Breaking News

ರಾಜ್ಯ

ಮಗಳು ವಮಿಕಾ ಹೆಸರಿನ ಅರ್ಥ ಹೇಳಿದ ವಿರಾಟ್ ಕೊಹ್ಲಿ

ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ದಂಪತಿಗೆ ಹೆಣ್ಣು ಜನಿಸಿದ ಎಂದು ತಿಳಿದಾಗ ಮಗುವಿಗೆ ಏನೆಂದು ಹೆಸರಿಡಬಹುದು ಎನ್ನುವ ದೊಡ್ಡ ಚರ್ಚೆಯೇ ನಡೆದಿತ್ತು. ಕುತೂಹಲದ ನಡುವೆ ಮಗಳಿಗೆ ‘ವಮಿಕಾ’ ಎಂದು ನಾಮಕರಣ ಮಾಡಿದ್ದರು ತಾರಾ ದಂಪತಿ. ವಮಿಕಾ ಎಂದು ಹೆಸರಿನ ಒಳ ಅರ್ಥವೇನು? ಯಾವ ಕಾರಣದಿಂದ ಮಗಳಿಗೆ ಅನುಷ್ಕಾ-ಕೊಹ್ಲಿ ದಂಪತಿ ಈ ಹೆಸರಿಟ್ಟರು ಎನ್ನುವುದು ಅಷ್ಟೇ ಚರ್ಚೆಯಾಗಿತ್ತು. ವಿರಾಟ್ ಹೆಸರಿನಿಂದ ‘ವ’, ಅನುಷ್ಕಾ ಹೆಸರಿನಿಂದ ‘ಕಾ’ ಒಳಗೊಂಡು ವಮಿಕಾ ಆಗಿದೆ …

Read More »

ಹಾಲು ಸಾಗಿಸುವ ಗುತ್ತಿಗೆ ಪಡೆದಿರುವವರಿಂದಲೇ ಹಾಲಿಗೆ ನೀರು ಮಿಕ್ಸ್! ಮಂಡ್ಯದಲ್ಲಿ ಬೆಳಕಿಗೆ ಬಂತು ಭಾರೀ ಗೋಲ್​ಮಾಲ್

ಮಂಡ್ಯ: ಹಾಲಿಗೆ ನೀರು ಮಿಶ್ರಣ ಮಾಡಿ ವಂಚಿಸುತ್ತಿದ್ದ ಜಾಲ ಪತ್ತೆಯಾಗಿದ್ದು ಜಿಲ್ಲಾದ್ಯಂತ ಸಂಚಲನ ಸೃಷ್ಟಿಸಿದೆ. ಹಾಲು ಸಾಗಿಸುವ ಗುತ್ತಿಗೆ ಪಡೆದಿರುವವರಿಂದಲೇ ನಿತ್ಯ ಸಾವಿರಾರು ಲೀಟರ್ ಹಾಲಿಗೆ ನೀರು ಮಿಶ್ರಣ ಮಾಡಿ ಸಾಗಿಸುತ್ತಿದ್ದ ಜಾಲವೊಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಸಿಕ್ಕಿಬಿದ್ದಿದೆ. ಶಿಥಿಲೀಕರಣ ಕೇಂದ್ರಗಳಿಂದ ಒಕ್ಕೂಟಕ್ಕೆ ಸಾಗಿಸುವ ಹಾಲಿಗೆ ನೀರು ಮಿಶ್ರಣ ಮಾಡಿ ವಂಚಿಸಲಾಗುತ್ತಿದ್ದು, ಹಾಲಿನ ಪರೀಕ್ಷೆ ಮುಗಿದ ಬಳಿಕ ನೀರು ಮಿಶ್ರಣವಾಗುತ್ತಿತ್ತು ಎಂದು ಹೇಳಲಾಗಿದೆ. ನೀರು ಮಿಶ್ರಿತ ಹಾಲು …

Read More »

ಸೆಖೆಯಾಗ್ತಿದೆ ಎಂದು ಮನೆಯ ಹೊರಗೆ ಹೋದವ ಶವವಾಗಿ ಪತ್ತೆ! ಬೆಚ್ಚಿಬೀಳಿಸುತ್ತೆ ನಿನ್ನೆ ರಾತ್ರಿಯ ಘಟನೆ

ರಾಯಚೂರು: ಮದುವೆ ಮಾಡಿಕೊಳ್ಳಲೆಂದು ಆತ ಹೆಣ್ಣು ಹುಡುಕುತಿದ್ದ. ಎರಡು ದಿನದ ಹಿಂದೆ ಮಾರಮ್ಮ ದೇವಿಗೆ ಪೂಜೆಯನ್ನೂ ಮಾಡಿಸಿದ್ದ. ಯಾವುದೇ ಅಡ್ಡಿ-ಆತಂಕವಿಲ್ಲದೆ ಮಗನಿಗೆ ಒಳ್ಳೆಯ ಜೀವನ ಸಿಗಲೆಂದು ಆತನ ತಾಯಿಯೂ ದೇವರಲ್ಲಿ ಬೇಡಿಕೊಂಡಿದ್ದರು. ಆದರೆ, ನಿನ್ನೆ ರಾತ್ರಿ ಆ ಯುವಕ ದುರಂತ ಅಂತ್ಯಕಂಡಿದ್ದಾನೆ. ರಾಯಚೂರು ತಾಲೂಕಿನ ಮರ್ಚಡ್ ಗ್ರಾಮದ ತಾಯಪ್ಪ(26) ಮೃತ ದುರ್ದೈವಿ. ನಿನ್ನೆ ರಾತ್ರಿ ವಿದ್ಯುತ್ ಇಲ್ಲದ ಕಾರಣಕ್ಕೆ ಸೆಖೆಯೆಂದು ಮನೆಯ ಹೊರಗೆ ಮಲಗುವುದಾಗಿ ಹೋಗಿದ್ದ. ದೇವಸ್ಥಾನದ ಬಳಿ ಕೆಲ …

Read More »

ಉದ್ಯೋಗ ಖಾತ್ರಿ ಯೋಜನೆಯಿಂದ ವಂಚಿತರಾದ ಆಶ್ರಯ ಮನೆಯ ಜನ; ಕೆಲಸವಿಲ್ಲದೆ ಗ್ರಾಮಸ್ಥರ ಪರದಾಟ

ಬೀದರ್: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದೆ. ಆದರೆ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಇನ್ನಿತರ ದಿನಗೂಲಿಕಾರರು ನಿತ್ಯ ಊಟಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆಯಡಿ ಸಾವಿರಾರು ಜನರಿಗೆ ಕೆಲಸ ಕೊಟ್ಟಿದೆ. ಆದರೆ ಬೀದರ್ ಜಿಲ್ಲೆಯ ಆಶ್ರಯ ಮನೆಯಲ್ಲಿ ವಾಸ ಮಾಡುವ ನೂರಾರು ಕುಟುಂಬಗಳು ಈ ಯೋಜನೆಯಿಂದ ದೂರ ಉಳಿದಿದ್ದು, ಕೆಲಸ ವಿಲ್ಲದೇ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. …

Read More »

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಶಂಕಿತ ಅಭ್ಯರ್ಥಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಭಾಗಿಯಾಗಿರುವ ಅಶ್ಲೀಲ ಸಿಡಿ ಪ್ರಕರಣದ ಶಂಕಿತ ಆರೋಪಿಗಳು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಸಿಟಿ ಸಿವಿಲ್ ಕೋರ್ಟ್​ ಜೂನ್ 2ಕ್ಕೆ ಮುಂದೂಡಿದೆ. ಈ ಸಂಬಂಧ ಸಿಟಿ ಸಿವಿಲ್ ಕೋರ್ಟ್​ನ 91ನೇ ಕೋರ್ಟ್​ ಆದೇಶ ನೀಡಿದೆ. ಬ್ಲಾಕ್​ಮೇಲ್ ಸಂಬಂಧ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಕಬ್ಬನ್​ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿಗಳಾದ ನರೇಶ್​ ಗೌಡ ಮತ್ತು ಶ್ರವಣ್ ಈ ಸಂಬಂಧ​ ನ್ಯಾಯಾಲಯದ …

Read More »

ಧಾರವಾಡ ರೈತರ ಜಮೀನಿಗೆ​ ಭೇಟಿ, ಹೊಲದಲ್ಲಿ ಕುಳಿತು ಸಮಸ್ಯೆ ಆಲಿಸಿದ ಡಿಕೆ ಶಿವಕುಮಾರ್​

ಧಾರವಾಡ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಧಾರವಾಡ ತಾಲೂಕಿನ ರಾಯಪುರ ಗ್ರಾಮದ ರೈತರ ಜಮೀನಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ರೈತರ ಸದ್ಯದ ಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ರು. ಅನ್ನದಾತರ ಜೊತೆ ಹೊಲದಲ್ಲಿಯೇ ಕುಳಿತು ಅವರ ಸಮಸ್ಯೆಗಳನ್ನ ಆಲಿಸಿದರು. ಸದ್ಯ ಬಿತ್ತನೆ ಕಾರ್ಯ ಆರಂಭವಾಗಿದೆ. ಆದ್ರೆ ನಮಗೆ ಬೇಕಾದ ಬೀಜ ಸಿಗುತ್ತಿಲ್ಲ ಎಂದು ರೈತರು ಹೇಳಿದರು. 5 ಎಕರೆ ಮೇಲೆ ಎಷ್ಟೇ ಜಮೀನು ಇದ್ದರೂ ಸಹ ಸರ್ಕಾರ ಕೇವಲ …

Read More »

ವೃದ್ಧಾಪ್ಯ ವೇತನ ಪಡೆಯುವುದಕ್ಕೆ ಗದಗದಲ್ಲಿ ಅಜ್ಜಿ ಪರದಾಟ; ವಾಪಸ್ ಊರಿಗೆ ಕಳುಹಿಸಿದ ಪೊಲೀಸರು

ಗದಗ: ಕೊರೊನಾ ನಿಯಂತ್ರಿಸಲು ಲಾಕ್​ಡೌನ್​ ಜಾರಿಯಾದ ಕಾರಣ ಬಸ್ಗಳ ಓಡಾಡ ಸಂಪೂರ್ಣವಾಗಿ ನಿಂತಿದೆ. ಹೀಗಾಗಿ ವೃದ್ಧಾಪ್ಯ ವೇತನ ಪಡೆಯುವುದಕ್ಕೆ ಅಜ್ಜಿಯೊಬ್ಬರು ಪರದಾಟ ಪಟ್ಟಿದ್ದಾರೆ. ವೃದ್ಧಾಪ್ಯ ವೇತನ ಪಡೆಯಲು ಅಂಚೆ ಕಚೇರಿಗೆ ಬರುವಂತೆ ವೃದ್ಧೆಗೆ ತಿಳಿಸಿದ್ದರು. ಹೀಗಾಗಿ ಅಜ್ಜಿ ಅಂಚೆ ಕಚೇರಿಗೆ ಸುಮಾರು ಎರಡು ಕಿಲೋಮೀಟರ್ ನಡೆದುಕೊಂಡು ಬಂದಿದ್ದಾರೆ. ಈ ವೇಳೆ ಪೊಲೀಸರು ಅಜ್ಜಿಯನ್ನು ತಡೆದು ಪ್ರಶ್ನೆ ಮಾಡಿದ್ದಾರೆ. ವೃದ್ಧಾಪ್ಯ ವೇತನ ಪಡೆಯಲು ಎರಡು ಕಿಲೋಮೀಟರ್ ನಡೆದುಕೊಂಡ ಬಂದ ಭಜಂತ್ರಿ ನಗರದ …

Read More »

ಮಗನ ಔಷಧಿಗೆ 280 ಕಿಲೋಮೀಟರ್ ಸೈಕಲ್ ತುಳಿದ ಅಪ್ಪ

ಮೈಸೂರು : ಮಗನಿಗೆ ಔಷಧಿ ತರಲು ಸುಮಾರು 280 ಕಿಲೋಮೀಟರ್ ವರೆಗೆ ತಂದೆ ಸೈಕಲ್ ತುಳಿದಿರುವ ಮನ ಕಲಕುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಗಾರೆ ಕೆಲಸ ಮಾಡುತ್ತಿರುವ ಜಿಲ್ಲೆಯ ಗಾಣಿಗನಕೊಪ್ಪಲು ಗ್ರಾಮದ ನಿವಾಸಿ ಆನಂದ್ ಎಂಬುವವರು ತನ್ನ ಮಗನಿಗೆ ಔಷಧಿ ತರಲು ಸೈಕಲ್ ನಲ್ಲಿ ಸುಮಾರು 280 ಕಿಲೋಮೀಟರ್ ಹೋಗಿದ್ದಾರೆ. ಮಾನಸಿಕ ವಿಶೇಷ ಚೇತನ ಮಗನಿಗೆ 10 ವರ್ಷಗಳಿಂದ ಮಾತ್ರೆ ಕೊಡಿಸಲಾಗುತ್ತಿದೆ. ಬೆಂಗಳೂರು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. …

Read More »

71 ಶವಗಳನ್ನು ಗಂಗಾ ನದಿಯಿಂದ ಶಪಡಿಸಿಕೊಂಡು ಅಂತ್ಯಸಂಸ್ಕಾರ

ಬಲರಾಂಪುರ್: ಉತ್ತರಪ್ರದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನು ನದಿಗೆ ಎಸೆಯುವ ಆಘಾತಕಾರಿ ವಿಡಿಯೋ ಬಯಲಾಗಿದೆ. ಗಂಗಾ ನದಿ ತೀರದಲ್ಲಿ ಆಳವಿಲ್ಲದ ಸಮಾಧಿಗಳಲ್ಲಿ ಸಾವಿರಾರು ಮೃತದೇಹಗಳ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಕೆಲವು ಮೃತದೇಹಗಳನ್ನು ನದಿಗೆ ಎಸೆಯಲಾಗಿದೆ ಎಂದು ಕೆಲವು ವಾರಗಳ ಹಿಂದೆ ವಿಶ್ವದಾದ್ಯಂತ ಸುದ್ದಿಯಾಗಿತ್ತು. ನದಿಗಳಲ್ಲಿ ಮೃತದೇಹಗಳನ್ನು ಎಸೆಯದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಉತ್ತರದ ಅನೇಕ ರಾಜ್ಯಗಳಿಗೆ ಆದೇಶಿಸಿದೆ. ಇಂತಹ ಘಟನೆ ಮರುಕಳಿಸದಂತೆ ನದಿ ತೀರಗಳಲ್ಲಿ ಗಸ್ತು ಹೆಚ್ಚಿಸುವಂತೆ ಕೇಂದ್ರದಿಂದ …

Read More »

ಹತ್ತು ವರ್ಷಗಳ ಬಳಿಕ ಮನೆಗೆ ಮರಳಿ ಬಂದ ಮಗ – ಕುಟುಂಬಸ್ಥರ ಸಂತೋಷ

ಕೊಪ್ಪಳ: ಹತ್ತು ವರ್ಷಗಳ ಮಗ ಬಳಿಕ ಜುಮಲಾಪೂರ ಗ್ರಾಮದ ಯುವಕನೊಬ್ಬ ಮರಳಿ ಮನೆಗೆ ಬಂದಿರುವ ಘಟನೆ ನಡೆದಿದ್ದು, ಕುಟುಂಬದವರೆಲ್ಲ ಸಂತಸ ಪಟ್ಟಿದ್ದಾರೆ. ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮದ ಗುರುಬಸಪ್ಪ ಹಾಗೂ ಪಾರ್ವತಮ್ಮ ದಂಪತಿಯ ಪುತ್ರ ದೇವರಾಜ (30) ಹತ್ತು ವರ್ಷದ ನಂತರ ಮರಳಿ ಮನೆಗೆ ಬಂದಿದ್ದಾನೆ. ಬಾಲ್ಯದಲ್ಲಿ ತಂದೆ, ತಾಯಿ ಜೊತೆ ವಾಗ್ವಾದ ಮಾಡಿಕೊಂಡು ಊರು ಬಿಟ್ಟು ತೆರಳಿದ್ದು, ಇದೀಗ ಕೊರೊನಾದಿಂದಾಗಿ ಕಂಪೆನಿಗಳು ಮುಚ್ಚಿರುವ ಕಾರಣ ತಮ್ಮ ಸ್ನೇಹಿತರ ಸಹಾಯದಿಂದ …

Read More »