ಗೋಕಾಕ: ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಇಂದು ( ಸೋಮವಾರ) ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯಿಂದ SCP /TSP ಯೋಜನೆ ಅಡಿಯಲ್ಲಿ ರಾಜ್ಯ ವಲಯ ಕ್ರೀಡಾ ತರಬೇತಿಯಲ್ಲಿ ಭಾಗವಹಿಸಿದ 50ಕ್ರೀಡಾ ಪಟುಗಳಿಗೆ ಹಾಗೂ ಗೋಕಾಕ ಮತಕ್ಷೇತ್ರದ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ಗಳನ್ನು ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಟಿ , ಆರ್ ಕಾಗಲ …
Read More »ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಇಂಧನ ಬೆಲೆ ಏರಿಕೆ ಹಿನ್ನಲೆ ಇಂದಿನಿಂದ ಬಸ್ ಪ್ರಯಾಣ ದರ ಪರಿಷ್ಕರಣೆ
ಹುಬ್ಬಳ್ಳಿ: ಸರ್ಕಾರ ಲಾಕ್‌ಡೌನ್ ಅನ್ನು ಮತ್ತಷ್ಟು ಸಡಿಲಿಕೆ ಮಾಡಿರುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ಆಸನಗಳ ಭರ್ತಿಯೊಂದಿಗೆ ಕಾರ್ಯಾಚರಣೆ ನಡೆಸಲಿದೆ. ‘ಲಾಕ್‌ಡೌನ್‌ನಿಂದಾಗಿ ಸೇವೆ ಸ್ಥಗಿತಗೊಳಿಸಿದ್ದ ಸಂಸ್ಥೆಯು ಭಾಗಶಃ ಅನ್‌ಲಾಕ್ ಬಳಿಕ, ಜೂನ್ 21ರಿಂದ ಶೇ 50ರಷ್ಟು ಆಸನಗಳ ಭರ್ತಿಯೊಂದಿಗೆ ಸೇವೆ ಆರಂಭಿಸಿತ್ತು. ಇದೀಗ ಆಸನಗಳ ಭರ್ತಿಗೆ ಯಾವುದೇ ಮಿತಿ ಇಲ್ಲ. ವ್ಯಾಪಾರ ವಹಿವಾಟು ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೂ ಅವಕಾಶ ನೀಡಿರುವುದರಿಂದ, ಜನರ ಓಡಾಟ ಹೆಚ್ಚಾಗಲಿದ್ದು …
Read More »ಬೆಳಗಾವಿ ಉಪಚುನಾವಣೆಗೆ 13.54 ಕೋಟಿ ರು. ಖರ್ಚು
ಬೆಳಗಾವಿ (ಜು.05): ಇತ್ತೀಚೆಗೆ ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸರ್ಕಾರದಿಂದ 13.54 ಕೋಟಿ ರು. ಖರ್ಚು ಆಗಿರುವುದು ಮಾಹಿತಿ ಹಕ್ಕಿನಿಂದ ಬಹಿರಂಗಗೊಂಡಿದೆ ಎಂದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ಅವರು ತಿಳಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ಅಧಿಕಾರಿಗಳು ನೀರಿನಂತೆ ಪೋಲು ಮಾಡಿದ್ದಾರೆ ಎಂದು ಆರೋಪಿಸಿದರು. ಯಾವುದೇ ಜನಪ್ರತಿನಿಧಿ ಅವಧಿಗೆ ಮುನ್ನ ಪಕ್ಷಾಂತರ ಮಾಡುವ, ರಾಜೀನಾಮೆ ನೀಡಿದ ಮೇಲೆ …
Read More »ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಇಂಧನ ಬೆಲೆ ಏರಿಕೆ ಹಿನ್ನಲೆ ಇಂದಿನಿಂದ ಬಸ್ ಪ್ರಯಾಣ ದರ ಪರಿಷ್ಕರಣೆ
ದಾವಣಗೆರೆ: ಪ್ರಸ್ತುತ ದಿನಗಳಲ್ಲಿ ಇಂಧನ ಬೆಲೆ ದಿನನಿತ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ ವಿಭಾಗಕ್ಕೆ ಸಂಬಂಧಿಸಿದಂತೆ ದಾವಣಗೆರೆ-ಚನ್ನಗಿರಿ, ದಾವಣಗೆರೆ-ಹೊಸದುರ್ಗ, ದಾವಣಗೆರೆ-ಜಗಳೂರು, ದಾವಣಗೆರೆ-ಹರಪನಹಳ್ಳಿ ಮಾರ್ಗವಾಗಿ ಪ್ರಯಾಣಿಸುವ ಬಸ್‍ಗಳ ಪ್ರಯಾಣ ದರವನ್ನು ಜು.5 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗುತ್ತದೆ. ಅದರಂತೆ ದಾವಣಗೆರೆಯಿಂದ ಚನ್ನಗಿರಿಗೆ 65 ರೂ., ಹೊಸದುರ್ಗ ಮಾರ್ಗದಲ್ಲಿ ಸಾಮಾನ್ಯ ಸಾರಿಗೆಗೆ 80 ರೂ. ಹಾಗೂ ವೇಗದೂತ ಸಾರಿಗೆಗೆ 90 ರೂ., ಜಗಳೂರಿಗೆ 55 ರೂ., ಹರಪನಹಳ್ಳಿಗೆ …
Read More »ಲಾಕ್‌ಡೌನ್ ನಿರ್ಬಂಧ ಸಡಿಲಿಕೆ: ಪ್ರಮುಖ ದೇವಸ್ಥಾನಗಳಲ್ಲಿ ಇಂದಿನಿಂದ ದರ್ಶನ
ಬೆಂಗಳೂರು: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಸೋಮವಾರದಿಂದ (ಜು. 5) ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಉಡುಪಿಯ ಕೃಷ್ಣ ಮಠ ಹಾಗೂ ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರವೇಶಕ್ಕೆ ನಿರ್ಬಂಧ ಮುಂದುವರಿದಿದೆ. ಶೃಂಗೇರಿ ಶಾರದಾಂಬೆ ದೇಗುಲ, ಹೊರನಾಡಿನ ಅನ್ನಪೂರ್ಣೇಶ್ವರಿ ದೇವಸ್ಥಾನ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಮಂದಾರ್ತಿಯ ದುರ್ಗಾ ಪರಮೇಶ್ವರಿ ದೇವಸ್ಥಾನ, ಧರ್ಮಸ್ಥಳದ ಮಂಜುನಾಥೇಶ್ವರ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ …
Read More »ಬೆಳಗಾವಿ : ದಾಂಪತ್ಯ ಜೀವಕ್ಕೆ ಕಾಲಿಟ್ಟ ಅಂಧ ಜೋಡಿ
ಬೆಳಗಾವಿ : ದೇವರ ಶಾಪಕ್ಕೆ ಗುರಿಯಾಗಿ ಹುಟ್ಟಿನಿಂದ ಅಂಧತ್ವದಲ್ಲೇ ಬದುಕು ಕಳೆಯುತ್ತಿದ್ದ ಅಂಧರಿಬ್ಬರು ಕೊರೊನಾ ನಿಯಮಾವಳಿಯಂತೆ ಸರಳ ಮದುವೆ ಮಾಡಿಕೊಂಡರು. ಇಲ್ಲಿನ ಹನುಮಾನ ನಗರದ ಭಕ್ತಿವಾಸ ಸಾಂಸ್ಕೃತಿಕ ಭವನದ ಕಾರ್ಯಾಲಯದಲ್ಲಿ ಉಷಾ ತಾಯಿ ಪೋತದಾರ್ ಫೌಂಡೇಶನ್‍ನ ಆಶ್ರಯದಲ್ಲಿ ಬೆಳಗಾವಿಯ ದೀಪಾ ಹಾಗೂ ಬೆಂಗಳೂರಿನ ರವಿ ಅಂಧ ಜೋಡಿಯ ಮಂಗಲ ಕಾರ್ಯ ನೆರವೇರಿತು. ಜಿಲ್ಲೆಯಲ್ಲಿ ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಬೆಳಗಾವಿಯ ಉಷಾ ಪೋತದಾರ್ ಫೌಂಡೇಶನ್ ಮುಖ್ಯಸ್ಥರು ಅಂಧ ಜೋಡಿಯ ಮದುವೆ …
Read More »ಚಿತ್ರೀಕರಣದತ್ತಅಣ್ತಮ್ಮ! ಇಂದಿನಿಂದ ಶಿವಣ್ಣ, ಪುನೀತ್ ಶೂಟಿಂಗ್‌ನಲ್ಲಿ ಭಾಗಿ
ಲಾಕ್‌ಡೌನ್ ತೆರವಾಗಿ ಚಿತ್ರೀಕರಣಕ್ಕೆ ಅನುಮತಿ ಸಿಗುತ್ತಿದ್ದಂತೆ ಒಂದೊಂದೇ ಸಿನಿಮಾಗಳು ಮುಹೂರ್ತ ಆಚರಿಸಿಕೊಳ್ಳುತ್ತಿವೆ. ಈ ಮೂಲಕ ಲಾಕ್ ಡೌನ್‌ನಲ್ಲಿ ಮನೆಯಲ್ಲಿದ್ದ ನಟ-ನಟಿಯರೆಲ್ಲ ಮತ್ತೆ ಬಣ್ಣ ಹಚ್ಚಲು ಸಿದ್ಧವಾಗಿದ್ದಾರೆ. ಈಗ ಆ ಸಾಲಿಗೆ ಶಿವರಾಜ್‌ಕುಮಾರ್ ಹಾಗೂ ಪುನೀತ್‌ರಾಜ್‌ಕುಮಾರ್ ಕೂಡಾ ಸೇರುತ್ತಾರೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ಕಳೆದ ಎರಡೂವರೆ ತಿಂಗಳಿನಿಂದ ಚಿತ್ರೀಕರಣದಿಂದ ದೂರವಿದ್ದ ಶಿವರಾಜ್‌ಕುಮಾರ್ ಅವರು ಇಂದು ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ಅವರ ನಟನೆಯ123ನೇ ಚಿತ್ರದ ಚಿತ್ರೀಕರಣದಲ್ಲಿ ಶಿವಣ್ಣ ಪಾಲ್ಗೊಳ್ಳುತ್ತಿದ್ದಾರೆ. ವಿಜಯ್ ಮಿಲ್ಟನ್ ನಿರ್ದೇಶನದ, ಕೃಷ್ಣ ಸಾರ್ಥಕ್ …
Read More »ನಮ್ಮದೇ ಸರ್ಕಾರವಿದ್ರೂ ಪ್ರಯೋಜನವಿಲ್ಲ, ಚಪ್ಪಡಿ ಕಲ್ಲಿನ ಸ್ಥಿತಿ ನಮ್ಮದು: ಸಿ.ಪಿ. ಯೋಗೇಶ್ವರ್
ಮೈಸೂರು: ಮತ್ತೆ ನಾಯಕತ್ವ ಬದಲಾವಣೆಯ ಬಗ್ಗೆ ಸಚಿವ ಸಿ.ಪಿ ಯೋಗೇಶ್ವರ್ ಮಾತನಾಡಿದ್ದಾರೆ. ಬಿಜೆಪಿ ಸರ್ಕಾರ ಬರಲು ನಾವು ಬಹಳಷ್ಟು ಶ್ರಮಿಸಿದ್ದೇವೆ. ಆದರೆ, ನಮ್ಮ ಶ್ರಮ ಯಾರಿಗೂ ಕಾಣಿಸುತ್ತಿಲ್ಲ ಎಂದು ಹೇಳಿದ್ದಾರೆ. ಜನರು ದೇಗುಲಕ್ಕೆ ಹೋದರೆ ರಾಜಗೋಪುರಕ್ಕೆ ಕೈಮುಗಿಯುತ್ತಾರೆ. ರಾಜಗೋಪುರದ ಕೆಳಗಿನ ಚಪ್ಪಡಿ ಕಲ್ಲುಗಳು ಜನರಿಗೆ ಕಾಣುವುದಿಲ್ಲ. ಚಪ್ಪಡಿ ಕಲ್ಲಿನ ಮೇಲೆ ಚಪ್ಪಲಿ ಬಿಟ್ಟು, ರಾಜಗೋಪುರ ನೋಡುತ್ತಾರೆ. ನಮ್ಮ ಸ್ಥಿತಿ ಚಪ್ಪಡಿ ಕಲ್ಲಿನಂತೆ ಆಗಿದೆ ಎಂದು ಯೋಗೇಶ್ವರ್ ತಿಳಿಸಿದ್ದಾರೆ. ನಮ್ಮದೇ ಸರ್ಕಾರವಿದ್ದರೂ …
Read More »50 ಲಕ್ಷ ರೂ. ವೆಚ್ಚದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಯಾದವಾಡ ಹಾಗೂ ಸುತ್ತಲಿನ ಗ್ರಾಮಗಳ ರೋಗಿಗಳ ಅನುಕೂಲಕ್ಕೋಸ್ಕರ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಯನ್ನು ಒಂದು ವಾರದೊಳಗೆ ಆರಂಭಿಸಲಾಗುವುದು. ಇದಕ್ಕಾಗಿ 50 ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಿವಾರದಂದು ಭೇಟಿ ನೀಡಿ ಆಸ್ಪತ್ರೆಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ …
Read More »ಅನ್‌ಲಾಕ್ 3.0: ಪ್ರಸಿದ್ಧ ಕೂಡಲಸಂಗಮೇಶ್ವರ ದೇವಸ್ಥಾನ ನಾಳೆಯಿಂದ ದರ್ಶನಕ್ಕೆ ಮುಕ್ತ
ಬಾಗಲಕೋಟೆ: ನಾಳೆ ರಾಜ್ಯಾದ್ಯಂತ ಅನ್‌ಲಾಕ್ 3.0 ಸಡಿಲಿಕೆ ಹಿನ್ನೆಲೆಯಲ್ಲಿ ದೇವಸ್ಥಾನಗಳು, ಮಠ ಸೇರಿದಂತೆ ಎಲ್ಲ ಧಾರ್ಮಿಕ ಕೇಂದ್ರಗಳು ಪ್ರವೇಶ ನೀಡಲು ಸಜ್ಜಾಗಿವೆ. ಅದೇ ರೀತಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ತ್ರಿವೇಣಿ ಸಂಗಮದ ಸುಕ್ಷೇತ್ರ ಕೂಡಲಸಂಗಮೇಶ್ವರ ದೇವಸ್ಥಾನವೂ ಕೂಡ ಭಕ್ತರಿಗೆ ನಾಳೆಯಿಂದ ದರ್ಶನಕ್ಕೆ ಮುಕ್ತವಾಗಿದ್ದು, ದೇವಸ್ಥಾನದ ಆವರಣದಲ್ಲಿ ಸ್ಚಚ್ಛತಾ ಕಾರ್ಯಗಳು ಭರದಿಂದ ಸಾಗಿವೆ. ನಾಳೆ ಬೆಳಗ್ಗೆ 6 ರಿಂದ 12 ಗಂಟೆಯವರೆಗೆ ಮತ್ತು ಮಧ್ಯಾಹ್ನ 3 ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ …
Read More »
Laxmi News 24×7