ಹಾವೇರಿ: ಅಂತರ್ಜಾಲದಲ್ಲಿ ಹಲವು ಬಗೆಯ ವಂಚನೆಗಳು ನಡೆಯುತ್ತಲೇ ಇರುತ್ತವೆ. ಹಿಂದೆಲ್ಲ ಮನೆಗೆ ಬ್ಯಾಂಕ್ಗಳಿಗೆ ಹಣ ಸಾಗಿಸುವ ವಿಷಯ ತಿಳಿದು ದಾಳಿ ಮಾಡುತ್ತಿದ್ದ ಖದೀಮರು ಇದೀಗ ಅಂತರ್ಜಾಲದ ಮೂಲಕ ಜನರ ಹಣ ದೋಚುತ್ತಿದ್ದಾರೆ. ಇದೇ ರೀತಿಯ ಘಟನೆಯೊಂದು ಹಾವೇರಿಯಲ್ಲಿ ನಡೆದಿದೆ. ಭವಿಷ್ಯವನ್ನು ತಿಳಿದು ಕೊಳ್ಳಲು ತನ್ನ ಮೊಬೈಲ್ನಲ್ಲಿ ಅಪ್ಲಿಕೇಶನ್ ಡೌನಲೋಡ್ ಮಾಡಿಕೊಂಡ ಯುವತಿಯೊಬ್ಬಳು ಬರೋಬ್ಬರಿ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳೆದುಕೊಂಡಿದ್ದಾಳೆ. ಜ್ಯೋತಿಷ್ಯ ಸಂಬಂಧಿತ ಅಪ್ಲಿಕೇಶನ್ ಡೌನಲೋಡ್ ಮಾಡಿ ಮಾಹಿತಿ ಪಡೆಯಲು …
Read More »ಮಧ್ಯರಾತ್ರಿ ಮನೆಗೆ ನುಗ್ಗಿ ದರೋಡೆ ಮಾಡಿದ ಆರೋಪಿಗಳ ಬಂಧನ
ಕಲಬುರಗಿ: ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದಿದ್ದ ಎರಡು ಪ್ರಮುಖ ಅಪರಾಧ ಪ್ರಕರಣಗಳನ್ನು ಸಿನಿಮೀಯ ಶೈಲಿಯಲ್ಲಿ ಭೇದಿಸಲಾಗಿದೆ. ಮಧ್ಯರಾತ್ರಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ದೋಚಿದ್ದ ದರೋಡೆ ಪ್ರಕರಣವನ್ನು ಪತ್ತೆದಾರಿ ಶ್ವಾನ ನೀಡಿದ ಸುಳಿವು ಆಧರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜೂನ್ 22ರಂದು ಶಹಬಾದ್ ಪಟ್ಟಣದ ಧಕ್ಕಾ ತಾಂಡಾದಲ್ಲಿ ಹಣಮಂತ ಪವಾರ್ ಎಂಬುವವರ ಮನೆಗೆ ನುಗ್ಗಿದ ದರೋಡೆಕೋರರು, ಮನೆಯವರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಅವರ ಕೈ-ಕಾಲು ಕಟ್ಟಿ …
Read More »ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವತಿ ಹೃದಯಾಘಾತದಿಂದ ಸಾವು
ಧಾರವಾಡ: ರಾಜ್ಯದಲ್ಲಿ ಸಹ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಧಾರವಾಡದ ಪುರೋಹಿತ್ ನಗರದಲ್ಲಿ ಮಂಗಳವಾರ ನಡೆದಿದೆ. ಜೀವಿತಾ ಕುಸಗೂರ (26) ಎಂಬ ಯುವತಿ ಹೃದಯಾಘಾತದಿಂದ ಮೃತಪಟ್ಟವರು. ನಿನ್ನೆ ಬೆಳಗ್ಗೆ ಮನೆಯಲ್ಲಿ ತಲೆ ಸುತ್ತು ಬರುತ್ತಿದೆ ಎಂದು ಯುವತಿ ಸುಸ್ತಾಗಿ ಕುಳಿತಿದ್ದರು. ನಂತರ ಕುಟುಂಬದವರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ, ಮಾರ್ಗ ಮಧ್ಯದಲ್ಲೇ ಯುವತಿ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಹೋಗಿ ವೈದ್ಯರಿಗೆ ತೋರಿಸಿದಾಗ …
Read More »ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲ ರೀತಿಯಲ್ಲೂ ಉತ್ತಮವಾಗಿದೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್
ಸುಬ್ರಹ್ಮಣ್ಯ(ದ.ಕನ್ನಡ): “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ” ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಇತ್ತೀಚೆಗೆ ನಡೆದ ಕಾನ್ಫೆರೆನ್ಸ್‌ನಲ್ಲಿ ಮಾನ್ಯ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ, ವಿವಿಧ ಅಪರಾಧಗಳ ಬಗ್ಗೆ ಮಾಹಿತಿ ಪಡೆದ ವೇಳೆ ಕ್ರೈಮ್ ರೇಟ್ ಕಡಿಮೆಯಾಗಿರುವುದು ಕಂಡು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೇ ಎಲ್ಲ ಕಡೆ ಕಾನೂನುನನ್ನು ಬಹಳ ಕಠಿಣವಾಗಿ ತೆಗೆದುಕೊಳ್ಳಲಾಗಿದೆ. ದಕ್ಷಿಣ ಕನ್ನಡ …
Read More »ಅನ್ನಭಾಗ್ಯ ಅಕ್ಕಿ ಸಾಗಾಟ ಲಾರಿಗಳ ಮುಷ್ಕರ ವಾಪಸ್
ಬೆಂಗಳೂರು, ಜುಲೈ 9: ಕರ್ನಾಟಕದಾದ್ಯಂತ ಅನ್ನಭಾಗ್ಯ (Anna Bhagya) ಅಕ್ಕಿ ಪೂರೈಕೆ ಮಾಡಿದ ಲಾರಿ ಮಾಲೀಕರಿಗೆ ಕಳೆದ ಐದು ತಿಂಗಳಿನಿಂದ ಬಿಡುಗಡೆ ಮಾಡಬೇಕಿದ್ದ 260 ಕೋಟಿ ರೂ.ನಷ್ಟು ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಲಾರಿ ಮಾಲೀಕರ ಸಂಘ ಸೋಮವಾರದಿಂದ ಮುಷ್ಕರ ಆರಂಭಿಸಿತ್ತು. ಈ ಬಗ್ಗೆ ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೇ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ, ಎರಡು ದಿನಗಳಲ್ಲಿ ಹಣ ಸಂದಾಯ ಮಾಡುತ್ತೇವೆಂದು ಭರವಸೆ ನೀಡಿದ್ದರು. …
Read More »ಗಣಿತದಲ್ಲಿ ಗಿನ್ನಿಸ್ ರೆಕಾರ್ಡ್ಗೆ ಹಾವೇರಿಯ ಮೂವರು ವಿದ್ಯಾರ್ಥಿಗಳಿಂದ ತಯಾರಿ
ಹಾವೇರಿ: ಗಣಿತ ಅಂದರೆ ಸಾಕು ಕೆಲ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆ. ಕೆಲವರಿಗೆ ನೀರು ಕುಡಿದಷ್ಟೇ ಸುಲಭ. ಅದೇ ರೀತಿ ಹಾವೇರಿ ನಗರದ ಮೂರು ವಿದ್ಯಾರ್ಥಿಗಳು ಗಣಿತದಲ್ಲಿ ವಿಶ್ವದಾಖಲೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಹಾವೇರಿಯ ಗಣಿತ ತಜ್ಞೆ ಉಷಾರಾಣಿ ಈ ಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಅನರ್ಘಾ ರಾಜು ಗೌಳಿ, ಆರವ್ ಜವಳೇಕರ್ ಮತ್ತು ಹರೀಶ್ ಸುರಳೇಶ್ವರ ಈ ಮೂವರು ಸಾಧನೆ ಮಾಡಲು ಹೊರಟಿರುವ ವಿದ್ಯಾರ್ಥಿಗಳು. ಇವರೇ ಗಣಿತದ ಲೆಕ್ಕಗಳನ್ನು, ಮಗ್ಗಿಗಳನ್ನು ನೀರು ಕುಡಿದಷ್ಟೇ …
Read More »ಒಂದೇ ರಾತ್ರಿ ಮೂರು ಮನೆಗಳ ಕಳ್ಳತನಕ್ಕೆ ಯತ್ನ
ಬಾಗಲಕೋಟೆ : ಒಂದೇ ರಾತ್ರಿ ಮೂರು ಮನೆಗಳ ಕಳ್ಳತನಕ್ಕೆ ಯತ್ನ ಜಮಖಂಡಿ ತಾಲೂಕು ನಾಗನೂರು ಗ್ರಾಮದಲ್ಲಿ ಒಂದೇ ರಾತ್ರಿಯಲ್ಲಿ ಮೂರು ಮನೆಗಳ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ದರೋಡೆಗೆ ಬಂದ ಕಳ್ಳರು ಎಲ್ಲಾ ಮನೆಗಳ ಹತ್ತಿರ ಸುಳಿದಾಡಿದ್ದಾರೆ. ನಂತರ ಒಂದು ಮನೆಯಲ್ಲಿ ಚಿನ್ನಾಭರಣ, ನಗದು ಕದ್ದು ಪರಾರಿಯಾಗಿದ್ದಾರೆ. ಮತ್ತೆರಡು ಮನೆಗಳಲ್ಲೂ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ .ಉಮೇಶ ಕನಮುಚನಾಳ ಎಂಬುವರ ಮನೆಯಲ್ಲಿ ಕಳ್ಳತನ ಮಾಡಿ 30 ಗ್ರಾಂ ಚಿನ್ನದ ತಾಳಿ, …
Read More »ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ”
ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ” ಸರ್ಕಾರಿ ಶಾಲೆಗಳಿಗೆ ಮಕ್ಕಳ ಪ್ರವೇಶಾತಿ ಹೆಚ್ಚಿಸುವಂತೆ ಕ್ರಮ ವಹಿಸಲು ಸಚಿವ ಮಧು ಬಂಗಾರಪ್ಪ ಸೂಚನೆ ಬೆಳಗಾವಿ,ಮುಖ್ಯಮಂತ್ರಿಗಳ ನಿರ್ದೇಶನದಂತೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶಾತಿ ಹೆಚ್ಚಾಗಬೇಕು. ಖಾಸಗಿ ಶಾಲೆಗಳ ಮಾದರಿಯಲ್ಲೇ ಸರ್ಕಾರಿ ಶಾಲೆಗಳು ನಿರ್ವಹಿಸುವದರ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು …
Read More »ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ವಿಜಯ ಮೋರೆ ಅವರಿಗೆ ಸನ್ಮಾನ
ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ವಿಜಯ ಮೋರೆ ಅವರಿಗೆ ಸನ್ಮಾನ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ವಿಶೇಷ ಕಾರ್ಯಕ್ರಮದಲ್ಲಿ, ಬೆಳಗಾವಿಯ ಮಾಜಿ ಮೇಯರ್ ಮತ್ತು ಸಮಾಜ ಸೇವಕ ವಿಜಯ್ ಮೋರೆ ಅವರನ್ನು ಸಾರ್ವಜನಿಕ ಸೇವೆ ಮತ್ತು ಸಮಾಜಕ್ಕೆ ಸಹಾಯ ಮಾಡುವಲ್ಲಿ ಅವರ ಗಮನಾರ್ಹ ಕಾರ್ಯಕ್ಕಾಗಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವನ್ನು ಬೆಂಗಳೂರಿನ ಸಮುದಾಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಸರ್ಕಾರದೊಂದಿಗೆ ಆಯೋಜಿಸಲಾಗಿತ್ತು. ಈ ಸಮಾರಂಭದಲ್ಲಿ ಕರ್ನಾಟಕದಾದ್ಯಂತ …
Read More »ರೈತನಿಗೆ ದೋಷಯುತ ಕೊಯ್ಲುಯಂತ್ರ ನೀಡಿದ ಕಂಪನಿಗೆ ದಂಡ ಪರಿಹಾರಕ್ಕೆ ಗ್ರಾಹಕರ ಆಯೋಗ ಆದೇಶ
ರೈತನಿಗೆ ದೋಷಯುತ ಕೊಯ್ಲುಯಂತ್ರ ನೀಡಿದ ಕಂಪನಿಗೆ ದಂಡ ಪರಿಹಾರಕ್ಕೆ ಗ್ರಾಹಕರ ಆಯೋಗ ಆದೇಶ ಧಾರವಾಡ – ರೈತರೊಬ್ಬರಿಗೆ ದೋಷಯುತ ಕೊಯ್ಲುಯಂತ್ರ ನೀಡಿದ ಕಂಪನಿಯ ವಿರುದ್ಧ ಅನ್ನದಾತ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ನೀಡಿದ ಬೆನ್ನಲೆ ಆಯೋಗವು ಕೂಲಂಕುಷವಾಗಿ ವಿಚಾರಣೆ ನಡೆಸಿ ರೈತನಿಗೆ ಕಂನಿಯಿಂದ ಪರಿಹಾರ ಜತೆಗೆ ದಂಡ ವಿಧಿಸುವ ಮೂಲಕ ನ್ಯಾಯ ಒದಗಿಸಿ ಆದೇಶ ಹೊರಡಿಸಿದೆ. ನವಲಗುಂದದ ನಿವಾಸಿ ದ್ಯಾಮಪ್ಪ ಹಂಚಿನಾಳ ಎನ್ನುವವರು ವೃತ್ತಿಯಲ್ಲಿ ವ್ಯವಸಾಯವನ್ನು ಅವಲಂಬಿಸಿದ್ದಾರೆ. ತಮ್ಮ ಉಪಜೀವನಕ್ಕಾಗಿ …
Read More »
Laxmi News 24×7