Breaking News

ರಾಜ್ಯ

ಭಾರತದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆಗೆ ಚಾಲನೆ

ನವದೆಹಲಿ, : ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಯ ಉತ್ಪಾದನೆಯನ್ನು ಭಾರತದಲ್ಲಿ ಸೋಮವಾರದಿಂದ ಆರಂಭಿಸಲಾಗಿದೆ. ದಿ ರಷ್ಯನ್ ಡೈರೆಕ್ಟ್ ಇನ್ವೆಸ್ಟ್‌ಮೆಂಟ್ ಫಂಡ್(ಆರ್‌ಡಿಐಎಫ್) ಸಹಯೋಗದೊಂದಿಗೆ ಭಾರತದ ಅತಿ ದೊಡ್ಡ ಲಸಿಕೆ ಮತ್ತು ಔ‍ಷಧೀಯ ಸಂಸ್ಥೆಗಳಲ್ಲಿ ಒಂದಾದ ಪನಾಶಿಯಾ ಈ ಲಸಿಕೆಯನ್ನು ಉತ್ಪಾದಿಸಲು ಆರಂಭಿಸಿದೆ. ಆರ್‌ಡಿಎಫ್ ಪ್ರಕಾರ ಭಾರತದ ಪನಾಶಿಯಾ ಸಂಸ್ಥೆ ವರ್ಷಕ್ಕೆ 10 ಕೋಟಿ ಲಸಿಕೆಯನ್ನು ಉತ್ಪಾದನೆ ಮಾಡಲಿದೆ ಎಂದು ತಿಳಿಸಿದೆ. ಭಾರತದಲ್ಲಿ ಉತ್ಪಾದನೆಯಾದ ಮೊದಲ ಬ್ಯಾಚ್‌ನ ಲಸಿಕೆಯನ್ನು ‘ಸ್ಪಿಟ್ನಿಕ್ ವಿ’ ಲಸಿಕೆಯನ್ನು …

Read More »

ಜೂನ್ 1ರಿಂದ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ

ಮಂಗಳೂರು, : ಕೊರೊನಾ ವೈರಸ್, ಚಂಡಮಾರುತದ ಭೀಕರತೆಗೆ ಕರಾವಳಿಯಲ್ಲಿ ಮತ್ಸೋದ್ಯಮ ನಲುಗಿ ಹೋಗಿದೆ. ಮೀನುಗಾರಿಕೆ ಉತ್ತುಂಗವಿದ್ದ ಸಮಯದಲ್ಲಿಯೇ ಲಾಕ್‌ಡೌನ್ ಬರೆ ಬಿದ್ದು, ಸ್ವಲ್ಪ ಸುಧಾರಿಸುವಾಗಲೇ ಚಂಡಮಾರುತ ಹೊಡೆತಕೊಟ್ಟಿತು.ಇದೆಲ್ಲದರ ನಡುವೆ ಇದೀಗ ಮೀನುಗಾರಿಕಾ ಋತು ಅಂತಿಮವಾಗುತ್ತಿದ್ದು, ಜೂನ್ 1 ರಿಂದ ಮೀನುಗಾರಿಕೆಯನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಕರ್ನಾಟಕ ಕಡಲ ಮೀನುಗಾರಿಕಾ ನಿಯಂತ್ರಣ ಕಾಯಿದೆಯನುಸಾರವಾಗಿ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತೀಕೃತ ಬೋಟ್ …

Read More »

ಗೌತಮ್‌ ಗಂಭೀರ್‌ ಔಷಧವನ್ನು ದಾಸ್ತಾನು ಮಾಡಿದ್ದು ಹೇಗೆ?: HC

ನವದೆಹಲಿ, ಮೇ 25: ಮಾಜಿ ಕ್ರಿಕೆಟರ್, ಬಿಜೆಪಿ ಸಂಸದ ಗೌತಮ್‌ ಗಂಭೀರ್‌ ಅವರು ಫ್ಯಾಬಿಫ್ಲೂ ಔಷಧವನ್ನು ಅಕ್ರಮವಾಗಿ ದಾಸ್ತಾನು ಮತ್ತು ಹಂಚಿಕೆ ಮಾಡಿರುವ ಬಗ್ಗೆ ಪರಿಶೀಲಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿಯ ಔಷಧ ನಿಯಂತ್ರಕಕ್ಕೆ ದೆಹಲಿ ಹೈಕೋರ್ಟ್‌ನಿರ್ದೇಶನ ನೀಡಿದೆ. ಕೋವಿಡ್‌ ಔಷಧಗಳ ಅಕ್ರಮ ದಾಸ್ತಾನಿಗೆ ಸಂಬಂಧಿಸಿದಂತೆ ಗಂಭೀರ್‌ ಹಾಗೂ ಎಎಪಿಯ ಇಬ್ಬರು ಶಾಸಕರ ವಿರುದ್ಧ ಎರಡು ಪ್ರತ್ಯೇಕ ಮೊಕದ್ದಮೆಗಳ ವಿಚಾರಣೆ ದೆಹಲಿ ನ್ಯಾಯಾಲಯದಲ್ಲಿ ನಡೆದಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು …

Read More »

ಕೊರೊನಾಗೆ ಬೆಳಗ್ಗೆ ಪತಿ ಸಂಜೆ ಪತ್ನಿ ಬಲಿ

ಚಾಮರಾಜನಗರ: ಪ್ರೀತಿಸಿ ಮದುವೆಯಾಗಿ ಸುಖ ಸಂಸಾರ ನಡೆಸುತ್ತಿದ್ದ ದಂಪತಿ ಬಾಳಿಗೆ ಕೊರೊನಾ ಕೊಳ್ಳಿ ಇಟ್ಟಿದ್ದು ಒಂದೇ ದಿನ ಗಂಡ-ಹೆಂಡತಿ ಕೊರೊನಾಗೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ. ಸುದರ್ಶನ(51) ಹಾಗೂ ಹೇಮಲತಾ (46) ಮೃತರು. ಕಳೆದ ಒಂದು ವಾರದ ಹಿಂದೆ ಈ ದಂಪತಿಗೆ ಕೋವಿಡ್ ದೃಢವಾಗಿತ್ತು. ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು‌. ಆದರೆ ವಿಧಿಯ ಆಟವೇ ಬೆರೆಯಾಗಿತ್ತು ಅನಿಸುತ್ತೆ. ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಸುದರ್ಶನ್ ಅಸುನೀಗಿದರೇ ಸಂಜೆ ಹೇಮಲತಾ …

Read More »

ಕೋವಿಡ್ 3ನೇ ಅಲೆ ಭೀತಿ: ಕರ್ನಾಟಕದಲ್ಲಿ ಮಕ್ಕಳ ಆರೈಕೆ ಕೇಂದ್ರಗಳ ಸ್ಥಾಪನೆ

ಬೆಂಗಳೂರು, ಮೇ 24: ಕರ್ನಾಟಕದಲ್ಲಿ ಇನ್ನೂ ಕೊರೊನಾ ವೈರಸ್ 2ನೇ ಅಲೆ ತಾಂಡವಾಡುತ್ತಿದೆ. ಆದರೂ ದಾಖಲೆಯ ಸಂಖ್ಯೆಯಲ್ಲಿ ಮಕ್ಕಳಿಗೆ ಕೋವಿಡ್-19 ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವುದನ್ನು ನೋಡಿದರೆ ಆಗಲೇ ಕೋವಿಡ್ 3ನೇ ಅಲೆ ಪ್ರಾರಂಭವಾಗಿದೆಯಾ ಎಂಬ ಪ್ರಶ್ನೆ ಕಾಡುತ್ತಿದೆ. ಕೋವಿಡ್ 3ನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಸರ್ಕಾರ ಈಗಾಗಲೇ ಸಿದ್ಧತೆ ನಡೆಸುತ್ತಿದ್ದು, ಕೊರೊನಾ ಮೊದಲ ಅಲೆಗಿಂತ 2ನೇ ಅಲೆಯ ವೇಳೆ ಮಕ್ಕಳಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ. ಈ …

Read More »

ತುರ್ತು ಸೇವೆಗೆ ಆಂಬುಲೆನ್ಸ್‌ ವ್ಯವಸ್ಥೆ

ಕಾರಟಗಿ: ‘ಕ್ಷೇತ್ರದಲ್ಲಿ ಕೊರೊನಾ ಸೋಂಕಿತರು ಸೇರಿದಂತೆ ವಿವಿಧ ರೋಗಿಗಳಿಗೆ ತುರ್ತು ಆರೋಗ್ಯ ಸೇವೆ ಸಮರ್ಪಕವಾಗಿ ದೊರೆಯಲಿ ಎನ್ನುವ ಉದ್ದೇಶದಿಂದ ವೈಯಕ್ತಿಕ ವೆಚ್ಚದಲ್ಲಿ 2 ಆಮ್ಲಜನಕ ಸಹಿತ ಆಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಜನರು ಅಗತ್ಯ ಸಂದರ್ಭದಲ್ಲಿ ಪ್ರಯೋಜನಾ ಪಡೆಯಬಹುದು’ ಎಂದು ಶಾಸಕ ಬಸವರಾಜ ದಢೇಸೂಗೂರು ಹೇಳಿದರು. ಭಾನುವಾರ ತಮ್ಮ ಕಚೇರಿ ಬಳಿ ಆಂಬುಲೆನ್ಸ್‌ ಹಸ್ತಾಂತರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕ್ಷೇತ್ರದಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವುದು ಕಳವಳಕಾರಿ ಸಂಗತಿ. ಗ್ರಾಮೀಣ ಪ್ರದೇಶದ ರೋಗಿಗಳು ಚಿಕಿತ್ಸೆಗಾಗಿ …

Read More »

ದಲಿತ ಯುವಕನ ಮೇಲೆ ದೌರ್ಜನ್ಯ ಪ್ರಕರಣ : ಗೋಣಿಬೀಡು ಪಿಎಸ್ ಐ ಅರ್ಜುನ್ ಅಮಾನತು

ಚಿಕ್ಕಮಗಳೂರು; ಮೂಡಿಗೆರೆ ತಾಲ್ಲೂಕು ಗೋಣಿಬೀಡು ಪೋಲಿಸ್ ಠಾಣೆ ವ್ಯಾಪ್ತಿಯ ಕಿರುಗುಂದ ಪರಿಶಿಷ್ಟ ಜಾತಿ ಯುವಕನ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಣಿಬೀಡು ಪೋಲಿಸ್ ಠಾಣೆ ಪಿಎಸ್ ಐ ಅರ್ಜುನ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ, ಸದ್ಯ ಈ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಕಿರಗುಂದ ಗ್ರಾಮದ ಪರಿಶಿಷ್ಟ ಜಾತಿ ಯುವಕ ಪುನೀತ್ ಎಂಬುವನನ್ನು ಮೇ 10 ರಂದು ಯಾವುದೇ ದೂರು ದಾಖಲಿಸಿಕೊಳ್ಳದೆ. ಪೋಲಿಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ ಪಿಎಸ್ …

Read More »

ಕೊರೋನ ಇಂದ ಪಾರಾಗಲು ಪಾರಿಜಾತ ಎಲೆಯ ಕಷಾಯ ಕುಡಿಯಿರಿ: ಅವಧುತ ವಿನಯ್ ಗುರೂಜಿ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಕೊರೋನಗೆ ಮದ್ದು ಒಂದನ್ನು ಹೇಳಿದ್ದು, ಪಾರಿಜಾತ ಎಲೆಯ ಕಷಾಯ ಮಾಡಿ ಕುಡಿಯಿರಿ ಎಂದಿದ್ದಾರೆ. ಎಲ್ಲರೂ ಪಾರಿಜಾತ ಎಲೆಯ ಕಷಾಯ ಕುಡಿಯುವಂತೆ ತಮ್ಮ ಭಕ್ತರಿಗೆ ಸಂದೇಶವನ್ನೂ ಅವರು ರವಾನಿಸಿರುವ ಇವರು, ಕಷಾಯ ತಯಾರಿಸುವ ವಿಧಾನವನ್ನೂ ತಿಳಿಸಿದ್ದಾರೆ . ಅವರು ತಿಳಿಸಿರುವ ಪ್ರಕಾರ ಐದು ಪಾರಿಜಾತದ ಎಲೆ , ಕಾಳುಮೆಣಸು , ಶುಂಠಿ , ಲಿಂಬೆಹಣ್ಣಿನ ರಸ ಹಾಕಿ ಕುದಿಸಿ ಕುಡಿದರೆ …

Read More »

ಬಳ್ಳಾರಿ: 31ರವರೆಗೂ ಸಂಪೂರ್ಣ ಲಾಕ್‌ಡೌನ್‌ ವಿಸ್ತರಣೆ: ಡಿ.ಸಿ.

ಬಳ್ಳಾರಿ: ‘ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಾದ್ಯಂತ ಮೇ 19ರಿಂದ ಜಾರಿಯಲ್ಲಿರುವ ಸಂಪೂರ್ಣ ಲಾಕ್‌ಡೌನ್‌ ಅನ್ನು 31ರವರೆಗೂ ವಿಸ್ತರಿಸಲಾಗಿದ್ದು, 24 ಮತ್ತು 25 ರಂದು ಮಾತ್ರ ಮಧ್ಯಾಹ್ನ 12ರವರೆಗೂ ಅವಶ್ಯಕ ಸಾಮಗ್ರಿಗಳ ಖರೀದಿಗೆ ಅವಕಾಶ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಪವನ್‌ಕುಮಾರ್‌ ಮಾಲಪಾಟಿ ತಿಳಿಸಿದರು. ‘ರಾಜ್ಯ ಸರ್ಕಾರವು ಜೂನ್‌ 7ರವರೆಗೂ ಲಾಕ್‌ಡೌನ್‌ ವಿಸ್ತರಿಸಿದ್ದು, ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧಗಳನ್ನು ವಿಧಿಸಲು ಅಧಿಕಾರ ನೀಡಿದೆ. ಸಾರ್ವಜನಿಕರ ಆರೋಗ್ಯ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಲ್ಲಿ …

Read More »

ವಿಜಯನಗರ; ಕೋವಿಡ್ ಕೇರ್‌ ಸೆಂಟರ್‌ಗೆ ಬರಲು ಒಪ್ಪದ ಗ್ರಾಮಸ್ಥರು

ವಿಜಯನಗರ, ಮೇ 23; ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕು ತಗುಲಿದ ವ್ಯಕ್ತಿಗಳು ಮನೆಯ ಆರೈಕೆಯಲ್ಲಿ ಚಿಕಿತ್ಸೆ ಪಡೆಯುವಂತಿಲ್ಲ. ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಾಗಬೇಕು ಎಂದು ಸರ್ಕಾರ ಹೇಳಿದೆ. ಆದರೆ ಜನರು ಇದಕ್ಕೆ ಒಪ್ಪುತ್ತಿಲ್ಲ. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ವರ್ಗಾಯಿಸಲು ಅಧಿಕಾರಿಗಳು ವಾಹನ ಸಮೇತ ಆಗಮಿಸಿದಾಗ ಅವರ ಜೊತೆ ಜನರು ವಾಗ್ವಾದ ಮಾಡಿ ವಾಪಸ್ ಕಳಿಸಿದ ಘಟನೆ ಶನಿವಾರ ವಿಜಯನಗರದಲ್ಲಿ ನಡೆದಿದೆ.   ಸಿರುಗುಪ್ಪ ತಾಲೂಕಿನ ಹಚ್ಚೋಳ್ಳಿ ಗ್ರಾಮದಲ್ಲಿ …

Read More »