Breaking News

ರಾಜ್ಯ

ಕೋವಿಡ್ ಸೋಂಕಿನಿಂದ 1,952 ಉದ್ಯೋಗಿಗಳು ನಿಧನ: ಭಾರತೀಯ ರೈಲ್ವೆ ಇಲಾಖೆ

ನವದೆಹಲಿ: 2020ರಲ್ಲಿ ಆರಂಭವಾದ ಕೋವಿಡ್ ಸೋಂಕು ಭಾರತೀಯ ರೈಲ್ವೆ ಇಲಾಖೆ ಮೇಲೆ ದುರಂತ ಪರಿಣಾಮ ಬೀರಿದ್ದು, ಕೋವಿಡ್ 19 ಸೋಂಕಿನಿಂದ 1,952 ಉದ್ಯೋಗಿಗಳನ್ನು ಕಳೆದುಕೊಂಡಿರುವುದಾಗಿ ತಿಳಿಸಿದೆ. ದೇಶದ ಅತೀ ದೊಡ್ಡ ಸಾರಿಗೆ ವ್ಯವಸ್ಥೆಯಾಗಿರುವ ರೈಲು ಸಂಚಾರ ವ್ಯವಸ್ಥೆಯಲ್ಲಿ ದಿನಂಪ್ರತಿ ಒಂದು ಸಾವಿರ ಕೋವಿಡ್ 19 ಸೋಂಕು ಪ್ರಕರಣ ವರದಿಯಾಗುತ್ತಿದೆ ಎಂದು ರೈಲ್ವೆ ಮಂಡಳಿ ಹೇಳಿದೆ. ರೈಲ್ವೆ ಕೂಡಾ ಯಾವುದೇ ರಾಜ್ಯ ಅಥವಾ ಪ್ರದೇಶಕ್ಕಿಂತ ಭಿನ್ನವಾಗಿಲ್ಲ. ಯಾಕೆಂದರೆ ನಾವು ಕೂಡಾ ಕೋವಿಡ್ …

Read More »

ದಕ್ಷಿಣ ಕನ್ನಡದಲ್ಲಿ18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ಆರಂಭ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮಂಗಳವಾರ 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ಆರಂಭಗೊಂಡಿದೆ. ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡವರಿಗೆ ಪ್ರಥಮ ಹಂತವಾಗಿ ನಗರದ ವೆನ್ಲಾಕ್ ಆಸ್ಪತ್ರೆ ಹಾಗೂ ನಾಲ್ಕು ತಾಲ್ಲೂಕು ಆಸ್ಪತ್ರೆ ಗಳಲ್ಲಿ ಮಂಗಳವಾರ ಲಸಿಕೆ ನೀಡಲಾಗುತ್ತಿದೆ. ಮಂಗಳವಾರ ವೆನ್ಲಾಕ್ ನಲ್ಲಿ 250 ಮಂದಿ 18 ರಿಂದ 44 ವರ್ಷದವರಿಗೆ ಆನ್ ಲೈನ್ ನೋಂದಣಿ ಪಡೆದವರಿಗೆ ಲಸಿಕೆ ನೀಡಲಾಗುತ್ತಿದ್ದು ಯುವಕರು ಉತ್ಸಾಹದಿಂದ ಕೇಂದ್ರಕ್ಕೆ ಲಸಿಕೆ …

Read More »

ರೋಡಿಗೆ ಇಳಿದಿರುವ ಬೈಕ್ ಸವಾರರ ಮೇಲೆ ಲಾಠಿ ಚಾರ್ಜ್ ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ

ಗೋಕಾಕ:ರಸ್ತೆಗಿಳಿದವರ ಮೇಲೆ ಲಾಠಿ ಏಟು, ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ ಲಾಕ್‌ಡೌನ್ ಸಂದರ್ಭದಲ್ಲಿ ರಸ್ತೆಗಿಳಿದವರ ಮೇಲೆ ಪೊಲೀಸರು ಲಾಠಿಯಲ್ಲಿ ಹಿಗ್ಗಾಮುಗ್ಗ ಥಳಿಸುತ್ತಿರುವುದರ ವಿರುದ್ಧ ವ್ಯಾಪಕ ಆಕ್ರೋಶಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿವೆ. ಸಾಮಾಜಿಕ ಹೋರಾಟಗಾರರು, ಬರಹಗಾರರು ಮಾತ್ರವಲ್ಲದೆ ಸಾರ್ವಜನಿಕರು ಪೊಲೀಸರ ನಡೆಯನ್ನು ಖಂಡಿಸುತ್ತಿದ್ದಾರೆ.     ಕೋವಿಡ್ ಕಠಿಣ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನಸಾಮಾನ್ಯರನ್ನು ಅಪರಾಧಿಗಳಂತೆ ನಡೆಸಿಕೊಂಡು ಶಿಕ್ಷೆ ಕೊಡಲು ಪೊಲೀಸರಿಗೆ ಅಧಿಕಾರ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸುತ್ತಿದ್ದಾರೆ. ‘ಪೊಲೀಸರಿಗೆ ಶಿಕ್ಷಿಸುವ …

Read More »

ಮೂಗು ನೋಯುತ್ತೆ ಅಂತಾ ಮಾಸ್ಕ್ ಹಾಕಿಲ್ಲ, ನಮ್ಮನ್ನ ಬಿಟ್ಟು ದೇಶ ಲೂಟಿ ಮಾಡೋರನ್ನು ಹಿಡೀರಿ- ದಂಪತಿ ಹೈ ಡ್ರಾಮಾ

ಯಾದಗಿರಿ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿವೆ. ಜನ ಆಕ್ಸಿಜನ್, ಬೆಡ್ ಕೊರತೆಯಿಂದ ನರೆಳಿ ಸಾಯುತ್ತಿದ್ದಾರೆ. ಇಷ್ಟಾದರೂ ಕೆಲವರು ಮಾತ್ರ ಉದ್ಧಟತನ ಮೆರೆಯುತ್ತಿದ್ದಾರೆ. ಮೂಗೂ ನೋವು ಆಗುತ್ತೆ ಎಂದು ದಂಪತಿ ಮಾಸ್ಕ್ ಹಾಕದೆ, ಸಿಟಿ ರೌಂಡ್ಸ್ ಹೊಡೆಯುತ್ತಿದ್ದು, ಪ್ರಶ್ನಿಸಿದ ಪೊಲೀಸರಿಗೆ ಅವಾಜ್ ಹಾಕಿದ್ದಾರೆ. ಸುಭಾಷ್ ವೃತ್ತದಲ್ಲಿ ಘಟನೆ ನಡೆದಿದ್ದು, ಮಾಸ್ಕ್ ಹಾಕದೇ ಮೊಪೆಡ್‍ನಲ್ಲಿ ನಗರ ಸುತ್ತುತ್ತಿದ್ದ ದಂಪತಿಯನ್ನು ಪ್ರಶ್ನಿಸಿದ್ದಕ್ಕೆ ಹೈ ಡ್ರಾಮಾ ಮಾಡಿ, ಉದ್ಧಟತನ ಮೆರೆದಿದ್ದಾರೆ. ಮಾಸ್ಕ್ ಹಾಕದ್ದಕ್ಕೆ …

Read More »

ಇಂದು ಕೊರೊನಾ ಕೇಸ್​ಗಿಂತ ಗುಣಮುಖರಾದವ್ರ ಸಂಖ್ಯೆ ಹೆಚ್ಚಳ, 24 ಗಂಟೆಗಳಲ್ಲಿ 3,56,082 ಮಂದಿ ಡಿಸ್ಚಾರ್ಜ್​

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,29,942 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 3,876 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ನಿನ್ನೆಗೆ ಹೋಲಿಸಿದ್ರೆ ಇಂದು ವರದಿಯಾಗಿರೋ ಕೇಸ್​​ಗಳ ಸಂಖ್ಯೆ ಇಳಿಕೆ ಕಂಡಿದೆ. ಹಾಗೇ ಇಂದು ವರದಿಯಾಗಿರೋ ಹೊಸ ಕೇಸ್​ಗಳಿಗಿಂತ ಗುಣಮುಖರ ಸಂಖ್ಯೆ ಹೆಚ್ಚಿದ್ದು ಸಮಾಧಾನ ಮೂಡಿಸಿದೆ. ನಿನ್ನೆ ಒಂದೇ ದಿನ 3,66,161 ಕೊರೊನಾ ಪ್ರಕರಣಗಳು ಹಾಗೂ 3,754 ಸೋಂಕಿತರ ಸಾವು ವರದಿಯಾಗಿತ್ತು. 3,56,082 ಮಂದಿ ನಿನ್ನೆ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. …

Read More »

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸಿಲ್ಲ: ಸಚಿವ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಕೋವಿಡ್ ನಂತಹ ಸಮಯದಲ್ಲಿ ನಾಯಕತ್ವ ಬದಲಾವಣೆ ವಿಚಾರವು ಅಪ್ರಸ್ತುತವಾಗಿದ್ದು, ಅಂತಹ ಯಾವುದೇ ಚರ್ಚೆಗಳೂ ನಡೆದಿಲ್ಲ. ಕೇವಲ ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಗಳ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಾಗಿದೆ. ಈ ವೇಳೆ ರಾಜ್ಯದಲ್ಲಿ ಕೊರೋನಾ ನಿರ್ವಹಣೆ …

Read More »

ಟಾಲಿವುಡ್‌ ಪೋಷಕ ನಟ ಟಿಎನ್‌ಆರ್‌ ಇನ್ನಿಲ್ಲ

ಟಾಲಿವುಡ್‌ನ ಪೋಷಕ ನಟ, ನಿರೂಪಕ ತುಮ್ಮಲ ನರಸಿಂಹ ರೆಡ್ಡಿ (ಟಿಎನ್‌ಆರ್‌) ಸೋಮವಾರ ಕೋವಿಡ್‌ನಿಂದ ನಿಧನರಾದರು. ಸಿನಿಮಾ ಪತ್ರಕರ್ತರೂ ಆಗಿದ್ದ ಅವರು ತಮ್ಮದೇ ಆದ ಯುಟ್ಯೂಬ್‌ ಚಾನೆಲ್‌ ಮೂಲಕ ಹಲವಾರು ಸಿನಿಗಣ್ಯರ ಸಂದರ್ಶನ ಮಾಡಿದ್ದರು. ‘ಮಹಾಮಹೇಶ್ವರ’ ‘ಉಗ್ರ ರೂಪಸ್ಯ’, ‘ಹಿಟ್’, ‘ಜಾರ್ಜ್‌ ರೆಡ್ಡಿ’ ಅವರು ನಟಿಸಿದ ಪ್ರಮುಖ ಚಿತ್ರಗಳು. ಟಿಎನ್‌ಆರ್‌ ನಿಧನಕ್ಕೆ ಟಾಲಿವುಡ್‌ ಸಂತಾಪ ವ್ಯಕ್ತಪಡಿಸಿದೆ.

Read More »

ಗುಡ್ ನ್ಯೂಸ್ : ಅತಿಥಿ ಉಪನ್ಯಾಸಕರ ನೇಮಕಕ್ಕೆ ಕಾಲೇಜು ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪ್ರಸಕ್ತ ಸಾಲಿನ ಸಮ ಸೆಮಿಸ್ಟರ್ ತರಗತಿಗಳಿಗೆ ಬೋಧಿಸಲು ಹೆಚ್ಚುವರಿ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಹಿಂದೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಆದ್ಯತೆ ನೀಡಿ ಅಥವಾ ಹೊಸ ಅಭ್ಯರ್ಥಿಗಳಿಂದ ಅರ್ಜಿ ಪಡೆದು ಕಾಲೇಜು ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ವಿಭಾಗ ಮುಖ್ಯಸ್ಥರುಉ ಹಿರಿಯ ಉಪನ್ಯಾಸಕರು ಹಾಗೂ ಆಡಳಿತ ಮಂಡಳಿ ಸದಸ್ಯರನ್ನು …

Read More »

ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್ 14 ದಿನ ಮುಂದೂಡಿಕೆ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯುವ ನಿರೀಕ್ಷೆಯಲ್ಲಿದ್ದ 18 ವರ್ಷ ಮೇಲ್ಪಟ್ಟವರಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಮೇ. 10 ರಿಂದ 24 ರವರೆಗೆ ಕಠಿಣ ಲಾಕ್ ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಿಗೆ ಲಸಿಕೆ ಪಡೆಯಲು ಬರಲು ಸಮಸ್ಯೆ ಅಗುತ್ತದೆ ಹೀಗಾಗಿ 14 ದಿನ ಮುಂದೂಡುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್ ಅವರು, ಬೆಂಗಳುರು ಸೇರಿದಂತೆ …

Read More »

ಲಾಠಿ ಪ್ರಹಾರಕ್ಕೆ ಬ್ರೇಕ್ ಹಾಕಿದ ಕಮಲ್ ಪಂತ್

ಬೆಂಗಳೂರು: ಕೊರೊನಾದಿಂದ ಲಾಕ್‍ಡೌನ್ ಘೋಷಿಸಿದ್ದರು ರಸ್ತೆಗಳಿದವರ ಮೇಲೆ ಬಲ ಪ್ರಯೋಗ ಮಾಡಿದ್ದರಿಂದ ಜನರು ಪೊಲೀಸರ ಮೇಲೆ ಆಕ್ರೋಶಗೊಂಡಿದ್ದಾರೆ. ಹೀಗಾಗಿ ಪೊಲೀಸ್ ಆಯುಕ್ತ ಕಮಲ್ ಪಂತ್‍ರವರು ಸಾರ್ವಜನಿಕರ ಮೇಲೆ ಪೊಲೀಸರು ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಸೂಚಿಸಿದ್ದಾರೆ. ಈ ಬಗ್ಗೆ ಕಮಲ್ ಪಂತ್‍ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಒಂದು ವೇಳೆ ಸಾರ್ವಜನಿಕರು ಲಾಕ್‍ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಹೊರತು …

Read More »