ಚೈತನ್ಯಪುರಿ: ಆನ್‍ಲೈನ್ ಡೇಟಿಂಗ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಉಗಾಂಡ ಮೂಲದ ಐವರು ಯುವತಿಯರನ್ನು ಹೈದರಾಬಾದ್ನ ಚೈತನ್ಯಪುರಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಇನ್ಸ್ಪೆಕ್ಟರ್ ರವಿಕುಮಾರ್, ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದು ಯುವತಿಯರನ್ನು ಬಂಧಿಸಿದ್ದೇವೆ. ಆರೋಪಿಗಳು ಲೊಕ್ಯಾಂಟೋ ಹೆಸರಿನ ಆನ್ಲೈಟ್ ಡೇಟಿಂಗ್ ಆಯಪ್ನಲ್ಲಿ ಫೋಟೋಗಳನ್ನು ಹರಿಬಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದರು. ಶೋಧ ಕಾರ್ಯಾಚರಣೆ ನಡೆಸಿ ಅವರ ದಂಧೆಯನ್ನು ನಿಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ. ಪೊಲೀಸರು ಗ್ರಾಹಕರ ವೇಷದಲ್ಲಿ ಆಯಪ್ನಲ್ಲಿರುವ ನಂಬರ್ …
Read More »ಏಟಿಎಂ ಚಾಲಕನನ್ನು ಕೊಂದು 75 ಲಕ್ಷ ರೂ. ದೋಚಿದ್ದ ನಾಲ್ವರ ಬಂಧನ
ಬೆಂಗಳೂರು: ಎಟಿಎಂ ಕೇಂದ್ರಕ್ಕೆ ಹಣ ತುಂಬುವ ವಾಹನ ಚಾಲಕನಿಗೆ ಹಣದ ಆಮಿಷವೊಡ್ಡಿ ಹತ್ಯೆ ಮಾಡಿ ಸಕಲೇಶಪುರದ ಘಾಟ್‌ನಲ್ಲಿ ಎಸೆದು 75 ಲಕ್ಷ ರೂ. ದೋಚಿದ ನಾಲ್ವರನ್ನು ಗೋವಿಂದಪುರ ಪೊಲೀಸರು ಪ್ರಕರಣ ನಡೆದ ಮೂರು ವರ್ಷಗಳ ಬಳಿಕ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಎನ್.ಕುಮಾರ್ (23), ಮಧುಸೂದನ್ (23) ಮೈಸೂರಿನ ಕೆ.ಆರ್.ನಗರದ ಪ್ರಸನ್ನ (31) ಹಾಗೂ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮಹೇಶ್ (22) ಬಂಧಿತರು. ಆರೋಪಿಗಳಿಂದ 3.5 …
Read More »ಒಂದು ಸಾವಿರ ಆಮ್ಲಜನಕ ಸಾಂದ್ರಕ ಖರೀದಿ :ಸಚಿವ ಮುರುಗೇಶ್ ನಿರಾಣಿ
ರಾಮನಗರ, ಮೇ.23- ಒಂದು ಸಾವಿರ ಆಮ್ಲಜನಕ ಸಾಂದ್ರಕ ಖರೀದಿಸಲು ಯೋಜಿಸಲಾಗಿದ್ದು, ಮೊದಲು 100 ಆಮ್ಲಜನಕ ಸಾಂದ್ರಕ ಖರೀದಿಸಲಾಗಿದೆ ಅದರ ಕಾರ್ಯವೈಖರಿ ಗುಣ ಮಟ್ಟ ನೋಡಿ ಉಳಿದ ಆಮ್ಲಜನಕ ಸಾಂದ್ರಕವನ್ನು ಖರೀದಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ವಿಭಾಗ ಮಟ್ಟಕ್ಕೆ 2 ರಂತೆ 10 ಆಕ್ಸಿಜನ್ ಟ್ಸಾಂಕರ್, 10 ಆಕ್ಸಿಜನ್ ಜನರೇಟರ್‌ಗಳನ್ನು …
Read More »ಇಂದಿನಿಂದ ಝೊಮ್ಯಾಟೋ ಉದ್ಯೋಗಿಗಳಿಗೆ ಕೊವೀಡ್ ಲಸಿಕೆ ವಿತರಣೆ: ಸಿಇಒ ಘೋಷಣೆ
ದೆಹಲಿ: ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲೂ ಕೆಲಸ ಮಾಡಿದ ಝೊಮ್ಯಾಟೋ ಆನ್‍ಲೈನ್ ಫುಡ್ ಆರ್ಡರ್ ಕಂಪನಿಯ ಉದ್ಯೋಗಿಗಳು, ಸಿಬ್ಬಂದಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು ಎಂದು ಸಂಸ್ಥೆಯ ಸಿಇಒ ದೀಪಿಂದರ್ ಗೋಯಲ್ ತಿಳಿಸಿದ್ದಾರೆ. ಹೀಗಾಗಿ ಜೊಮ್ಯಾಟೋದ ಸುಮಾರು 1.5 ಲಕ್ಷ ಉದ್ಯೋಗಿಗಳು ಕಂಪನಿಯ ವತಿಯಿಂದ ಉಚಿತವಾಗಿ ಕೊರೊನಾ ಲಸಿಕೆ ಪಡೆಯಲಿದ್ದಾರೆ. ರಾಷ್ಟ್ರರಾಜಧಾನಿಯಲ್ಲಿ ಈಗಾಗಲೇ ಲಸಿಕೆ ವಿತರಣೆ ನಡೆಯುತ್ತಿದ್ದು, ಸಾವಿರಕ್ಕೂ ಹೆಚ್ಚು ಮಂದಿ ವ್ಯಾಕ್ಸಿನೇಶನ್ ಮಾಡಿಸಿಕೊಂಡಿದ್ದಾರೆ. ಇಂದಿನಿಂದ ಮುಂಬೈ ಮತ್ತು ಬೆಂಗಳೂರಿನಲ್ಲಿರುವ ಝೊಮ್ಯಾಟೋ …
Read More »ಪುತ್ರನನ್ನು ಕಳೆದುಕೊಂಡ ತಂದೆ-1 ಕೋಟಿ ಪರಿಹಾರ ಕೊಟ್ಟ ಕೇಜ್ರಿವಾಲ್
ನವದೆಹಲಿ: ಕೊರೊನಾ ವಾರಿಯರ್ ಆಗಿರುವ ವೈದ್ಯರೊಬ್ಬರು ಕೋವಿಡ್‍ಗೆ ಬಲಿಯಾಗಿದ್ದು, ಅವರ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬರೋಬ್ಬರಿ 1ಕೋಟಿ ರೂಪಾಯಿ ಹಣವನ್ನು ಪರಿಹಾರವಾಗಿ ಕೊಟ್ಟಿದ್ದಾರೆ. ಡಾ. ಅನಾಸ್(26) ಮೃತ ವೈದ್ಯರಾಗಿದ್ದಾರೆ. ಇವರು ಕೊರೊನಾ ಸೋಂಕಿನಿಂದ ಇತ್ತೀಚೆಗಷ್ಟೇ ಮೃತಪಟ್ಟಿದ್ದರು. ಇವರ ಕುಟುಂಬಕ್ಕೆ ಅರವಿಂದ್ ಕೇಜ್ರಿವಾಲ್ ಅವರು ಸಹಾಯವನ್ನು ಮಾಡಿದ್ದಾರೆ. ಮೃತ ಡಾ. ಅನಾಸ್ ಅವರ ಮನೆಗೆ ಭೇಟಿನೀಡಿ ಅವರ ತಂದೆಗೆ ಸಾಂತ್ವನ ಹೇಳಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು …
Read More »ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ: ಪಿಎಸ್ಐ ವಿರುದ್ಧ ಎಫ್ಐಆರ್ ದಾಖಲು
ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣ ಸಂಬಂಧ ಮೂಡಿಗೆರೆ ತಾಲೂಕಿನ ಗೋಣಿಬೀಡು ಪಿಎಸ್ಐ ಅರ್ಜುನ್ ವಿರುದ್ಧ ಶನಿವಾರ ಎಫ್ಐಆರ್ ದಾಖಲಾಗಿದೆ. ಯುವಕ ಪುನೀತ್ ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪುನೀತ್ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ. ವಿವಾಹಿತ ಮಹಿಳೆಗೆ ಫೋನ್ ಮಾಡಿದ ಆರೋಪ ಮೇಲೆ ಪುನೀತ್ನನ್ನು ವಿಚಾರಣೆಗಾಗಿ ಅರ್ಜುನ್ ಠಾಣೆಗೆ ಕರೆದೊಯ್ದಿದ್ದರು. ವಿಚಾರಣೆ ಸಂದರ್ಭದಲ್ಲಿ ಜಾತಿನಿಂದನೆ ಮಾಡಿ, ಮೂತ್ರ ಕುಡಿಸಿದ್ದಾರೆಂದು ಅರ್ಜುನ್ ವಿರುದ್ಧ ಪುನೀತ್ ಗಂಭೀರ …
Read More »ದೇಶದಲ್ಲಿ ಕರ್ನಾಟಕವೇ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಅಗ್ರ ಸ್ಥಾನ
ನವದೆಹಲಿ: ಕಳೆದ 24 ಗಂಟೆಯ ಕೊರೊನಾವೈರಸ್ ಸಕ್ರಿಯ ಪ್ರಕರಣಗಳನ್ನು ತೋರಿಸುವ ಸರ್ಕಾರದ ವಿವಿಧ ರಾಜ್ಯಗಳು ಮತ್ತು ಯುಟಿಗಳಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆಯನ್ನು ಸೂಚಿಸಲು ಕೇಂದ್ರವು ಶನಿವಾರ ನಕ್ಷೆಯನ್ನು ಹಂಚಿಕೊಂಡಿದೆ. ಅದರಂತೆ, ಒಂದು ಲಕ್ಷಕ್ಕೂ ಹೆಚ್ಚು ಸಕ್ರಿಯ ಕೋವಿಡ್ -19 ಪ್ರಕರಣಗಳನ್ನು ಹೊಂದಿರುವ ಎಂಟು ರಾಜ್ಯಗಳಲ್ಲಿ ಕರ್ನಾಟಕ ಮೊಡಲಸ್ಥನ ಹೊಂದಿದೆ. ಅದರಂತೆ ಕರ್ನಾಟಕ 5.14 ಲಕ್ಷ ಸಕ್ರಿಯ ಪ್ರಕರಣಗಳನ್ನು ಹೊಂದಿದ್ದು, ಮಹಾರಾಷ್ಟ್ರ 3.69 ಲಕ್ಷ , ಕೇರಳ 3.06 …
Read More »ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ
ಮೂಡಲಗಿ: ಕೊರೋನಾ ಎರಡನೇ ಅಲೆಗೆ ಬ್ರೇಕ್ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧೀಯ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕೊವಿಡ್ ಕಾಳಜಿ ಕೇಂದ್ರದಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೋಕಾಕ್ …
Read More »ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ 420 ವೈದ್ಯರು ಕೊರೊನಾಗೆ ಬಲಿ
ನವದೆಹಲಿ: ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ ಹೆಚ್ಚುತ್ತಿದ್ದು, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರುಗಳೇ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಕೊರೊನಾ 2ನೇ ಅಲೆಯಲ್ಲಿ ದೇಶದಲ್ಲಿ ಈವರೆಗೆ ಬರೋಬ್ಬರಿ 420 ವೈದ್ಯರು ಸೋಂಕಿಗೆ ಸಾವನ್ನಪ್ಪಿದ್ದಾರೆ. ಇದರಲ್ಲಿ 100 ವೈದ್ಯರು ದೆಹಲಿಯೊಂದರಲ್ಲಿಯೇ ಮೃತಪಟ್ಟಿದ್ದಾರೆ ಎಂದು ಭಾರತೀಯ ವೈದ್ಯಕೀಯ ಮಂಡಳಿ (IMA) ಮಾಹಿತಿ ನೀಡಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಮಹಾಮಾರಿಗೆ ತುತ್ತಾಗುತ್ತಿರುವುದು ದುರಂತ.
Read More »ಖಾಸಗಿ ವ್ಯಕ್ತಿಗಳೊಂದಿಗೆ ಸೇರಿ ಪೊಲೀಸನಿಂದ ಹಗಲು ದರೋಡೆ;
ಅಥಣಿ): ಖಾಸಗಿ ವ್ಯಕ್ತಿಗಳೊಂದಿಗೆ ಕಾರಲ್ಲಿ ಬಂದು ಬೈಕ್ ಸೀಜ್ ಮಾಡುವ ಬೆದರಿಕೆಯೊಡ್ಡಿ ರಸೀದಿ ನೀಡದೆ ಹಣ ಸುಲಿಗೆ ಮಾಡುತ್ತಿದ್ದ ಐಗಳಿ ಠಾಣೆಯ ಪೋಲಿಸ್ ಪೇದೆ ಸಂಗಪ್ಪ ನಾಯಕ ಇವರನ್ನು ಜನ ಮುತ್ತಿಗೆ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಸಮೀಪದ ಕೊಟ್ಟಲಗಿ ಗ್ರಾಮದಲ್ಲಿ ಎರಡು ದಿನಗಳಿಂದ ಹಣ ವಸೂಲಿಗಿಳಿದಿದ್ದ ಪೋಲಿಸ್, ಶನಿವಾರ ಬೆಳಗ್ಗೆ ಹಾಲು ಹಾಕಲು ಬಂದಿದ್ದ ರೈತನೋರ್ವನಿಗೆ ಕೋಲಿನಿಂದ ಥಳಿಸಿದ್ದಾನೆ. ಮೊಣಕೈ …
Read More »
Laxmi News 24×7