Breaking News

ರಾಜ್ಯ

: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ಸುತ್ತ ಸೃಷ್ಟಿಯಾಗಿರುವ ಬಿಕ್ಕಟ್ಟು ಬಗೆಹರಿಸಲು ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ಸುತ್ತ ಸೃಷ್ಟಿಯಾಗಿರುವ ಬಿಕ್ಕಟ್ಟು ಬಗೆಹರಿಸಲು ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ನವದೆಹಲಿ, ಜೂ. 14: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ಸುತ್ತ ಸೃಷ್ಟಿಯಾಗಿರುವ ಬಿಕ್ಕಟ್ಟು ಬಗೆಹರಿಸಲು ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಹೊಸ ರೀತಿಯ ಸಮಸ್ಯೆ ಶುರುವಾಗಿದೆ.‌ ಶಾಸಕಾಂಗ ಪಕ್ಷದ ಸಭೆ ಕರೆಯುವ ವಿಷಯಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಪರ ಮತ್ತು ವಿರೋಧಿ ಗುಂಪುಗಳು ಹೇರುತ್ತಿರುವ ಒತ್ತಡದಿಂದ ಹೈಕಮಾಂಡ್ ಪ್ರತಿನಿಧಿ ಅರುಣ್ ಸಿಂಗ್ ಇಕ್ಕಟ್ಟಿಗೆ ಸಿಲುಕಿದ್ದಾರೆ. ಎರಡೂ ಪಾಳೆಯದಿಂದ ದೂರುಗಳ ಸುರಿಮೆಳೆ …

Read More »

ಗುಜರಾತ್ ಬದಲಾಗಲಿದೆ.2022ರ ವಿಧಾನಸಭಾ ಚುನಾವಣೆ-ಎಲ್ಲಾ ಕ್ಷೇತ್ರದಲ್ಲೂ AAP ಸ್ಪರ್ಧೆ

ನವದೆಹಲಿ:ಮುಂಬರುವ 2022ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ, ಆಪ್ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಸೋಮವಾರ(ಜೂನ್ 14) ಘೋಷಿಸಿದ್ದಾರೆ. 2022ರ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲು ಅಹಮದಾಬಾದ್ ನಗರಕ್ಕೆ ಕೇಜ್ರಿವಾಲ್ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ ಎಂದು ವರದಿ ತಿಳಿಸಿದೆ. ಗುಜರಾತ್ ನ ಜನರು ಒಂದು ವೇಳೆ ದೆಹಲಿಯಲ್ಲಿ ಉಚಿತ ವಿದ್ಯುತ್ ನೀಡುತ್ತಾರೆ ಎಂದಾದರೆ ಗುಜರಾತ್ ನಲ್ಲಿ …

Read More »

ಹುಲಿಯ ಹಾಲಿನ ಮೇವು, ಬಬ್ರುವಾಹನ ಖ್ಯಾತಿಯ ನಿರ್ಮಾಪಕ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್.ಚಂದ್ರಶೇಖರ್‌ (69) ನಿಧನರಾದರು. ಬಹು ಅಂಗಾಂಗ ವೈಫಲ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ಚಂದ್ರಶೇಖರ್‌ ಅವರು ಹುಲಿಯ ಹಾಲಿನ ಮೇವು, ಬಬ್ರುವಾಹನ ಸೇರಿದಂತೆ ಹಲವು ಸಿನಿಮಾಗಳ ನಿರ್ಮಾಣ ಮಾಡಿದ್ದರು. ಕರ್ನಾಟಕ ಫಿಲಂ ಚೇಂಬರ್‌ ಹಾಗೂ ಎಸ್‌ಐಎಫ್‌ಸಿಸಿಆರ್‌ಐಪಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Read More »

ತುಂಬಿದ ತುಂಗಾ; 21 ಕ್ರಸ್ಟ್ ಗೇಟ್ ಓಪನ್

ಶಿವಮೊಗ್ಗ : ಹಠಕ್ಕೆ ಬಿದ್ದಂತೆ ಮುಂಗಾರು ಸುರಿಯುತ್ತಿರುವ ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆ ಕಂಡಿದೆ. ಈಗಾಗಲೇ ಶಿವಮೊಗ್ಗ ತಾಲೂಕು ಗಾಜನೂರು ಗ್ರಾಮದ ಬಳಿಯ ತುಂಗಾ ಅಣೆಕಟ್ಟು ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹೊರ ಹರಿಸಲಾಗುತ್ತಿದೆ. ಅಣೆಕಟ್ಟಿನ 21 ಕ್ರಸ್ಟ್ ಗೇಟ್‍ಗಳ ಮೂಲಕ 7,300 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. 2.85 ಕ್ಯೂಸೆಕ್ ನೀರು ಸಂಗ್ರಹ ಸಾಮಥ್ರ್ಯವನ್ನು ಹೊಂದಿದೆ. 1,500 ಕ್ಯೂಸೆಕ್ ನೀರು ನದಿಗೆ ಹಾಗೂ ಉಳಿದ 5,800 …

Read More »

ಕೊರೊನಾಗೆ ಬಲಿಯಾದ ಕುಟುಂಬಕ್ಕೆ 1 ಲಕ್ಷ ಪರಿಹಾರ; ಸಿಎಂ ಘೋಷಣೆ

ಬೆಂಗಳೂರು: ಕೊರೊನಾ ಮಹಾಮಾರಿಗೆ ಹಲವಾರು ಕುಟುಂಬಗಳು ಬಲಿಯಾಗಿದ್ದು, ಅನೇಕರು ಬೀದಿ ಪಾಲಾಗಿದ್ದಾರೆ. ಕೋವಿಡ್ ನಿಂದ ಕುಟುಂಬದ ಹಿರಿಯರು ಮೃತಪಟ್ಟರೆ ಅಂತಹ ಕುಟುಂಬದವರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಹಿರಿಯರು ಕೊರೊನಾದಿಂದ ಮೃತಪಟ್ಟಿದ್ದರೆ ಅಂತಹ ಕುಟುಂಬದ ಒಬ್ಬರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು.

Read More »

ಇಹಲೋಕದ ಸಂಚಾರ ನಿಲ್ಲಿಸಿದ ‘ಸಂಚಾರಿ’

ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ ನಿಷ್ಕ್ರಿಯವಾಗಿದ್ದರಿಂದ ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.   ಇಂದು ಬೆಳಗ್ಗೆ ನಟನ ಆರೋಗ್ಯದ ಬಗ್ಗೆ ಅಪೊಲೋ ಆಸ್ಪತ್ರೆ ವೈದ್ಯ ಡಾ. ಅರುಣ್ ಕುಮಾರ್ ನಾಯ್ಕ್ ಮಾತನಾಡಿ, ಸಂಚಾರಿ ವಿಜಯ್ ಗೆ ಚಿಕಿತ್ಸೆ ಶುರುವಾಗಿ 36 …

Read More »

ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ.. ನಲಪಾಡ್ ಸೇರಿ 10 ಜನರು ವಶಕ್ಕೆ​

ಕೋಲಾರ: ಪೆಟ್ರೋಲ್ ಡೀಸಲ್ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್​​ ವತಿಯಿಂದ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯ್ತು. ಆದ್ರೆ ಅನುಮತಿ ಇಲ್ಲದೆ ಪ್ರತಿಭಟನೆ ಮಾಡುತ್ತಿದ್ದ ಹಿನ್ನೆಲೆ ಯೂತ್ ಕಾಂಗ್ರೆಸ್​​ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆಯಲಾಗಿದೆ. ಕೋಲಾರ ನಗರದ ನಚಿಕೇತ ನಿಲಯ ಮುಂಭಾಗದಲ್ಲಿರುವ ಭಾರತ್ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಗಲ್‌ಪೇಟೆ ಪೊಲೀಸರು ಸ್ಥಳಕ್ಕಾಗಮಿಸಿ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹ್ಮದ್ ನಲಪಾಡ್ ಹ್ಯಾರೀಸ್, ಯೂತ್ ಕಾಂಗ್ರೆಸ್​​​ ಜಿಲ್ಲಾ …

Read More »

ಸಾಹುಕಾರ್ ಸಿಡಿ ಪ್ರಕರಣ – ಸ್ಟಿಂಗ್ ಕ್ಯಾಮೆರಾ ಕೊಡಿಸಿದ್ದು ಒಪ್ಪಿಕೊಂಡ ಶಂಕಿತರು!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಶಂಕಿತ ಯುವಕರ ವಿಚಾರಣೆ ನಡೆಯುತ್ತಿದೆ. ಪೊಲೀಸರ ವಿಚಾರಣೆ ವೇಳೆ ಕೆಲ ಮಾಹಿತಿ ನೀಡಿರುವ ನರೇಶ್ ಮತ್ತು ಶ್ರವಣ್ ಎಸ್‍ಐಟಿಯ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ವಿಚಾರಣೆ ವೇಳೆ ಯುವತಿ ಮತ್ತು ಜಾರಕಿಹೊಳಿ ಬಗೆಗಿನ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿಗೆ ಸ್ಟಿಂಗ್ ಕ್ಯಾಮೆರಾ ಕೊಡಿಸಿದ್ದು ನಾವೇ ಎಂದು ಶ್ರವಣ್ ಒಪ್ಪಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಟಿಂಗ್ ಆದ ನಂತರ ಯುವತಿ ನನಗೆ …

Read More »

ಕೋವಿಡ್-೧೯ ಸಾಂಕ್ರಾಮಿಕಕ್ಕೆ ಬಲಿಯಾದ ತಂದೆ-ತಾಯಿಯರ ಮಕ್ಕಳಿಗೆ ಶುಲ್ಕ ವಿನಾಯಿತಿ: R.C.U.

ಬೆಳಗಾವಿ –  ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಕೋವಿಡ್-೧೯ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಘಟಕವು ಸೋಂಕಿತರ ನೆರವಿಗೆ ನಿಂತಿರುವುದು, ಜನಕಲ್ಯಾಣ ಟ್ರಸ್ಟ್‌ದೊಂದಿಗೆ ಕೋವಿಡ್ ಕೇರ್ ಸೆಂಟರ್ ನಡೆಸುವ ಉಪಕ್ರಮದಲ್ಲಿ ಭಾಗಿಯಾಗಿರುವುದಲ್ಲದೆ ವಿಶ್ವವಿದ್ಯಾಲಯದ ದೀನದಯಾಳ ಅಧ್ಯಯನ ಪೀಠದ ವತಿಯಿಂದ ಮೂರು ದತ್ತು ಗ್ರಾಮಗಳಲ್ಲಿ ಆಹಾರ ಕಿಟ್‌ಗಳನ್ನು ವಿತರಿಸುವುದರ ಮೂಲಕ ತನ್ನ ಕಾಳಜಿಯನ್ನು ವ್ಯಕ್ತಪಡಿಸಿದೆ. ಅಲ್ಲದೆ, ವಿಶ್ವವಿದ್ಯಾಲಯದ ಅಧ್ಯಾಪಕರುಗಳು ಮನೆ ಬಾಗಿಲಿಗೆ ಉನ್ನತ ಶಿಕ್ಷಣ ಎನ್ನುವ …

Read More »

”ಜನರ ಆಕ್ರೋಶದಿಂದ ಮೋದಿ ಭಸ್ಮಾಸುರನಂತೆ ನಾಶ”: ಉಗ್ರಪ್ಪ ಕಿಡಿ

ಬಳ್ಳಾರಿ, ಜೂ.13: ಕೊರೊನಾದ ಈ ಸಂಕಷ್ಟದ ಸಂದರ್ಭದಲ್ಲಿ ಪೆಟ್ರೋಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ದ ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ ವಾಗ್ದಾಳಿ ನಡೆಸಿದ್ದು, ”ಜನರಿಗೆ ಇಷ್ಟೆಲ್ಲ ಅನ್ಯಾಯ ಮಾಡುವ ಪ್ರಧಾನಿ ನರೇಂದ್ರ ಮೋದಿ ಭಸ್ಮಾಸುರನಂತೆ ಸುಟ್ಟು ನಾಶವಾಗುತ್ತಾರೆ” ಎಂದು ಕಿಡಿಕಾರಿದ್ದಾರೆ. ದೇಶದಲ್ಲಿ ಕಳೆದ ಹಲವು ದಿನಗಳಿಂದ ಪೆಟ್ರೋಲ್‌, ಡಿಸೇಲ್‌ ದರ ಏರಿಕೆಯಾಗುತ್ತಿದ್ದು, ದೇಶದ ಅನೇಕ ನಗರಗಳಲ್ಲಿ ಪೆಟ್ರೋಲ್ ದರ 100ರ ಗಡಿ ದಾಟಿದೆ. …

Read More »