46 ಲಕ್ಷ ಮೌಲ್ಯದ‌ ಚಿನ್ನ ವಶ

ಮಂಗಳೂರು: ಇಲ್ಲಿನ ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿಳಿದ ಇಬ್ಬರು ಪ್ರಯಾಣಿಕರನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು, ₹34.46 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದಾರೆ. ಕೇರಳದ ಮೊಹ್ಮದ್ ಅನ್ಸಾರ್ ಹಾಗೂ ಮೊಹಮ್ಮದ್ ಮೂಸಾ ಮಿಯಾಸ್ ಬಂಧಿತ ಆರೋಪಿಗಳು. ಇಬ್ಬರೂ ಸೂಟ್ ಕೇಸ್ ನ ತಳಭಾಗದಲ್ಲಿ ಚಿನ್ನವನ್ನು ಅಡಗಿಸಿ ಇಟ್ಟಿದ್ದರು. ತಪಾಸಣೆಗೆ ಒಳಪಡಿಸಿದಾಗ ಒಟ್ಟು ₹ 34,46,464 ಮೌಲ್ಯದ 703 ಗ್ರಾಂ‌ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

Read More »

ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು

ಯಾದಗಿರಿ: ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ‌ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಯಾದಗಿರಿ ಜಿಲ್ಲೆ ಗುರುಮಠಕಲ್‌ ಬಸ್​ ನಿಲ್ದಾಣದಲ್ಲಿ ಘಟನೆ ನಡೆದಿದ್ದು ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಗೆಂದು ಹಾಲ್ ​ಟಿಕೆಟ್ ಪಡೆದು ಮನೆಗೆ ವಾಪಸ್​ ಬರುವಾಗ ಸಾವು ಸಂಭವಿಸಿದೆ. ಜುಲೈ 19 ರಂದು ಪರೀಕ್ಷೆ ಬರೆಯಬೇಕಿದ್ದ ಪುಟಪಾಕ ಗ್ರಾಮದ ನಿಶಿತಾ ಫಾತಿಮಾ (16) ಸಾವಿಗೀಡಾದ ದುರ್ದೈವಿ. ನಿಶಿತಾ ಫಾತಿಮಾ ಸರ್ಕಾರಿ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ. ಗ್ರಾಮಕ್ಕೆ ವಾಪಸ್​ ಹೋಗಲು ಬಸ್ ನಿಲ್ದಾಣದಲ್ಲಿ ಕುಳಿತಿದ್ದಾಗ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಳೆ.

Read More »

ಚಿತ್ರರಂಗಕ್ಕೆ ಕಾಲಿಡುತ್ತಿದ್ದಾಳೆ ಸ್ಟಾರ್ ನಟನ ಮಗಳು

ಹೈದ್ರಾಬಾದ್: ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಮಗಳು ಅಲ್ಲು ಅರ್ಹಾ ಸಿನಿಮಾ ರಂಗಕ್ಕೆ ಎಂಟ್ರಿಕೊಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಈ ವಿಚಾರವಾಗಿ ಅಲ್ಲು ಸ್ಪಷ್ಟನೆ ಕೊಟ್ಟಿದ್ದಾರೆ. ಶಾಕುಂತಲಂ ಸಿನಿಮಾ ಮೂಲಕ ಅಲ್ಲು ಕುಟುಂಬದ ನಾಲ್ಕನೇ ತಲೆಮಾರಿನ ಅಲ್ಲು ಅರ್ಹಾ ಚಿತ್ರಕ್ಕೆ ಕಾಲಿಡುತ್ತಿರುವುದು ನಮಗೆ ಹೆಮ್ಮೆಯ ಕ್ಷಣ. ಇಂಥ ಸುಂದರ ಸಿನಿಮಾದಲ್ಲಿ ನನ್ನ ಮಗಳಿಗೆ ಚೊಚ್ಚಲ ಅವಕಾಶ ನೀಡಿರುವುದಕ್ಕೆ ನಿರ್ದೇಶಕ ಗುಣಶೇಖರ್ ಅವರಿಗೆ ಧನ್ಯವಾದಗಳು. ನನ್ನ ಮಗಳು ಮೊದಲ ಸಿನಿಮಾದಲ್ಲೇ …

Read More »

ಗಾಂಜಾ ಮಾರಾಟ ಮಾಡುತ್ತಿದ್ದ 6ಮಂದಿ ಬಂಧನ

ಶಿವಮೊಗ್ಗ : ಗಾಂಜಾ ಮಾರಾಟ ಮಾಡುತ್ತಿದ್ದ 6 ಮಂದಿಯನ್ನು ಭದ್ರಾವತಿ ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬಂಧಿತರನ್ನು ದಕ್ಷಿಣಾಮೂರ್ತಿ (37), ಸುದೀಪ್ ಕುಮಾರ್ (30), ಡ್ಯಾನಿಯಲ್ (25) ಕಿರಣ (23), ಪವನ್ ಕುಮಾರ್ (25), ನವೀನ್ (26) ಬಂಧಿತ ಆರೋಪಿಗಳು. ಗಾಂಜಾ ಮಾರಾಟ ಮಾಡುತ್ತಿದ್ದ ಇವರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಭದ್ರಾವತಿ ಹಳೆನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ 6 ಮಂದಿಯನ್ನು ಬಂಧಿಸಿದ್ದಾರೆ. …

Read More »

ಮೇಕೆದಾಟು: ಪರ್ಯಾಯ ಭೂಮಿ ಹಂಚಿಕೆಗೆ ಪ್ರಸ್ತಾವ

ರಾಮನಗರ: ಬಹು ನಿರೀಕ್ಷಿತ ಮೇಕೆದಾಟು ಅಣೆಕಟ್ಟೆ ನಿರ್ಮಾಣದಿಂದ ಸಾವಿರಾರು ಹೆಕ್ಟೇರ್‌ನಷ್ಟು ಅರಣ್ಯ ಪ್ರದೇಶ ಮುಳುಗಡೆ ಆಗಲಿದ್ದು, ಅದಕ್ಕೆ ಪ್ರತಿಯಾಗಿ ಅಷ್ಟೇ ಪ್ರಮಾಣದ ಅರಣ್ಯ ಬೆಳೆಸಲು ಸಿದ್ಧತೆ ನಡೆದಿದೆ. ಇದಕ್ಕಾಗಿ ಸದ್ಯದಲ್ಲೇ ರಾಮನಗರ ಜಿಲ್ಲಾಡಳಿತದಿಂದ ಅರಣ್ಯ ಇಲಾಖೆಗೆ ಭೂಮಿ ಹಸ್ತಾಂತರವೂ ಆಗಲಿದೆ. ಜಿಲ್ಲೆಯಲ್ಲಿರುವ ಸಂಗಮ-ಮೇಕೆದಾಟು ಪ್ರದೇಶದಲ್ಲಿ ಕಾವೇರಿ ನದಿಗೆ ₹ 9 ಸಾವಿರ ಕೋಟಿ ವೆಚ್ಚದಲ್ಲಿ ಅಣೆಕಟ್ಟೆ ನಿರ್ಮಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಜಲಾಶಯಕ್ಕಾಗಿ ಸುಮಾರು 4,996 ಹೆಕ್ಟೇರ್‌ ಪ್ರದೇಶವು ಮುಳುಗಡೆ …

Read More »

ಮುಖಕ್ಕೆ ಧರಿಸಬೇಕಿದ್ದ ಮಾಸ್ಕನ್ನು ಸಚಿವರು ಎಲ್ಲಿ ಹಾಕಿಕೊಂಡಿದ್ದಾರೆ ನೋಡಿ- ಜಾಲತಾಣದಲ್ಲಿ ಟ್ರೋಲ್​

ಡೆಹ್ರಾಡೂನ್: ಉತ್ತರಾಖಂಡದ ಸಚಿವ ಸ್ವಾಮಿ ಯತೀಶ್ವರಾನಂದ ಇದೀಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​ ಆಗಿದ್ದಾರೆ. ಇದಕ್ಕೆ ಕಾರಣ ಅವರು ಧರಿಸಿರುವ ಮಾಸ್ಕ್​. ಮಾಸ್ಕ್​ ಅನ್ನು ಮುಖಕ್ಕೆ ಹಾಕಿಕೊಳ್ಳದೇ ಸಭೆಯೊಂದರಲ್ಲಿ ಅದನ್ನು ಕಾಲಿನ ಬೆರಳಿಗೆ ಸಿಕ್ಕಿಸಿಕೊಂಡು ಕುಳಿತಿದ್ದು ಜಾಲತಾಣದಲ್ಲಿ ಫೋಟೋ ವೈರಲ್​ ಆಗಿದೆ. ಸೋಫಾ ಮೇಲೆ ಕಾಲಿನ ಮೇಲೆ ಕಾಲು ಹಾಕಿ ಕುಳಿತಿರುವ ಸಚಿವರು ತಮ್ಮ ಕಾಲಿನ ಬೆರಳಿನಲ್ಲಿ ಮಾಸ್ಕ್ ಸಿಕ್ಕಿಸಿಕೊಂಡಿದ್ದಾರೆ. ಸಚಿವರೇ ಈ ರೀತಿ ಕರೊನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು …

Read More »

ಶಾಸಕರು, ಮಾಜಿ ಶಾಸಕರು ಸೇರಿ 24 ಮಂದಿಗೆ ಬೆಂಗಳೂರು ಸಿಬಿಐ ಕೋರ್ಟ್​ನಿಂದ ಸಮನ್ಸ್ ಜಾರಿ

ಮಂಡ್ಯ: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ(Mandya Urban Development Authority) ಹಗರಣ ಪ್ರಕರಣಕ್ಕೆ ಸಂಬಂಧಿಸಿ ಶಾಸಕರು, ಮಾಜಿ ಶಾಸಕರು, ಮಾಜಿ ಅಧ್ಯಕ್ಷರಿಗೆ ಬೆಂಗಳೂರಿನ ಸಿಬಿಐ ವಿಶೇಷ ಕೋರ್ಟ್‌ನಿಂದ(CBI Court) ಸಮನ್ಸ್ ಜಾರಿ ಮಾಡಲಾಗಿದೆ. 2009ರಲ್ಲಿ ನಡೆದಿದ್ದ 107 ಸೈಟ್ ಅಕ್ರಮ ಹಂಚಿಕೆ ಕೇಸ್ ದಾಖಲಿಸಿಕೊಂಡು ಸಿಬಿಐನಿಂದ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. 24 ಜನರ ವಿರುದ್ಧ ಸಿಬಿಐನಿಂದ ದೋಷಾರೋಪ ಪಟ್ಟಿ ಸಿದ್ಧವಾಗಿತ್ತು. ಸದ್ಯ ಸಿಬಿಐ ಚಾರ್ಜ್‌ಶೀಟ್ ಆಧಾರದ ಮೇಲೆ ಸಮನ್ಸ್ ಜಾರಿ ಮಾಡಲಾಗಿದೆ. …

Read More »

ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಗಮನಿಸಿ: ಎಸ್​ಎಸ್​ಎಲ್​ಸಿ ಹಾಲ್ ಟಿಕೆಟ್​ಗಾಗಿ ಶಾಲೆ ಎದುರು ವಿದ್ಯಾರ್ಥಿ, ಕುಟುಂಬದವರಿಂದ ಧರಣಿ

ಬಾಗಲಕೋಟೆ: ಇನ್ನೇನು ಜುಲೈ 19 ಎದುರಿಗೆ ಇದೆ. ಈ ಬಾರಿಯ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗುವ ದಿನ. ಅದರೆ ದುರ್ದೈವ ಅಂದ್ರೆ ಇನ್ನೂ ಅನೇಕ ವಿದ್ಯಾರ್ಥಿಗಳಿಗೆ ಹಾಲ್​ ಟಿಕೆಟ್​​ ಕೈಗೆ ಸೇರಿಲ್ಲ. ಇದಕ್ಕೆ ಶಾಲಾ ಆಡಳಿತ ಮಂಡಳಿಗಳ ದಿವ್ಯ ನಿರ್ಲಕ್ಷ್ಯ ಕಾರಣವಾಗಿದೆ. ಜೊತೆಗೆ ಅದೇಕೋ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸಹ ಈ ನತದೃಷ್ಟ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸದೆ ಮೌನಕ್ಕೆ ಶರಣಾಗಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಎಸ್​ಎಸ್​ಎಲ್​ಸಿ ಹಾಲ್ ಟಿಕೆಟ್​ಗಾಗಿ ವಿದ್ಯಾರ್ಥಿ …

Read More »

ಮೋದಿ, ಶಾ ಭೇಟಿಗಾಗಿ ಸಿಎಂ ಯಡಿಯೂರಪ್ಪ ದೆಹಲಿಗೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನರ್‌ರಚನೆಗೆ ಒಪ್ಪಿಗೆ ಪಡೆಯಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶುಕ್ರವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಶುಕ್ರವಾರ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ಅವರು ದೆಹಲಿಗೆ ತೆರಳಲಿದ್ದಾರೆ. ಸಂಜೆ 7 ಕ್ಕೆ ಪ್ರಧಾನಿ ಮೋದಿಯವರು ಸಮಯ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ಇದೇ ಸಂದರ್ಭದಲ್ಲಿ ಅವರು ಮೇಕೆದಾಟು ಸಮತೋಲನ ಅಣೆಕಟ್ಟೆ ಯೋಜನೆಗೆ ಅನುಮತಿ …

Read More »

ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರದು; 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನಿರ್ಬಂಧ ಸುತ್ತೋಲೆ ರದ್ದುಗೊಳಿದ ಕೋರ್ಟ್

ಬೆಂಗಳೂರು: 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡುವುದನ್ನು ನಿರ್ಬಂಧಿಸಿದ್ದ ಕೆಪಿಟಿಸಿಎಲ್ ನ ಸುತ್ತೋಲೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿದೆ. ತಂದೆ ತಾಯಿ ಇಲ್ಲದೇ ಮಕ್ಕಳು ಜನಿಸುವುದಿಲ್ಲ. ತಂದೆ ತಾಯಿ ಮಧ್ಯೆ ಅನೈತಿಕ ಸಂಬಂಧವಿರಬಹುದು. ಆದರೆ ಅನೈತಿಕ ಮಕ್ಕಳಿರುವುದಿಲ್ಲ. ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರುವುದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಂದೂ ವಿವಾಹ ಕಾಯ್ದೆಯಲ್ಲಿ ಈ ತಾರತಮ್ಯ ಮಾಡದೇ 1 ನೇ ಮತ್ತು 2 ನೇ ಪತ್ನಿಯ ಮಕ್ಕಳಿಗೆ …

Read More »