ಬೆಳಗಾವಿ – ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಶುಕ್ರವಾರ ಆಟೋ ಚಾಲಕರಿಗೆ ರೇಷನ್ ಕಿಟ್ ಗಳನ್ನು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು. ಈ ಕೊರೋನಾ ಸಂದರ್ಭದಲ್ಲಿ ಯಾವುದೇ ದುಡಿಮೆಯಿಲ್ಲದೆ ಜನ ಪರಿತಪಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಕಿಂಚಿತ್ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಲಕ್ಷ್ಮಿ ತಾಯಿ ಫೌಂಡೇಶನ್ ಈ ನೆರವು ನೀಡುತ್ತಿದೆ. ಆಸ್ಪತ್ರೆಯಲ್ಲಿರುವ ಎಷ್ಟೋ ರೋಗಿಗಳಿಗೆ, ಅವರ ಸಹಾಯಕರಿಗೆ ಆಹಾರ, ನೀರು ಸಿಗುತ್ತಿಲ್ಲ. ಹಾಗಾಗಿ ಅವರಿಗೆ ಆಹಾರದ ಕಿಟ್ , ನೀರಿನ ಬಾಟಲ್, ಮಾತ್ರೆಯ ಕಿಟ್ …
Read More »ಪಾಸಿಟಿವ್ ಆಗಿದ್ದರೂ ಊರಲ್ಲಿ ಸುತ್ತಾಟ – ವ್ಯಕ್ತಿಯ ವಿರುದ್ಧ ಕೇಸ್ ದಾಖಲು
ಮಡಿಕೇರಿ: ಕೊಡಗಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಜಿಲ್ಲೆಯಲ್ಲಿ ಸೋಂಕು ದೃಢಪಟ್ಟ ವ್ಯಕ್ತಿಯೋರ್ವ ಗ್ರಾಮ ಮತ್ತು ನಗರಪ್ರದೇಶದಲ್ಲಿ ಸುತ್ತಾಡುತ್ತಿರುವುದರ ಬಗ್ಗೆ ಕೇಳಿ ಬಂದ ದೂರಿನ ಮೇರೆಗೆ ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಡಿಕೇರಿ ತಾಲೂಕಿನ ಕಾಲೂರು ಗ್ರಾಮದ ನಿವಾಸಿ ಗಣೇಶ್ ಎಂಬುವವರಿಗೆ ಕಳೆದ ಒಂದು ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿತ್ತು. ಬಳಿಕ ಅವರನ್ನು ಮಡಿಕೇರಿ ಸಮೀಪ ಇರುವ ನವೋದಯ ಶಾಲೆ ಕೋವಿಡ್ …
Read More »ಜಿಯೋ ನೀಡುತ್ತಿದೆ ಅತ್ಯಂತ ಕಡಿಮೆ ದರದ ಇಂಟರ್ ನೆಟ್ ಪ್ಲ್ಯಾನ್..! ಮಾಹಿತಿ ಇಲ್ಲಿದೆ
ನವ ದೆಹಲಿ : ಟೆಲಿಕಾಮ್ ನೆಟ್ ವಕರ್ಗಳಲ್ಲಿಯೇ ದೈತ್ಯ ಸಂಸ್ಥೆ ಜಿಯೋ ಮತ್ತೊಂದು ಹೊಸ ಗ್ರಾಹಕ ಸ್ನೇಹಿ ಯೋಜನೆಯೊಂದನ್ನು ಜಾರಿಗೆ ತಂದಿದೆ. ಟೆಲಿಕಾಮ್ ನೆಟ್ ವರ್ಕ್ ನಲ್ಲಿ ಭಾರಿ ಪೈಪೋಟಿ ನಡೆಯುತ್ತಿರುವ ಈ ಸಂದರ್ಭದಲ್ಲಿ ಗ್ರಾಹಕರ ಮನಸ್ಸನ್ನು ಸೆಳೆಯುವ ಉದ್ದೇಶದಿಂದ ರಿಲಯನ್ಸ್ ಜಿಯೋ 100 ರೂ.ಗಿಂತ ಕಡಿಮೆ ಮೊತ್ತದ ಅನೇಕ ಕೈಗೆಟುಕುವ ರಿಚಾರ್ಜ್ ಪ್ಲ್ಯಾನ್ ನೀಡುತ್ತಿದೆ. ಆ ಪೈಕಿ ಜಿಯೋ ಹೊಸದಾಗಿ ಮತ್ತೆರಡು ಪ್ಲ್ಯಾನ್ ಜಾರಿಗೆ ತಂದಿದೆ. ಹೌದು, ಕೇವಲ …
Read More »ಪ್ರಧಾನಿ ಮೋದಿಗೆ ಅವಮಾನ ಮಾಡಿದ ಯುವಕ ಅರೆಸ್ಟ್.?
ಹಾಸನ: ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಪುರಲೇಹಳ್ಳಿ ಗ್ರಾಮದಲ್ಲಿ ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಧಾನಿ ಮೋದಿ ಮಾಸ್ಕ್ ಹಾಕಿಲ್ಲ. ಆದರೆ, ಬೇರೆಯವರಿಗೆ ಮಾಸ್ಕ್ ಹಾಕಿ ಎಂದು ಹೇಳುತ್ತಾರೆ ಎನ್ನುವ ಮೂಲಕ ಯುವಕ ಅವಮಾನ ಮಾಡಿದ್ದಾನೆ. ಮೋದಿಯವರ ಮಾಸ್ಕ್ ಸಂದೇಶದ ಫೋಟೋ ಬಳಿ ಯುವಕನಿಗೆ ಪ್ರಚೋದನೆ ನೀಡಿ ಪ್ರಧಾನಿಯವರಿಗೆ ಅವಮಾನಿಸುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಇದನ್ನು ಗಮನಿಸಿದ ಬಿಜೆಪಿ ಮುಖಂಡರು …
Read More »ತಿಂಗಳಾಂತ್ಯದವರೆಗೂ ಲಾಕ್ ಆಗಲಿದೆ ಕರುನಾಡು.!
ದಾವಣಗೆರೆ: ಕೊರೊನಾ ಅಟ್ಟಹಾಸ ನಿಯಂತ್ರಿಸಲು ರಾಜ್ಯದಲ್ಲಿ ಮೇ 24ರ ಬಳಿಕವೂ ಲಾಕ್ ಡೌನ್ ಮುಂದುವರೆಯುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಆರೋಗ್ಯ ಸಚಿವರು, ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಬಹುತೇಕ ಸಚಿವರು ಒಲವು ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಇಚ್ಛೆ ಕೂಡ ಅದೇ ಆಗಿದೆ. ಮೇ 22 ಅಥವಾ 23ರಂದು ಲಾಕ್ ಡೌನ್ ನಿರ್ಧಾರ ಪ್ರಕಟವಾಗಲಿದೆ ಎಂದರು. ಗ್ರಾಮೀಣ ಪ್ರದೇಶಕ್ಕೂ …
Read More »ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತ..?
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದ್ದು, ಮೇ 24ರ ಬಳಿಕ ಕರ್ನಾಟಕದಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ. ರಾಜ್ಯದ ಭವಿಷ್ಯದ ಹಿತ ದೃಷ್ಟಿಯಿಂದ ಮುಂದಿನ 15 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಬೇಕು ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳ ತಂಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಮುಖ್ಯಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿ, ಲಾಕ್ ಡೌನ್ ವಿಸ್ತರಣೆ …
Read More »ಕೊರೊನಾ ಎರಡನೇ ಅಲೆ ಹೆಚ್ಚಳಕ್ಕೆ ಧಾರ್ಮಿಕ ಕಾರ್ಯಕ್ರಮಗಳು, ವಲಸೆ ಕಾರಣ: ಐಸಿಎಂಆರ್
ನವದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ಮಿತಿಮೀರಿ ಹಬ್ಬಲು ಧಾರ್ಮಿಕ ಕಾರ್ಯಕ್ರಮಗಳು ಮತ್ತು ವಲಸೆ ಪ್ರಮುಖ ಕಾರಣ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ನೇತೃತ್ವದ ಅಧ್ಯಯನ ತಂಡವೊಂದು ವರದಿ ಮಾಡಿದೆ. ಐಸಿಎಂಆರ್ ಅಧ್ಯಯನದ ಪ್ರಕಾರ, ವಿದೇಶಿ ಪ್ರಯಾಣಿಕರು ಭಾರತಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವುದು, ದೇಶದಲ್ಲಿನ ಜನರು ಆಂತರಿಕವಾಗಿ ವಲಸೆ ಹೋಗಿರುವುದು ಮತ್ತು ದೇಶದಾದ್ಯಂತ ನಡೆದ ಹಲವು ಧಾರ್ಮಿಕ ಕಾರ್ಯಕ್ರಮಗಳು ಕೊರೊನಾ ಎರಡನೇ ಅಲೆ ಹೆಚ್ಚಳಕ್ಕೆ ನೇರವಾದ ಕಾರಣ. ಮಿಂಟ್ …
Read More »ರೇಪ್ ಕೇಸ್ನಿಂದ ತೆಹಲ್ಕಾ ಮ್ಯಾಗಜಿನ್ ಸಂಸ್ಥಾಪಕ ತರುಣ್ ತೇಜ್ಪಾಲ್ ಖುಲಾಸೆ: ಗೋವಾ ನ್ಯಾಯಾಲಯ ಆದೇಶ
ಪಣಜಿ, ಮೇ 21: ಗೋವಾದ ಸೆಷನ್ಸ್ ನ್ಯಾಯಾಲಯದಿಂದ ಶುಕ್ರವಾರದಂದು ಖ್ಯಾತ ಪತ್ರಕರ್ತ, ತೆಹಲ್ಕಾ ಸಹ ಸಂಸ್ಥಾಪಕ, ಸಂಪಾದಕ ತರುಣ್ ತೇಜಪಾಲ್ ಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ತಮ್ಮ ಸಂಸ್ಥೆಯ ಮಹಿಳಾ ಸಹೋದ್ಯೋಗಿ ಅಸಭ್ಯವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದ ಪ್ರಕರಣದಿಂದ ತೇಜಪಾಲ್ ಖುಲಾಸೆಗೊಂಡಿದ್ದಾರೆ. ಗೋವಾದ ಸೆಷನ್ಸ್ ನ್ಯಾಯಾಲಯದ ಜಡ್ಜ್ ಕ್ಷಮಾ ಜೋಶಿ ಅವರು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ, ತೇಜ್ ಪಾಲ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಆದೇಶ ನೀಡಿದ್ದಾರೆ. ಈ ಪ್ರಕರಣ ಬೆಳಕಿಗೆ …
Read More »ಮುಂಬೈ ಬಾರ್ಜ್ ದುರಂತ- ಕ್ಯಾಪ್ಟನ್ ವಿರುದ್ಧ ಎಫ್‌ಐಆರ್
ಮುಂಬೈ, ಮೇ 21: ತೌಕ್ತೆ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಮುಂಬೈನಿಂದ 35 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮುಳುಗಿದ್ದ ಬಾರ್ಜ್ ಪಿ -305 ರ ಕ್ಯಾಪ್ಟನ್ ವಿರುದ್ಧ ನಿರ್ಲಕ್ಷ್ಯದಿಂದ ಜನರ ಸಾವಿಗೆ ಕಾರಣದ ಆರೋಪದಲ್ಲಿ ಮುಂಬೈ ಪೊಲೀಸರು ಶುಕ್ರವಾರ ಎಫ್‌ಐಆರ್ ದಾಖಲಿಸಿದ್ದಾರೆ. 261 ಜನರನ್ನು ಹೊತ್ತೊಯ್ಯುತ್ತಿದ್ದ ಬಾರ್ಜ್ ಪಿ -305 ರ ಸೋಮವಾರ ತೌಕ್ತೆ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಮುಳುಗಿತ್ತು. ಈ ಘಟನೆ ನಡೆದು ಐದು ದಿನಗಳಾಗಿದ್ದು ಈವರೆಗೆ 49 ಶವಗಳು …
Read More »ಬಾಗಲಕೋಟೆಯಿಂದ ಗದಗಕ್ಕೆ ಶವ ತಂದ ಕುಟುಂಬಸ್ಥರು, ಆದರೆ ಸೋಂಕಿತ ವೃದ್ಧನ ಶವ ಸಂಸ್ಕಾರಕ್ಕೆ ಗ್ರಾಮಸ್ಥರಿಂದ ವಿರೋಧ
ಗದಗ: ಜಿಲ್ಲೆಯುಲ್ಲಿ ಕೊರೊನಾ ಸೋಂಕಿತ ವೃದ್ಧನ ಶವ ಸಂಸ್ಕಾರಕ್ಕೆ ಗ್ರಮಸ್ಥರು ವಿರೋಧ ವ್ಯಕ್ತಪಡಿಸಿದ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅಮರಗೋಳದಲ್ಲಿ ನಡೆದಿದೆ. ಮೂಲತಃ ಅಮರಗೋಳ ಗ್ರಾಮದ 72 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದರು. ಗ್ರಮದಲ್ಲೇ ವೃದ್ಧನ ಶವ ಸಂಸ್ಕಾರ ಮಾಡಲು ಕುಟುಂಬಸ್ಥರು ಚಿಂತಿಸಿದ್ದರು. ಆದರೆ ಗ್ರಾಮದ ಜನ ಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದು ಮಾತಿನ ಚಕಮಕಿ ನಡೆದಿದೆ. ಮೃತ ವೃದ್ಧ ಗದಗ ಬಿಟ್ಟು ಬಾಗಲಕೋಟೆ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದರು. ಕೊರೊನಾ …
Read More »
Laxmi News 24×7