ಧಾರವಾಡ, ಮೇ 27; ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ತಮ್ಮ ಸ್ನೇಹಿತರು ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ಮುನ್ನಡೆಸುತ್ತಿರುವ ‘ಮೆಡಿಕಲ್ ಆಕ್ಸಿಜನ್ ಫಾರ್ ಆಲ್’ ತಂಡದಿಂದ ಪಡೆದ ಆಕ್ಸಿಜನ್ ಕಾನ್ಸನ್‍ಟ್ರೇಟರ್‌ಗಳನ್ನು ಜಿಲ್ಲಾ ಆರೋಗ್ಯ ಇಲಾಖೆಗೆ ಹಸ್ತಾಂತರ ಮಾಡಿದರು. ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ವಿವಿಧ ಕಡೆ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ, ಅಲ್ಲಿ ದಾಖಲಿರುವ ಸೋಂಕಿತರಿಗೆ ಉಸಿರಾಟ ತೊಂದರೆ ಉಂಟಾದರೆ ತಕ್ಷಣ ಅವರ ಸಹಾಯಕ್ಕೆ ನೆರವಾಗಲು ಆಕ್ಸಿಜನ್ ಕಾನ್ಸನ್‍ಟ್ರೇಟರ್ …
Read More »ಅನಾರೋಗ್ಯಕ್ಕೀಡಾದ ಆರೋಗ್ಯ ಸಚಿವ ಡಾ. ಸುಧಾಕರ್
ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಆರೋಗ್ಯದಲ್ಲಿ ಏರುಪೇರಾಗಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾಗದೇ ಗೈರಾಗಿದ್ದಾರೆ. ಇತ್ತೀಚೆಗೆ ಆರೋಗ್ಯ ಸಚಿವ ಡಾ. ಸುಧಾಕರ್ ವಿವಿಧ ಜಿಲ್ಲೆಗಳ ಕೋವಿಡ್ ಕೇರ್ ಸೆಂಟರ್ ಗಳಿಗೆ ಭೇಟಿ ನೀಡಿ, ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆ, ಆಕ್ಸಿಜನ್ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಸದಾಶಿವ ನಗರದ ನಿವಾಸದಲ್ಲಿ …
Read More »BSY ಬಿಟ್ಟು ಬಿಜೆಪಿಯಲ್ಲಿ ಯಾರು ಸ್ಟಾರ್ ಲೀಡರ್ ಇದ್ದಾರೆ ತೋರಿಸಿ: ಎಂ.ಪಿ. ಕುಮಾರಸ್ವಾಮಿ
ಚಿಕ್ಕಮಗಳೂರು: ಬಿ.ಎಸ್. ಯಡಿಯೂರಪ್ಪ ಬಿಟ್ಟು ಬಿಜೆಪಿಯಲ್ಲಿ ಯಾರು ಸ್ಟಾರ್ ಲೀಡರ್ ಇದ್ದಾರೆ ತೋರಿಸಲಿ. ನಾಯಕತ್ವ ಬದಲಾವಣೆ, ಚರ್ಚೆ ಈಗ ಅಪ್ರಸ್ತುತ ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಬಿಎಸ್ ವೈ ಪರ ಬ್ಯಾಟ್ ಬೀಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ವಿರೋಧ ವ್ಯಕ್ತಪಡಿಸಿ ಮಾತನಾಡಿದ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ, ನಾಯಕತ್ವ ಬದಲಾವಣೆ, ಚರ್ಚೆ ಈಗ ಅಪ್ರಸ್ತುತ. ಈ ಕುರಿತು ಕೇಂದ್ರದ ನಾಯಕರ ಬಳಿ ಶಾಸಕರ ನಿಯೋಗ ಹೋಗಲು ತಯಾರಿದ್ದೇವೆ. ನಾಯಕತ್ವ ಬದಲಾವಣೆ ಮಾಡದಂತೆ …
Read More »ನನ್ನ ಬಂಧಿಸುವ ಧೈರ್ಯ ಯಾರಿಗೂ ಇಲ್ಲ: ಐಎಂಎಗೆ ಸೆಡ್ಡುಹೊಡೆದ ಬಾಬಾ ರಾಮ್ ದೇವ್
ನವದೆಹಲಿ: ಅಲೋಪತಿ ಮೂರ್ಖತನದ ಪದ್ಧತಿ ಎಂದು ಟೀಕಿಸಿದ್ದ ಯೋಗ ಗುರು ಬಾಬಾ ರಾಮ್ ದೇವ್ ಮತ್ತೆ ತಮ್ಮ ವಾಗ್ದಾಳಿ ಮುಂದುವರಿಸಿದ್ದು, ನನ್ನನ್ನು ಬಂಧಿಸುವ ಧೈರ್ಯ ಯಾರಿಗೂ ಇಲ್ಲ ಎಂದು ಹೇಳುವ ಮೂಲಕ ಭಾರತೀಯ ವೈದ್ಯಕೀಯ ಸಂಘಕ್ಕೆ ಸಡ್ಡುಹೊಡೆದಿದ್ದಾರೆ. ಅಲೋಪತಿ ಮೂರ್ಖತನದ ವಿಜ್ಞಾನ ಎಂದು ಟೀಕಿಸಿದ್ದ ಯೋಗ ಗುರು ಬಾಬಾ ದೇವ್ ಅವರನ್ನು ದೇಶದ್ರೋಹ ಆರೋಪದ ಮೇಲೆ ಬಂಧಿಸುವಂತೆ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (ಐಎಂಎ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ …
Read More »ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ ಸಿ.ಪಿ. ಯೋಗೇಶ್ವರ್
ಮುಖ್ಯಮಂತ್ರಿ ಬದಲಾವಣೆ ನನ್ನ ಉದ್ದೇಶವಲ್ಲ. ಅಷ್ಟೊಂದು ಶಕ್ತಿಯೂ ನನಗಿಲ್ಲ. ಆದರೆ ನನಗೆ ಸಚಿವ ಸ್ಥಾನ ಸಿಕ್ಕಿರುವುದು ನನ್ನ ಮಗ ಮೂಗು ತೂರಿಸುವುದು ಸರಿಯಲ್ಲ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಪರೋಕ್ಷವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾಯಿಸುವ ಅಭಿಪ್ರಾಯ ನನಗೆ ಇಲ್ಲ. ನನ್ನ ಸಮಸ್ಯೆ ಹೇಳಿಕೊಳ್ಳಲು ದೆಹಲಿಗೆ ಹೋಗಿದ್ದೆ. ಎಲ್ಲವನ್ನೂ ಮಾಧ್ಯಮಗಳ ಮುಂದೆ ಹೇಳಕ್ಕಾಗಲ್ಲ. ಮುಂದಿನ …
Read More »ಜನ್ಮದಿನಕ್ಕೆ ಬಟ್ಟೆ ಕೊಡಿಸಲಿಲ್ಲ ಅಂತ ನವವಿವಾಹಿತೆ ಆತ್ಮಹತ್ಯೆ: ಕೊಲೆ ಕೇಸು ದಾಖಲು!
ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸದೇ ಗಂಡ ರೇಗಾಡಿದ್ದರಿಂದ ನೊಂದ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಗ್ರಾಮದಲ್ಲಿ ನಡೆದಿದೆ. ಗೌರಿಬಿದನೂರು ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ರಾಜು ಅವರ ಪುತ್ರಿ ಮಮತಾ (17) ಆತ್ಮಹತ್ಯೆ ಮಾಡಿಕೊಂಡ ಯುವತಿ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದ ಯುವಕ ಮಹದೇವ ಅಲಿಯಾಸ್ ಮಣಿಕಂಠ ಮೂರು ತಿಂಗಳ ಅಪ್ರಾಪ್ತೆಯಾಗಿದ್ದ ಮಮತಾಳನ್ನು ಅಪಹರಿಸಿ ಮದುವೆಯಾಗಿದ್ದ. ಜನ್ಮದಿನವಾದ ಇಂದು ಹೊಸಬಟ್ಟೆ ಕೊಡಿಸುವಂತೆ ಗಂಡ ಮಣಿಕಂಠನಿಗೆ ಕೇಳಿದ್ದಾಳೆ. …
Read More »ಹರಿಹರದಲ್ಲಿ ಪೊಲೀಸರಿಂದಲೇ ಅಕ್ರಮ ಮರಳು ದಂಧೆ.. ಸೂಚಿಸಿದ್ರೂ ಕ್ರಮ ಕೈಗೊಂಡಿಲ್ಲ ಎಂದು ಶಾಸನ ಎಸ್.ರಾಮಪ್ಪ ಕಿಡಿ
ದಾವಣಗೆರೆ: ಜಿಲ್ಲೆಯ ಹರಿಹರದಲ್ಲಿ ಪೊಲೀಸರಿಂದಲೇ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂದು ಹರಿಹರ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಆರೋಪ ಮಾಡಿದ್ದು ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಂತೆ ಸೂಚನೆ ನೀಡಿದ್ದರು ಕ್ರಮ ಕೈಗೊಂಡಿಲ್ಲವೆಂದು ಆಕ್ರೋಶ ಹೊರ ಹಾಕಿದ್ದಾರೆ. ಕೊರೊನಾ ಲಾಕ್ಡೌನ್ ವೇಳೆ ಹರಿಹರದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ. ಇದಕ್ಕೆ ಸಾಕ್ಷಿಯಾಗಿ ರಾಜನಹಳ್ಳಿಯಲ್ಲಿ ಗ್ರಾಮಸ್ಥರು ಟಿಪ್ಪರ್ ತಡೆದು ಆಕ್ರೋಶ ಹೊರ ಹಾಕಿದ್ದರು. ಈ ವೇಳೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 10 …
Read More »ಕೋವಿಡ್ ಸೋಂಕಿತರ ಕುಟುಂಬಸ್ಥರಿಗೆ ಸ್ಥಳೀಯರ ಕಿರುಕುಳ.. ಬೆಂಕಿ ಹಚ್ಚಿಕೊಂಡು ಸಾಯ್ತೀವಿ. ಕಣ್ಣೀರಿಟ್ಟ ಮಹಿಳೆಯರು
ಅರಕಲಗೂಡು: ಕೋವಿಡ್ ಕೇರ್ ಸೆಂಟರ್ಗೆ ದಾಖಲಾಗಿರುವ ರೋಗಿಗಳ ಕುಟುಂಬಸ್ಥರಿಗೆ ಗ್ರಾಮಸ್ಥರು ಬೆದರಿಕೆ ಹಾಕಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ. ತಾಲೂಕಿನ ಎಚ್.ಆರ್.ಪಿ. ವಡ್ಡರಹಳ್ಳಿ ಗ್ರಾಮದ ವಿವಿಧ ಮನೆಯ ಐವರು ಪುರುಷರಿಗೆ ಕೋವಿಡ್ ಸೋಂಕು ದೃಢವಾಗಿದ್ದ ಹಿನ್ನೆಲೆ ಅವರೆಲ್ಲ ಕೋವಿಡ್ ಸೆಂಟರ್ಗೆ ದಾಖಲಾಗಿದ್ದರು. ಈ ವೇಳೆ, ಗ್ರಾಮದಲ್ಲಿ ರೋಗಿಯ ಕುಟುಂಬದಲ್ಲಿರುವ ಸದಸ್ಯರಿಗೆ ಬೆದರಿಕೆ ಹಾಕುತ್ತಿದ್ದು, ಮನೆಯಿಂದ ಹೊರ ಬಾರದಂತೆ ತಾಕೀತು ಮಾಡುತ್ತಿದ್ದಾರೆ ಎಂದು ಮಹಿಳೆಯೊಬ್ಬರು ವಿಡಿಯೋದಲ್ಲಿ ಆರೋಪಿಸಿದ್ದಾರೆ. ನಮಗೆ ಅಗತ್ಯ …
Read More »ನಾಯಕತ್ವ ಬದಲಾವಣೆ ವಿಚಾರ; ವಿರೋಧಿ ಬಣಕ್ಕೆ ಟಾಂಗ್ ಕೊಟ್ಟ ಸಿಎಂ ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಾ, ದೆಹಲಿಯಲ್ಲಿ ಬೀಡು ಬಿಟ್ಟಿದ್ದ ನಾಯಕರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಸಿ ಮುಟ್ಟಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಶಾಸಕಾಂಗ ಸಭೆ ವಿಚಾರದ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ನನ್ನ ಮುಂದೆ ಇರುವುದು ಕೋವಿಡ್ ನಿಯಂತ್ರಣ ಮಾತ್ರ. ಜನರ ಹಿತ ಕಾಯುವುದು ನನ್ನ ಮೊದಲ ಆದ್ಯತೆ. ಯಾರು ದೆಹಲಿಗೆ ಹೋಗಿ ಬಂದಿದ್ದಾರೋ ಅವರಿಗೆ ಅಲ್ಲಿಯೇ ಉತ್ತರ ಕೊಟ್ಟು ಕಳುಹಿಸಿದ್ದಾರೆ ಎಂದು ಹೇಳುವ …
Read More »ದ್ವಿತೀಯ ಪಿಯುಸಿ ಪರೀಕ್ಷೆ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ವರ್ಚುಯಲ್ ಸಭೆ ನಡೆಸಲಿದ್ದಾರೆ. ಶಿಕ್ಷಣ ತಜ್ಞರು, ಶಿಕ್ಷಕರು, ಶಾಲೆಗಳ ಆಡಳಿತ ಮಂಡಳಿ, ಪೋಷಕರೊಂದಿಗೆ ಸಚಿವರು ಶೀಘ್ರವೇ ಸಭೆ ನಡೆಸಲಿದ್ದು, ಸೋಂಕು ಕಡಿಮೆಯಾದ ಬಳಿಕ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಪರೀಕ್ಷಾ ವಿಧಾನ ಹೇಗಿರಬೇಕು ಎಂದು ಸಚಿವರು ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಕಳೆದ ವರ್ಷ ಎಸ್‌ಎಸ್‌ಎಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಅದೇ …
Read More »
Laxmi News 24×7